ಸಾಮಾಜಿಕ ಜಾಲತಾಣದಲ್ಲಿ ಮಾಡಲಾದ ಸದರಿ ಕಾಮೆಂಟ್ ಕುರಿತು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರೇಟ್ ಘಟಕದ ಹಳೇಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ 15.06.2025 ರಂದು ಸುಮೋಟೋ ಪ್ರಕರಣವನ್ನು ದಾಖಲಿಸಿಕೊಂಡಿದ್ದು, ಪ್ರಕರಣ ದಾಖಲಾದ ದಿನದಂದೇ ಆರೋಪಿಯನ್ನು ಪತ್ತೆ ಹಚ್ಚಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿರುತ್ತದೆ. ಸದರಿ ಪ್ರಕರಣವು ತನಿಖೆಯಲ್ಲಿರುತ್ತದೆ.