ಕೋಲಾರ ಜಿಲ್ಲೆಯು ಚಿನ್ನದ ನಾಡು. ನಾಡಿನ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದ ಡಿ.ವಿ.ಜಿ. ಅವರ ನಾಡು ಹಾಗೂ ಕರುನಾಡಿಗೆ ಮೊದಲ ಮುಖ್ಯಮಂತ್ರಿ ಶ್ರೀ ಕೆ.ಸಿ. ರೆಡ್ಡಿ ಅವರನ್ನು ನೀಡಿದ ಪವಿತ್ರ ನಾಡು ನಮ್ಮ ಈ ಕೋಲಾರ.
ಅಧಿಕಾರವು ಶಕ್ತಿಯ ಸಂಕೇತವಲ್ಲ, ಅದೊಂದು ಜವಾಬ್ದಾರಿಯ ಸಂಕೇತ. ಅಧಿಕಾರವನ್ನು ನಾವು ಸಿಂಹಾಸನವೆಂದು ತಿಳಿದಿಲ್ಲ, ಬದಲಾಗಿ ಜನಸೇವೆಗೆ ಸಿಕ್ಕಿರುವ ಅವಕಾಶ ��ಂದು ಭಾವಿಸಿ ಕೆಲಸ ಮಾಡುತ್ತಿದ್ದೇವೆ. ಮೂರ್ತಿಗೆ ಬೆಲೆ ಕಟ್ಟಬಹುದು, ಆದರೆ ದೇವರಿಗೆ ಬೆಲೆ ಕಟ್ಟಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ದೇವರು. ನೀವು ನಮಗೆ ಆಶೀರ್ವಾದ ಮಾಡಿ, ನಿಮ್ಮ ಸೇವೆಗೆ ಅವಕಾಶ ಮಾಡಿಕೊಟ್ಟಿದ್ದೀರಿ.
ನಂಜೇಗೌಡರು ರಾಜ್ಯಕ್ಕೆ ಆದರ್ಶ ಶಾಸಕರು. ಇಂತಹ ಶಾಸಕರನ್ನು ಪಡೆದ ನಿಮ್ಮ ಕ್ಷೇತ್ರಕ್ಕೆ ಅವರು 3,200 ಕೋಟಿ ರೂ. ಅನುದಾನವನ್ನು ತಂದಿದ್ದಾರೆ. ಕೋವಿಡ್ ಸಮಯದಲ್ಲಿ ರೈತರ ಬೆಳೆಗೆ ಮಾರುಕಟ್ಟೆ ಇಲ್ಲದಿದ್ದಾಗ, ನಾವು ಇಲ್ಲಿಂದಲೇ ತರಕ���ರಿ ಖರೀದಿಸಿ ಬೆಂಗಳೂರಿನ ಜನರಿಗೆ ಉಚಿತವಾಗಿ ಹಂಚಿದ್ದೆವು. ಈ ಜಿಲ್ಲೆಯ ರೈತರನ್ನು ರಾಜ್ಯದ ಜನತೆ ಸದಾ ಸ್ಮರಿಸಬೇಕು. ಇಲ್ಲಿ ಅಂತರ್ಜಲ ಮಟ್ಟ 2,000 ಅಡಿಗೆ ಕುಸಿದಾಗಲೂ ಕಂಗೆಟ್ಟು ಆತ್ಮಹತ್ಯೆಗೆ ಶರಣಾಗದೆ; ಬೆಂಗಳೂರಿಗೆ ಹಾಲು, ತರಕಾರಿ, ರೇಷ್ಮೆ ಹಾಗೂ ಹೂವು ಬೆಳೆದು ಪೂರೈಸುವ ಮೂಲಕ ರೈತರು ತ��್ಮ ಸ್ವಾಭಿಮಾನವನ್ನು ಮೆರೆದಿದ್ದಾರೆ.
ನಂಜೇಗೌಡರು ನಿಮಗೆ ಮಾತು ಕೊಟ್ಟಿದ್ದರು. ಕೊಟ್ಟ ಮಾತನ್ನು ಉಳಿಸಿಕೊಳ್ಳುವುದು ಬಹಳ ಮುಖ್ಯ; ಅವರು ಆ ಮಾತನ್ನು ಉಳಿಸಿಕೊಂಡಿದ್ದಾರೆ ಎಂಬುದಕ್ಕೆ ಈ ಕಾರ್ಯಕ್ರಮವೇ ಉದಾಹರಣೆ. ತಮಗೆ ಸಿಕ್ಕ ಅವಕಾಶದಲ್ಲಿ ಇಂತಹ ಜನಪರ ಯೋಜನೆಗಳ ಮೂಲಕ ಅವರು ಅಭಿವೃದ್ಧಿಯ ಸಾಕ್ಷಿಗುಡ್ಡೆ ನಿರ್ಮಿಸಿದ್ದಾರೆ.
ನಮ್ಮದು ರೈತರ ಕಣ್ಣೀರು ಒರೆಸುವ ಸರ್ಕಾರ. ಕೃಷಿ ನಿಮ್ಮೆಲ್ಲರ ಸಂಸ್ಕೃತಿ, ರೈತರು ನಮ್ಮೆಲ್ಲರ ಆಸ್ತಿ. ಕಾಯಕದಿಂದ ನಾಯಕತ್ವ ಸಿಗುತ್ತದೆ, ಜನಪರವಾಗಿದ್ದರೆ ಮಾತ್ರ ಅಧಿಕಾರ ಒಲಿಯುತ್ತದೆ. 'ಅಧಿಕಾರ ನಶ್ವರ, ಸಾಧನೆ ಅಜರಾಮರ, ಮತದಾರರೇ ಈಶ್ವರ' ಎಂದು ಭಾವಿಸಿ ನಾವು ನಿಮ್ಮನ್ನು ದೇವರಂತೆ ಕಾಣುತ್ತಿದ್ದೇವೆ.
ನಮ್ಮ ಏಳನೇ ಗ್ಯಾರಂಟಿಯೇ 'ನೀರಿನ ಗ್ಯಾರಂಟಿ'. 'ಎತ್ತಿನಹೊಳೆ ಯೋಜನೆ ಅಸಾಧ್ಯ' ಎಂದು ಜೆಡಿಎಸ್ ರಾಜ್ಯಾಧ್ಯಕ್ಷರು ಲೇವಡಿ ಮಾಡುತ್ತಿದ್ದಾರೆ. ಯಾವುದೂ ಸುಲಭವಾಗಿ ಒಲಿಯುವುದಿಲ್ಲ, ಈ ಯೋಜನೆಯೂ ಕಷ್ಟಕರವಾಗಿದೆ. ಆದರೆ ನಾವು ಪ್ರಯತ್ನ ಪಡಬೇಕಲ್ಲವೇ? ಪಶ್ಚಿಮ ಘಟ್ಟದಿಂದ ಹಾಸನದ ಮೂಲಕ ನೀರು ತಂದು ��ೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಕೆರೆಗಳನ್ನು ತುಂಬಿಸಲಾಗುವುದು.
ತುಮಕೂರುವರೆಗೂ ನೀರು ತರುವ ಪ್ರಯತ್ನ ಮಾಡಲಾಗಿದೆ. ಈಗಾಗಲೇ ನಾವು ಕೆ.ಸಿ. ವ್ಯಾಲಿ ಯೋಜನೆಯ ಮೂಲಕ 104 ಕೆರೆಗಳಿಗೆ ನೀರು ತುಂಬಿಸಿದ್ದೇವೆ. ಎತ್ತಿನಹೊಳೆ ಯೋಜನೆಯನ್ನು 2027ರ ವೇಳೆಗೆ ಪೂರ್ಣಗೊಳಿಸಲು ಸಂಕಲ್ಪ ಮಾಡಿದ್ದೇವೆ. ಹೆಚ್.ಎನ್. ವ್ಯಾಲಿ ಯೋಜನೆಯಡಿ 65 ಕೆರೆಗಳನ್ನು ತುಂಬಿಸುವ ಕೆಲಸ ನಡೆಯುತ್ತಿದೆ. 700ಕ್ಕೂ ಹೆಚ್ಚು ಕೆರೆಗಳಿಗೆ ಸಂಸ್ಕರಿಸಿದ ನೀರನ್ನು ತುಂಬಿಸಲು ಮುಂದಾಗಿದ್ದೇವೆ. ಅಂತರ್ಜಲ ಮಟ್ಟ ಹೆಚ್ಚಾಗಬೇಕು, ಕೆರೆಗಳಿಗೆ ಹಾಗೂ ರೈತರ ಜಮೀನುಗಳಿಗೆ ನೀರು ತಲುಪಬೇಕು ಎಂಬುದು ನಮ್ಮ ಉದ್ದೇಶ. ಹೀಗಾಗಿ, ಆಗಸ್ಟ್ 15ರಂದು ನಮ್ಮ ಸರ್ಕಾರ ಹಮ್ಮಿಕೊಂಡಿರುವ ಹೊಸ ಯೋಜನೆಗಳನ್ನು ಪ್ರಕಟಿಸಲಿದ್ದೇವೆ.
ನಮ್ಮ ಸರ್ಕಾರದಲ್ಲಿ ಕೇವಲ ನಾನು ಹಾಗೂ ಸಿದ್ದರಾಮಯ್ಯನವರು ಮಾತ್ರ ಸಾಧನೆ ಮಾಡಿಲ್ಲ; ನಮ್ಮ ಸಚಿವರೂ ಸಹ ತಮ್ಮ ತಮ್ಮ ಇಲಾಖೆಗಳಲ್ಲಿ ಕ್ರಾಂತಿಕಾರಿ ಬದಲಾವಣೆಗಳನ್ನು ತಂದಿದ್ದಾರೆ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಶಾಸಕರು ನಮಗೆ ಆಧಾರಸ್ತಂಭವಾಗಿದ್ದಾರೆ.
ಒಗ್ಗಟ್���ಿನಲ್ಲಿ ಬಲವಿದೆ. ಮಂತ್ರಿಮಂಡಲದಲ್ಲಿ ಈ ಜಿಲ್ಲೆಗೆ ಸಚಿವ ಸ್ಥಾನ ನೀಡಲು ಸಾಧ್ಯವಾಗಿಲ್ಲ. ಆದರೆ, ಈ ಜಿಲ್ಲೆಯ ಪ್ರತಿ ಶಾಸಕರೂ ನನಗೆ ಮುಖ್ಯಮಂತ್ರಿಗಳ�� ಹಾಗೂ ಸಚಿವರ ಸಮಾನರು. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ನಾನು ಮಾಡುತ್ತೇನೆ, ಅದು ನನ್ನ ಕರ್ತವ್ಯ.
ಈಗಾಗಲೇ ಬಜೆಟ್ನಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಸ್ಥಾಪನೆಯ ಘೋಷಣೆಯಾಗಿದೆ. ಜೊತೆಗೆ ಕೋಲಾರ ಎಪಿಎಂಸಿಗೆ 60 ಎಕರೆ ಜಮೀನು ಮಂಜೂರು ಮಾಡಲು ಸಿದ್ಧತೆಗಳು ನಡೆಯುತ್ತಿವೆ. ಯಾವುದೇ ಕಾರಣಕ್ಕೂ ನಿಮ್ಮ ನಿರೀಕ್ಷೆಯನ್ನು ಹುಸಿಗೊಳಿಸುವುದಿಲ್ಲ. ನಿಮ್ಮ ಆಶೀರ್ವಾದ ಸದಾ ನಮ್ಮ ಮೇಲಿರಲಿ.
- ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಉದ್ಘಾಟಿಸಿ, ಮಾತನಾಡಿದರು.
ಸಾಧನೆಯ ಸಂಭ್ರಮ
ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸುಮಾರು 3,200 ಕೋಟಿ ರೂಪಾಯಿಯ ಸರ್ವತೋಮುಖ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮವನ್ನು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಶ್ರೀ ಕೆ. ಹೆಚ್. ಮುನಿಯಪ್ಪ, ಶ್ರೀ ರಾಮಲಿಂಗಾ ರೆಡ್ಡಿ, ಶ್ರೀ ಸತೀಶ್ ಜಾರಕಿಹೊಳಿ, ಶ್ರೀ ಈಶ್��ರ್ ಖಂಡ್ರೆ, ಶ್ರೀ ಯು. ಟಿ. ಖಾದರ್, ಡಾ. ಯತೀಂದ್ರ್ ಸಿದ್ದರಾಮಯ್ಯ, ಶಾಸಕರಾದ ಶ್ರೀ ಕೆ. ವೈ. ನಂಜೇಗೌಡ ಅವರು ಸೇರಿದಂತೆ ಇತರ ಶಾಸಕರು, ನಾಯಕರು, ಮುಖಂಡರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
LIVE NOW:
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ��ರೀ @DKShivakumar ಅವರಿಂದ ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ವಿವಿಧ ಇಲಾಖೆಯ ಸರ್ವತೋಮುಖ ಅಭಿವೃದ್ಧಿಯ ಉದ್ಘಾಟನೆ, ಶಂಕುಸ್ಥಾಪನೆ ಹಾಗೂ ಫಲಾನುಭವಿಗಳಿಗೆ ಸವಲತ್ತುಗಳ ವಿತರಣಾ ಕಾರ್ಯಕ್ರಮದ ನೇರ ಪ್ರಸಾರ
https://t.co/HOqNtrD2FN
ಯುವ ಕರ್ನಾಟಕ, ನವ ಭಾರತ!
Karnataka’s youth are at the heart of our vision for a progressive and prosperous state. “ಯುವ ಕರ್ನಾಟಕ, ನವ ಭಾರತ” reflects our belief that when the younger generation is heard, trusted and given the right opportunities, they can shape not only Karnataka but also the future of our nation.
This is the essence of the Karnataka Model, where dialogue leads to action and opportunity creates pathways for growth. From education and employment to innovation and leadership, we remain committed to creating an environment where every young mind can realise its aspirations and contribute to the state’s progress.
Read the Hon’ble Chief Minister Shri @DKShivakumar's article on listening to Gen Z and building a Karnataka that moves forward with confidence and purpose.
https://t.co/oG4eUQ1fRy
ಸ್ವಾತಂತ್ರ್ಯೋತ್ತರ ಭಾರತದಲ್ಲಿ ಕೇಂದ್ರ ಕಾರ್ಮಿಕ ಸಚಿವರಾಗಿ ಅಧಿಕಾರ ವಹಿಸಿಕೊಂಡ ವಿ. ವಿ. ಗಿರಿ ಅವರು, ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಶಕ್ತಿಮೀರಿ ಶ್ರಮಿಸಿದರು. ಭಾರತದ ರಾಷ್ಟ್ರಪತಿಯಾಗಿ ತಮ್ಮ ಸುದೀರ್ಘ ಸಾರ್ವಜನಿಕ ಜೀವನದುದ್ದಕ್ಕೂ ಸಾಮಾಜಿಕ ನ್ಯಾಯ ಹಾಗೂ ಸಮಾನತೆಯ ತತ್ವಗಳಿಗೆ ಬ��್ಧರಾಗಿ ಬಾಳಿದ ಗಿರಿಯವರ ಆಡಳಿತ ವೈಖರಿ ಸದಾ ಮಾದರಿಯಾದದ್ದು. ಶ್ರೀ ವಿ.ವಿ. ಗಿರಿಯವರ ಜನ್ಮದಿನವಾದ ಇಂದು ಅವರಿಗೆ ಆದರಪೂರ್ವಕ ನಮನಗಳು.
Karnataka is building India’s first Quantum City at Hesaraghatta, creating a world-class ecosystem for quantum research, innovation and entrepreneurship. With the Karnataka Quantum Mission, we are bringing together researchers, universities, startups and industry to position the state at the forefront of quantum technology.
Quantum will shape the future of computing, communication, healthcare and advanced manufacturing, and Karnataka is ready to lead that future.
ವಿಧಾನಸೌಧದಲ್ಲಿ ನಮ್ಮ ʻಫ್ರೀಡಂ ಹಬ್ಬʼದ ಸಂಭ್ರಮ
ಸ್ವಾತಂತ್ರ್ಯೋತ್ಸವದ ಸಂಭ್ರಮಕ್ಕೆ ಮತ್ತಷ್ಟು ಮೆರುಗು ನೀಡಲು ಆಗಸ್ಟ್ 15ರಂದು ಮಧ್ಯಾಹ್ನ 12ರಿಂದ ರಾತ್ರಿ 10ರವರೆಗೆ ವಿಧಾನಸೌಧ ಹಾ��ೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ‘ಫ್ರೀಡಂ ಹಬ್ಬ’ ಆಯೋಜಿಸಲಾಗಿದೆ. ಕಲೆ, ಸಂಸ್ಕೃತಿ, ಸಂಗೀತ, ಸಾಹಿತ್ಯ, ಆಹಾರ ಹಾಗೂ ವೈವಿಧ್ಯಮಯ ಪರಂಪರೆಗಳ ಸಂಗಮವಾಗಿರುವ ʻಫ್ರೀಡಂ ಹಬ್ಬʼದಲ್ಲಿ ಶಾಸನಸಭೆ ವೀಕ್ಷಣೆ ಹಾಗೂ ಅಪರೂಪದ ಸಂವಿಧಾನಾತ್ಮಕ ದಾಖಲೆಗಳ ವೀಕ್ಷಣೆಗೂ ಅವಕಾಶವಿದೆ. ಸ್ವಾತಂತ್ರ್ಯೋತ್ಸವದ ಈ ಸಂಭ್ರಮದ ಹಬ್ಬಕ್ಕೆ ಎಲ್ಲರಿಗೂ ಆತ್ಮೀಯ ಆಹ್ವಾನ.
ಬನ್ನಿ, ಸ್ವಾತಂತ್ರ್ಯದ ಸಂಭ್ರಮವನ್ನು ಒಟ್ಟಾಗಿ ಆಚರಿಸೋಣ
ಲೋಕಭವನದಲ್ಲಿ ಇಂದು ನಡೆದ ಕರ್ನಾಟಕ ಉಚ್ಛ ನ್ಯಾಯಾಲಯದ 6 ನೂತನ ಹೆಚ್ಚುವರಿ ನ್ಯಾಯಾಧೀಶರ ಪ್ರಮಾಣವಚನ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಭಾಗವಹಿಸಿದರು. ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಕರ್ನಾಟಕದ ಮುಖ್ಯನ್ಯಾಯಮೂರ್ತಿಗಳಾದ ವಿಭು ಬ���್ರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಗಳು ಹೆಚ್ಚುವರಿ ನ್ಯಾಯಮೂರ್ತಿಗಳಾಗಿ ಪ್ರಮಾಣವಚನ ಸ್ವೀಕರಿಸಿದ ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಮಣ್ಯ ರಂಗರಾವ್, ತಡಗವಾಡಿ ಪ್ರಕಾಶ್ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್, ಹೊಂಬೇಗೌಡ ಶಾಂತಿ ಭೂಷಣ್ ಅವರಿಗೆ ಶುಭಾಶಯ ಕೋರಿದರು.
ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಬಿಡದಿ ಟೌನ್ಶಿಪ್ ��ೋಜನೆಗೆ ಮರುಜೀವ ನೀಡಲಾಗುತ್ತಿದ್ದು, ಇದನ್ನು ವಿಶ್ವದರ್ಜೆಯ ರಸ್ತೆಗಳು, ಮೆಟ್ರೋ ಸಂಪರ್ಕ, ಅತ್ಯಾಧುನಿಕ ಕ್ರೀಡಾಂಗಣ, ಉದ್ಯಾನವನ ಹಾಗೂ ಸುಸಜ್ಜಿತ ವಸತಿ ಒ��ಗೊಂಡ ಅತ್ಯಾಧುನಿಕ ಎಐ ಸಿಟಿಯಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ಈ ಬೃಹತ್ ಯೋಜನೆ ಬೆಂಗಳೂರು ದಕ್ಷಿಣ ಜಿಲ್ಲೆಯ ಚಿತ್ರಣವನ್ನೇ ಬದಲಿಸಲಿದೆ.
ರೈತರ ಹಿತರಕ್ಷಣೆ ನಮ್ಮ ಪ್ರಮುಖ ಆದ್ಯತೆಯಾಗಿದೆ. ಹಿಂದಿನ ಸರ್ಕಾರ ಎಕರೆಗೆ ಕೇವಲ ₹25 ಲಕ್ಷ ನಿಗದಿಪಡಿಸಿದ್ದರೆ, ನಮ್ಮ ಸರ್ಕಾರ ಪ್ರತಿ ಎಕರೆಗೆ ₹3 ಕೋಟಿಗೂ ಹೆಚ್ಚು ಪರಿಹಾರ ನೀಡಲು ತೀರ್ಮಾನಿಸಿದೆ. ಹಣದ ಬದಲಾಗಿ ಭೂಮಿ ಬಯಸುವ ರೈತರಿಗೆ 50% ��ಭಿವೃದ್ಧಿಪಡಿಸಿದ ಜಾಗವನ್ನು ನೀಡಲಾಗುವುದು. ಈ ಭೂಸ್ವಾಧೀನ ಪ್ರಕ್ರಿಯೆಯು ಸಂಪೂರ್ಣವಾಗಿ ಐಚ್ಛಿಕವಾಗಿದ್ದು, ಯೋಜನೆಗೆ ಜಮೀನು ನೀಡಲು ಇಷ್ಟವಿಲ್ಲದ ಯಾರ ಮೇಲೆಯೂ ಯಾವುದೇ ಒತ್ತಾಯವಿರುವುದಿಲ್ಲ. ಯುವಜನತೆಗೆ ಅಪಾರ ಉದ್ಯೋಗಾವಕಾಶ ಸೃಷ್ಟಿಸಿ, ನಮ್ಮ ಅನ್ನದಾತರಿಗೆ ಗೌರವಯುತ ಜೀವನ ಒದಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ನಿಮ್ಮ ಸಹಕಾರವಿರಲಿ.
- GBDA ಯೋಜನೆ ಕುರಿತು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ಸಂದೇಶ
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕವಿ ಡಾ. ವಿನಾಯಕ ಕೃಷ್ಣ ಗೋಕಾಕ್ ಅವರ ಜನ್ಮದಿನದಂದು ಅವರಿಗೆ ಗೌರವಪೂರ್ವಕ ನಮನಗಳು.
ಗೋಕಾಕ್ ವರದಿ ಜಾರಿಗಾಗಿ ಕನ್ನಡಿಗರು ಒಕ್ಕೊರಲಿನಿಂದ ಬೀದಿಗಿಳಿದು ನಡೆಸಿದ 'ಗೋಕಾಕ್ ಚಳುವಳಿ' ಕರ್ನಾಟಕದ ಇತಿಹಾಸದಲ್ಲೇ ಹಿಂದೆಂದೂ ಕಾಣದ ಅಭೂತಪೂರ್ವ ಭಾಷಾ ಕ್ರಾಂತಿಯಾಗಿದೆ. ಈ ಐತಿಹಾಸಿಕ ಹೋರಾಟದ ಫಲವಾಗಿ, ರಾಜ್ಯದ ಕನ್ನಡೇತರ ಶಾಲೆಗಳಲ್ಲೂ 3ನೇ ತರಗತಿಯಿಂದ 10ನೇ ತರಗತಿಯವರೆಗೆ ಕನ್ನಡವನ್ನು ಒ��ದು ಭಾಷೆಯಾಗಿ ಕಡ್ಡಾಯವಾಗಿ ಕಲಿಯುವಂತಾಯಿತು. ನಾಡಿನ ಭಾಷೆಯ ಉಳಿವು ಮತ್ತು ಭವಿಷ್ಯಕ್ಕಾಗಿ ಅವರು ನೀಡಿದ ಅಪಾರ ಕೊಡುಗೆಗಳು ಸದಾ ಸ್ಮರಣೀಯ.
ಬಿಡದಿ ಟೌನ್ಶಿಪ್ ಅಭಿಪ್ರಾಯಗಳ ಸಮಗ್ರ ಪರಿಶೀಲನೆಗೆ ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚನೆ
ಬಿಡದಿ ಟೌನ್���ಶಿಪ್ (ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ) ಯೋಜನೆ ವಿಚಾರವಾಗಿ ವ್ಯಕ್ತವಾಗುತ್ತಿರುವ ವಿಭಿನ್ನ ಅಭಿಪ್ರಾಯಗಳನ್ನು ಪರಿಶೀಲಿಸಿ ವರದಿ ನೀಡಲು ನ್ಯಾಯಮೂರ್ತಿ ಗುಹನಾಥನ್ ನರೇಂದರ್ ನೇತೃತ್ವದ ಸಮಿತಿ ರಚಿಸಲು ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಆದೇಶಿಸಿದ್ದಾರೆ.
ಈ ಸಮಿತಿಯಲ್ಲಿ ನಿವೃತ್ತ ಮುಖ್ಯಕಾರ್ಯದರ್ಶಿಗಳಾದ ಎಸ್.ವಿ. ರಂಗನಾಥ್, ನಿವೃತ್ತ ಅಪರ ಮುಖ್ಯ ಕಾರ್ಯದರ್ಶಿ ಎಸ್.ಆರ್. ಉಮಾಶಂಕರ್, ನಿವೃತ್ತ ಐಎಎಸ್ ಅಧಿಕಾರಿ ಪ್ರಸನ್ನಕುಮಾರ್ ಅವರು ಸದಸ್ಯ���ಾಗಿದ್ದಾರೆ. ಈ ಸಮಿತಿಯು 30 ದಿನಗಳಲ್ಲಿ ವರದಿ ಸಲ್ಲಿಸಲಿದೆ. ಸಮಿತಿಯು ಸದರಿ ಯೋಜನೆಯನ್ನು ಕಾನೂನಾತ್ಮಕ, ಮಾನವೀಯತೆ ��ಾಗೂ ಸಮಗ್ರ ಅಭಿವೃದ್ಧಿಯ ಚೌಕಟ್ಟಿನಲ್ಲಿ ವಿಶ್ಲೇಷಣೆಗೊಳಪಡಿಸಿ ತನ್ನ ಶಿಫಾರಸ್ಸನ್ನು ನೀಡಲಿದೆ.
ಯೋಜನೆಯನ್ನು ಜನಸ್ನೇಹಿಯಾಗಿ ಜಾರಿಗೊಳಿಸಲು ಸಾರ್ವಜನಿಕರ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಮನ್ನಣೆ ನೀಡುವುದಾಗಿ ಸರಕಾರ ಈಗಾಗಲೇ ಸ್ಪಷ್ಟಪಡಿಸಿದೆ. ಜನರ ಆಶೋತ್ತರಗಳನ್ನು ಗೌರವಿಸಿ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಈ ಯೋಜನೆಯನ್ನು ಮತ್ತಷ್ಟು ಉತ್ತಮವಾಗಿ ರೂಪಿಸುವುದು ಸರ್ಕಾರದ ಆಶಯವಾಗಿದ್ದು, ಈ ಹಿನ್ನೆಲೆಯಲ್ಲಿ ಸಮಿತಿ ರಚನೆಯನ್ನು ಮಾಡಿದೆ.
A productive meeting between Hon’ble Chief Minister Shri D.K. Shivakumar and U.S. Ambassador to India, Mr. Sergio Gor, focused on deepening Karnataka–U.S. collaboration across investment, technology, education and research.
With a strong presence of U.S. industry in Karnataka, we are looking to attract greater investments in semiconductors, electronics and advanced manufacturing, facilitate partnerships with leading U.S. universities, and strengthen U.S. participation at Global Investors Meet 2027.
ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿಗಳಾದ ದಿವಂಗತ ಎಸ್. ನಿಜಲಿಂಗಪ್ಪ ಅವರ ಪು��್ಯಸ್ಮರಣೆ ಅಂಗವಾಗಿ, ವಿಧಾನ ಸೌಧದ ಪಶ್ಚಿಮ ದ್ವಾರದಲ್ಲಿರುವ ಅವರ ಪ್ರತಿಮೆ ಬಳಿ ಭಾವಚಿತ್ರಕ್ಕೆ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.
ಕರ್ನಾಟಕದ ಏಕೀಕರಣ, ಆಡಳಿತ ಸುಧಾರಣೆ, ಶಿಕ್ಷಣ ಹಾಗೂ ರಾಜ್ಯದ ಸಮಗ್ರ ಅಭಿವೃದ್ಧಿಗೆ ನಿಜಲಿಂಗಪ್ಪ ಅವರು ನೀಡಿದ ಕೊಡುಗೆಗಳು ಸದಾ ಸ್ಮರಣೀಯ. ಜನಪರ ಆಡಳಿತಕ್ಕೆ ಮಾದರಿಯಾಗಿದ್ದ ಅವರ ಜೀವನ ಹಾಗೂ ಆದರ್ಶಗಳು ಎಲ್ಲರಿಗೂ ಸ್ಪೂರ್ತಿ.
ಅನ್ನದಾತರ ಸಂಕಷ್ಟಕ್ಕೆ ಮಿಡಿದ ಸರ್ಕಾರ
ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿರುವ ಹಿನ್ನೆಲೆ ಸನ���ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರ ಸೂಚನೆ ಮೇರೆಗೆ ಎಲ್ಲಾ ಸಚಿವರು ಬರ ಅಧ್ಯಯನ ನಡೆಸುತ್ತಿದ್ದಾರೆ. ಖುದ್ದು ರೈತರ ಜಮೀನುಗಳಿಗೆ ತೆರಳಿ ಬೆಳೆ ಹಾನಿ, ಮೇವಿನ ಅಭಾವ ಹಾಗೂ ಕುಡಿಯುವ ನೀರಿನ ಸಮಸ್ಯೆಗಳ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಮೂಲಕ ಸಂಕಷ್ಟದಲ್ಲಿರುವ ರೈತರ ಬೆನ್ನಿಗೆ ನಿಂತು, ಅವರ ಬದುಕನ್ನ ರಕ್ಷಿಸಲು ಸರ್ಕಾರ ಬದ್ಧವಾಗಿದೆ.
ಏಕೀಕೃತ ಕರ್ನಾಟಕದ ಮೊದಲ ಮುಖ್ಯಮಂತ್ರಿಯಾಗಿ ನಾಡನ್ನು ಮುನ್ನಡೆಸಿದ ಎಸ್. ನಿಜಲಿಂಗಪ್ಪನವರ ಪುಣ್ಯಸ್ಮರಣೆಯಂದು ಗೌರವಪೂರ್ವಕ ನಮನಗಳು.
ಲಿಂಗನಮಕ್ಕಿ, ಶರಾವತಿ ಜಲವಿದ್ಯುತ್ ಯೋಜನೆ, ಆಲಮಟ್ಟಿ ಅಣೆಕಟ್ಟಿಗೆ ಅಡಿಪಾಯ, ಹಾರಂಗಿ ಯೋಜನೆ, ಬೆಂಗಳೂರಿಗೆ ಕಾವೇರಿ ನೀರು ಪೂರೈಕೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಂತಹ ಬೃಹತ್ ಸಾರ್ವಜನಿಕ ಕೊಡುಗೆಗಳನ್ನು ನಾಡಿಗೆ ನೀಡಿದ ಧೀಮಂತ ನಾಯಕ ಇವರು. ಶ್ರೀಯುತರು ಮಾಡಿದಂತಹ ಅಭಿವೃದ್ಧಿ ಕಾರ್ಯಗಳು, ಆದರ್ಶಗಳಿಂದ ತುಂಬಿದ್ದ ಜೀವನಕ್ರಮ ಸದಾ ಸ್ಮರಣೀಯ.
ಭಾರತದ ಸ್ವಾತಂತ್ರ್ಯ ಸಂಗ್ರಾಮದ ಇತಿಹಾಸದಲ್ಲಿ ಸುವರ್ಣಾಕ್ಷರಗಳಲ್ಲಿ ಬರೆದಿಡುವಂತಹ 'ಕ್ವಿಟ್ ಇಂಡಿಯಾ ಚಳುವಳಿ'��ನ್ನು ಸ್ಮರಿಸುವ ದಿನ ಇಂದಾಗಿದೆ. ಮಹಾತ್ಮ ಗಾಂಧೀಜಿಯವರು ನೀಡಿದ "ಮಾಡು ಇಲ್ಲವೇ ಮಡಿ" ಎಂಬ ಕರ��, ಬ್ರಿಟಿಷ್ ಆಡಳಿತಕ್ಕೆ ಭಾರತವನ್ನು ತೊಲಗಲು ನೀಡಿದ ಅಂತಿಮ ಎಚ್ಚರಿಕೆಯಾಗಿತ್ತು. ಆ ಕರೆಗೆ ಕೋಟ್ಯಂತರ ಭಾರತೀಯರು ಜಾತಿ, ಮತ, ಧರ್ಮದ ಭೇದ ಮರೆತು ದೇಶಾದ್ಯಂತ ಬ್ರಿಟಿಷರ ವಿರುದ್ಧ ರಸ್ತೆಗಿಳಿದು ಹೋರಾಡಿದರು.
ಸಾರ್ವಜನಿಕರೇ ಮುನ್ನಡೆಸಿದ ಈ ಅಭೂತಪೂರ್ವ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯಶಾಹಿಯ ಅಡಿಪಾಯವನ್ನೇ ಅಲ್ಲಾಡಿಸಿ, ಭಾರತದ ಸ್ವಾತಂತ್ರ್ಯಕ್ಕೆ ಅಂತಿಮ ದಾರಿ ಮಾಡಿಕೊಟ್ಟಿತು. ಈ ದಿನದಂದು ನಮ್ಮ ನಾಯಕರ ತ್ಯಾಗ, ಧೈರ್ಯ ಹಾಗೂ ರಾಷ್ಟ್ರಪ್ರೇಮವನ್ನು ಸ್ಮರಿಸೋಣ.
Hon'ble Chief Minister Shri D.K. Shivakumar inaugurated QUANTUM at Science Gallery Bengaluru. Mr. Sergio Gor, Ambassador of the United States to India, Shri Priyank Kharge, Minister for IT and BT, Shri Byrathi Suresh, Minister for Transport, Dr. Kiran Mazumdar-Shaw, Chairperson, Biocon Group, Dr. Jahnavi Phalkey, Founding Director, Science Gallery Bengaluru, and other distinguished guests were present on the occasion.
He emphasised the importance of strengthening the Karnataka–US partnership through deeper collaboration in technology, innovation, research, skilling and higher education. He also highlighted Karnataka's vision of building a robust quantum ecosystem through initiatives such as India's first Quantum City at Hesaraghatta, the Karnataka Quantum Mission and the Centre of Excellence in Quantum Artificial Intelligence and Computing at IIIT Dharwad.
Reaffirming the state's commitment to fostering scientific curiosity and public engagement with emerging technologies, he noted that institutions such as Science Gallery Bengaluru play an important role in inspiring the next generation of innovators and researchers.
The Director General of C-DAC called on Hon’ble Chief Minister Shri D.K. Shivakumar today and presented an overview of C-DAC’s core capabilities. The meeting also explored opportunities to leverage advanced computing, AI and emerging technologies to strengthen Karnataka’s innovation ecosystem
Lord Uday Nagaraju of Bloomsbury, Member of the House of Lords in the UK Parliament, called on Hon'ble Chief Minister Shri D.K. Shivakumar at Vidhana Soudha today.