ಬಿಡುಗಡೆಗೊಳಿಸಿದರು.
ಸಭೆಯಲ್ಲಿ ಪಂಚಾಯತ್ ರಾಜ್ ಆಯುಕ್ತರಾದ ಡಾ|| ಅರುಧಂತಿ ಚಂದ್ರಶೇಖರ್, ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ, ಉಪ ಕಾರ್ಯದರ್ಶಿ ಸೇರಿದಂತೆ ಜಿಲ್ಲಾ, ತಾಲ್ಲೂಕು ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. (2/2)
@eshwar_khandre@ZP_Ballari
ಬಳ್ಳಾರಿ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರು ಕಲ್ಯಾಣ ಪಥ, ಇ-ಸ್ವತ್ತು, ಕುಡಿಯುವ ನೀರು ಹಾಗೂ ‘ವಿಕಸಿತ್ ಭಾರತ್ – ಗ್ಯಾರಂಟಿ ಫಾರ್ ರೋಜ್ಗಾರ್ ಮತ್ತು ಆಜೀವಿಕಾ ಮಿಷನ್ (ಗ್ರಾಮೀಣ)’ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು & VB-G RAM G ಯೋಜನೆಯ ಕರಪತ್ರ ಹಾಗೂ ಪೋಸ್ಟರ್ (1/2)
ಕೇವಲ 5 ರೂಪಾಯಿಯ ನಾಣ್ಯ ಹಾಕುವ ಮೂಲಕ ಸ್ಯಾನಿಟರಿ ನ್ಯಾಪ್ಕಿನ್ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿ ಕೈಗೊಂಡಿರುವ ಈ ವಿನೂತನ ಕ್ರಮಕ್ಕೆ ಮಹಿಳೆಯರಿಂದ ಮೆಚ್ಚುಗೆ ವ್ಯಕ್ತವಾಗಿದೆ.
2/2
@eshwar_khandre
ಗದಗ ತಾಲ್ಲೂಕಿನ ಹಾತಲಗೇರಿ ಗ್ರಾಮ ಪಂಚಾಯತಿ ವ್ಯಾಪ್ತಿಯ ನರಸಾಪುರ ಗ್ರಾಮದಲ್ಲಿ ಮಹಿಳೆಯರ ಮುಟ್ಟಿನ ಸಮಯದ ಸ್ವಚ್ಛತೆ ಹಾಗೂ ಆರೋಗ್ಯ ರಕ್ಷಣೆಗೆ ಅನುಕೂಲವಾಗುವಂತೆ ಎನ್.ಎಲ್.ಆರ್.ಎಂ ಘಟಕದಲ್ಲಿ ಸ್ಯಾನಿಟರಿ ನ್ಯಾಪ್ಕಿನ್ ವೆಂಡಿಂಗ್ ಯಂತ್ರವನ್ನು ಅಳವಡಿಸಲಾಗಿದೆ.
1/2
ಹರ್ ಘರ್ ತಿರಂಗಾ ಅಭಿಯಾನ – 2026
ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೇಶದ ಪ್ರತಿಯೊಂದು ಮನೆ, ಕಚೇರಿ ಹಾಗೂ ಸಂಘ-ಸಂಸ್ಥೆಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಿ, ದೇಶಭಕ್ತಿಯ ಭಾವನೆಯನ್ನು ಮತ್ತಷ್ಟು ಬಲಪಡಿಸೋಣ. ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಗೊಳಿಸೋಣ.
ಬನ್ನಿ, ನಮ್ಮೊಂದಿಗೆ ಕೈಜೋಡಿಸಿ
#HarGharTiranga@eshwar_khandre
ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಪುನಃ ಶಾಲೆಗೆ ಸೇರಿಸುವಲ್ಲಿ ಯಶಸ್ವಿಯಾದರು.
“ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಿರಲಿ – ಪ್ರತಿಯೊಂದು ಮಗುವೂ ಶಾಲೆಯತ್ತ ಸಾಗಲಿ” ಎಂಬ ಆಶಯದೊಂದಿಗೆ ಕೈಗೊಂಡ ಈ ಅಭಿಯಾನಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಯಿತು.
2/2
#RDPR#GramPanchayat
ಯಾದಗಿರಿ ಜಿಲ್ಲೆಯ ವಡಿಗೇರಾ ತಾಲ್ಲೂಕು ಪಂಚಾಯತಿ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಪುನಃ ಶಾಲೆಗೆ ಕರೆತರುವ ಅಭಿಯಾನ ಹಮ್ಮಿಕೊಳ್ಳಲಾಯಿತು. ಗ್ರಾಮ ಪಂಚಾಯತಿ ಸಿಬ್ಬಂದಿ ಹಾಗೂ ಗ್ರಂಥಪಾಲಕರು ಮಕ್ಕಳ ಮನೆಗಳಿಗೆ ಭೇಟಿ ನೀಡಿ, ಪೋಷಕರಿಗೆ ಶಿಕ್ಷಣದ ಮಹತ್ವದ ಕುರಿತು ಅರಿವು ಮೂಡಿಸಿ,
1/2
@eshwar_khandre
ಮಂಡಲ ಪಂಚಾಯತಿಯಿಂದ ಅನುಮೋದನೆಯಾಗಿರುವ ಆಸ್ತಿಗಳಿಗೆ ನಮೂನೆ 11ಎ ಪಡೆಯಲು ಅರ್ಜಿ ಸಲ್ಲಿಸಿ. ಇ-ಖಾತಾ ಪಡೆಯಲು ನಾಗರಿಕರು ಮನೆಯಲ್ಲಿ ಕುಳಿತು ಆನ್ಲೈನ್ ಮುಖಾಂತರ ಇ-ಸ್ವತ್ತು 2.0 ತಂತ್ರಾಂಶದ https://t.co/nsvbDpYj2y ಲಿಂಕ್ ಮೂಲಕ ಅರ್ಜಿ ಸಲ್ಲಿಸಿ.
#RDPR#GramPanchayat#eswathu2_0#form11a@eshwar_khandre
ಆಗಸ್ಟ್ ಮಾಹೆಯ ಅಭಿಯಾನ -2026
ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಲ್ಲಿ ಮಕ್ಕಳಿಗಾಗಿ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮೋತ್ಸವ ಹಾಗೂ ‘ಹೂವಲ್ಲದ ಹೂವು – ಕಲ್ಲುಹೂವು’ ಸೃಜನಾತ್ಮಕ ಚಟುವಟಿಕೆಗಳ ಅಭಿಯಾನ.
1/2
ಈ ಸಂದರ್ಭದಲ್ಲಿ ಸರ್ಕಾರದ ಕಾರ್ಯದರ್ಶಿ (ಪಂ.ರಾಜ್.) ಶ್ರೀ ರಂದೀಪ್ ಡಿ., ಪಂಚಾಯತ್ ರಾಜ್ ಆಯುಕ್ತರಾದ ಡಾ|| ಅರುಧಂತಿ ಚಂದ್ರಶೇಖರ್, ನಿರ್ದೇಶಕರು-1 ಶ್ರೀ ಅಮರೇಶ್ ಆರ್., ಉಪಕಾರ್ಯದರ್ಶಿ (ಆಡಳಿತ) ಶ್ರೀಮತಿ ವಾಣಿ ಬಿ. ಹಾಗೂ ಆಯುಕ್ತಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
2/2
#RDPR#kalyanakarnataka
ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳ ನೇರ ನೇಮಕಾತಿ ಕೋಟಾದಡಿ ಆಯ್ಕೆಯಾದ 76 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಲ್ಲಿ ಮಾನ್ಯ ಇಲಾಖಾ ಸಚಿವರು ನೇಮಕಾತಿ ಆದೇಶ ಪತ್ರಗಳನ್ನು ವಿತರಿಸಿ, ಪ್ರಮಾಣ ವಚನ ಬೋಧಿಸಿ ಶುಭ ಹಾರೈಸಿದರು.
1/2
@eshwar_khandre
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆಯನ್ನು ಆನ್ಲೈನ್ ಕೌನ್ಸಿಲಿಂಗ್ ಪ್ರಕ್ರಿಯೆಯ ಮೂಲಕ ಯಶಸ್ವಿಯಾಗಿ ನಡೆಸಿ, ಸ್ಥಳ ನಿರೀಕ್ಷೆಯಲ್ಲಿದ್ದ 33 ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಮಾನ್ಯ ಪಂಚಾಯತ್ ರಾಜ್ ಆಯುಕ್ತರಾದ ಡಾ|| ಅರುಧಂತಿ ಚಂದ್ರಶೇಖರ್ ರವರು ಆದೇಶ ಪತ್ರ ನೀಡಿದರು.
ಆಡಳಿತದಲ್ಲಿ ಪಾರದರ್ಶಕತೆ, ದಕ್ಷತೆ & ಉತ್ತರದಾಯಿತ್ವವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಇಲಾಖೆಯು ಪಿಡಿಒಗಳ ವರ್ಗಾವಣೆ ಪ್ರಕ್ರಿಯೆಗೆ ಆನ್ಲೈನ್ ಕೌನ್ಸಿಲಿಂಗ್ ವ್ಯವಸ್ಥೆ ಜಾರಿಗೆ ತಂದಿದ್ದು, ವರ್ಗಾವಣೆ ಪ್ರಕ್ರಿಯೆಯು ಸಂಪೂರ್ಣ ಪಾರದರ್ಶಕ, ತಂತ್ರಜ್ಞಾನದೊಂದಿಗೆ ಅನುಷ್ಠಾನಗೊಳಿಸಿ ಆಡಳಿತಾತ್ಮಕ ಕಾರ್ಯಕ್ಷಮತೆ ಹೆಚ್ಚಿಸಲು ಸಹಕಾರಿಯಾಗಿದೆ
ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಮೂಲಕ ಗ್ರಾಮೀಣ ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಅಗತ್ಯ ಮಾರ್ಗದರ್ಶನ, ಅಧ್ಯಯನ ಸಂಪನ್ಮೂಲಗಳು ಹಾಗೂ ಮಾದರಿ ಪರೀಕ್ಷೆಗಳ ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಜ್ಞಾನ, ಕೌಶಲ್ಯ ಮತ್ತು ಆತ್ಮವಿಶ್ವಾಸವನ್ನು ವೃದ್ಧಿಸಲು ನಿರಂತರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
2/2
ವಿಜಯನಗರ ಜಿಲ್ಲೆ, ಹಗರಿಬೊಮ್ಮನಹಳ್ಳಿ ತಾಲ್ಲೂಕಿನ ತಂಬ್ರಹಳ್ಳಿ ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಭ್ಯರ್ಥಿಗಳಿಗಾಗಿ 100 ಅಂಕಗಳ ಮಾದರಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು.
1/2
@eshwar_khandre
ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಹಾಗೂ ಯುವಜನತೆಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಸಿದ್ಧತೆಗೆ ಅಗತ್ಯವಾದ ಪುಸ್ತಕಗಳು, ಅಧ್ಯಯನ ಸಂಪನ್ಮೂಲಗಳು ಮತ್ತು ಮಾರ್ಗದರ್ಶನವನ್ನು ಒದಗಿಸುವ ಮೂಲಕ ಗ್ರಾ.ಪಂ ಅರಿವು ಕೇಂದ್ರಗಳು ಜ್ಞಾನವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದ್ದು, ಆತ್ಮವಿಶ್ವಾಸದಿಂದ ಹೆಜ್ಜೆಯಿಡಲು ದಾರಿದೀಪವಾಗಿವೆ.
@eshwar_khandre
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನೀರು, ಪರಿಸರ, ಮಣ್ಣು ಹಾಗೂ ಜೀವ ವೈವಿಧ್ಯತೆಯ ಸಂರಕ್ಷಣೆಗೆ ಸಾರ್ವಜನಿಕರ ಸಹಭಾಗಿತ್ವದೊಂದಿಗೆ ಕೈಗೊಳ್ಳುವ ಪರಿಸರ ಸ್ನೇಹಿ ಚಟುವಟಿಕೆಗಳಿಗೆ ಎಲ್ಲರೂ ಕೈಜೋಡಿಸಿ. ಸ್ವಚ್ಛ, ಹಸಿರು ಹಾಗೂ ಸುಸ್ಥಿರ ಗ್ರಾಮ ನಿರ್ಮಾಣಕ್ಕೆ ಜೊತೆಯಾಗಿ.
#RDPR#WorldNatureConservationDay@eshwar_khandre
ಕೆಲಸದ ಒತ್ತಡ, ಕುಟುಂಬದ ಜವಾಬ್ದಾರಿಗಳು ಅಥವಾ ವೈಯಕ್ತಿಕ ಸಮಸ್ಯೆಗಳಿಂದ ಮಾನಸಿಕ ಒತ್ತಡ ಉಂಟಾಗುವುದು ಸಹಜ. ಆತಂಕ ಅಥವಾ ಖಿನ್ನತೆಯಿಂದ ಬಳಲುತ್ತಿದ್ದರೆ, ಸಮಸ್ಯೆಯನ್ನು ಮನಸ್ಸಿನಲ್ಲೇ ಇಟ್ಟುಕೊಳ್ಳದೆ ನೆರವು ಪಡೆಯಿರಿ. ಉಚಿತ ಹಾಗೂ ಗೌಪ್ಯ ಸಮಾಲೋಚನೆಗಾಗಿ ‘ಟೆಲಿ ಮನಸ್’ ಸಹಾಯವಾಣಿ 14416ಕ್ಕೆ ಕರೆ ಮಾಡಿ.
#TeleMANAS@eshwar_khandre
ನಿಮ್ಮ ಗ್ರಾಮದಲ್ಲಿ ಕಸ ಸಂಗ್ರಹಣೆಗೆ ಸ್ವಚ್ಛವಾಹಿನಿ ಬರುತ್ತಿಲ್ಲವೇ? ಅಥವಾ ಇತರೆ ಸೇವೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಎದುರಾಗಿದೆಯೇ? ಚಿಂತಿಸಬೇಡಿ. ನಿಮ್ಮ ಒಂದು ಕರೆ ಸಾಕು. ಸಮಸ್ಯೆಯನ್ನು ತ್ವರಿತವಾಗಿ ದಾಖಲಿಸಿ, ಅಗತ್ಯ ಕ್ರಮ ಕೈಗೊಳ್ಳಲು ಪಂಚಮಿತ್ರ ಸಹಾಯವಾಣಿ 8277506000 ಸಂಖ್ಯೆಗೆ ಸಂಪರ್ಕಿಸಿ.
#swacchavahini@eshwar_khandre