ಎಲ್ಲರಿಗೂ ನಮಸ್ಕಾರ,
ಮದುವೆಗೆ ಬಂದು ಹರಸಿದ, ಬರಲಾಗದೆ ಇದ್ದರು ಶುಭಾಶಯಗಳನ್ನು ತಿಳಿಸಿದ ಎಲ್ಲರಿಗೂ ಹೃದಯಪೂರ್ವಕ ನಮನಗಳು.
ಯಾವುದ�� ತೊಂದರೆ ಆಗದೆ ಸಮಾರಂಭ ಚೆನ್ನಾಗಿ ಆಗುವಲ್ಲಿ ಕುಟುಂಬದ ಜೊತೆ ಸ್ನೇಹಿತರು, ನೆಂಟರು, ಇಷ್ಟರು, ಮಾಧ್ಯಮ, ಪೊಲೀಸ್ ಇಲಾಖೆ, ಕಾರ್ಮಿಕರು, ಅಭಿಮಾನಿಗಳಾದಿಯಾಗಿ ಸಾಕಷ್ಟು ಜನರ ಶ್ರಮವಿದೆ. ಎಲ್ಲರಿಗೂ ತುಂಬು ಅಭಿಮಾನದ ಕೃತಜ್ಞತೆಗಳು.
ತುಂಬ ಜನ ಸೇರಿದ್ದರಿಂದ, ಕೆಲವರಿಗೆ ನಮ್ಮನ್ನು ತಲುಪಲು ತೊಂದರೆಯುಂಟಾಗಿದ್ದಲ್ಲಿ, ತಲುಪಲು ಸಾಧ್ಯವಾಗಿರದಿದ್ದಲ್ಲಿ ದಯವಿಟ್ಟು ಕ್ಷಮೆಯಿರಲಿ, ಖಂಡಿತವಾಗಿಯೂ ಇನ್ನಷ್ಟು ಒಳ್ಳೆ ವಿಷಯಗಳೊಂದಿಗೆ ಮತ್ತೆ ಸಿಗುತ್ತೇವೆ. ಆಶೀ��್ವಾದವಿರಲಿ.
ಇಷ್ಟೆಲ್ಲದರ ಮಧ್ಯೆ ಬಂದು ಹರಸಿದ ನನ್ನ ಚಿತ್ರರಂಗದ ಗೆಳೆಯರು , ತಾರೆಯರು, ಕಾರ್ಮಿಕರು, ಹಾಗೂ ನಮಗಾಗಿ ಕೆಲಸಕ್ಕೆ ನಿಂತ ಪ್ರೊಡಕ್ಷನ್ ಮ್ಯಾನೇಜರ್ಸ್ ತಂಡಕ್ಕೆ, ಒಟ್ಟಾಗಿ ನನ್ನ ಚಿತ್ರರಂಗದ ಕುಟುಂಬಕ್ಕೆ ಹೃಯಪೂರ್ವಕ ನಮನಗಳು.
ಮದುವೆಯ ಮೆರಗು ಹೆಚ್ಚಿಸಿದ ಪ್ರೀತಿಯ ಅಭಿಮಾನಿಗಳಿಗೆ special thanks.
ತಾಯಿ ಚಾಮುಂಡೇಶ್ವರಿಗೆ ಭಕ್ತಿಪೂರ್ವಕ ನಮನಗಳು.
ಮಿಸ್ ಮಾಡ್ದೆ ಎಲ್ಲರೂ ಬಂದು ಆಶೀರ್ವಾದ ಮಾಡಿ ಹೋಳಿಗೆ ಊಟ ಮಾಡಿಕೊಂಡು ಹೋಗಿ 🤗💑
ಪ್ರೀತಿಯ ಅಭಿಮಾನಿಗಳಿಗಾಗಿ ಒಂದು Special Invitation. Thanks #JINGO team for this.
ಅಭಿಮಾನಿಗಳಿಗೆ “ವಿದ್ಯಾಪತಿ” ದ್ವಾರದ ಮೂಲಕ ��್ರವೇಶ ❤️
ಪ್ರೀತಿಯ ಕರುನಾಡಿಗೆ,
ನನ್ನಿಚ್ಛೆಯಂತೆ, ಕುಟುಂಬದ ಇಚ್ಛೆಯಂತೆ, ನಿಮ್ಮೆಲ್ಲರ ಇಚ್ಛೆಯಂತೆ, ಸದ್ಯದಲ್���ೇ ಮದುವೆಯಾಗುತ್ತಿದ್ದೇನೆ. ಪ್ರತಿ ಹೆಜ್ಜೆಯಲ್ಲೂ ಕೈ ಹಿಡಿದು ನಡೆಸಿದ್ದೀರಿ, ಮನದಾಳದಿಂದ ಹರಸಿದ್ದೀರಿ. ಬದುಕಿನ ಮಹತ್ವವಾದ ಘಟ್ಟಕ್ಕೆ ಗೆಳತಿ ಧನ್ಯತಾಳೊಂದಿಗೆ ಹೆಜ್ಜೆಯಿಡುತ್ತಿದ್ದೇನೆ. ಪ್ರೀತಿ, ಆಶೀರ್ವಾದವಿರಲಿ.
ಮದುವೆಗೆ ಕರಿತೀನಿ, ಎಲ್ಲ ಬಂದು ಊಟ ಮಾಡಿಕೊಂಡು ಹೋಗ್ಬೇಕು.
ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿಯ ಶುಭಾಶಯಗಳು
ನಾನು ಧನ್ಯ ❤️
ಇಂತಿ ನಿಮ್ಮವ
ಧನಂಜಯ