ಚಿಕ್ಕಬಳ್ಳಾಪುರದಲ್ಲಿ ಶ್ರೀ ಕೆಂಪೇಗೌಡರ ಜಯಂತಿ ಉದ್ಘಾಟನೆಯನ್ನು ಸಚಿವರಾದ ಡಾ. ಎಂ.ಸಿ. ಸುಧಾಕರ್ ನೆರವೇರಿಸಿದರು. ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ, CEO ಪ್ರಕಾಶ್ ಜಿ.ಟಿ. ನಿಟ್ಟಾಲಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್. ನಾಗೇಶ್, ADC ಡಾ. ಎನ್. ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ಡಿ.ಹೆಚ್.ಅಶ್ವಿನ್ ಮತ್ತಿತರರಿದ್ದರು.
ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಇಂದು ಬೆಳಿಗ್ಗೆ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಡಾ. ಎಂ. ಸಿ ಸುಧಾಕರ್ ಅವರು ಯೋಗ ಮಾಡುವ ಮೂಲಕ ಚಾಲನೆ ನೀಡಿದರು. ಸಂಸದ ಡಾ ಕೆ. ಸುಧಾಕರ್, ಜಿಲ್ಲಾಧಿಕಾರಿ ಪಿ. ಎನ್ ರವೀಂದ್ರ, ಸಿಇಒ ಪ್ರಕಾಶ್ ಜಿ. ಟಿ ನಿಟ್ಟಾಲಿ ಮತ್ತಿತರರಿದ್ದರು.
ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಚಿಕ್ಕಬಳ್ಳಾಪುರ ಜಿಲ್ಲೆ ವತಿಯಿಂದ ಚಿಂತಾಮಣಿ ನಗರದ ಸೊಣ್ಣಶೆಟ್ಟಿಹಳ್ಳಿಯಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಸಮಾವೇಶ ಹಾಗೂ ಜಿಲ್ಲೆಯ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ/ಉದ್ಘಾಟನೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ರವರು ನೆರವೇರಿಸಿದರು.
#ಗೌರಿಬಿದನೂರು#ನಗರಸಭೆಯಲ್ಲಿ 2024-25 ನೇ ಸಾಲಿನ 2ನೇ ಆಯ ವ್ಯಯ ಪೂರ್ವ ಭಾವಿ ಸಭೆಯನ್ನುಮಾನ್ಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಭೆಯಲ್ಲಿ ಎಲ್ಲಾ ಪೌರಕಾರ್ಮಿಕರಿಗೆ ಎಸ್.ಬಿ.ಐ ನ 5ಲಕ್ಷಗಳವರೆಗಿನ ಆರೋಗ್ಯಕಾರ್ಡ್ ನ್ನು ವಿತರಿಸಲಾಹಿತು .
#ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ಶನಿವಾರ ಗ್ರಾಮ ಪಂಚಾಯತ್ ಮತ್ತು ಶಾಲಾ ಮಟ್ಟದಲ್ಲಿ ಮಕ್ಕಳ ರಕ್ಷಣಾ ಸಮಿತಿಯ ರಚನೆ ಬಗ್ಗೆ ಕಾನೂನು ಅರಿವು ಕಾರ್ಯಗಾರದ ಉದ್ಘಾಟನೆಯನ್ನು ಮಾನ್ಯ ಜಿಲ್ಲಾಧಿಕಾರಿಗಳು ನೆರವೇರಿಸಿ ಮಾತನಾಡಿದರು
ಕರ್ನಾಟಕ ಸರ್ಕಾರದ ನೂತನ ಕಾರ್ಯಕ್ರಮ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ 10ನೇ ತರಗತಿಯ ಎಲ್ಲಾ ವಿದ್ಯಾರ್ಥಿಗಳಿಗೆ ರಾಗಿ ಹೆಲ್ತ್ ಮಿಕ್ಸ್ (ರಾಗಿ ಮಾಲ್ಟ್ ) ವಿತರಣಾ ಕಾರ್ಯಕ್ರಮವನ್ನು #ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳಾದ ಶ್ರೀ. ಪಿ.ಎನ್ ರವೀಂದ್ರ ಅವರು ಉದ್ಘಾಟಿಸಿದರು.
#ಸಂವಿಧಾನ ಜಾಥ/#ಗಣರಾಜ್ಯೋತ್ಸವ ದಿನಾಚರಣೆ / ಸರ್ಕಾರದ ಗ್ಯಾರಂಟಿ ಯೋಜನೆಗೆ ಸಂಬಂಧಿಸಿದಂತೆ ಸಭೆಗಳನ್ನು ನಡೆಸಲಾಯಿತು. ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಜಿಪಂ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳು ,ಚಿಕ್ಕಬಳ್ಳಾಪುರ,ಅಪರ ಜಿಲ್ಲಾಧಿಕಾರಿಗಳು, ಉಪಕಾರ್ಯದರ್ಶಿ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು
ಭಾರತ ಚುನಾವಣಾ ಆಯೋಗ 14 ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಅಧ್ಯಕ್ಷರು , ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ಉದ್ಘಾಟಿಸಿದರು.