ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳು ಹಾಗೂ ಪದ್ಮವಿಭೂಷಣ ಡಾ. ವೀರೇಂದ್ರ ಹೆಗ್ಗಡೆ ಅವರಿಗೆ ಜನುಮ ದಿನದ ಭಕ್ತಿ ಪೂರ್ವಕ ನಮನಗಳು.
ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹ ಅವರ ಮೇಲೆ ಸದಾ ಇರಲಿ ಹಾಗೂ ಸಮಾಜಕ್ಕೆ ಅವರ ಸೇವೆ ಹೀಗೆಯೇ ನಿರಂತರವಾಗಿ ಸಾಗಲಿ. ಆ ಶಕ್ತಿಯನ್ನು ಭಗವಂತ ಅವರಿಗೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.
ಮಣ್ಣಿನ ಮಗ, ಕೆಂಪು ಕೋಟೆಯಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸಿದ ನಮ್ಮ ಕರುನಾಡಿನ ಏಕೈಕ ಕನ್ನಡಿಗ, ಭಾರತದ 11ನೇ ಪ್ರಧಾನಮಂತ್ರಿಗಳು, ಜಾತ್ಯತೀತ ಜನತಾದಳ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಸನ್ಮಾನ್ಯ ಶ್ರೀ ಹೆಚ್. ಡಿ. ದೇವೇಗೌಡ ಅಪ್ಪಾಜಿ ರವರಿಗೆ 91ನೇ ವರುಷದ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳು
@H_D_Devegowda
ಚುನಾವಣಾ ಪ್ರಚಾರ ಕಾರ್ಯಕ್ಕೆ ಚಾಲನೆ ನೀಡುವ ಮುನ್ನ ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿ, ಪರಮಪೂಜ್ಯ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿರವರ ಗದ್ದುಗೆಗೆ ಭೇಟಿ ನೀಡಿ ಪೂಜೆ ಸಲ್ಲಿಸಿ, ಶ್ರೀ ಸಿದ್ದಲಿಂಗ ಮಹಾಸ್ವಾಮಿಗಳ ಪಾದಪೂಜೆ ನೆರವೇರಿಸಿ, ಆಶೀರ್ವಾದ ಪಡೆದುಕೊಂಡೆನು.
ತ್ರಿವಿಧ ದಾಸೋಹಿ, ಕರ್ನಾಟಕ ರತ್ನ, ನಡೆದಾಡುವ ದೇವರು, ಪರಮಪೂಜ್ಯ ಗುರುಗಳಾದ ಶ್ರೀಮಾನ್ ನಿರಂಜನ ಸ್ವರೂಪಿ ಡಾ. ಶ್ರೀ ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿ ರವರ ಜನುಮದಿನದಂದು ನನ್ನ ಭಕ್ತಿ ಪೂರ್ವಕ ಪ್ರಣಾಮಗಳು.
ನಾಡಿನ ಸಮಸ್ತ ಜನತೆಗೆ ಶ್ರೀ ರಾಮನವಮಿ ಹಬ್ಬದ ಭಕ್ತಿಪೂರ್ವಕ ಶುಭಾಶಯಗಳು, ಪ್ರಭು ಶ್ರೀರಾಮನ ಪ್ರೇರಣೆಯಿಂದ ನಮ್ಮೆಲ್ಲರ ಬದುಕು ಅರ್ಥಪೂರ್ಣವಾಗಲಿ. ನಾಡಿಗೆ ಎದುರಾಗಿರುವ ಎಲ್ಲ ಸಂಕಷ್ಟಗಳು ದೂರವಾಗಿ ಸಮೃದ್ಧ, ಆರೋಗ್ಯಪೂರ್ಣ ಸಮಾಜ ಸಾಕಾರಗೊಳ್ಳುವಂತೆ ಪ್ರಭು ಶ್ರೀರಾಮನು ಅನುಗ್ರಹಿಸಲಿ ಎಂದು ಪ್ರಾರ್ಥಿಸುತ್ತೇನೆ.
ಇಂದು ನನ್ನ ಮತ ಕ್ಷೇತ್ರದ ತುಮಕೂರು ಗ್ರಾಮಾಂತರದ ಹೆಬ್ಬೂರು ಹೋಬಳಿಯ ರಾಮೇನಹಳ್ಳಿ ಗ್ರಾಮದ ಶ್ರೀ ಸಿದ್ದಲಿಂಗೇಶ್ವರ ಸ್ವಾಮಿಯ ಅದ್ದೂರಿ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭ.
ನಾಡಿನ ಸಮಸ್ತ ಜನತೆಗೆ ಹಾಗೂ ವಿಶೇಷವಾಗಿ ನನ್ನ ಮತ ಕ್ಷೇತ್ರ ತುಮಕೂರು ಗ್ರಾಮಾಂತರದ ಜನತೆಗೆ ಅಗ್ನಿವಂಶ ಕ್ಷತ್ರಿಯ ಜನಾಂಗದ ಮೂಲ ಪುರುಷ "ಶ್ರೀ ಅಗ್ನಿ ಬನ್ನಿರಾಯಸ್ವಾಮಿ" ಜಯಂತೋತ್ಸವದ ಹಾರ್ದಿಕ ಶುಭಾಶಯಗಳು.
ನನ್ನ ಮತ ಕ್ಷೇತ್ರದ ನಿಡುವಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದನಗೆರೆ ಹಾಗೂ ಅಕ್ಕ ಪಕ್ಕದ ಗ್ರಾಮದ ಯುವಕ ಮಿತ್ರರುಗಳು ಆಯೋಜಿಸಿದ್ದ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕ್ರೀಡಾಪಟುಗಳಿಗೆ ಶುಭಕೋರಿದ ಸಂಧರ್ಭ.
ಯುಗಾದಿ ಎಂದರೆ ಸಿಹಿ-ಕಹಿಗಳ ಹಬ್ಬವೆಂಬ ಪ್ರತೀತಿಯಿದೆ, ಕಷ್ಟವೆಂಬ ಕಹಿಗೆ ಅಂಜದೆ, ಸಿಹಿ ಎಂಬ ಸುಖಕ್ಕೆ ಹಿಗ್ಗದೆ ಎರಡನ್ನೂ ಸಮಾನಾವಾಗಿ ಸ್ವೀಕರಿಸುವ ಗುಣ ಎಲ್ಲರಲ್ಲೂ ಮೂಡಲಿ, ಉಲ್ಲಾಸ – ಉತ್ಸಾಹ ನಿರಂತರವಾಗಿರಲಿ, ಕೋಮು ವೈಷಮ್ಯಗಳು ಮಾಯವಾಗಿ ಸೌಹಾರ್ದತೆ ಎಲ್ಲೆಡೆ ನೆಲೆಸಲಿ,
ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಹಾರ್ದಿಕ ಶುಭಾಶಯಗಳು.
ಸಿರಿವಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಸಹಯೋಗದೊಂದಿಗೆ ನಿರ್ಮಿಸಲಾಗಿರುವ ನೂತನ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ ನೆರವೇರಿಸಿ, ಬಾಣಾವರ, ಕೈದಾಳ ಗ್ರಾಮಗಳಲ್ಲಿ ಸಿಸಿ ರಸ್ತೆ ಸಿಸಿ ಚರಂಡಿ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದೆನು.
ನನ್ನ ಮತ ಕ್ಷೇತ್ರದ ಮಸ್ಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿದರಕಟ್ಟೆ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಕುರುಕ್ಷೇತ್ರ ನಾಟಕ ಕಾರ್ಯಕ್ರಮಕ್ಕೆ ಹಾಗೂ ಸಿರಿವಾರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೊಮ್ಮನಹಳ್ಳಿ (ವಡ್ಡರಹಟ್ಟಿ) ಗ್ರಾಮದಲ್ಲಿ ಆಯೋಜಿಸಲಾಗಿದ್ದ ರತಿ ಕಲ್ಯಾಣ ನಾಟಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಂದರ್ಭ.
ನನ್ನ ಮತ ಕ್ಷೇತ್ರದ ಚನ್ನೆನಹಳ್ಳಿ ಗೊಲ್ಲರಹಟ್ಟಿ ಗ್ರಾಮದ ಶ್ರೀ ನರಸಿಂಹಸ್ವಾಮಿ ಜಾತ್ರಾ ಮಹೋತ್ಸವ, ರಾಗಿಮುದ್ದನಹಳ್ಳಿ ಮತ್ತು ಬೊಮ್ಮನಹಳ್ಳಿ ಗ್ರಾಮಗಳಲ್ಲಿ ನಡೆದ ಶ್ರೀ ಮಾರಮ್ಮ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಸಂದರ್ಭ
ನನ್ನ ಮತ ಕ್ಷೇತ್ರದ ಹೆಬ್ಬೂರಿನಲ್ಲಿ ಹಾಗೂ ನೆಲಹಾಲ್ ಗ್ರಾಮದಲ್ಲಿ ಯುವಕ ಮಿತ್ರರುಗಳು ಆಯೋಜಿಸಲಾಗಿದ್ದ ಕ್ರಿಕೆಟ್ ಟೂರ್ನಮೆಂಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕ್ರೀಡಾಪಟುಗಳಿಗೆ ಶುಭಾಶಯ ತಿಳಿಸಿ, ವಿಜೇತರಾದ ತಂಡಗಳಿಗೆ ವೈಯಕ್ತಿಕವಾಗಿ ಬಹುಮಾನ ವಿತರಿಸಿ, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಿದೆನು.
ನನ್ನ ಮತ ಕ್ಷೇತ್ರದ ಗಳಿಗೆನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಡಿ ಎಸ್ ಹೊಸಹಳ್ಳಿ ಗ್ರಾಮದಲ್ಲಿ ಶ್ರೀ ಆಂಜನೇಯ ಸ್ವಾಮಿ ದೇವಾಲಯದ ನಿರ್ಮಾಣ ಕಾಮಗಾರಿಗೆ ಹಾಗೂ ಮನೆ ಮನೆಗೆ ನಲ್ಲಿ ಸಂಪರ್ಕ ಕಾಮಗಾರಿಗೆ ಗ್ರಾಮಸ್ಥರುಗಳ ಜೊತೆಗೂಡಿ ಭೂಮಿ ಪೂಜೆ ನೆರವೇರಿಸಿದ ಸಂಧರ್ಭ.