ಹುಳಿಮಾವು ಪೊಲೀಸ್ ಠಾಣೆಯ ಮಹತ್ವದ ಕಾರ್ಯಾಚರಣೆ
ಹುಳಿಮಾವು ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಿ, ಅವರಿಂದ ಅಂದಾಜು ₹1.20 ಕೋಟಿ ಮೌಲ್ಯದ 12 ಕಾರುಗಳನ್ನು ವಶಪಡಿಸಿಕೊಳ್ಳಲಾಗಿದೆ.
M ನಾರಾಯಣ IPS ಉಪ ಪೊಲೀಸ್ ಆಯುಕ್ತರು, ಎಲೆಕ್ಟ್ರಾನಿಕ್ ಸಿಟಿ ವಿಭಾಗ ಹಾಗೂ ಸತೀಶ್ K.L ಸಹಾಯಕ ಪೊಲೀಸ್ ಆಯುಕ್ತರು, ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗ ಇವರ ಮಾರ್ಗದರ್ಶನದಲ್ಲಿ, ಬ��ಡೇಪಾಳ್ಯ ಪೊಲೀಸ್ ಠಾಣೆಯ ಮೊ.ಸಂ. 216/2026 NDPS ಪ್ರಕರಣದಲ್ಲಿ ಸುಮಾರು ₹3 ಲಕ್ಷ ಮೌಲ್ಯದ 6 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ವಿವಿಧ ಅಪರಾಧ ಪ್ರಕರಣಗಳನ್ನು ತ್ವರಿತವಾಗಿ ಪತ್ತೆಹಚ್ಚಿದ ಉತ್ತಮ ಕಾರ್ಯಕ್ಕಾಗಿ ಇಂದು ಮಾನ್ಯ ಪೊಲೀಸ್ ಆಯುಕ್ತರು, ಬೆಂಗಳೂರು ನಗರ ರವರು ಪತ್ರಿಕಾಗೋಷ್ಠಿಯಲ್ಲಿ ಬಂಡೇಪಾಳ್ಯ ಪೊಲೀಸ್ ಇನ್ಸ್��ಪೆಕ್ಟರ್ ಹಾಗೂ ಸಿಬ್ಬಂದಿಯವರ ಕಾರ್ಯವನ್ನು ಶ್ಲಾಘಿಸಿ ಪ್ರಶಂಸಿಸಿದ್ದಾರೆ.
ಬಂಡೇಪಾಳ್ಯ ಪೊಲೀಸ್ ತಂಡಕ್ಕೆ ಅಭಿನಂದನೆಗಳು
ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಮನೆ ಕಳವು ಪ್ರಕರಣ ಸಂಖ್ಯೆ 310/2026ಕ್ಕೆ ಸಂಬಂಧಿಸಿದಂತೆ, ಸುಮಾರು ₹66,84,949/- ಮೌಲ್ಯದ 461 ಗ್ರಾಂ ಚಿನ್ನಾಭರಣಗಳನ್ನು ಯಶಸ್ವಿಯಾಗಿ ವಶಪಡಿಸಿಕೊಳ್ಳಲಾ��ಿದೆ.
ಪೊಲೀಸ್ ಇನ್ಸ್ಪೆಕ್ಟರ್ ಅಜರುದ್ದೀನ್ ಅವರ ನೇತೃತ್ವದ ತಂಡವು ಕಾರ್ಯಾಚರಣೆ ನಡೆಸಿ ಪ್ರಕರಣವನ್ನು ಯಶಸ್ವಿಯಾಗಿ ಭೇದಿಸಿ, ಕಳುವಾಗಿದ್ದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಕಾರ್ಯಾಚರಣೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ತಂಡದ ಅಧಿಕಾರಿ ಮತ್ತು ಸಿಬ್ಬಂದಿಯವರಿಗೆ ಅಭಿನಂದನೆಗಳು.
ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ AISLE ಡೇಟಿಂಗ್ ಆ್ಯಪ್ ಮೂಲಕ ಯುವಕ��ನ್ನು ಪರಿಚಯಿಸಿಕೊಂಡು, ಭೇಟಿಯಾಗುವ ನೆಪದಲ್ಲಿ ಅಪಹರಿಸಿ ಹಣ ಸುಲಿಗೆ ಮಾಡುತ್ತಿದ್ದ ಗ್ಯಾಂಗ್ ಅನ್ನು ಪತ್ತೆಹಚ್ಚಿ ಒಟ್ಟು 4 ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಳಿಂದ ₹46,600 ನಗದು ಹಾಗೂ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಆರೋಪಿಗಳ ಬ್ಯಾಂಕ್ ಖಾತೆಯಲ್ಲಿದ್ದ ₹3,21,000 ಹಣವನ್ನು ಫ್ರೀಜ್ ಮಾಡ���ಾಗಿದೆ.
ಈ ಪ್ರಕರಣವನ್ನು ಯಶಸ್ವಿಯಾಗಿ ಪತ್ತೆಹಚ್ಚಿದ ಹೆಬ್ಬಗೋಡಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಹಾಗೂ ಅವರ ತಂಡದ ಕಾರ್ಯಕ್ಕೆ ಅಭಿನಂದನೆಗಳು.
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ, ಐಪಿಎಸ್ ಅವರ ಮಾರ್ಗದರ್ಶನದಲ್ಲಿ ಹಾಗೂ ಎಸಿಪಿ ಸತೀಶ್ ಕೆ.ಎಂ. ಅವರ ನೇತೃತ್ವದಲ್ಲಿ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಅಜರುದ್ದೀನ್ ಮತ್ತು ಸಿಬ್ಬಂದಿಯ ಯಶಸ್ವಿ ಕಾರ್ಯಾ��ರಣೆಯ ಮೂಲಕ ಯುಡಿಆರ್ ಪ್ರಕರಣವನ್ನು ಭೇದಿಸಿ, ಅದು ಕೊಲೆ ಪ್ರಕರಣವೆಂದು ಪತ್ತೆಹಚ್ಚಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಕರ್ತವ್ಯನಿಷ್ಠೆ, ಸಮಯೋಚಿತ ತನಿಖೆ ಹಾಗೂ ತಂಡದ ಕಾರ್ಯಕ್ಷಮತೆಗೆ ಅಭಿನಂದನೆಗಳು.
ನಮ್ಮ ಪೊಲೀಸ್ ಕುಟುಂಬದೊಂದಿಗೆ ದೀಪಾವಳಿ ಹಬ್ಬದ ಆಚರಣೆ!
ಬೆಂಗಳೂರು ನಗರ ಪೊಲೀಸ್ ವಿಭಾಗವು ನಂದಿನಿ ಲೇಔಟ್, ಹೆಬ್ಬಾಳ, ಯಶವಂತಪುರ ಮತ್ತು ರಾಜಾಜಿನಗರ ಪೊಲೀಸ್ ವಸತಿ ಗೃಹಗಳಲ್ಲಿ ಪೊಲೀಸ್ ಸಿಬ್ಬಂದಿ ಮತ್ತು ಅವರ ಕುಟುಂಬದವರೊಂದಿಗೆ ಹರ್ಷೋಲ್ಲಾಸದಿಂದ ದೀಪಾವಳಿ ಹಬ್ಬವನ್ನು ಆಚರಿಸಿತು.
ಸಿಹಿ ತಿಂಡಿಗಳ ವಿತರಣೆ ಮತ್ತು ಪರಿಸರ ಸ್ನೇಹಿ ಹಸಿರು ಪಟಾಕಿಗಳನ್ನು ಹಚ್ಚುವ ಮೂಲಕ, ಈ ಕಾರ್ಯಕ್ರಮವು ಸೌಹಾರ್ದತೆ, ಸುರಕ್ಷಿತ ಹಾಗೂ ಮಾಲಿನ್ಯರಹಿತ ದೀಪಾವಳಿಯ ಸಂದೇಶವನ್ನು ಸಾರಿತು.
ನಗೆಯನ್ನು ಪಸರಿಸುತ್ತಾ, ಖುಷಿಯನ್ನು ಹಂಚಿಕೊಳ್ಳುತ್ತಾ ಒಟ್ಟಾಗಿ ಆಚರಿಸಲಾಗುತ್ತಿದೆ!
Celebrating the Festival of Lights with Our Police Family!
Bengaluru City Police celebrated Diwali with police personnel and their families at Nandini Layout, Hebbal, Yeshwanthpur and Rajajinagar Police Quarters.
From sharing sweets to lighting green crackers, the celebrations brought together joy, togetherness and the spirit of a safe and eco-friendly Diwali.
Spreading smiles, sharing happiness and celebrating together!
#DiwaliCelebrations #PoliceFamily #BengaluruCityPolice #SafeDiwali
@CPBlr@seemantsingh96@DgpKarnataka@KarnatakaCops@Jointcptraffic@CMofKarnataka@PriyankKharge
ಎಲೆ��್ಟ್ರಾನಿಕ್ ಸಿಟಿ ವಿಭಾಗದ ಉಪ ಪೊಲೀಸ್ ಆಯುಕ್ತರಾದ ಶ್ರೀ ಎಂ. ನಾರಾಯಣ IPS ರವರು ಹೆಬ್ಬಗೋಡಿ ಪೊಲೀಸ್ ವಸತಿ ನಿಲಯದ ಬಳಿ ಪೊಲೀಸ್ ಸಿಬ್ಬಂದಿ ಹಾಗೂ ಅವರ ಕುಟುಂಬದ ಸದಸ್ಯರೊಂದಿಗೆ ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಪೊಲೀಸ್ ಆಯುಕ್ತರಾದ ಶ್ರೀ ಸತೀಶ್ K.L. ಹಾಗೂ ಇತರೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಉಪಸ್ಥಿತರಿದ್ದರು.
ಎಲ್ಲರ ಜೀವನದಲ್ಲೂ ಸುಖ, ಶಾಂತಿ, ಸಮೃದ್ಧಿ ಹಾಗೂ ಸಂತೋಷದ ಬೆಳಕು ಸದಾ ಬೆಳಗಲಿ.
ಎಲ್ಲರಿಗೂ ದೀಪಾವಳ��� ಹಬ್ಬದ ಹಾರ್ದಿಕ ಶುಭಾಶಯಗಳು! 🪔🎆
🪔 ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು! 🪔
ಬೆಳಕಿನ ಹಬ್ಬ ದೀಪಾವಳಿಯು ಎಲ್ಲರ ಜೀವನದಲ್ಲಿ ಸುಖ, ಶಾಂತಿ, ಸಂತೋಷ ಮತ್ತು ಸಮೃದ್ಧಿಯನ್ನು ತರಲಿ. ಅಜ್ಞಾನವೆಂಬ ಕತ್ತಲೆ ದೂರವಾಗಿ, ಜ್ಞಾನದ ಬೆಳಕು ಪ್ರತಿಯೊಬ್ಬರ ಬದುಕಿನಲ್ಲಿ ಸದಾ ಬೆಳಗಲಿ. ಎಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು.
ಸುರಕ್ಷಿತವಾಗಿ ದೀಪಾವಳಿ ಆಚರಿಸಿ.
🚔 **Diwali Awareness Route March – Beguru Police**
Beguru Police conducted a route march to create public awareness on crime prevention and festival-related offences, ensuring a safe and peaceful Diwali.
#BeguruPolice#SafeDiwali#CrimePrevention
ಬಂಡೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ Macaulay English High School ನಲ್ಲಿ ಎಲೆಕ್ಟ್ರಾನಿಕ್ ಸಿಟಿ ವಿಭಾಗದ ರಾಣಿ ಚೆನ್ನಮ್ಮ ಪಡೆ ವತಿಯಿಂದ ಜಾಗೃತಿ ಕಾರ್ಯಕ್ರಮವನ್ನು ಹ��್ಮಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಪೋಕ್ಸೊ (POCSO) ಕಾಯ್ದೆ, ಮಕ್ಕಳ ಸುರಕ್ಷತೆ ಹಾಗೂ ಮಾದಕ ವಸ್ತುಗಳ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸಲಾಯಿತು. ಅಲ್ಲದೆ, ತುರ್ತು ಸಂದರ್ಭದಲ್ಲಿ ಪೊಲೀಸ್ ಸಹಾಯ ಪಡೆಯಲು 112 ಸಹಾಯವಾಣಿ ಸಂಖ್ಯೆಯ ಕುರಿತು ಮಾಹಿತಿ ನೀಡಲಾಯಿತು. ಯಾವುದೇ ಸಮಸ್ಯೆ ಅಥವಾ ತೊಂದರೆ ಎದುರಾದಲ್ಲಿ ತಕ್ಷಣ ಪೊಲೀಸರನ್ನು ಸಂಪರ್ಕಿಸುವಂತೆ ಮಕ್ಕಳಿಗೆ ತಿಳಿಸಲಾಯಿತು.
ಹೆಬ್ಬಗೋಡಿ ಪೊಲೀಸ್ ಠಾಣೆ ಪ್ರಕಟಣೆ
ದೀಪಾವಳಿ ಹಬ್ಬದ ಸುರಕ್ಷತಾ ಸೂಚನೆಗಳು:
ಹಸಿರು ಪಟಾಕಿಗಳನ್ನು ಮಾತ್ರ ಬಳಸಿ.ತೆರೆದ ಸ್ಥಳಗಳಲ್ಲಿ ಪಟಾಕಿ ಸಿಡಿಸಿ,ಮಕ್ಕಳೊಂದಿಗೆ ಪೋಷಕರು ಇರಲಿ,ನಿಗದಿತ ಸಮಯವನ್ನು ಪಾಲಿಸಿ.ಆಸ್ಪತ್ರೆ,ಶಾಲೆ ಹಾಗೂ ಜನನಿಬಿಡ ಪ್ರದೇಶಗಳಲ್ಲಿ ಪಟಾಕಿ ಸಿಡಿಸಬೇಡಿ.ತುರ್ತು ಸಂದರ್ಭದಲ್ಲಿ 112ಕ್ಕೆ ಕರೆ ಮಾಡಿ@DCP_ECITY@CityAcp
ದೀಪಾವಳಿ ಹಬ್ಬದ ಸಂದರ್ಭದಲ್ಲಿ ಸೈಬರ್ ವಂಚಕರು ಆಕರ್ಷಕ ರಿಯಾಯಿತಿಗಳು, ವಿಶೇಷ ಆಫರ್ಗಳು, ಉಚಿತ ಉಡುಗೊರೆಗಳು ಹಾಗೂ ಲಕ್ಕಿ ಡ್ರಾ ಬಹುಮಾನಗಳ ಆಮಿಷವೊಡ್ಡಿ ಸಾರ್ವಜನಿಕರನ್ನು ವಂಚಿಸುವ ಸಾಧ್ಯತೆಗಳಿರುತ್ತದೆ. ಆದ್ದರಿಂದ ಸಾರ್ವಜನಿಕರು ಆನ್ಲೈನ್ ಖರೀದಿ ಮಾಡುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಅಪರಿಚಿತ ವ್ಯಕ್ತಿಗಳು ಕಳುಹಿಸುವ ಆಫರ್ಗಳ ಲಿಂಕ್ಗಳನ್ನು ಕ್ಲಿಕ್ ಮಾಡಬೇಡಿ ಹಾಗೂ ಉಚಿತ ಉಡುಗೊರೆ ಅಥವಾ ಬಹುಮಾನ ಪಡೆಯಲು ಯಾವುದೇ ಹಣ ಪಾವತಿಸಬೇಡಿ. ನಿಮ್ಮ OTP, UPI PIN, ಬ್ಯಾಂಕ್ ಖಾತೆಯ ವಿವರಗಳು ಹಾಗೂ ವೈಯಕ್ತಿಕ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬೇಡಿ. ಯಾವುದೇ ಆಫರ್ಗಳನ್ನು ನಂಬುವ ಮೊದಲು ಸಂಬಂಧಪಟ್ಟ ಕಂಪನಿಯ ಅಧಿಕೃತ ವೆಬ್ಸೈಟ್ನಲ್ಲಿ ಪರಿಶೀಲಿಸಿ. ಒಂದು ವೇಳೆ ಸೈಬರ್ ವಂಚನೆಗೆ ಒಳಗಾದಲ್ಲಿ ತಕ್ಷಣವೇ 1930 ಸಹಾಯವಾಣಿಗೆ ಕರೆ ಮಾಡಿ ಅಥವಾ https://t.co/jCkQ05Oibl ಮೂಲಕ ದೂರು ದಾಖಲಿಸಿ. ಸಾರ್ವಜನಿಕರು ಜಾಗರೂಕರಾಗಿದ್ದು, ಸೈಬರ್ ವಂಚನೆಗಳಿಂದ ತಮ್ಮ ಹಣ ಮತ್ತು ವೈಯಕ್ತಿಕ ಮಾಹಿತಿಯನ್ನು ಸುರಕ್ಷಿತವಾಗಿರಿಸಿಕೊಳ್ಳಿ.
ನಿಮ್ಮ ಸುರಕ್ಷತೆ ನಮ್ಮ ಜವಾಬ್ದಾರಿ.
ಕನ್ನಡ ನಾಡಿನ ಹೆಮ್ಮೆಯ ಹಬ್ಬವಾದ 71ನೇ ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಸಮಸ್ತ ಕನ್ನಡಿಗರಿಗೆ ಹಾರ್ದಿಕ ಶುಭಾಶಯಗಳು. ನಮ್ಮ ಕನ್ನಡ ಭಾಷೆ, ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಏಕತೆಯನ್ನು ಗೌರವಿಸಿ, ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಕನ್ನಡ ನಾಡು ಅಭಿವೃದ್ಧಿ, ಶಾಂತಿ, ಸೌಹಾರ್ದತೆ ಮತ್ತು ಸಮೃದ್ಧಿಯ ಹಾದಿಯಲ್ಲಿ ಸದಾ ಮುನ್ನಡೆಯಲಿ ಎಂದು ಹಾರೈಸುತ್ತೇವೆ. ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ! ಜೈ ಕರ್ನಾಟಕ ಮಾತೆ! 💛❤️
ಎಲೆಕ್ಟ್ರಾನಿಕ್ ಸಿಟಿ ವಿಭಾಗದ ರಾಣಿ ಚೆನ್ನಮ್ಮ ಪಡೆ ತಂಡವು ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಹಿಳೆಯರು ಮತ್ತು ಮಕ್ಕಳ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಗಸ್ತು (Rounds) ನಡೆಸಿತು. ಈ ಮೂಲಕ ಸಾರ್ವಜನಿಕರಲ್ಲಿ ಸುರಕ್ಷತೆಯ ಭಾವನೆ ಮೂಡಿಸಿ, ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಯಿತು.
112 ತುರ್ತು ಸಹಾಯವಾಣಿಗೆ ಬಂದ ದೂರಿನ ಮೇರೆಗೆ ತಕ್ಷಣ ಕಾರ್ಯಪ್ರವೃತ್ತರಾದ ಹುಳಿಮಾವು ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಕಾಣೆಯಾಗಿದ್ದ ದ��ರವಾಂಶ್ ಎಂಬ 07 ವರ್ಷದ ಬಾಲಕನನ್ನು ಯಶಸ್ವಿಯಾಗಿ ಪತ್ತೆಹಚ್ಚಿ, ಸುರಕ್ಷಿತವಾಗಿ ಆತನ ಪೋಷಕರಿಗೆ ಹಸ್ತಾಂತರಿಸಿದ್ದಾರೆ.
#112EmergencyHelpline #MissingBoyTraced