Five more medals for India on Day 5 at the Asian Games 2026!
Heartiest congratulations to Mirabai Chanu on winning Silver in the women’s 49kg weightlifting event.
Congratulations to our skeet shooters Raiza Dhillon, Maheshwari Chauhan and Parinaaz Dhaliwal, and Anant Jeet Singh Naruka, Mairaj Ahmad Khan and Bhavtegh Singh Gill, on winning Bronze in the women’s and men’s team events respectively.
Congratulations also to Jay Meena, who scripted history by winning Bronze in men’s singles soft tennis --India’s first-ever Asian Games medal in the sport -- and to the Indian men’s badminton team on securing Bronze.
A fine day for Indian sport across disciplines, with every medal reflecting immense hard work, discipline and determination.
Congratulations to all our athletes, coaches and support teams. May the medals keep coming!
#AsianGames2026 #TeamIndia
ಇಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಅರಣ್ಯ ಸಚಿವರಾದ ರಾ��ಲಿಂಗಾರೆಡ್ಡಿ ಅವರ ಸುಪುತ್ರ ರಾಜ್ ರೆಡ್ಡಿ ಅವರ ವಿವಾಹ ಆರತಕ್ಷತೆ ಸಮಾರಂಭದಲ್ಲಿ ಪಾಲ್ಗೊಂಡು, ನವದಂಪತಿಗೆ ಶುಭ ಹಾರೈಸಿದೆ.
The State Government is continuously taking measures to provide necessary relief to farmers and people affected by the severe drought. To address the situation effectively, the Union Government must relax the existing drought declaration norms and extend the required financial assistance.
The State Government has already written to the Union Government seeking relaxation of the NDRF norms and has placed the ground realities of the drought before the Centre, seeking greater support for distressed farmers.
During the severe drought in 2023, then Chief Minister Siddaramaiah had written several times to Prime Minister Narendra Modi seeking drought relief and relaxation of the existing norms, as they did not fully reflect Karnataka’s actual drought conditions.
The present State Government, including Chief Minister D.K. Shivakumar, has also written to the Union Government. As Revenue Minister, I have raised the issue with the Centre, and the Chief Secretary has also written seeking action. The Union Government must give special consideration to Karnataka’s situation and relax the NDRF norms.
Drought should not be assessed only on overall rainfall deficiency. Factors such as the amount and timing of rainfall, impact on crops, soil moisture and local ground conditions must also be considered. In view of the 2026 drought, the State Government has already urged the Centre to review the existing criteria.
The State Government remains committed to addressing the drought and supporting farmers and the public. The Union Government must also consider Karnataka’s ground realities and extend the necessary assistance.
ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾಗಿರುವ ಹಿನ್ನೆಲೆಯಲ್ಲಿ ರೈತರು ಹಾಗೂ ಜನರಿಗೆ ಅಗತ್ಯ ನೆರವು ಒದಗಿಸಲು ರಾಜ್ಯ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ. ಬರ ಪರಿಸ್ಥಿತಿಯನ್ನು ಪರಿಣಾಮಕಾರಿಯಾಗಿ ಎದುರಿಸಲು ಕೇಂದ್ರ ಸರ್ಕಾರವು ಬರ ಘೋಷಣೆಗಿರುವ ನಿಯಮಗಳನ್ನು ಸಡಿಲಿಸಿ ಅಗತ್ಯ ಆರ್ಥಿಕ ನೆರವು ನೀಡಬೇಕು.
ಕೇಂದ್ರ ಸರ್ಕಾರದ ಎನ್ಡಿಆರ್ಎಫ್ ನಿಯಮಗಳನ್ನು ಸಡಿಲಿಸುವಂತೆ ಕೋರಿ ರಾಜ್ಯ ಸರ್ಕಾರದಿಂದ ಈಗಾಗಲೇ ಪತ್ರಗಳನ್ನು ಕೇಂದ್ರ ಸರ್ಕಾರಕ್ಕೆ ಬರೆಯಲಾಗಿದೆ. ಬರ ಪರಿಸ್ಥಿತಿಯ ವಾಸ್ತವಾಂಶಗಳನ್ನು ಕೇಂದ್ರದ ಗಮನಕ್ಕೆ ತಂದು, ಸಂಕಷ್ಟದಲ್ಲಿರುವ ರೈತರಿಗೆ ಹೆಚ್ಚಿನ ನೆರವು ದೊರೆಯುವಂತೆ ಮನವಿ ಮಾಡಲಾಗಿದೆ.
2023ರಲ್ಲಿ ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ಎದುರಾದ ಸಂದರ್ಭದಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಲವು ಬಾರಿ ಪತ್ರ ಬರೆದು, ಬರ ಪರಿಹಾರಕ್ಕೆ ಅಗತ್ಯ ನೆರವು ನೀಡುವಂತೆ ಹಾಗೂ ಕೇಂದ್ರ ಸರ್ಕಾರದ ಪ್ರಸ್ತುತ ನಿಯಮಗಳು ರಾಜ್ಯದ ವಾಸ್ತವಿಕ ಬರ ಪರಿಸ್ಥಿತಿಯನ್ನು ಸಂಪೂರ್ಣವಾಗಿ ಪ್ರತಿಬಿಂಬಿಸುವುದಿಲ್ಲ ಎಂಬ ಹಿನ್ನೆಲೆಯಲ್ಲಿ ನಿಯಮಗಳನ್ನು ಸಡಿಲಿಸುವಂತೆಯೂ ಮನವಿ ಮಾಡಿದ್ದರು.
ಪ್ರಸ್ತುತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ರಾಜ್ಯ ಸರ್ಕಾರದ ವತಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರಗಳನ್ನು ಬರೆಯಲಾಗಿದೆ. ಕಂದಾಯ ಸಚಿವನಾಗಿ ಈ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದು, ಮುಖ್ಯ ಕಾರ್ಯದರ್ಶಿಗಳೂ ಪತ್ರ ಬರೆದಿದ್ದಾರೆ. ಕೇಂದ್ರ ಸರ್ಕಾರ ರಾಜ್ಯದ ಪರಿಸ್ಥಿತಿಯನ್ನು ವಿಶೇಷವಾಗಿ ಪರಿಗಣಿಸಿ ಎನ್ಡಿಆರ್ಎಫ್ ನಿಯಮಗಳನ್ನು ಸಡಿಲಿಸಬೇಕು.
ಬರ ಪರಿಸ್ಥಿತಿಯನ್ನು ಕೇವಲ ಸಾಮಾನ್ಯ ಮಳೆಯ ಕೊರತೆಯ ಆಧಾರದ ಮೇಲೆ ಅಳೆಯದೆ, ಮಳೆಯ ಪ್ರಮಾಣ, ಮಳೆ ಬಿದ್ದ ಸಮಯ, ಬೆಳೆಗಳ ಮೇಲಾದ ಪರಿಣಾಮ, ಮಣ್ಣಿನ ತೇವಾಂಶ ಸೇರಿದಂತೆ ಸ್ಥಳೀಯ ವಾಸ್ತವಾಂಶಗಳನ್ನು ಪರಿಗಣಿಸಬೇಕು ಎಂಬುದು ರಾಜ್ಯದ ಪ್ರಮುಖ ಬೇಡಿಕೆಯಾಗಿದ��. 2026ರ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಕೇಂದ್ರದ ಮಾನದಂಡಗಳನ್ನು ಮರುಪರಿಶೀಲಿಸುವಂತೆ ರಾಜ್ಯ ಸರ್ಕಾರ ಈಗಾಗಲೇ ಮನವಿ ಮಾಡಿದೆ.
ರಾಜ್ಯದಲ್ಲಿ ಬರ ಪರಿಸ್ಥಿತಿಯನ್ನು ಎದುರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ರೈತರು ಹಾಗೂ ಜನರ ಸಂಕಷ್ಟಕ್ಕೆ ಸ್ಪಂದಿಸಲು ಸರ್ಕಾರ ಬದ್ಧವಾಗಿದೆ. ಕೇಂದ್ರ ಸರ್ಕಾರವೂ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿ ಅಗತ್ಯ ನೆರವು ನೀಡಬೇಕು.
ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವವಾದ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಗೆ ಭಾಜನರಾಗಿರುವ ಕನ್ನಡದ ಹಿರಿಯ ನಟ ಅನಂತ್ ನಾಗ್ ಅವರಿಗೆ ಅಭಿನಂದನೆಗಳು.
���ಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯು ಚಿತ್ರರಂಗದ ಅತ್ಯುನ್ನತ ಪ್ರಶಸ್ತಿಯಾಗಿದೆ. ಚಿತ್ರರಂಗದಲ್ಲಿ ಕೆಲಸ ಮಾಡಿದ ಎಲ್ಲರಿಗೂ ಸುಲಭವಾಗಿ ದೊರೆಯುವ ಪ್ರಶಸ್ತಿ ಇದಲ್ಲ. ಅಂತಹ ಪ್ರತಿಷ್ಠಿತ ಪ್ರಶಸ್ತಿಯನ್ನು ಅನಂತ್ ನಾಗ್ ಅವರು ಪಡೆದಿರುವುದು ಮಹತ್ವದ ಸಂಗತಿ. ರಾಷ್ಟ್ರ ಮಟ್ಟದಲ್ಲಿ ಕಲಾವಿದರ ಸಾಧನೆ ಮತ್ತು ವ್ಯಕ್ತಿತ್ವವನ್ನು ಗುರುತಿಸಿ ಗೌರವಿಸುವುದು ಇಡೀ ಚಿತ್ರರಂಗ ಹಾಗೂ ಕಲಾ ಕ್ಷೇತ್ರಕ್ಕೆ ಆಧುನಿಕ ಜಗತ್ತಿನಲ್ಲಿ ಮತ್ತಷ್ಟು ಉತ್ತೇಜನ ನೀಡುತ್ತದೆ.
1970ರ ದಶಕದಲ್ಲಿ ರಂಗಭೂಮಿಯಿಂದ ತಮ್ಮ ಕಲಾ ಪಯಣ ಆರಂಭಿಸಿದ ಅನಂತ್ ನಾಗ್ ಅವರು ಅದರ ಜೊತೆಜೊತೆಯಲ್ಲಿಯೇ ಕಿರುತೆರೆಗೂ ಕಾಲಿಟ್ಟರು. 70ಕ್ಕೂ ಹೆಚ್ಚು ನಾಟಕಗಳಲ್ಲಿ ಅಭಿನಯಿಸಿರುವ ಅವರು, ಚಿತ್ರರಂಗಕ್ಕೆ ಪ್ರವೇಶಿಸಿದ ಸಂದರ್ಭದಲ್ಲಿ ತಮ್ಮ ಸಹೋದರ ಶಂಕರ್ ನಾಗ್ ಅವರೊಂದಿಗೆ ಕನ್ನಡ ಚಿತ್ರರಂಗದಲ್ಲಿ ಹೊಸ ರೀತಿಯ ಅಲೆಯೊಂದನ್ನು ಹುಟ್ಟುಹಾಕಿದರು.
ಡಾ. ರಾಜ್ಕುಮಾರ್ ಮತ್ತು ವಿಷ್ಣುವರ್ಧನ್ ಅವರಂತಹ ಮೇರು ನಟರು ಕನ್ನಡ ಚಿತ್ರರಂಗದಲ್ಲಿ ಮಿಂಚುತ್ತಿದ್ದ ಕಾಲಘಟ್ಟದಲ್ಲಿಯೇ ಅನಂತ್ ನಾಗ್ ಅವರು ವಿಭಿನ್ನ ರೀತಿಯ ಚಿತ್ರಗಳ ಮೂಲಕ ತಮ್ಮದೇ ಆದ ಹೊಸ ಹಾದಿಯನ್ನು ರೂಪಿಸಿಕೊಂಡರು. 1970ರ ���ಶಕದಲ್ಲಿ ಕನ್ನಡ ಚಿತ್ರರಂಗದಲ್ಲಿ ಆರಂಭವಾದ ಈ ಹೊಸ ಅಲೆಯ ನಾಯಕತ್ವ ವಹಿಸಿದವರಲ್ಲಿ ಅನಂತ್ ನಾಗ್ ಪ್ರಮುಖರು.
ಅನಂತ್ ನಾಗ್ ಅವರು ಕಲಾ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗದೆ ರಾಜಕೀಯ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಿದ್ದಾರೆ. 1989-94ರ ಅವಧಿಯಲ್ಲಿ ಅವರನ್ನು ವಿಧಾನ ಪರಿಷತ್ತಿನ ನಾಮನಿರ್ದೇಶಿತ ಸದಸ್ಯರನ್ನಾಗಿ ಮಾಡಲಾಯಿತು. ನಂತರ 1994ರಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿ ಶಾಸಕರಾದ ಅವರು, ರಾಜ್ಯ ಸರ್ಕಾರದಲ್ಲಿ ಸಚಿವರಾಗಿಯೂ ಕಾರ್ಯನಿರ್ವಹಿಸಿದರು.
ರಾಜಕೀಯ ಕ್ಷೇತ್ರದಲ್ಲಿ ಅನಂತ್ ನಾಗ್ ಅವರ ಪಯಣ ಅಲ್ಪಾವಧಿಯದ್ದಾಗಿತ್ತು. ನಂತರ ಸಕ್ರಿಯ ರಾಜಕಾರಣದಿಂದ ದೂರ ಸರಿದು ಮತ್ತೆ ಚಲನಚಿತ್ರ ಕ್ಷೇತ್ರದತ್ತ ಮುಖ ಮಾಡಿ ತಮ್ಮ ಕಲಾ ಪಯಣವನ್ನು ಮುಂದುವರಿಸಿದರು.
ಅನಂತ್ ನಾಗ್ ಅವರು 5 ಬಾರಿ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಒಂದು ಬಾರಿ ಪ್ರಶಸ್ತಿ ಪಡೆಯುವುದೇ ಅತ್ಯಂತ ಕಠಿಣವಾಗಿರುವಾಗ ಐದು ಬಾರಿ ಪ್ರಶಸ್ತಿಗೆ ಭಾಜನರಾಗಿರುವುದು ಅವರ ಕಲಾ ಪ್ರತಿಭೆಗೆ ಸಾಕ್ಷಿ. ನಂತರದ ವರ್ಷಗಳಲ್ಲಿ ಜೀವನವನ್ನು ಸರಳವಾಗಿ ಸ್ವೀಕರಿಸಿ ಚಲನಚಿತ್ರಗಳಲ್ಲಿ ಅಭಿನಯಿಸುವುದನ್ನೂ ಕಡಿಮೆ ಮಾಡಿಕೊಂಡರು. ಆದರೆ ಅದಕ್ಕೂ ಮೊದಲು 300ಕ್ಕೂ ಹೆಚ್ಚು ಚಲನಚಿತ್ರ���ಳಲ್ಲಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಯಾವುದೇ ಒಬ್ಬ ನಟನ ದೃಷ್ಟಿಯಿಂದ ಇದು ಆ ಕ್ಷೇತ್ರಕ್ಕೆ ನೀಡಿದ ಅತ್ಯಂತ ಮಹತ್ವದ ಕೊಡುಗೆಗಳಲ್ಲಿ ಒಂದಾಗಿದೆ.
ಕನ್ನಡ ಚಿತ್ರರಂಗದಿಂದ ಮೊದಲ ಬಾರಿಗೆ ಮೇರುನಟ ಡಾ. ರಾಜ್ಕುಮಾರ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸಂದಿತ್ತು. ಸುಮಾರು 30 ವರ್ಷಗಳ ನಂತರ ಇದೀಗ ಅನಂತ್ ನಾಗ್ ಅವರ ಪ್ರತಿಭೆ ಮತ್ತು ಚಿತ್ರರಂಗಕ್ಕೆ ನೀಡಿದ ಕೊಡುಗೆಯನ್ನು ಗುರುತಿಸಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗಿದೆ. ಇದು ��ವರಲ್ಲಿರುವ ಅಪ್ರತಿಮ ಪ್ರತಿಭೆಗೆ ಸಂದ ಗೌರವ.
ಭಟ್ಕಳದಲ್ಲಿ ಹುಟ್ಟಿ, ಬೆಂಗಳೂರಿಗೆ ಬಂದು, ಕನ್ನಡದ ಜೊತೆಗೆ ಹಲವು ಭಾಷೆಗಳ ಚಲನಚಿತ್ರಗಳಲ್ಲಿ ಅಭಿನಯಿಸಿರುವ ಅನಂತ್ ನಾಗ್ ಅವರು ತಮ್ಮ ಕಲೆಯ ಮೂಲಕ ಚಿತ್ರರಂಗಕ್ಕೆ ಗೌರವ ತಂದುಕೊಟ್ಟಿದ್ದಾರೆ. ಅನಂತ್ ನಾಗ್ ಅವರ ಪ್ರತಿಭೆಯನ್ನು ಗುರುತಿಸಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ನೀಡಿರುವುದು ಇಡೀ ಕರ್ನಾಟಕಕ್ಕೆ ಗೌರವ ತಂದಿದೆ. ರಾಜ್ಯ ಸರ್ಕಾರದ ಪರವಾಗಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸುತ್ತೇ��ೆ.
ಮೈಸೂರು ಸಂಸ್ಥಾನದ ಕೊನೆಯ ಮಹಾರಾಜರಾಗಿ ಹಾಗೂ ರಾಜ್ಯದ ಮೊದಲ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ ಜಯಚಾಮರಾಜ ಒಡೆಯರ್ ಅವರ ಪುಣ್ಯಸ್ಮರಣೆಯಂದು ಗೌರವ ನಮನಗಳನ್ನು ಸಲ್ಲಿಸುತ್ತೇನೆ.
ನಾಡಿನ ಸಂಸ್ಕೃತಿ, ಕಲೆ, ಸಂಗೀತ ಹಾಗೂ ಶಿಕ್ಷಣ ಕ್ಷೇತ್ರಗಳ ಬೆಳವಣಿಗೆಗೆ ಅವರು ನೀಡಿದ ಕೊಡುಗೆಗಳನ್ನು ಸದಾ ಸ್ಮರಿಸೋಣ.
ಸ್ವಚ್ಛ ಹಾಗೂ ಸುಂದರ ನಗರಗಳ ನಿರ್ಮಾಣದಲ್ಲಿ ಪೌರ ಕಾರ್ಮಿಕರ ಪಾತ್ರ ಮಹತ್ವದ್ದು. ಪ್ರತಿದಿನ ತಮ್ಮ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸಿ, ಸಾರ್ವಜನಿಕ ಆರೋಗ್ಯ ಮತ್ತು ಪರಿಸರದ ಕಾಳಜಿಗೆ ತಮ್ಮದೇ ಆದ ��ೊಡುಗೆ ನೀಡುತ್ತಿರುವ ಅವರ ಸೇವೆ ಅಭಿನಂದನೀಯ.
ಸ್ವಚ್ಚ ನಗರ - ಸ್ವಸ್ಥ ಸಮಾಜಕ್ಕಾಗಿ ಶ್ರಮಿಸುತ್ತಿರುವ ಎಲ್ಲ ಪೌರ ಕಾರ್ಮಿಕರಿಗೂ ಪೌರ ಕಾರ್ಮಿಕರ ದಿನದ ಶುಭಾಶಯಗಳು.
ಇಂದು ಬೆಂಗಳೂರಿನ ಖಾಸಗಿ ಹೋಟೆಲ್ನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ಪಾಲ್ಗೊಂಡು, ವಿವಿಧ ವಿಷಯಗಳ ಕುರಿತು ಚರ್ಚಿಸಲಾಯಿತು.
ನಿಕಟಪೂರ್ವ ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಸಚಿವರಾದ ಕೆ.ಹೆಚ್. ಮುನಿಯಪ್ಪ, ಕೆ.ಜೆ. ಜಾರ್ಜ್, ಎಂ.ಬಿ. ಪಾಟೀಲ್, ಸತೀಶ್ ಜಾರಕಿಹೊಳಿ, ಮಾಜಿ ಸಚಿ��ರಾದ ಹೆಚ್.ಕೆ. ಪಾಟೀಲ್ ಸೇರಿದಂತೆ ವಿಧಾನಸಭೆ ಹಾಗೂ ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
ʼಪಶ್ಚಿಮಘಟ್ಟʼ ನಮ್ಮ ಅಮೂಲ್ಯ ನೈಸರ್ಗಿಕ ಸಂಪತ್ತು. ಅದರ ಸಂರಕ್ಷಣೆ ಎಷ್ಟು ಮುಖ್ಯವೋ, ಅಲ್ಲಿಯೇ ಬದುಕು ಕಟ್ಟಿಕೊಂಡಿರುವ ರೈತರು, ಆದಿವಾಸಿಗಳು ಹಾಗೂ ಸ್ಥಳೀಯ ಜನರ ಹಕ್ಕನ್ನು ಸಂರಕ್ಷಿಸುವುದು, ಅವರ ಜೀವನೋಪಾಯ ಮತ್ತು ಭವಿಷ್ಯವನ್ನು ಕಾಪಾಡುವುದು ಅಷ್ಟೇ ಮುಖ್ಯ.
ಕಸ್ತೂರಿ ರಂಗನ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸುವುದರಿಂದ ಮಲೆನಾಡು ಮತ್ತು ಕರಾವಳಿಗರ ಜೀವನ ನಿರ್ವಹಣೆಯ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ಗಂಭೀರವಾಗಿ ಪರಿಗಣಿಸಿ, ವರದಿಯ ಯಥಾವತ್ತು ಜಾರಿಗೆ ಸಮ್ಮತಿ ಇಲ್ಲ ಎಂಬ ನಿರ್ಣಯವನ್ನು ಸದನದಲ್ಲಿ ಸರ್ವಾನುಮತದಿಂದ ಕೈಗೊಂಡಿದ್ದೇವೆ.
ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ ಸಿಲುಕಬಾರದು. ಅದೇ ��ೀತಿ ಅಭಿವೃದ್ಧಿಯ ಹೆಸರಿನಲ್ಲಿ ನಮ್ಮ ಪಶ್ಚಿಮಘಟ್ಟದ ಪರಿಸರಕ್ಕೂ ಧಕ್ಕೆಯಾಗಬಾರದು. ಪರಿಸರ ಸಂರಕ್ಷಣೆ ಮತ್ತು ಜನರ ಹಿತಾಸಕ್ತಿ ಎರಡರ ನಡುವೆ ಸಮತೋಲನ ಸಾಧಿಸುವುದು ನಮ್ಮ ಸರ್ಕಾರದ ನಿಲುವಾಗಿದೆ.
ರಾಜ್ಯದ ನೆಲ, ಜಲ, ಪರಿಸರದ ಜೊತೆಗೆ ಅಲ್ಲಿನ ಜನರ ಬದುಕು ಮತ್ತು ಹಕ್ಕುಗಳನ್ನು ಕಾಪಾಡಲು ನಾವು ಬದ್ಧರಿದ್ದೇವೆ.
The Western Ghats are one of our most precious natural assets. Protecting them is vital, but equally important is safeguarding the rights, livelihoods and future of the farmers, tribal communities and local people who have lived there for generations.
Considering the serious impact that implementing the Kasturirangan Report in its present form could have on the lives of people in Malnad and the coastal region, the House has unanimously resolved not to accept its implementation as is.
Environmental protection should not come at the cost of people’s lives. At the same time, development should not damage the ecology of the Western Ghats. Our Government’s stand is to maintain a balance between environmental conservation and people’s interests.
We remain committed to protecting Karnataka’s land, water, environment, and the rights and livelihoods of its people.
Heartiest congratulations to the Indian Women’s Cricket Team on winning India’s first gold medal of the Asian Games 2026, defeating Sri Lanka by a commanding 147 runs in the final.
From a powerful batting performance led by Smriti Mandhana, Shafali Verma and Richa Ghosh, to a disciplined bowling display, this was a complete team effort worthy of the gold medal.
It is also a proud moment for Karnataka to see Shreyanka Patil as part of this gold-winning Indian team.
Congratulations to every player, coach and member of the support staff on this outstanding achievement.
#AsianGames2026
ರಾಜ್ಯದಲ್ಲಿ ಮುಂಗಾರು ಮಳೆಯ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯನ್ನು ನಿರಂತರವಾಗಿ ವೈಜ್ಞಾನಿಕವಾಗಿ ಮೌಲ್ಯಮಾ���ನ ನಡೆಸಲಾಗುತ್ತಿದ್ದು, ರೈತರ ಸಂಕಷ್ಟಕ್ಕೆ ತ್ವರಿತವಾಗಿ ಸ್ಪಂದಿಸುವ ನಿಟ್ಟಿನಲ್ಲಿ ಹಂತ ಹಂತವಾಗಿ ಕ್ರಮ ಕೈಗೊಳ್ಳುತ್ತಿದ್ದೇವೆ.
ಮೊದಲ ಹಂತದಲ್ಲಿ 101 ಹಾಗೂ ಎರಡನೇ ಹಂತದಲ್ಲಿ 23 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿದ್ದೆವು. ಇದೀಗ ಮತ್ತೆ 53 ತಾಲೂಕುಗಳನ್ನು ಬರಪೀಡಿತ ಪ್ರದೇಶ ಎಂದು ಘೋಷಿಸಿ ಆದೇಶ ಹೊರಡಿಸಿದ್ದೇವೆ. ಈ ಪೈಕಿ 51 ತಾಲೂಕುಗಳು ತೀವ್ರ ಹಾಗೂ 2 ತಾಲೂಕುಗಳು ಸಾಧಾರಣ ಬರಪೀಡಿತವಾಗಿದ್ದು, ಇದರೊಂದಿಗೆ ರಾಜ್ಯದಲ್ಲಿ ಬರಪೀಡಿತ ಎಂದು ಘೋಷಿಸಲಾದ ತಾಲೂಕುಗಳ ಸ��ಖ್ಯೆ 177ಕ್ಕೆ ಏರಿಕೆಯಾಗಿದೆ.
ಇದರ ಜೊತೆಗೆ, ಮಳೆ ಪ್ರಮಾಣ, ಮಣ್ಣಿನ ತೇವಾಂಶ, ಬೆಳೆ ಸ್ಥಿತಿ ಸೇರಿದಂತೆ ವಿವಿಧ ವೈಜ್ಞಾನಿಕ ಮಾನದಂಡಗಳ ಆಧಾರದ ಮೇಲೆ 4ನೇ ಹಂತದಲ್ಲಿ 7 ಜಿಲ್ಲೆಗಳ 11 ತಾಲೂಕುಗಳು Step-3: Ground Truthingಗೆ ಅರ್ಹತೆ ಪಡೆದಿವೆ. ವೈಜ್ಞಾನಿಕ ಪರಿಶೀಲನೆ, ಪಾರದರ್ಶಕ ಸಮೀಕ್ಷೆ ಮತ್ತು ನಿಖರ ವರದಿಯ ಆಧಾರದಲ್ಲಿ ಮುಂದಿನ ಕ್ರಮಗಳನ್ನು ಕೈಗೊಳ್ಳಲಾಗುವುದು.
ಮುಂಗಾರು ಹಂಗಾಮು ಮುಗಿಯುವವರೆಗೂ ಬರ ಪರಿಸ್ಥಿತಿಯ ಮೇಲ್ವಿಚಾರಣೆ ಮುಂದುವರಿಯಲಿದ್ದು, ಅಗತ್ಯ ಕಂಡುಬಂದಲ್ಲಿ ಮುಂದಿನ ಹಂತದಲ್ಲಿಯೂ ಹೆಚ್ಚುವರಿ ತಾಲೂಕುಗಳನ್ನು ಗ್ರೌಂಡ್ ಟ್ರೂಥಿಂಗ್ಗೆ ಸೇರಿಸಲಾಗುವುದು.
ಬೆಳೆ ಹಾನಿಯ ನೈಜ ಚಿತ್ರಣ ಆಧರಿಸಿ, ಬರದಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ನಿಯಮಾನುಸಾರ ಅಗತ್ಯ ನೆರವು ತಲುಪಿಸಲು ನಾವು ಬದ್ಧರಿದ್ದೇವೆ.
The drought situation caused by deficient monsoon rainfall is being continuously assessed on a scientific basis, with phased measures being taken to ensure a swift response to farmers’ distress.
In the first phase, 101 taluks were declared drought-hit, followed by 23 taluks in the second phase. We have now issued orders declaring another 53 taluks drought-hit. Of these, 51 are severely drought-hit and 2 are moderately drought-hit, taking the total number of drought-hit taluks in the State to 177.
In addition, based on various scientific parameters, including rainfall, soil moisture and crop conditions, 11 taluks across 7 districts have qualified for Step-3: Ground Truthing under the 4th phase of drought assessment. Further action will be taken based on scientific verification, transparent field assessment and accurate reporting.
Monitoring will continue until the end of the monsoon season, and additional taluks will be taken up for ground truthing in the next phase wherever required.
We are committed to ensuring that farmers affected by drought receive the necessary relief as per norms, based on the actual extent of crop damage.
ಬರ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ಜನರಿಗೆ ಅಗತ್ಯ ನೆರವು ತ್ವರಿತವಾಗಿ ತಲುಪಿಸುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ.
ಜಿಲ್ಲ���ಧಿಕಾರಿಗಳ ಬಳಿ ಲಭ್ಯವಿರುವ ₹320 ಕೋಟಿ ಎಸ್ಡಿಆರ್ಎಫ್ ಹಣವನ್ನು ಬರ ಘೋಷಣೆಯ ಹಿನ್ನೆಲೆಯಲ್ಲಿ ಬಳಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. 16ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕೇಂದ್ರದಿಂದ ಈ ವರ್ಷ ₹929.25 ಕೋಟಿ ಬರಬೇಕಿದ್ದು, ಈಗಾಗಲೇ ₹464.62 ಕೋಟಿ ಮೊದಲ ಕಂತು ಬಿಡುಗಡೆಯಾಗಿದೆ. ರಾಜ್ಯದ ಪಾಲು ಸೇರಿಸಿ ಜಿಲ್ಲಾಧಿಕಾರಿಗಳಿಗೆ ಕೂಡಲೇ ಬಿಡುಗಡೆ ಮಾಡಲಾಗುವುದು.
ಬರ ಸಂಕಷ್ಟಕ್ಕೆ ರಾಜ್ಯ ಸರ್ಕಾರದ ನಿರಂತರ ಸ್ಪಂದನೆ
The Government is taking swift measures to ensure that necessary relief reaches people affected by the drought without delay.
��320 crore in SDRF funds currently available with Deputy Commissioners has been permitted for use in view of the drought declaration. As recommended by the 16th Finance Commission, Karnataka is due to receive ₹929.25 crore from the Union Government this year, of which the first instalment of ₹464.62 crore has already been released. The State’s share will be added and the funds will be released to Deputy Commissioners immediately.
The State Government continues to respond swiftly to drought distress.
ಬರದ ಸಂಕಷ್ಟಕ್ಕೆ ತಕ್ಕಂತೆ ನಿಯಮಗಳೂ ಬದಲಾಗಬೇಕು. ರೈತರಿಗೆ ಸಕಾಲದಲ್ಲಿ ಹಾಗೂ ಸಮಾನ ಪರಿಹಾರ ದೊರೆಯುವ ಉದ್ದೇಶದಿಂದ ಬರ ಕೈಪಿಡಿ-2020 ಮತ್ತು NDRF ನಿಯಮಗಳಲ್ಲಿ ಅಗತ್ಯ ಬದಲಾವಣೆ ತರಲು ರಾಜ್ಯ ಸರ್ಕಾರದ ಪರವಾಗಿ ಮನವಿ ಮಾಡಿದ್ದೇನೆ.
FRUITS ದತ್ತಾಂಶ ಪರಿಗಣನೆ, ಬೆಳೆ ನಷ್ಟ ಪರಿಹಾರ ಮಾನದಂಡಗಳ ಏಕರೂಪತೆ, ಬಿತ್ತನೆ ಅವಧಿಯ ಮಳೆ ಕೊರತೆ ಹಾಗೂ ಕಡಿಮೆ ಅವಧಿಯ ಒಣಹವೆಯ ಪರಿಗಣನೆ ಸೇರಿದಂತೆ ಬರದ ಪರಿಸ್ಥಿತಿ ಉಲ್ಬಣಗೊಳ್ಳುವವರೆಗೆ ಕಾಯದೆ, ಆರಂಭದಲ್ಲಿಯೇ ಬರ ಘೋಷಿಸಿ ರೈತರಿಗೆ ಸಕಾಲದಲ್ಲಿ ನೆರವು ಒದಗಿಸುವ ವ್ಯವಸ್ಥೆ ರೂಪುಗೊಳ್ಳಬೇಕು ಎಂಬುದೂ ನಮ್ಮ ಪ್ರಮುಖ ಆಗ್ರಹವಾಗಿದೆ. ರೈತರ ಹಿತ ಕಾಪಾಡಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ನಮ್ಮ ಸರ್ಕಾರ ನಿರಂತರವಾಗಿ ಕೈಗೊಳ್ಳಲಿದೆ.
Drought rules must evolve with the severity of the crisis. To ensure farmers receive timely and equitable relief, I have urged necessary amendments to the Drought Manual 2020 and NDRF norms on behalf of the State Government.
Our key demands include considering FRUITS data, standardising crop-loss relief norms, factoring in rainfall deficiency during the sowing period and recognising shorter dry spells.
The system should also allow drought to be declared at an early stage, rather than waiting for conditions to worsen, so that farmers can receive timely assistance.
Our Government will continue to take every necessary step to safeguard farmers’ interests.
ರಾಜ್ಯದ ಜನರ ದಾಹ ನೀಗಿಸುವುದು ನಮ್ಮ ಸರ್ಕಾರದ ಮೊದಲ ಆದ್ಯತೆ. ಬರ ಪರಿಸ್ಥಿತಿಯ ನಡುವೆಯೂ ರಾಜ್ಯದ ಯಾವುದೇ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯ��� ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಈ ಪೈಕಿ ಏಪ್ರಿಲ್–ಮೇ ಅವಧಿಯಲ್ಲಿ ಜಿಲ್ಲೆಗಳಿಗೆ ₹117 ಕೋಟಿ ಹಾಗೂ ಗ್ರಾಮೀಣ ಪ್ರದೇಶಗಳ ಕುಡಿಯುವ ನೀರಿನ ವ್ಯವಸ್ಥೆಗೆ ₹189 ಕೋಟಿ ಅನುದಾನ ನೀಡಿದ್ದು, ಒಟ್ಟಾರೆ ₹306 ಕೋಟಿ ಅನುದಾನವನ್ನು ಒದಗಿಸಲಾಗಿದೆ.
ನೀರಿನ ಕೊರತೆಯಿಂದ ಯಾವುದೇ ಕುಟುಂಬ ಸಂಕಷ್ಟಕ್ಕೆ ಸಿಲುಕಬಾರದು ಎಂಬ ಉದ್ದೇಶದಿಂದ, ಅಗತ್ಯವಿರುವ ಕಡೆಗಳಲ್ಲಿ ತಕ್ಷಣದ ನೀರು ಪೂರೈಕೆ ಹಾಗೂ ಪರ್ಯಾಯ ವ್ಯವಸ್ಥೆಗಳನ್ನು ಕಲ್ಪಿಸಲಾಗುತ್ತಿದೆ.ಜನರ ಬದುಕಿಗೆ ಅತ್ಯಗತ್ಯವಾದ ಕುಡಿಯುವ ನೀರಿನ ಪೂರೈಕೆಗೆ ನಮ್ಮ ಸರ್ಕಾರ ಸದಾ ಬದ್ಧವಾಗಿದೆ.
Ensuring drinking water for the people of the State is our Government’s first priority. Even amid drought, necessary precautionary measures are being taken to prevent drinking water shortages in any part of Karnataka.
For this, ₹117 crore has been provided to districts for April–May, along with ₹189 crore for drinking water arrangements in rural areas, taking the total allocation to ₹306 crore.
To ensure that no family suffers due to water scarcity, immediate supply and alternative arrangements are being made wherever required. Our Government remains committed to ensuring access to this essential need - safe drinking water for every family.
A proud beginning for India at the Asian Games 2026!
Congratulations to Elavenil Valarivan, Sonam Maskar and Vidarsa Vinod on the women’s 10m Air Rifle team silver, with Elavenil adding another silver in the individual event.
Congratulations also to Himanshu Dhillon, Rudrankksh Patil and Parth Mane on their men’s 10m Air Rifle team silver. Himanshu went on to win individual silver, while Rudrankksh secured bronze.
And congratulations to Suchika Tariyal, who created history by winning India��s first-ever Asian Games medal in MMA, a bronze in the women’s Traditional 60kg event.
Six medals, each earned through immense discipline and determination. May this be the beginning of many more proud moments for India at Aichi-Nagoya.
#AsianGames2026
ಕುಡಿಯುವ ನೀರು ಪ್ರತಿಯೊಬ್ಬರ ಮೂಲಭೂತ ಹಕ್ಕು. ಜನರ ದೈನಂದಿನ ಬದುಕಿಗೆ ಅಗತ್ಯವಾದ ನೀರಿನ ಪೂರೈಕೆಯಲ್ಲಿ ಯಾವುದೇ ಕೊರತೆ ಉಂಟಾಗದಂತೆ ನಮ್ಮ ಸರ್ಕಾರ ನಿರಂತರವಾಗಿ ಕ್ರಮ ಕೈಗೊಳ್ಳುತ್ತಿದೆ.
ಬರ ಪರಿಸ್ಥಿತಿಯಿಂದ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಎದುರಾಗಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ, ಅಗತ್ಯವಿರುವ ಕಡೆಗಳಲ್ಲಿ ಟ್ಯಾಂಕರ್ಗಳು ಹಾಗೂ ಖಾಸಗಿ ಕೊಳವೆಬಾವಿಗಳ ಮೂಲಕ ನೀರು ಪೂರೈಸಲಾಗುತ್ತಿದೆ.
ಬರದ ಸಂಕಷ್ಟದ ನಡುವೆಯೂ ಯಾವುದೇ ಕುಟುಂಬ ಕುಡಿಯುವ ನೀರಿಗಾಗಿ ಪರದಾಡಬಾರದು ಎಂಬುದು ನಮ್ಮ ಸರ್ಕಾರದ ಬದ್ಧತೆ. ಜನರ ಬದುಕಿಗೆ ಅತ್ಯಗತ್ಯವಾದ ನೀರಿನ ಪೂರೈಕೆಗೆ ಮೊದಲ ಆದ್ಯತೆ ನೀಡಿ, ಪರಿಸ್ಥಿತಿಗೆ ಅನುಗುಣವಾಗಿ ಅಗತ್ಯ ಕ್ರಮಗಳನ್ನು ಮುಂದುವರಿಸಲಾಗುವುದು.
Access to drinking water is a basic right. Our Government is taking continuous measures to ensure there is no shortage in the supply of water essential to people’s daily lives.
The drinking water shortage caused by drought in both rural and urban areas is being addressed seriously, with water supplied through tankers and private borewells wherever required.
Even amid drought, no family should have to struggle for drinking water. Ensuring uninterrupted water supply remains our priority, and necessary measures will continue based on the situation.
ಕೇಂದ್ರ ಸರ್ಕಾರವು 2020ರಲ್ಲಿ ರೂಪಿಸಿರುವ ಬರ ಘೋಷಣೆಯ ಮಾರ್ಗಸೂಚಿಗಳ ಪ್ರಕಾರವೇ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕಾಗುತ್ತದೆ.
ಆ ಮಾನದಂಡಗಳನ್ನು ಅನುಸರಿಸಿ ಮೊದಲ ಹಂತದಲ���ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ನಿರಂತರ ಪರಿಶೀಲನೆಯ ಬಳಿಕ ಮತ್ತೂ 23 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಇದೀಗ ಮತ್ತೆ 53 ತಾಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ. ಇದರೊಂದಿಗೆ ಒಟ್ಟು 177 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಲಿವೆ.
ಇಷ್ಟಕ್ಕೇ ಪ್ರಕ್ರಿಯೆ ಮುಗಿಯುವುದಿಲ್ಲ. ನೆಲಮಟ್ಟದ ಪರಿಸ್ಥಿತಿ, ಮಳೆ ಕೊರತೆ, ಬೆಳೆ ಹಾನಿ ಸೇರಿದಂತೆ ನಿಗದಿತ ಮಾನದಂಡಗಳ ಆಧಾರದಲ್ಲಿ ನಿರಂತರ ಮೌಲ್ಯಮಾಪನ ನಡೆಸಲಾಗುವುದು. ಮುಂದಿನ ಹಂತದಲ್ಲಿ ಮತ್ತಷ್ಟು ತಾಲೂಕುಗಳು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಬರಪೀಡಿತ ತಾಲೂಕುಗಳ ಸಂಖ್ಯೆ ಸುಮಾರು 200ರ ವರೆಗೆ ತಲುಪಬಹುದು.
ಬರ ಪರಿಸ್ಥಿತಿಯ ತೀವ್ರತೆಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯ ಸರ್ಕಾರವು ಹಂತ ಹಂತವಾಗಿ ತಾಲೂಕುಗಳ ಪರಿಶೀಲನೆ ನಡೆಸಿ, ತ್ವರಿತವಾಗಿ ಬರಪೀಡಿತ ತಾಲೂಕುಗಳನ್ನು ಘೋಷಿಸುವ ಮೂಲಕ ನಿರಂತರವಾಗಿ ಸ್ಪಂದಿಸುತ್ತಿದೆ.
ಮೊದಲ ಎರಡು ಹಂತಗಳಲ್ಲಿ ಪರಿಶೀಲಿಸಲಾದ 126 ತಾಲೂಕುಗಳ ಪೈಕಿ 124 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಮೂರನೇ ಹಂತದ ಘೋಷಣೆ ತಯಾರಿಯಲ್ಲಿದ್ದು, 17 ಜಿಲ್ಲೆಗಳ 53 ತಾಲೂಕುಗಳನ್ನು ಬರ ಪಟ್ಟಿಗೆ ಸೇರಿಸಲಾಗುತ್ತಿದೆ.
ಬರ ಸಂಕಷ್ಟಕ್ಕೆ ನಮ್ಮ ಸರ್ಕಾರದ ನಿರಂತರ ಸ್ಪಂದನೆ
Considering the severity of the drought, the State Government is continuously responding by assessing taluks in phases and swiftly declaring those affected by drought.
In the first two phases, 124 of the 126 taluks assessed were declared drought-hit. The third-phase declaration is now being prepared, with 53 taluks across 17 districts being added to the drought-hit list.
The State Government continues to respond swiftly to drought distress.
The Kasturirangan Report and the severe drought situation in Karnataka require a comprehensive, bipartisan discussion in the Legislature and a consensus that protects the State’s interests.
On the 7th draft of the Kasturirangan Report, the State Government must submit its views to the Union Government within the stipulated time. Rather than sending only the Government’s position, the issue has been taken up in the House so that ruling and Opposition members can discuss it openly and arrive at a common stand in Karnataka’s interest.
*Severe Drought Situation Across the State: The drought situation this year is extremely serious and is not limited to a few taluks. Severe rainfall deficiency across large parts of the State has badly affected agriculture and farmers’ livelihoods. The Government is comparing the current situation with previous severe drought years and closely assessing its intensity. El Niño, linked to higher surface temperatures in the Pacific Ocean, has also contributed to the rainfall deficit this year.
Against the normal rainfall of around 852 mm, the State has received only 642 mm. From June to September 26, severe rainfall deficiency has been recorded across different regions.
The State’s average rainfall deficit stands at 36% -- 46% in South Interior Karnataka, 44% in North Interior Karnataka, 38% in Malnad and 28% in the coastal region.
Farmers began sowing when the rains initially arrived, but the rains failed soon after, causing germinated crops to dry up. In several areas, farmers sowed a second time after rainfall resumed, but those crops too suffered damage, leaving farmers in distress.
*177 Taluks Declared Drought-Hit: As per the Union Government’s 2020 drought declaration guidelines, taluks must be declared drought-hit only after meeting the prescribed criteria. Accordingly, 101 taluks were declared drought-hit in the first phase, followed by another 23 taluks after further assessment. Now, 53 more taluks are being added, taking the total to 177 drought-hit taluks.
The process will continue. Ground conditions, rainfall deficiency, crop loss and other prescribed parameters will be assessed continuously. More taluks may be added in the next phase, and the total could reach around 200 depending on the situation.
Since the Union Government has framed the criteria for drought declaration and relief, the State Government must act within those guidelines. Declaring all taluks drought-hit at once, without meeting the prescribed norms, could create hurdles in securing drought relief from the Centre.
We are following the rules framed by the Union Government, and Karnataka must receive the relief due to it under those same rules. At the same time, the State Government will continue to assess the situation and ensure relief reaches farmers.
Both the Kasturirangan Report and the drought situation concern Karnataka’s larger interests. The ruling and Opposition parties must therefore rise above political differences, discuss these issues comprehensively and present a united position before the Union Government in the interest of the State.
ಕಸ್ತೂರಿ ರಂಗನ್ ವರದಿ ಹಾಗೂ ರಾಜ್ಯದಲ್ಲಿ ಉಂಟಾಗಿರುವ ಗಂಭೀರ ಬರ ಪರಿಸ್ಥಿತಿಯ ಕುರಿತು ವಿಧಾನಮಂಡಲದಲ್ಲಿ ಪಕ್ಷಾತೀತವಾಗಿ ಸಮಗ್ರ ��ರ್ಚೆ ನಡೆಸಿ, ರಾಜ್ಯದ ಹಿತಾಸಕ್ತಿಗೆ ಪೂರಕವಾದ ಒಮ್ಮತದ ನಿರ್ಣಯ ಕೈಗೊಳ್ಳಬೇಕಿದೆ.
ಕಸ್ತೂರಿ ರಂಗನ್ ವರದಿಯ 7ನೇ ಕರಡು ಪ್ರತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನಿಗದಿತ ಅವಧಿಯೊಳಗೆ ತನ್ನ ಅಭಿಪ್ರಾಯವನ್ನು ಕೇಂದ್ರ ಸರ್ಕಾರಕ್ಕೆ ತಿಳಿಸಬೇಕಿದೆ. ಸರ್ಕಾರದ ಅಭಿಪ್ರಾಯವನ್ನಷ್ಟೇ ಏಕಪಕ್ಷೀಯವಾಗಿ ಸಲ್ಲಿಸುವ ಬದಲು, ಸದನದಲ್ಲಿ ಆಡಳಿತ ಮತ್ತು ವಿರೋಧ ಪಕ್ಷಗಳ ಸದಸ್ಯರು ಮುಕ್ತವಾಗಿ ಚರ್ಚಿಸಿ, ರಾಜ್ಯದ ಹಿತದೃಷ್ಟಿಯಿಂದ ಒಮ್ಮತದ ನಿಲುವನ್ನು ಕೇಂದ್ರಕ್ಕೆ ತಿಳಿಸುವು��ು ಸೂಕ್ತ ಎಂಬ ಉದ್ದೇಶದಿಂದ ಈ ವಿಷಯವನ್ನು ಚರ್ಚೆಗೆ ತೆಗೆದುಕೊಳ್ಳಲಾಗಿದೆ.
ರಾಜ್ಯಾದ್ಯಂತ ಗಂಭೀರ ಬರ ಪರಿಸ್ಥಿತಿ : ರಾಜ್ಯದಲ್ಲಿ ಈ ಬಾರಿ ಬರ ಪರಿಸ್ಥಿತಿ ಅತ್ಯಂತ ಗಂಭೀರವಾಗಿದೆ. ಇದು ಕೆಲವೇ ತಾಲೂಕುಗಳಿಗೆ ಸೀಮಿತವಾಗಿಲ್ಲ. ರಾಜ್ಯದ ಬಹುತೇಕ ಭಾಗಗಳಲ್ಲಿ ಮಳೆಯ ತೀವ್ರ ಕೊರತೆ ಕಂಡುಬಂದಿದ್ದು, ಕೃಷಿ ಚಟುವಟಿಕೆ ಮತ್ತು ರೈತರ ಬದುಕಿನ ಮೇಲೆ ಗಂಭೀರ ಪರಿಣಾಮ ಬೀರಿದೆ.
ಹಿಂದಿನ ತೀವ್ರ ಬರ ಪರಿಸ್ಥಿತಿಗಳೊಂದಿಗೆ ಈ ವರ್ಷದ ಅಂಕಿ-ಅಂಶಗಳನ್ನು ಹೋಲಿಕೆ ಮಾಡಲಾಗುತ್ತಿದ್ದು, ಪ್ರಸ್ತುತ ಪರಿಸ್ಥಿತಿಯ ತೀವ್ರತೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಪೆಸಿಫಿಕ್ ಸಾಗರದ ಮೇಲ್ಮೈ ನೀರಿನ ತಾಪಮಾನ ಹೆಚ್ಚಳದಿಂದ ��ಂಟಾಗುವ ಎಲ್ ನಿನೋ ಪ್ರಕ್ರಿಯೆಯೂ ಮಳೆ ಕೊರತೆಗೆ ಕಾರಣವಾಗಿದ್ದು, ಈ ಬಾರಿ ಅದರ ತೀವ್ರತೆ ಹೆಚ್ಚಿದೆ.
ರಾಜ್ಯದಲ್ಲಿ ವಾಡಿಕೆಯಂತೆ ಸುಮಾರು 852 ಮಿ.ಮೀ. ಮಳೆಯಾಗಬೇಕಿತ್ತು, ಆದರೆ 642 ಮಿ.ಮೀ. ಮಳೆಯಷ್ಟೇ ದಾಖಲಾಗಿದೆ. ಜೂನ್ನಿಂದ ಸೆಪ್ಟೆಂಬರ್ 26ರ ವರೆಗಿನ ಅವಧಿಯಲ್ಲಿ ವಿವಿಧ ಪ್ರದೇಶಗಳಲ್ಲಿ ತೀವ್ರ ಮಳೆ ಕೊರತೆ ಉಂಟಾಗಿದೆ.
ರಾಜ್ಯದ ಸರಾಸರಿ ಮಳೆ ಕೊರತೆ ಶೇ.36ರಷ್ಟಿದ್ದು, ದಕ್ಷಿಣ ಒಳನಾಡಿನಲ್ಲಿ ಶೇ.46, ಉತ್ತರ ಒಳನಾಡಿನಲ್ಲಿ ಶೇ.44, ಮಲೆನಾಡಿನಲ್ಲಿ ಶೇ.38 ಹಾಗೂ ಕರಾವಳಿ ಭಾಗದಲ್ಲಿ ��ೇ.28ರಷ್ಟು ಮಳೆ ಕೊರತೆ ದಾಖಲಾಗಿದೆ.
ಮಳೆ ಆರಂಭವಾದ ಸಂದರ್ಭದಲ್ಲಿ ರೈತರು ಬಿತ್ತನೆ ಕೈಗೊಂಡಿದ್ದರು. ಆದರೆ ಕೆಲವೇ ದಿನಗಳಲ್ಲಿ ಮಳೆ ಕೈಕೊಟ್ಟ ಪರಿಣಾಮ ಮೊಳಕೆಯೊಡೆದ ಬೆಳೆಗಳು ಒಣಗಿವೆ. ನಂತರ ಮಳೆಯಾದಾಗ ಎರಡನೇ ಬಾರಿ ಬಿತ್ತನೆ ಮಾಡಿದ ಬೆಳೆಗಳಿಗೂ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ಬೆಳೆ ಹಾನಿ ತೀವ್ರವಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
177 ತಾಲೂಕುಗಳು ಬರಪೀಡಿತ ಪಟ್ಟಿಗೆ : ಕೇಂದ್ರ ಸರ್ಕಾರವು 2020ರಲ್ಲಿ ರೂಪಿಸಿರುವ ಬರ ಘೋಷಣೆಯ ಮಾರ್ಗಸೂಚಿಗಳ ಪ್ರಕಾರ��ೇ ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಬೇಕಾಗುತ್ತದೆ. ಆ ಮಾನದಂಡಗಳನ್ನು ಅನುಸರಿಸಿ ಮೊದಲ ಹಂತದಲ್ಲಿ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ನಿರಂತರ ಪರಿಶೀಲನೆಯ ಬಳಿಕ ಮತ್ತೂ 23 ತಾಲೂಕುಗಳನ್ನು ಸೇರ್ಪಡೆ ಮಾಡಲಾಗಿದ್ದು, ಇದೀಗ ಮತ್ತೆ 53 ತಾಲೂಕುಗಳನ್ನು ಪಟ್ಟಿಗೆ ಸೇರಿಸಲಾಗುತ್ತಿದೆ. ಇದರೊಂದಿಗೆ ಒಟ್ಟು 177 ತಾಲೂಕುಗಳು ಬರಪೀಡಿತ ಪ್ರದೇಶಗಳಾಗಿ ಘೋಷಣೆಯಾಗಲಿವೆ.
ಇಷ್ಟಕ್ಕೇ ಪ್ರಕ್ರಿಯೆ ಮುಗಿಯುವುದಿಲ್ಲ. ನೆಲಮಟ್ಟದ ಪರಿಸ್ಥಿತಿ, ಮಳೆ ಕೊರತೆ, ಬೆಳೆ ಹಾನಿ ಸೇರಿದಂತೆ ನಿಗದಿತ ಮಾನದಂಡಗಳ ಆಧಾರದಲ್ಲಿ ನಿರಂತರ ಮೌಲ್ಯಮಾಪನ ನಡೆಸಲಾಗುವುದು. ಮುಂದಿನ ಹಂತದಲ್ಲಿ ಮತ್ತಷ್ಟು ತಾಲೂಕುಗಳು ಪಟ್ಟಿಗೆ ಸೇರ್ಪಡೆಯಾಗುವ ಸಾಧ್ಯತೆಯಿದ್ದು, ಬರಪೀಡಿತ ತಾಲೂಕುಗಳ ಸಂಖ್ಯೆ ಸುಮಾರು 200ರವರೆಗೆ ತಲುಪಬಹುದು.
ಕೇಂದ್ರ ಸರ್ಕಾರವೇ ಬರ ಘೋಷಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿದ ಮಾನದಂಡಗಳನ್ನು ರೂಪಿಸಿರುವುದರಿಂದ, ರಾಜ್ಯ ಸರ್ಕಾರವು ಆ ನಿಯಮಗಳ ಚೌಕಟ್ಟಿನಲ್ಲಿಯೇ ಕ್ರಮ ಕೈಗೊಳ್ಳಬೇಕಾಗಿದೆ. ��ಾನದಂಡಗಳನ್ನು ಮೀರಿ ರಾಜ್ಯದ ಎಲ್ಲ ತಾಲೂಕುಗಳನ್ನು ಏಕಾಏಕಿ ಬರಪೀಡಿತ ಎಂದು ಘೋಷಿಸಿದರೆ ಕೇಂದ್ರದಿಂದ ಪರಿಹಾರ ಪಡೆಯುವ ಪ್ರಕ್ರಿಯೆಗೆ ತೊಡಕು ಉಂಟಾಗಬಹುದು.
ಕೇಂದ್ರ ಸರ್ಕಾರ ರೂಪಿಸಿರುವ ನಿಯಮಗಳ ಪ್ರಕಾರವೇ ನಾವು ನಡೆದುಕೊಳ್ಳುತ್ತಿದ್ದೇವೆ. ಆ ನಿಯಮಗಳಡಿ ರಾಜ್ಯಕ್ಕೆ ದೊರೆಯಬೇಕಾದ ಬರ ಪರಿಹಾರವನ್ನು ಕೇಂದ್ರ ಸರ್ಕಾರ ನೀಡಬೇಕು. ಅದೇ ವೇಳೆ ರಾಜ್ಯ ಸರ್ಕಾರವೂ ತನ್ನ ಜವಾಬ್ದಾರಿಯಿಂದ ಹಿಂದೆ ಸರಿಯದೆ, ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಿ ರೈತರಿಗೆ ಪರಿಹಾ��� ತಲುಪಿಸುವ ಕೆಲಸ ಮಾಡಲಿದೆ.
ಕಸ್ತೂರಿ ರಂಗನ್ ವರದಿ ಮತ್ತು ಬರಗಾಲ ಎರಡೂ ರಾಜ್ಯದ ಹಿತಾಸಕ್ತಿಗೆ ಸಂಬಂಧಿಸಿದ ಮಹತ್ವದ ವಿಷಯಗಳಾಗಿವೆ. ಹೀಗಾಗಿ ಆಡಳಿತ ಮತ್ತು ವಿರೋಧ ಪಕ್ಷಗಳು ಪಕ್ಷಭೇದ ಮರೆತು ಸದನದಲ್ಲಿ ಸಮಗ್ರವಾಗಿ ಚರ್ಚಿಸಿ, ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಒಗ್ಗಟ್ಟಿನ ನಿಲುವನ್ನು ಕೇಂದ್ರ ಸರ್ಕಾರದ ಮುಂದೆ ಮಂಡಿಸಬೇಕಿದೆ.