ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕು ಪಂಚಾಯತ್ ಕಚೇರಿ ಆವರಣದಲ್ಲಿ ಮಾನ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಮಲ್ಲನಗೌಡ ಕೆ.ಎಸ್ ರವರು 74ನೇ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ನೆರವೇರಿಸಿದರು ಈ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತ್ ಸಿಬ್ಬಂದಿ ವರ್ಗದವರು ಹಾಜರಿದ್ದರು.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಜಿಲ್ಲಾ ಪಂಚಾಯತ್ ಬಳ್ಳಾರಿ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಗ್ರಾಮೀಣ ಕ್ರೀಡಾ ಕೂಟದಲ್ಲಿ ಕಂಪ್ಲಿ ತಾಲೂಕು ಪಂಚಾಯತಿಯು ಕಬ್ಬಡಿ ಮತ್ತು ಕುಸ್ತಿ ಆಟದಲ್ಲಿ ಪ್ರಥಮ ಸ್ಥಾನವನ್ನು ಪಡಿದು ರಾಜ್ಯ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆ ಯಾಗಿದ್ದಾರೆ
ಬಳ್ಳಾರಿ ಮತ್ತು ಕಂಪ್ಲಿ ತಾಲ್ಲೂಕಿನಲ್ಲಿ ತಾಲ್ಲೂಕು ಮಟ್ಟದ ಗ್ರಾಮೀಣ ಕ್ರೀಡಾಕೂಟವನ್ನು ಶಾಮಿಯಾಚೆಂದ್ ಕ್ರೀಡಾಂಗಣ ಕಂಪ್ಲಿಯಲ್ಲಿ ಆಯೋಜಿಸಲಾಯಿತು.ಸದರಿ ಕ್ರೀಡಾ ಕೂಟದಲ್ಲಿ ತಾಲೂಕಿನ ಗ್ರಾಮ ಪಂಚಾಯತಿಗಳ ಗ್ರಾಮೀಣ ಭಾಗದ ಕ್ರೀಡಾ ಪಟಗಳು ಭಾವಹಿಸಿ ಯಶಸ್ವಿ ಗೊಳಿಸದರು.
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಪಂಚಾಯತಿ ಜನ ಪ್ರತಿನಿಧಿಗಳಿಗೆ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಜಲ ಸಂಜೀವಿನಿ ಅನುಷ್ಠಾನ ಕುರಿತು ಕಾರ್ಯಾಗಾರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಂಪ್ಲಿ ಯಲ್ಲಿ ಹಮ್ಮಿಕೊಂಡಿರುವ ಬಗ್ಗೆ ವರದಿಯಾಗಿದೆ.
ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಎಮ್ಮಿಗನೂರು ಗ್ರಾ.ಪಂ.ವ್ಯಾಪ್ತಿಯ ರಾಮಚಂದ್ರಪುರ ಗ್ರಾಮದ ಅಮೃತ ಸರೋವರ ಕಾಮಗಾರಿ ಸ್ಥಳದಲ್ಲಿ "ರಾಷ್ಟ್ರೀಯ ರೈತ" ದಿನದ ಪ್ರಯುಕ್ತ "ಜಲ ಸಂಜೀವಿನಿ-ರೈತ ಸಂವಾದ" ಕಾರ್ಯಕ್ರಮ ಗ್ರಾ.ಪಂ.ನಿಂದ ಆಯೋಜಿಸಲಾಗಿತ್ತು.ಈ ಸಂದರ್ಭದಲ್ಲಿ ಸದಸ್ಯರು ಹಾಗೂ ನರೇಗಾ ಸಿಬ್ಬಂದಿ ಸೇರಿ ರೈತರು, ಕೂಲಿ ಕಾರ್ಮಿಕರು ಹಾಜರಿದ್ದರು.