ರೈತರ ಭೂಮಿಯನ್ನು ವಕ್ಫ್ ವಿವಾದಕ್ಕೆ ಸಿಲುಕಿಸಿ, ಕಾಂಗ್ರೆಸ್ ಸರ್ಕಾರ ಯಾರ ಹಿತ ಕಾಯುತ್ತಿದೆ?
@INCKarnataka ಸರ್ಕಾರದ ಓಲೈಕೆ ಮತ್ತು ತುಷ್ಟೀಕರಣದ ರಾಜಕಾರಣ ಈಗ ನಾಡಿನ ರೈತರ ಅಸ್ತಿತ್ವಕ್ಕೇ ಕುತ್ತು ತರುವ ಹಂತಕ್ಕೆ ತಲುಪಿದೆ. ರಾಜ್ಯದಾದ್ಯಂತ ರೈತರ RTCಗಳ ಕಾಲಂ 11ರಲ್ಲಿ ವಕ್ಫ್ ಉಲ್ಲೇಖಗಳನ್ನು ದಾಖಲಿಸಲಾಗುತ್ತಿದೆ ಎಂಬ ವರದಿಗಳು ಹೊರಬಿದ್ದಿದ್ದು, ಲಕ್ಷಾಂತರ ರೈತರಲ್ಲಿ ತೀವ್ರ ಆತಂಕ ಸೃಷ್ಟಿಸಿದೆ.
ಇದು ಕೇವಲ ದಾಖಲೆ ಬದಲಾವಣೆಯ ವಿಚಾರವಲ್ಲ. ಇದು ರೈತನ ಮಾಲೀಕತ್ವದ ಹಕ್ಕು, ಬದುಕು ಮತ್ತು ಭವಿಷ್ಯದ ಪ್ರಶ್ನೆ.
ಆಘಾತಕಾರಿ ವರದಿಗಳ ಪ್ರಕಾರ,
🔹 1,80,000ಕ್ಕೂ ಹೆಚ್ಚು ರೈತರ RTCಗಳಲ್ಲಿ ಈಗಾಗಲೇ ವಕ್ಫ್ ಉಲ್ಲೇಖ ದಾಖಲಾಗಿದೆ.
🔹 ಒಟ್ಟು 3,00,000 RTCಗಳನ್ನು ಈ ಪ್ರಕ್ರಿಯೆಯ ವ್ಯಾಪ್ತಿಗೆ ತರಲು ಕ್ರಮ ನಡೆಯುತ್ತಿದೆ ಎನ್ನಲಾಗಿದೆ.
🔹 31 ಜಿಲ್ಲೆಗಳ ರೈತರು ಇದರ ಪರಿಣಾಮಕ್ಕೆ ಒಳಗಾಗುವ ಆತಂಕದಲ್ಲಿದ್ದಾರೆ.
ಜಿಲ್ಲಾವಾರು ಅಂಕಿ-ಅಂಶಗಳೇ ಪರಿಸ್ಥಿತಿಯ ಗಂಭೀರತೆಯನ್ನು ಬಿಚ್ಚಿಡುತ್ತವೆ:
📍 ಉತ್ತರ ಕನ್ನಡ – 73,000 RTCಗಳು
📍 ದಕ್ಷಿಣ ಕನ್ನಡ – 48,000 RTCಗಳು
📍 ಶಿವಮೊಗ್ಗ – 38,000 RTCಗಳು
📍 ಬೆಂಗಳೂರು ದಕ್ಷಿಣ – 18,000 RTCಗಳು
📍 ಕಲಬುರಗಿ – 17,000 RTCಗಳು
📍 ಬಾಗಲಕೋಟೆ – 17,000 RTCಗಳು
ಸಿಎಂ @DKShivakumar ಅವರೇ,
ಈ ವರದಿಗಳು ತಪ್ಪಾಗಿದ್ದರೆ ಕೂಡಲೇ ರಾಜ್ಯದ ಜನರ ಮುಂದೆ ಸತ್ಯಾಂಶವನ್ನು ಇಡಿ. ಆದರೆ ವರದಿಗಳಲ್ಲಿ ಹೇಳಿರುವಂತೆ ರೈತರ RTCಗಳಲ್ಲಿ ಈ ರೀತಿಯ ಉಲ್ಲೇಖಗಳು ಸೇರಿದ್ದರೆ, ನಿಮ್ಮ ಸರ್ಕಾರ ಉತ್ತರಿಸಲೇಬೇಕು.
❓ರೈತರು ತಮ್ಮದೇ ಭೂಮಿಯನ್ನು ಮಾರಾಟ ಮಾಡಲು, ಬ್ಯಾಂಕ್ ಸಾಲ ಪಡೆಯಲು ಅಥವಾ ಮಾಲೀಕತ್ವದ ಹಕ್ಕು ಚಲಾಯಿಸಲು ಅನಿಶ್ಚಿತತೆ ಎದುರಿಸುವ ಪರಿಸ್ಥಿತಿ ಏಕೆ ನಿರ್ಮಾಣವಾಯಿತು?
❓ರೈತರನ್ನು ತಮ್ಮದೇ ಜಮೀನಿನಲ್ಲಿ ಭಿಕ್ಷುಕರನ್ನಾಗಿ ಮಾಡಲು ಹೊರಟಿದ್ದೀರಾ?
❓ಕಾಂಗ್ರೆಸ್ ಸರ್ಕಾರಕ್ಕೆ ರೈತನ ಹಿತ ಮುಖ್ಯವೇ, ಅಥವಾ ತುಷ್ಟೀಕರಣದ ರಾಜಕಾರಣ ಮುಖ್ಯವೇ?
ರೈತನು ಅನ್ನ ಬೆಳೆಯುತ್ತಾನೆ, ಇಡೀ ದೇಶದ ಹಸಿವನ್ನು ನೀಗಿಸುತ್ತಾನೆ. ಅಂತಹ ರೈತನನ್ನು ತನ್ನದೇ ಭೂಮಿಯ ಹಕ್ಕಿಗಾಗಿ ಸರ್ಕಾರಿ ಕಚೇರಿಗಳ ಮುಂದೆ ನಿಲ್ಲಿಸಿದರ ಅನ್ನದಾತನ ಶಾಪ ತಟ್ಟದೇ ಇರದು.
ಕೂಡಲೇ ಈ ಸಂಪೂರ್ಣ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿ. ರೈತರ RTCಗಳಲ್ಲಿ ದಾಖಲಾಗಿರುವ ಎಲ್ಲ ವಿವಾದಾತ್ಮಕ ಉಲ್ಲೇಖಗಳನ್ನು ಮರುಪರಿಶೀಲಿಸಿ.
ರಾಜ್ಯದ ಜನರ ಮುಂದೆ ಶ್ವೇತಪತ್ರ ಬಿಡುಗಡೆ ಮಾಡಿ.
ಅನ್ನದಾತನ ಭೂಮಿಯ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ. ರೈತನ ಭೂಮಿಯ ಮೇಲೆ ಕಣ್ಣು ಹಾಕಿದರೆ, ಕರ್ನಾಟಕದ ಜನತೆ ತಕ್ಕ ಉತ್ತರ ನೀಡಲಿದ್ದಾರೆ.
ರೈತನ ಭೂಮಿ ಉಳಿಯಬೇಕು... ರೈತನ ಹಕ್ಕು ಉಳಿಯಬೇಕು... ವಕ್ಫ್ ಹೆಸರಿನಲ್ಲಿ ರೈತರ ಜಮೀನು ನುಂಗಲು ನಾವು ಯಾವುದೇ ಕಾರಣಕ್ಕೂ ಬಿಡುವುದಿಲ್ಲ!
#ರೈತ_ವಿರೋಧಿ_ಕಾಂಗ್ರೆಸ್
#KisanVirodhiCongress
ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ಉದ್ದೇಶವು ಎಲ್ಲಾ ಅರ್ಹ ನಾಗರಿಕರನ್ನು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳಿಸುವುದಾಗಿದೆ.
ಈ ಪ್ರಕ್ರಿಯೆಯಲ್ಲಿ ನಾವೆಲ್ಲರೂ ಭಾಗವಹಿಸಿ ನಮ್ಮ ಹೆಸರು ಮತದಾರರ ಪಟ್ಟಿಯಲ್ಲಿರುವುದನ್ನು ಪರಿಶೀಲಿಸೋಣ ಮತ್ತು ಪ್ರಜಾಪ್ರಭುತ್ವದ ಭದ್ರ ಅಡಿಪಾಯವಾದ ಎಸ್ಐಆರ್ನ ಭಾಗವಾಗೋಣ.
#SIR
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ "ಮೃತಪಟ್ಟವರ ಹೆಸರಿಗೂ ಹಣ ಹೋಗುತ್ತಿದೆ" ಎಂದು ಹೇಳುವ ಕಾಂಗ್ರೆಸ್, ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (SIR) ವಿಚಾರ ಬಂದಾಗ ಮಾತ್ರ ವಿರೋಧದ ಧ್ವನಿ ಎತ್ತುತ್ತಿರುವುದು ಏಕೆ?
#CongressFailsKarnataka
972 ರಿಂದ 2014 ರವರೆಗೆ ಭಾರತವು ಕಳುವಾದ ಕೇವಲ 13 ಕಲಾಕೃತಿಗಳನ್ನು ಮಾತ್ರ ಮರುಪಡೆಯಿತು. 2014 ರಿಂದ ಆ ಸಂಖ್ಯೆ 668 ಕ್ಕೆ ಏರಿದೆ.
668 ಕಲಾಕೃತಿಗಳ ಮರಳುವಿಕೆ ಜಾಗತಿಕವಾಗಿ ತನ್ನ ಸಾಂಸ್ಕೃತಿಕ ಪರಂಪರೆಯನ್ನು ಮರಳಿ ಪಡೆಯುವ, ರಕ್ಷಿಸುವ ಭಾರತದ ಬೆಳೆಯುತ್ತಿರುವ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತದೆ.
#12YearsOfVikasBhiVirasatBhi
Honoured to receive The Order of the White Double Cross (1st Class) in Bratislava this evening. My gratitude to the people and Government of Slovakia for this honour, which belongs to the 140 crore people of India. I dedicate this award to the enduring friendship between India and Slovakia.
@PellegriniP_
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಕಳೆದ 12 ವರ್ಷಗಳಲ್ಲಿ ಭಾರತದ ಮಧ್ಯಮ ವರ್ಗದ ಜೀವನಮಟ್ಟವು ಗಮನಾರ್ಹವಾಗಿ ಸುಧಾರಿಸಿದೆ. ಸಾರ್ವಜನಿಕ ಸೇವೆಗಳ ವ್ಯಾಪಕ ವಿಸ್ತರಣೆಯಿಂದ ಹಿಡಿದು ಬಲಿಷ್ಠ ಡಿಜಿಟಲ್ ಸಂಪರ್ಕದವರೆಗೆ ಭಾರತದಲ್ಲಿ ಕ್ರಾಂತಿಯುಂಟಾಗಿದೆ.
#12YearsOfSakshamMiddleClass
ಮೋದಿ ಸರ್ಕಾರದ 12 ವರ್ಷಗಳ ಆಡಳಿತದಲ್ಲಿ ಯುವಶಕ್ತಿಯು ಹೊಸ ಚೈತನ್ಯವನ್ನು ಪಡೆದುಕೊಂಡಿದೆ.
ಯುವ ಪ್ರತಿಭೆಗಳಿಂದಾಗಿ ಇಂದು ವಿವಿಧ ಕ್ಷೇತ್ರಗಳಲ್ಲಿ ಭಾರತವು ಜಾಗತಿಕ ಮಟ್ಟದಲ್ಲಿ ತನ್ನದೇ ಆದ ಛಾಪು ಮೂಡಿಸುತ್ತಿದೆ.
#12YearsOfYuvaShakti
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯಾಗಿರುವ ಶ್ರೀ ಡಾ ಎಂ.ನಾಗರಾಜ್ ಅವರಿಗೆ ಹಾಗೂ ವಿಧಾನ ಪರಿಷತ್ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳಾಗಿರುವ ಶ್ರೀ ಲಿಂಗರಾಜ್ ಪಾಟೀಲ್ ಹಾಗೂ ರಘು ಕೌಟಿಲ್ಯ ಅವರಿಗೆ ಹಾರ್ದಿಕ ಅಭಿನಂದನೆಗಳು.
ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ತಾತ್ಕಾಲಿಕ ಅಂತ್ಯ ದೊರೆತಿದೆ. ಆದರೆ ಇದರಿಂದ ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ.
@INCKarnataka ದ ಮೂರು ವರ್ಷಗಳ ಸಾಧನೆ ಎಂದರೆ ಅದು ದಲಿತರ ಹಣ ದುರ್ಬಳಕೆ, ವಾಲ್ಮೀಕಿ ನಿಗಮದ ಹಣ ಲೂಟಿ, ಯುವಕರಿಗೆ ಟೋಪಿ, ರೈತರಿಗೆ ನೇಣು ಕುಣಿಕೆ, ಜನಸಾಮಾನ್ಯರಿಗೆ ಬೆಲೆ ಏರಿಕೆ, ಕರ್ನಾಟಕಕ್ಕೆ ಸಾಲದ ಶೂಲ ಹೊದಿಕೆ.
ಕರ್ನಾಟಕದ ಅಭಿವೃದ್ಧಿಯನ್ನು ಸಂಪೂರ್ಣ ಸ್ತಬ್ಧಗೊಳಿಸಿ, ಕಲೆಕ್ಷನ್-ಕರಪ್ಷನ್-ಕಮಿಷನ್ನಲ್ಲಿಯೇ ಮೂರು ವರ್ಷ ದೂಡಿ, ಈಗ ರಾಜೀನಾಮೆ ಎಂಬ ಅಲ್ಪ ವಿರಾಮ ಇಟ್ಟಿದ್ದಾರೆ.
ನೂತನವಾಗಿ ಯಾರೇ ಸಿಎಂ ಆಗಿ ಬಂದರೂ, ಕನ್ನಡಿಗರಿಗಾಗಲಿ, ಕರ್ನಾಟಕಕ್ಕಾಗಲಿ ನಯಾಪೈಸೆ ಪ್ರಯೋಜನ ಇಲ್ಲ. ಬಡವರು, ಶ್ರಮಿಕರು, ರೈತರು, ಯುವಕರು, ಮಹಿಳೆಯರು, ದೀನ-ದಲಿತರು, ಹಿಂದುಳಿದವರನ್ನು ಹಿಂಸಿಸಿ, ಶೋಷಿಸಿ ಸರ್ಕಾರ ನಡೆಸುವ ಇವರ ಪ್ರವೃತ್ತಿ ಮುಂದುವರೆಯುತ್ತದೆ ಹೊರತು ಬದಲಾಗುವುದಿಲ್ಲ. ಕರ್ನಾಟಕವನ್ನು ಸಂಪೂರ್ಣ ದಿವಾಳಿ ಮಾಡುವುದು ಹಾಗೂ ಕಾಂಗ್ರೆಸ್ ಹೈಕಮಾಂಡಿಗೆ ಕರ್ನಾಟಕವನ್ನು ಎಟಿಎಂ ಮಾಡುವುದು ಎರಡೇ ಇವರ ಅಜೆಂಡಾ. ಹಾಗಾಗಿ, ಆದಷ್ಟು ಬೇಗ ಈ ಜನವಿರೋಧಿ ಸರ್ಕಾರ ತೊಲಗಿದರೆ ಕನ್ನಡಿಗರಿಗೆ ನೆಮ್ಮದಿಯ ದಿನ ಸಿಗಲಿದೆ.
#CongressFailsKarnataka
नागेन्द्रहाराय त्रिलोचनाय भस्माङ्गरागाय महेश्वराय।
नित्याय शुद्धाय दिगम्बराय तस्मै नकाराय नमः शिवाय॥
Offered prayers and sought blessings at the ancient Shri Kadu Malleshwara Swamy Temple in Malleshwaram, Bengaluru today.
Built in the 17th century, this temple is well-known for its spiritual significance and historical heritage.
I pray to Lord Kadu Malleshwara Swamy for the peace, prosperity, and good health of everyone.
ನಾಗೇಂದ್ರಹಾರಾಯ ತ್ರಿಲೋಚನಾಯ, ಭಸ್ಮಾಂಗರಾಗಾಯ ಮಹೇಶ್ವರಾಯ ।
ನಿತ್ಯಾಯ ಶುದ್ಧಾಯ ದಿಗಂಬರಾಯ, ತಸ್ಮೈ ನ ಕಾರಾಯ ನಮಃ ಶಿವಾಯ ॥
ಇಂದು ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಪುರಾತನ ಶ್ರೀ ಕಾಡು ಮಲ್ಲೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ದೇವರ ಆಶೀರ್ವಾದ ಪಡೆಯಲಾಯಿತು.
17ನೇ ಶತಮಾನದಲ್ಲಿ ನಿರ್ಮಿಸಲಾದ ಈ ದೇವಾಲಯವು ತನ್ನ ಆಧ್ಯಾತ್ಮಿಕ ಮಹತ್ವ ಹಾಗೂ ಐತಿಹಾಸಿಕ ಪರಂಪರೆಗೆ ಹೆಸರುವಾಸಿಯಾಗಿದೆ.
ಕಾಡು ಮಲ್ಲೇಶ್ವರ ಸ್ವಾಮಿಯವರ ಆಶೀರ್ವಾದದಿಂದ ಸರ್ವರಿಗೂ ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯ ಲಭಿಸಲಿ ಎಂದು ಪ್ರಾರ್ಥಿಸುತ್ತೇನೆ.