🏃♂️🚫💊 ಮಾದಕ ವಸ್ತು ಮುಕ್ತ ಸಮಾಜಕ್ಕಾಗಿ ಮ್ಯಾರತನ್ ಜಾಥಾ 🚫💊🏃♀️
ಈ ಜಾಗೃತಿ ಮ್ಯಾರತನ್ಗೆ ಮಾನ್ಯ ಪೊಲೀಸ್ ಅಧೀಕ್ಷಕರಾದ (SP) ಸಾಹೇಬರು ಉಪಸ್ಥಿತರಿದ್ದು, ಯುವಜನತೆ ಮಾದಕ ವ್ಯಸನದಿಂದ ದೂರವಿದ್ದು ಆರೋಗ್ಯಕರ ಹಾಗೂ ಸುರಕ್ಷಿತ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಕರೆ ನೀಡಿದರು.
@bngdistpol
ಬೆಳಗಿನ ಜಾವ ರೌಡಿಗಳ ಮನೆಗಳ ಪರಿಶೀಲನೆ 🚨👮♂️
ಕಾನೂನು ಸುವ್ಯವಸ್ಥೆ ಕಾಪಾಡುವ ಹಾಗೂ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವ ಉದ್ದೇಶದಿಂದ ಇಂದು ಬೆಳಗಿನ ಜಾವ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ರೌಡಿ ಆಸಾಮಿಗಳ ಮನೆಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. @bngdistpol
ಕೆಸ್ತೂರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಕುಂದುಕೊರತೆ ಸಭೆಯನ್ನು ಆಯೋಜಿಸಿ, ಸಾರ್ವಜನಿಕರಿಂದ ವಿವಿಧ ಸಮಸ್ಯೆಗಳು ಹಾಗೂ ಕುಂದುಕೊರತೆಗಳನ್ನು ಆಲಿಸಲಾಯಿತು.
ಸಭೆಯಲ್ಲಿ ನಾಗರಿಕರ ಅಹವಾಲುಗಳನ್ನು ಸ್ವೀಕರಿಸಿ, ಸಂಬಂಧಿತ ಸಮಸ್ಯೆಗಳ ಶೀಘ್ರ ಪರಿಹಾರಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಲಾಯಿತು @bngdistpol
ಮೆಳೇಕೋಟೆ ಗ್ರಾಮದಲ್ಲಿ ಗ್ರಾಮಸಭೆಯನ್ನು ನಡೆಸಲಾಯಿತು. ಸಭೆಯಲ್ಲಿ ಗ್ರಾಮಸ್ಥರ ಸಮಸ್ಯೆಗಳು ಹಾಗೂ ಸಾರ್ವಜನಿಕ ಶಾಂತಿ-ಸುವ್ಯವಸ್ಥೆ ಸಂಬಂಧಿತ ವಿಚಾರಗಳ ಬಗ್ಗೆ ಚರ್ಚಿಸಲಾಯಿತು. ಮನೆ ಮನೆಗೆ ಪೊಲೀಸ್ ಆಸರೆ ಹಾಗೂ ಸನ್ಮಿತ್ರ ಯೋಜನೆ ಕುರಿತು ಮಾಹಿತಿ ನೀಡಲಾಯಿತು.
@bngdistpol
🚔 ಸಾರ್ವಜನಿಕರ ಸುರಕ್ಷತೆಗೆ ಮತ್ತೊಂದು ಮಹತ್ವದ ಹೆಜ್ಜೆ 🚔, ಗ್ರಾಮಸಭೆಯಲ್ಲಿ ಕೈಗೊಂಡ ನಿರ್ಣಯದಂತೆ, ಕೊನಘಟ್ಟ ಪಂಚಾಯಿತಿ ವತಿಯಿಂದ ಕೊನಘಟ್ಟ ಬಸ್ ನಿಲ್ದಾಣದ ಹತ್ತಿರ ಹಾಗೂ ಕೊನಘಟ್ಟ ಪಿಯು ಕಾಲೇಜ್ ಸಮೀಪ ಸಾರ್ವಜನಿಕರ ಸುರಕ್ಷತೆ ಮತ್ತು ಅಪರಾಧ ತಡೆಗಟ್ಟುವ ಉದ್ದೇಶದಿಂದ ಸೋಲಾರ್ ಆಧಾರಿತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ @bngdistpol
ಮಾನ್ಯ ಡಿಐಜಿಪಿ ಕೇಂದ್ರ ವಲಯರವರು ಬೆಂಗಳೂರು ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಅಪರಾಧ ಪರಿಶೀಲನಾ ಸಭೆ ನಡೆಸಿ,ಪ್ರಸ್ತುತ ಅಪರಾಧ ಪರಿಸ್ಥಿತಿ,ಬಾಕಿ ಪ್ರಕರಣಗಳ ಪ್ರಗತಿ ಹಾಗೂ ಕಾನೂನು-ಸುವ್ಯವಸ್ಥೆ ಕುರಿತು ಚರ್ಚಿಸಿ,ಅಪರಾಧ ನಿಯಂತ್ರಣಕ್ಕೆ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.
ಕೆಪಿಎಸ್ಸಿ ನಡೆಸಿದ ಕೆಎಎಸ್ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆದ ಅನ್ಯಾಯ ಸರಿಪಡಿಸಲು ಈಗ ಸರ್ಕಾರದ ಮುಂದೆ ಇರುವುದು ಒಂದೇ ದಾರಿ. ಈಗ ನಡೆಯುತ್ತಿರುವ ಪ್ರಕ್ರಿಯೆ ರದ್ದುಗಳಿಸಿ, ಮರು ಅಧಿಸೂಚನೆ ಹೊರಡಿಸುವುದು. ಸರ್ಕಾರಕ್ಕೆ ನಾವು ಎಲ್ಲ ರೀತಿಯಲ್ಲೂ ಇದನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ.
ಸರ್ಕಾರ ಒಂದೆರಡು ದಿನಗಳಲ್ಲಿ ಸರಿಯಾದ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆ ನಮ್ಮದು. ಅದಕ್ಕಾಗಿ ತಾಳ್ಮೆಯಿಂದ ಕಾಯುತ್ತಿದ್ದೇವೆ. ಒಂದು ವೇಳೆ ಸರ್ಕಾರ ಇನ್ನೂ ಮೀನಾ ಮೇಷ ಎಣಿಸುತ್ತ ಕುಳಿತರೆ ಮಾ.11ರಂದು ಕರ್ನಾಟಕ ರಕ್ಷಣಾ ವೇದಿಕೆ, ಪರೀಕ್ಷೆ ಬರೆದ ಕನ್ನಡ ವಿದ್ಯಾರ್ಥಿಗಳು ಮತ್ತು ಅವರ ಪೋಷಕರನ್ನು ಒಳಗೊಂಡಂತೆ ದೊಡ್ಡ ಪ್ರಮಾಣದಲ್ಲಿ "ವಿಧಾನಸೌಧ ಮುತ್ತಿಗೆ" ಹಾಕಲಿದ್ದೇವೆ.
ಈಗಾಗಲೇ ವಿಧಾನಸಭೆಯಲ್ಲೂ ಈ ಕುರಿತು ಚರ್ಚೆ ಆಗಿದೆ. ರಾಜ್ಯ ಸರ್ಕಾರದ ಸಚಿವರುಗಳೂ ಸೂಕ್ತಕ್ರಮದ ಭರವಸೆ ನೀಡಿದ್ದಾರೆ. ಮಾನ್ಯ ಮುಖ್ಯಮಂತ್ರಿಗಳಾದ @siddaramaiah ಅವರು ಕೂಡಲೇ ಮರುಅಧಿಸೂಚನೆ ಹೊರಡಿಸಿ ಯಾರಿಗೂ ಅನ್ಯಾಯವಾಗದಂತೆ ಹೊಸದಾಗಿ ಪ್ರಕ್ರಿಯೆ ಆರಂಭಿಸಬೇಕು ಎಂದು ಆಗ್ರಹಿಸುತ್ತೇನೆ.
ಕರ್ನಾಟಕ ಪೊಲೀಸ್ ಅಕಾಡೆಮಿಯಲ್ಲಿ 46 ನೇ ತಂಡದ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಪ್ರಶಿಕ್ಷಣಾರ್ಥಿಗಳ ಬುನಾದಿ ತರಬೇತಿ ಯನ್ನು ಎಡಿಜಿಪಿ Training ಶ್ರೀ ಅಲೋಕ್ ಕುಮಾರ್ ಐಪಿಎಸ್ ರವರು ಉದ್ಘಾಟಿಸಿದರು, ಈ ಸಂದರ್ಭದಲ್ಲಿ ಡಿಐಜಿ ಶ್ರೀ ಬೋರಲಿಂಗಯ್ಯ, ಐಪಿಎಸ್ ರವರು,
ಸರ್ಕಾರ ಯುವಜನತೆಗೆ ಕರ್ನಾಟಕ ಲೋಕಸೇವಾ ಆಯೋಗದ ಮೂಲಕ ಕೆಲಸ ಒದಗಿಸಬೇಕು, ಆದರೆ ಕಾಂಗ್ರೆಸ್ ಸರ್ಕಾರ ಕೆಲಸ ಕೊಡುವುದರ ಬದಲು ಯುವಜನತೆಗೆ ಫ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ಮಾಡುವ ಕೆಲಸ ನೀಡಿದೆ. ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸಲು ಈ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಪ್ರಶ್ನೆ ಪತ್ರಿಕೆಯಲ್ಲಿ ತಪ್ಪು ತಪ್ಪು ಪ್ರಶ್ನೆಗಳ ಮುದ್ರಣವಾಗುತ್ತಿದೆ.
- ಶ್ರೀ @NswamyChalavadi , ವಿಧಾನ ಪರಿಷತ್ ವಿಪಕ್ಷ ನಾಯಕರು
#KPSCMosa
#CongressFailsKarnataka
ಕೆಪಿಎಸ್ಸಿ ಪರೀಕ್ಷೆಯಲ್ಲಿ ಪದೇ ಪದೆ ದೋಷಗಳು ನಡೆಯುತ್ತಲೇ ಇದೆ. ಪರೀಕ್ಷೆ ಮೇಲೆ ಪರೀಕ್ಷೆಗಳನ್ನು ನಡೆಸಿದರೂ ಪ್ರಶ್ನೆ ಪತ್ರಿಕೆಯಲ್ಲಿ ಸುಮಾರು 50 ಪರ್ಸೆಂಟ್ ತಪ್ಪುಗಳು ಕಂಡು ಬರುತ್ತಿದೆ.
ಹೀಗಾಗಿ ವಿದ್ಯಾರ್ಥಿಗಳು ಭ್ರಷ್ಟ @INCKarnataka ದ ವಿರುದ್ಧ ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಹೋರಾಟ ಮಾಡುತ್ತಿದ್ದಾರೆ.
ವಿದ್ಯಾರ್ಥಿಗಳ ಈ ಹೋರಾಟಕ್ಕೆ ಬಿಜೆಪಿ ರಾಜ್ಯಾಧ್ಯಕ್ಷರಾದ @BYVijayendra ಅವರು ಬೆಂಬಲ ನೀಡಿ ಹೋರಾಟಕ್ಕೆ ಕೈ ಜೋಡಿಸಿದ್ದಾರೆ. ಇದೇ ವೇಳೆ ಪರಿಷತ್ ವಿಪಕ್ಷ ನಾಯಕ @NswamyChalavadi ಅವರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಆಲಿಸಿದ್ದಾರೆ.
#CongressFailsKarnataka #KPSCMosa
ಕೆಪಿಎಸ್ಸಿಯಲ್ಲಿ ಉದ್ಭವಿಸುತ್ತಿರುವ ಸಮಸ್ಯೆಗಳಿಗೆ ಕಾಂಗ್ರೆಸ್ ಸರ್ಕಾರವೇ ಕಾರಣ.
ಪದೇ ಪದೇ ಪರೀಕ್ಷೆಗಳನ್ನು ಮುಂದೂಡುವುದು, ಪ್ರಶ್ನೆಪತ್ರಿಕೆಗಳ ಸೋರಿಕೆ, ಪ್ರಶ್ನೆಪತ್ರಿಕೆಗಳನ್ನು ಇಂಗ್ಲಿಷ್ನಿಂದ ಕನ್ನಡಕ್ಕೆ ಅನುವಾದ ಮಾಡುವಾಗ ಆಗುತ್ತಿರುವ ಸಮಸ್ಯೆಗಳ ವಿರುದ್ಧ ಸಹಸ್ರಾರು ಅಭ್ಯರ್ಥಿಗಳು ಇಂದು ಬೀದಿಗಿಳಿದಿದ್ದಾರೆ. ಯುವ ಆಕಾಂಕ್ಷಿಗಳ ಕನಸುಗಳ ಜೊತೆ ರಾಜ್ಯ ಸರ್ಕಾರ ಹುಡುಗಾಟಿಕೆ ನಡೆಸುತ್ತಿದೆ.
ಅಭ್ಯರ್ಥಿಗಳ ಈ ಹೋರಾಟಕ್ಕೆ ಬಿಜೆಪಿ ಸದಾ ಬೆಂಬಲ ನೀಡುತ್ತದೆ.
- ಶ್ರೀ @BYVijayendra , ರಾಜ್ಯಾಧ್ಯಕ್ಷರು
#KPSCMosa
#CongressFailsKarnataka
ಸಿಎಂ @siddaramaiah ಅವರೆ, ಕನ್ನಡದ ಹೆಸರಿನಲ್ಲಿ ಒಣ ರಾಜಕಾರಣ ಮಾಡುವ ನಿಮ್ಮಿಂದ ಕನ್ನಡದ ಕೊಲೆ ನಡೆಯುತ್ತಿರುವುದು ನಿಜಕ್ಕೂ ಅಚ್ಚರಿ!!
ಕರ್ನಾಟಕದ ಆಡಳಿತ ಹಂತದಲ್ಲಿ ಅತಿ ಮುಖ್ಯ ಪಾತ್ರ ನಿರ್ವಹಿಸುವ ಕೆಎಎಸ್ ಮರು ಪರೀಕ್ಷೆಯ ಪ್ರಶ್ನೆ ಪತ್ರಿಕೆಯಲ್ಲಿಯೂ ಸಹ ಸಾಲು ಸಾಲು ತಪ್ಪುಗಳು ಪುನರಾವರ್ತನೆಯಾಗಿವೆ.
ಒಂದೇ ತಪ್ಪನ್ನು ಹೀಗೆ ಪದೇ ಪದೇ ಮಾಡುತ್ತಿರುವುದನ್ನು ಗಮನಿಸಿದರೆ, @INCKarnataka ಸರ್ಕಾರ ಕೆಎಎಸ್ ಹುದ್ದೆಗಳನ್ನು ಮಾರಿಕೊಂಡಿದೆಯಾ ಎಂಬ ಅನುಮಾನ ಮೂಡುತ್ತಿರುವುದಂತೂ ಸುಳ್ಳಲ್ಲ!!
ಕೂಡಲೇ ತಪ್ಪುಗಳಿಲ್ಲದ ಪ್ರಶ್ನೆ ಪತ್ರಿಕೆಯ ಜೊತೆಗೆ ಕೆಎಎಸ್ ಮರು ಪರೀಕ್ಷೆಯನ್ನು ನಡೆಸಿ ಎಂದು ಆಗ್ರಹಿಸುತ್ತೇವೆ.
#CongressFailsKarnataka #KPSCMosa
"ಯುವಜನರಿಗೆ ನಿರುದ್ಯೋಗ ಭಾಗ್ಯ ಕಲ್ಪಿಸುವ
ಕ್ರೌರ್ಯ ಮೆರೆಯುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ ಧಿಕ್ಕಾರ"
ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಕೆಪಿಎಸ್ಸಿ ಯಡವಟ್ಟುಗಳ ವಿರುದ್ಧ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಲಾಯಿತು. ಕಠಿಣ ಪರಿಶ್ರಮದಿಂದ ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಗೊಂದಲ ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ, ಅಲ್ಲದೇ ಕೆಎಎಸ್ ಪರೀಕ್ಷೆಯ ಪ್ರಶ್ನೆಗಳನ್ನು ಮಾತೃ ಭಾಷೆ ಕನ್ನಡಕ್ಕೆ ಭಾಷಾಂತರ ಮಾಡುವಲ್ಲಿಯೂ ಸಂಪೂರ್ಣ ವಿಫಲವಾಗಿರುವ ರಾಜ್ಯ ಸರ್ಕಾರ ಹಾಊಕೆಪಿಎಸ್ಸಿಯ ನಿರಂತರ ಹುಳುಕುಗಳಿಗೆ ಸಂಪೂರ್ಣ ಕಡಿವಾಣ ಹಾಕಿ ನೇಮಕಾತಿ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಸಲು ಹಾಗೂ ಉದ್ಯೋಗಾಕಾಂಕ್ಷಿಗಳ ಎಲ್ಲ ಬೇಡಿಕೆಗಳನ್ನು ಈಡೇರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಶ್ರೀ @NswamyChalavadi, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಶ್ರೀ ಕೋಡಿಹಳ್ಳಿ ಚಂದ್ರಶೇಖರ್, ಮುವ ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ @dheerajmuniraj, ಪಕ್ಷದ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಶ್ರೀ ಸಪ್ತಗಿರಿ ಗೌಡ, ದಲಿತ ಮುಖಂಡರಾದ ಶ್ರೀವೆಂಕಟಸ್ವಾಮಿ, ಮಾರಸಂದ್ರ ಶ್ರೀ ಮುನಿಯಪ್ಪ ಸೇರಿದಂತೆ ವಿವಿಧ ಸಂಘಟನೆಗಳ ಪ್ರಮುಖರು ಹಾಗೂ ಸಾವಿರಾರು ಉದ್ಯೋಗಾಕಾಂಕ್ಷಿ ಯುವ ಮಿತ್ರರು ಉಪಸ್ಥಿತರಿದ್ದರು.
#CongressFailsKarnataka
ಲೋಕಸೇವಾ ಕೆಎಎಸ್ ಪೂರ್ವಭಾವಿ ಮರುಪರೀಕ್ಷೆಯ ಕನ್ನಡ ಪತ್ರಿಕೆಯಲ್ಲಿ ದೋಷಗಳಾಗಿರುವುದರಿಂದ ಮತ್ತೊಮ್ಮೆ ಪರೀಕ್ಷೆ ನಡೆಸಬೇಕೆಂದು ಆಗ್ರಹಿಸಿ ಇಂದು ಫ್ರೀಡಂ ಪಾರ್ಕ್ನಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ಸೂಚಿಸಿ ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಪ್ರತಿಭಟನೆಯಲ್ಲಿ ಪಾಲ್ಗೊಂಡು ವಿದ್ಯಾರ್ಥಿಗಳ ಅಹವಾಲು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ @NswamyChalavadi , ಯುವ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ @dheerajmuniraj , ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷರಾದ ಶ್ರೀ @sapthagirigowda , ಸಂಘಟನೆಯ ಪ್ರಮುಖರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
#KPSCMosa