Mr. Kumarswamy is Ex-CM of Karnataka, one of the best CM till date and currently is the leader of regional party JDS. #Who believe in Kumaranna can follow...
ಕೋವಿಡ್ ಕಾಲದಲ್ಲಿ ಜೆಡಿಎಸ್ ರಾಜಕೀಯ ಮಾಡಲಿಲ್ಲ. ಆದರೆ, ಜನರ ಪರ ನಿಲ್���ುವುದನ್ನು ಮರೆಯಲಿಲ್ಲ, ಸರ್ಕಾರವನ್ನು ಎಚ್ಚರಿಸದೇ ಇರಲಿಲ್ಲ. ಕರ್ನಾಟಕ, ಕನ್ನಡಿಗರಿಗೆ ಅಪಮಾನವಾದಾಗ ಸಿಡಿಯಲು ಒಂದು ಕ್ಷಣವೂ ತಡ ಮಾಡಿಲ್ಲ. ನಾವು ರಾಜಕೀಯ ಮಾಡೋಣ, ಕರ್ನಾಟಕ ಕೇಂದ್ರಿತ ರಾಜಕಾರಣ ಮಾಡೋಣ. ನಮ್ಮ ಮೇಲಿನ ಆರೋಪಗಳನ್ನು ಜನರ ತೀರ್��ಾನಕ್ಕೆ ಬಿಡೋಣ.
4/4
ಪ್ರಾದೇಶಿಕ ಪಕ್ಷವಾಗಿ ನಾವು ಮಾತಾಡುವುದಿದೆ, ಮಾತಾಡೋಣ. ಪ್ರಾದೇಶಿಕ ವಿಚಾರಗಳು ಇತ್ತೀಚೆಗೆ ಗೌಣವಾಗುತ್ತಿವೆ, ಅದರ ಬಗ್ಗೆ ಮಾತಾಡೋಣ. ಒಕ್ಕೂಟ ವ್ಯವಸ್ಥೆಯಲ್ಲಿ ನಮಗೆ ಆಗುತ್ತಿರುವ ಅನ್ಯಾಯಗಳ ಬಗ್ಗೆ ನಾವು ದೊಡ್ಡದಾಗಿ ��ೂಗಿ ಹೇಳೋಣ. ಪ್ರಾದೇಶಿಕ ಅಸ್ಮಿತೆಯ ವಿಚಾರವನ್ನು ಜನರೊಂದಿಗೆ ಪ್ರಸ್ತಾಪಿಸೋಣ. ಆದರೆ, ಅನಗತ್ಯ ಮಾತು ಅನಗತ್ಯವಷ್ಟೆ.
2/4
ನಾವು ಸಿಡಿಯಬೇಕಾದ ಪರಿಸ್ಥಿತಿ ಇದೆ, ಸಿಡಿಯೋಣ. ಕಾವೇರಿ ಜಲದ ಯೋಜನೆಗಳಿಗೆ ತಡೆಯೊಡ್ಡುತ್ತಿರುವವರ ವಿರುದ್ಧ ಸಿಡಿಯೋಣ. ನಮ್ಮ ನೆಲದಲ್ಲಿ ನಮ್ಮ ಕನ್ನಡ ಧ್ವಜವನ್ನು ಹಾರಿಸಲು ಬಿಡಲೊಲ್ಲದ ಪಟ್ಟಭದ್ರರ ವಿರುದ್ಧ ಸಿಡಿಯೋಣ. ನಮಗೆ ನೀಡಬೇಕಾದ ಪರಿಹಾರ, ಅನುದಾನ ನೀಡದ ���್ಯವಸ್ಥೆಯ ವಿರುದ್ಧ ಸಿಡಿಯ ಬೇಕಾಗಿದೆ ಸಿಡಿಯೋಣ. ಇದು ನಮ್ಮ ಆಯ್ಕೆಯಾಗಲಿ.
3/4
ಕಾರ್ಯಕರ್ತ ಬಂಧುಗಳೇ, ಅಭಿಮಾನಿ ಅಣ್ಣ ತಮ್ಮಂದಿರೆ, ಅಕ್ಕ ತಂಗಿಯರೇ ನಾವು ಹೋರಾಟ ಮಾಡಬೇಕಾದ ವಿಚಾರ ಬಹಳಷ್ಟಿವೆ. ಕನ್ನಡ,ಕನ್ನಡಿಗ,ಕರ್ನಾಟಕಕ್ಕೆ ಸಂಬಂಧಿಸಿದ ವಿಷಯಗಳಲ್ಲಿ ನಮಗೆ ಬಹುದೊಡ್ಡ ನ್ಯಾಯ ಸಿಗಬೇಕಿದೆ. ನನ್ನ ಹೋರಾಟವನ್ನು ಈಗಾಗಲೇ ಅತ್ತ ಕೇಂದ್ರೀಕರಿಸಿದ್ದೇನೆ. ನಾಡು ನುಡಿಗಾಗಿ ಹೋರಾಡೋಣ.ಬೇರೆಲ್ಲ ವಿಷಯಗಳನ್ನು ನಾವು ಉಪೇಕ್ಷಿಸೋಣ.
1/4
.@BSYBJP ಹಾಗೂ ಅವರ ಮಂತ್ರಿಗಳು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬೀದಿಗೆ ಬಿದ್ದಿರುವ ಬಡ ಕುಟುಂಬಗಳೊಂದಿಗೆ ಕುಳಿತು ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಈ ಸಂದರ್ಭದಲ್ಲಿ, 'ಬೆಂಗಳೂರು ನಗರದ ಪರಿವೀಕ್ಷಣೆ' ಎಂಬ ನಾಟಕವಾಡುತ್ತಿದ್ದಾರೆ.
ಕನ್ನಡಿಗರ ಹಲವಾರು ಬೇಡಿಕೆಗಳ ನಂತರವೂ ಕೇಂದ್ರ ಸರ್ಕಾರ IBPS ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ನೀಡಿಲ್ಲ. ಜೊತೆಗೆ ಮುಂಚೆ ಇದ್ದ domicile ನಿಯಮವನ್ನು ವಾಪಾಸ್ ತರಲಾಗಿಲ್ಲ.
ಇದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆಗೆ ಇದು ಸಾಕ್ಷಿ. ಇದನ್ನು ನಾನು ಖಡಾಖಂಡಿತವಾಗಿ ವಿರೋಧಿಸುತ್ತೇನೆ. #IBPSMosa
ಹಂಗಾಮಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳಿಗೆ ಚಹಾಕೂಟ ಏರ್ಪಡಿಸಿ ಕಳೆದ 14ತಿಂಗಳ ಆಡಳಿತಾವಧಿಯಲ್ಲಿ ನೀಡಿದ ಸಹಕಾರಕ್ಕೆ ಕೃತಜ್ಞತೆ ಸಲ್ಲಿಸಿದರು. ತಾವು ಎರಡು ಆಯವ್ಯಯಗಳಲ್ಲಿ ರೂಪಿಸಿದ ಯೋಜನೆಗಳನ್ನು ಅನುಷ್ಠಾನಗೊಳಿಸಲು ���ಧಿಕಾರಿಗಳು ನಿಸ್ಪೃಹತೆಯಿಂದ ಶ್ರಮಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು
ಗೌರವಾನ್ವಿತ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದೇನೆ.
ಕಳೆದ 14 ತಿಂಗಳು ಆಡಳಿತ ನಡೆಸಲು ಸಹಕಾರ ನೀಡಿದ ನಾಡಿನ ಜನತೆಗೆ, ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು, ಎಲ್ಲ ಶಾಸಕರು, ಅಧಿಕಾರಿಗಳಿಗೆ ತುಂಬು ಹೃದಯದ ಕೃತಜ್ಞತೆಗಳು.
ಗೌರವಾನ್ವಿತ ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ರಾಜೀನಾಮೆ ಸಲ್ಲಿಸಿದ್ದೇನೆ. ಕಳೆದ 14 ತಿಂಗಳು ಆಡಳಿತ ನಡೆಸಲು ಸಹಕಾರ ನೀಡಿದ ನಾಡಿನ ಜನತೆಗೆ, ಸಚಿವ ಸಂಪುಟದ ಎಲ್ಲ ಸಹೋದ್ಯೋಗಿಗಳು, ಎಲ್ಲ ಶಾಸಕರು, ಅಧಿಕಾರಿಗಳಿಗೆ ತುಂಬು ಹೃದಯದ ಕೃತಜ್ಞತೆಗಳು.
ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪುಲ್ವಾಮಾ ದಾಳಿಯಲ್ಲಿ ಹುತಾತ್ಮರಾದ ಮಂಡ್ಯದ ಯೋಧ ಹೆಚ್. ಗುರು ಅವರ ಸ್ವಗ್ರಾಮ ಗುಡಿಗೆರೆಯಲ್ಲಿ ನಡೆದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.
ಉಪ ಮುಖ್ಯಮಂತ್ರಿ @DrParameshwara, ಸಣ್ಣ ನೀ��ಾವರಿ ಸಚಿವ ಸಿ.ಎಸ್. ಪುಟ್ಟರಾಜು ಉಪಸ್ಥಿತರಿದ್ದರು. #PulwamaAttack
It's with deep sadness that I attended the last rights of martyred #CRPF soldier H. Guru yesterday.
We all stand united and the central govt has the unanimous support of all parties and citizens to fight the menace of terrorism on our soil. #pulwamaAttack
ನಮ್ಮ ಹೆಚ್ ಡಿ ಕೆ ಅವರು ಇಂದು ಪತ್ನಿ ಅನಿತಾ ಕುಮಾರಸ್ವಾಮಿ ಅವರೊಂದಿಗೆ ಸುತ್ತೂರಿನಲ್ಲಿ ಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಮಹೋತ್ಸವಕ್ಕೆ ಚಾಲನೆ ನೀಡಿದರು.