ಆರ್ಥಿಕ ಸಂಕಷ್ಟದ ಸಮಯದಲ್ಲಿ ಹೆಚ್ಚು ಚಿನ್ನ ಖರೀದಿ ಮಾಡಬೇಡಿ. ಡೀಸೆಲ್ ಪೆಟ್ರೋಲ್ ಉಳಿಸಿ ಎಂದು ದೇಶದ ವಾಸಿಗಳಿಗೆ ಕಿವಿಮಾತು ಹೇಳಿದ ಮೋದಿ... ಕೆಂಡಮಂಡಲವಾದ ಕಾಂಗ್ರೆಸ್ ನಾಯಕರು
ಇದೇ ಮಾತನ್ನು ಇಂದು ನರೇಂದ್ರ ಮೋದಿಯವರು ಹೇಳಿದರೆ ಕಾಂಗಿಗಳಿಗೆ ಇನ್ನಿಲ್ಲದ ಉರಿ
ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯಿಂದಾಗಿ ಮೆಕ್ಕೆಜೋಳ ಬೆಳೆದ ರೈತರು ಕಂಗಾಲಾಗಿದ್ದಾರೆ. ಖರೀದಿ ಕೇಂದ್ರಗಳು ತೆರೆಯದೆ ರೈತರು ಕ್ವಿಂಟಾಲ್ಗೆ ಬರೋಬ್ಬರಿ 400 ರಿಂದ 450 ರೂಪಾಯಿ ನಷ್ಟ ಅನುಭವಿಸುತ್ತಿದ್ದಾರೆ. ನಮ್ಮ ರೈತರ ಶ್ರಮದ ಫಲ ದಲ್ಲಾಳಿಗಳ ಪಾಲಾಗುತ್ತಿದೆ.
ಸಿಎಂ @siddaramaiah ಅವರೇ,
❓ಮೆಕ್ಕೆಜೋಳ ಬೆಳೆದ ರೈತರ ಕಷ್ಟ ತಮಗೆ ಕಾಣಿಸುತ್ತಿಲ್ಲವೇ?
❓ಮೆಕ್ಕೆಜೋಳ ಖರೀದಿ ಕೇಂದ್ರ ಆರಂಭಿಸಲು ಯಾರ ಆದೇಶಕ್ಕಾಗಿ ಕಾಯುತ್ತಿದ್ದೀರಿ?
❓ AICC ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರ ಟ್ವೀಟ್ ಆದೇಶಕ್ಕಾಗಿ ಕಾಯುತ್ತಿದ್ದೀರಾ?
❓ಕೆಎಂಎಫ್ ಮೂಲಕ ಮೆಕ್ಕೆಜೋಳ ಖರೀದಿಗೆ ಆದೇಶ ನೀಡಿ ತಿಂಗಳು ಕಳೆದರೂ ನಿಮ್ಮ ಆದೇಶಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲವೇ?
ಈ 'ಭಂಡ ಬಾಳು' ಇನ್ನೆಷ್ಟು ದಿನ ಸ್ವಾಮಿ? ಕೂಡಲೇ ಎಚ್ಚೆತ್ತುಕೊಳ್ಳಿ, ಇಲ್ಲವಾದರೆ ಈ ರೈತ ವಿರೋಧಿ ಆಡಳಿತಕ್ಕೆ ತಕ್ಕ ಉತ್ತರ ನೀಡಲು ರೈತರು ಸಿದ್ಧರಾಗಿದ್ದಾರೆ. ತಕ್ಷಣವೇ ಮೆಕ್ಕೆಜೋಳ ಖರೀದಿ ಕೇಂದ್ರಗಳನ್ನು ಆರಂಭಿಸಿ ರೈತರ ನೆರವಿಗೆ ಧಾವಿಸಿ.
ಕೃಷಿ ಸಚಿವರ ತವರಲ್ಲೇ ಆರಂಭವಾಗದ ಭತ್ತ ಖರೀದಿ ಕೇಂದ್ರ!
ಭತ್ತ ಖರೀದಿ ಕೇಂದ್ರಗಳನ್ನು ಕೂಡಲೇ ತೆರೆದು ದಲ್ಲಾಳಿಗಳ ಹಾವಳಿಯಿಂದ ರೈತರಿಗೆ ಆಗುತ್ತಿರುವ ನಷ್ಟ ತಪ್ಪಿಸದಿದ್ದರೆ ಮತ್ತೊಮ್ಮೆ ರೈತರ ಪ್ರತಿಭಟನೆ ವಿಕೋಪಕ್ಕೆ ತಿರುಗುವುದು ಗ್ಯಾರೆಂಟಿ.
ಈ ಬಾರಿ ಉತ್ತಮ ಮಳೆಯಿಂದಾಗಿ ಮಂಡ್ಯ, ಮೈಸೂರು ಭಾಗದಲ್ಲಿ ಭತ್ತದ ಬೆಳೆಯಲ್ಲಿ ಉತ್ತಮ ಫಸಲು ಬಂದಿದೆ. ಆದರೆ ಭತ್ತ ಖರೀದಿ ಕೇಂದ್ರಗಳನ್ನು ಆರಂಭಿಸದೆ, ಸೂಕ್ತ ಬೆಲೆ ಕೊಡದೆ, ದಾಸ್ತಾನಿಗೆ ಜಾಗವಿಲ್ಲ, ತೇವಾಂಶ ಜಾಸ್ತಿ ಇದೆ ಎಂದು ಎಂದಿನಂತೆ ಅನ್ನದಾತರನ್ನು ಸತಾಯಿಸುತ್ತಿದೆ ಈ ರೈತ ವಿರೋಧಿ @INCKarnataka ಸರ್ಕಾರ.
ಸಿಎಂ @siddaramaiah ನವರೇ,
ಡಿಸೆಂಬರ್ ಆರಂಭದಲ್ಲೇ ಆರಂಭವಾಗಬೇಕಿದ್ದ ಭತ್ತ ಖರೀದಿ ಕೇಂದ್ರ ಇನ್ನೂ ಯಾಕೆ ಆರಂಭ ಆಗಿಲ್ಲ? ನಿಮ್ಮ ಕೃಷಿ ಸಚಿವರು ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರು ನಿದ್ದೆ ಮಾಡುತ್ತಿದ್ದಾರಾ?
ಕೇಂದ್ರ ಸರ್ಕಾರ ಕ್ವಿಂಟಲ್ ಭತ್ತಕ್ಕೆ ₹2362 ಬೆಂಬಲ ಬೆಲೆ ಘೋಷಿಸಿದೆ. ಕೇರಳ, ಒಡಿಸ್ಸಾ ಹಾಗೂ ತೆಲಂಗಾಣ ರಾಜ್ಯಗಳಲ್ಲಿ ನೀಡುತ್ತಿರುವಂತೆ ರಾಜ್ಯ ಸರ್ಕಾರದ ವತಿಯಿಂದ ಕ್ವಿಂಟಲ್ ಭತ್ತಕ್ಕೆ ₹500 ಪ್ರೋತ್ಸಾಹ ಧನವಾಗಿ ಬೆಂಬಲ ಬೆಲೆ ಘೋಷಣೆ ಮಾಡಿ ಖರೀದಿ ಕೇಂದ್ರಗಳ ಮೂಲಕ ಭತ್ತ ಖರೀದಿ ಮಾಡಿ ರೈತರ ನೆರವಿಗೆ ಬನ್ನಿ.
ತೇವಾಂಶ ಕಡಿಮೆ ಮಾಡಿಕೊಂಡು ಬನ್ನಿ, ದಾಸ್ತಾನಿಗೆ ಸ್ಥಳವಿಲ್ಲ ಎನ್ನುವ ಕುಂಟು ನೆಪಗಳನ್ನು ಕೊಡುವುದು ಬಿಟ್ಟು, ಪಂಜಾಬ್ ಇನ್ನಿತರ ರಾಜ್ಯಗಳ ಮಾದರಿಯಲ್ಲಿ ಭತ್ತ ಖರೀದಿ ಕೇಂದ್ರಗಳಲ್ಲೇ ಒಣಗಿಸುವ ಯಂತ್ರ ಅಳವಡಿಸಿ ಖರೀದಿ ಪ್ರಕ್ರಿಯೆ ತ್ವರಿತಗೊಳಿಸಿ. ದಲ್ಲಾಳಿಗಳ ಶೋಷಣೆಯಿಂದ ರೈತರನ್ನು ರಕ್ಷಿಸಿ.
ಕಬ್ಬು, ಮೆಕ್ಕೆಜೋಳದ ನಂತರ ನಿಮ್ಮ ಸರ್ಕಾರದ ಈ ರೈತ ವಿರೋಧಿ ಧೋರಣೆ ಭತ್ತ ಖರೀದಿಯಲ್ಲೂ ಮುಂದುವರೆದರೆ ಈ ಬಾರಿ ರೈತರ ಕೆಂಗಣ್ಣಿಗೆ ಗುರಿಯಾಗಿ ಸರ್ಕಾರ ಧೂಳೀಪಟ ಆಗುವುದು ಮಾತ್ರ ಗ್ಯಾರೆಂಟಿ.
ಗೋಗಳ್ಳನಿಗೆ 25 ಲಕ್ಷ ಪರಿಹಾರ ಕೊಟ್ಟ
ಗೋಗಳ್ಳರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಹಿಂಪಡೆದ
ಚಿತ್ತಾಪುರದಲ್ಲಿ ಗೋಗಳ್ಳರ ಪರ ನಿಂತ
ಪ್ರಿಯಾಂಕ ಖರ್ಗೆ ಅವರಂತ ಸಚಿವರನ್ನು ಪಡೆದ ಕಾಂಗ್ರೆಸ್ ಪಕ್ಷದಿಂದ. ಮೋದಿ ಸರ್ಕಾರಕ್ಕೆ ಹಿತವಚನ ಹಾಸ್ಯಾಸ್ಪದ!
( ಮೋದಿ ಸರ್ಕಾರ ಬಂದ ನಂತರ ಭಾರತದಲ್ಲಿ ಗೋಮಾಂಸ ರಫ್ತು ನಿಷೇಧ ಮಾಡಲಾಗಿದೆ. RTIದಾಖಲಾತಿ)
ಜಿಎಸ್ಟಿ ಉಳಿತಾಯದ ಉತ್ಸವದ ಅಂಗವಾಗಿ ಬಿಜೆಪಿ ವತಿಯಿಂದ ಮಂಡ್ಯದಲ್ಲಿ ಏರ್ಪಡಿಸಲಾದ ಸಂಭ್ರಮಾಚರಣೆಯಲ್ಲಿ ಪ್ರತಿಪಕ್ಷ ನಾಯಕರಾದ ಶ್ರೀ ಆರ್. ಅಶೋಕ್ ಅವರು ಪಾಲ್ಗೊಂಡು ಸಾರ್ವಜನಿಕರಿಗೆ ಸಿಹಿ ವಿತರಿಸಿದರು.
ಈ ಸಂದರ್ಭದಲ್ಲಿ ಮಂಡ್ಯ ಪದಾಧಿಕಾರಿಗಳು ಮತ್ತು ಪ್ರಮುಖರು ಉಪಸ್ಥಿತರಿದ್ದರು.
#NextGenGST#GSTBachatUtsav#GSTಉಳಿತಾಯದಉತ್ಸವ