ನಮ್ಮ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹ ಸ್ವಾಮಿ ದೇವಸ್ಥಾನದ ರಥೋತ್ಸವದಲ್ಲಿ ಪಾಲ್ಗೊಂಡು ದೇವರ ಆಶೀರ್ವಾದ ಪಡೆಯಲಾಯಿತು.
ಈ ಸಂದರ್ಭದಲ್ಲಿ ಮಾಜಿ ಸಚಿವರು, ಹೊಳೆನರಸೀಪುರ ಶಾಸಕರಾದ ಶ್ರೀ ಹೆಚ್. ಡಿ. ರೇವಣ್ಣನವರು, ವಿಧಾನಪರಿಷತ್ ಸದಸ್ಯರಾದ ಶ್ರೀ ಸೂರಜ್ ರೇವಣ್ಣನವರು, ಶ್ರೀಮತಿ ಭವಾನಿ ರೇವಣ್ಣನವರು ಹಾಗೂ ಹೊಳೆನರಸೀಪುರ ಮುಖಂಡರು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.
#hassan #jds #bjpkarnataka #ModiAgain2024 #Karnataka
ನಮ್ಮ ಹಾಸನ ಜಿಲ್ಲೆಯ ಬೇಲೂರಿನ ಬಸವೇಶ್ವರ ಸರ್ಕಲ್ ನಲ್ಲಿ ಇಂದು ನಡೆದ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು.
ಈ ಸಂದರ್ಭದಲ್ಲಿ ಶ್ರೀ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿಯವರು, ಶಾಸಕರಾದ ಶ್ರೀ ಹೆಚ್.ಕೆ.ಸುರೇಶ್ ಅವರು, ಮಾಜಿ ಶಾಸಕರಾದ ಶ್ರೀ ಲಿಂಗೇಶ್ ಅವರು ಹಾಗೂ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
#MahaShivaratri #Hassan
ಶ್ರೀ ಹುಲುಕುಡಿ ವೀರಭದ್ರಸ್ವಾಮಿ ಮತ್ತು ಶ್ರೀ ಭದ್ರಕಾಳಮ್ಮ ನವರ 43ನೇ ವರ್ಷದ ಬ್ರಹ್ಮ ರಥೋತ್ಸವ ಹಾಗೂ ಜಾತ್ರಾ ಮಹೋತ್ಸವದಲ್ಲಿ ಭಾಗಿಯಾಗಿ ಸ್ವಾಮಿಯ ದರ್ಶನ ಪಡೆದೆ.
ಜಾತ್ರಾ ಮಹೋತ್ಸವಕ್ಕೆ ಬರುವ ಭಕ್ತಾದಿಗಳಿಗೆ ಉಚಿತ ಕುಡಿಯುವ ನೀರಿನ ಬಾಟಲ್'ನ ವ್ಯವಸ್ಥೆ ಮಾಡಲಾಯಿತು.
#SMHarishGowda#Doddaballapura
ಆತ್ಮೀಯ ಸಹೋದರ, ಕನ್ನಡ ಚಿತ್ರರಂಗದ ಉದಯೋನ್ಮುಖ ನಾಯಕ ನಟ ಹಾಗೂ ಯುವ @JanataDal_S ರಾಜ್ಯಾಧ್ಯಕ್ಷರಾದ ಶ್ರೀ @Nikhil_Kumar_k ಅವರಿಗೆ ಜನ್ಮದಿನದ ಶುಭಾಶಯಗಳು.
ಈ ಬಾರಿ ಅಯೋಧ್ಯೆಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ನಿಮಗೆ ಪ್ರಭು ಶ್ರೀರಾಮಚಂದ್ರನು ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲೆಂದು ಪ್ರಾರ್ಥಿಸುತ್ತೇನೆ.
ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಹಳ್ಳಿ ಗ್ರಾಮದ ಆಂಜನೇಯ ಸ್ವಾಮಿ ಸನ್ನಿಧಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2024 ಹೊಸ ವರ್ಷದ ಕ್ಯಾಲೆಂಡರ್ ವಿತರಣಾ ಕಾರ್ಯಕ್ಕೆ ಚಾಲನೆ ನೀಡಲಾಯಿತು.
ಈ ಸಂದರ್ಭದಲ್ಲಿ ಮುಖಂಡರೊಂದಿಗೆ ಪಕ್ಷವನ್ನು ಸಧೃಢವಾಗಿ ಬಲಗೊಳಿಸುವ ಕುರಿತು ಸಮಾಲೋಚನೆ ನಡೆಸಿದೆ.
ಇಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ @hd_kumaraswamy ಅವರ ಜೊತೆ ದೊಡ್ಡಬಳ್ಳಾಪುರ ತಾಲ್ಲೂಕಿನ ಮಾಜಿ TAPMCS ಅಧ್ಯಕ್ಷರಾದ ಅಶ್ವತ್ಥ್ ನಾರಾಯಣ್ ರವರ ನೂತನ ಮನೆಯ ಗೃಹಪ್ರವೇಶ ಸಮಾರಂಭದಲ್ಲಿ ಭಾಗವಹಿಸಿ ಶುಭಕೋರಿದೆ.
#HDKumaraswamy#SMHarishGowda
ತಾಯಿ ಹಾಸನಾಂಬೆ ದರ್ಶನ ಪಡೆಯಲು ಸರತಿ ಸಾಲಿನಲ್ಲಿ ನಿಂತಿದ್ದ ಭಕ್ತಾದಿಗಳಿಗೆ ವಿದ್ಯುತ್ ಸ್ಪರ್ಶ ಉಂಟಾಗಿದ್ದು, ಇದರಿಂದ ನೂಕುನುಗ್ಗಲಾಗಿ ಕೆಲವರು ಅಸ್ವಸ್ಥರಾಗಿ ಗಾಯಗೊಂಡಿದ್ದರು.
ಈ ಸಂದರ್ಭದಲ್ಲಿ ಗಾಯಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದೆ. 1/2
ಹೊಳೆನರಸೀಪುರ ಶಾಸಕರು ಹಾಗೂ ಮಾಜಿ ಸಚಿವರಾದ ಶ್ರೀ @hd_revanna ರವರ ಜೊತೆ ದೆಹಲಿಯಲ್ಲಿ ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವರಾದ ಶ್ರೀ @nitin_gadkari ಅವರನ್ನು ಭೇಟಿಯಾಗಿ ಹಾಸನ ಜಿಲ್ಲೆಯ ವಿವಿಧ ರಸ್ತೆ ಕಾಮಗಾರಿಗಳ ಕಾರ್ಯಾರಂಭ ಹಾಗೂ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದೆ.
ಹಾಸನ ಲೋಕಸಭಾ ಸದಸ್ಯರು ಹಾಗೂ ಜೆಡಿಎಸ್ ಯುವ ನಾಯಕರಾದ ಶ್ರೀ @iPrajwalRevanna ನವರಿಗೆ ಜನ್ಮದಿನದ ಶುಭಾಶಯಗಳು.
ಸುದೀರ್ಘ ಸಾರ್ವಜನಿಕ ಸೇವೆಗಾಗಿ ಭಗವಂತನು ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ನೀಡಿ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇವೆ.
#PrajwalRevanna#SMHarishGowda
ಬಂಧುಗಳೇ 2023ರ ವಿಧಾನಸಭಾ ಚುನಾವಣೆಗೆ ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದಿಂದ @JanataDal_S ಪಕ್ಷದ ಅಭ್ಯರ್ಥಿಯಾಗಿ ಬಿ. ಮುನೇಗೌಡ್ರು ನಾಳೆ ನಾಮಪತ್ರ ಸಲ್ಲಿಸುತ್ತಿದ್ದು, ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಆಶೀರ್ವದಿಸಬೇಕೆಂದು ಕೋರುತ್ತೇನೆ.
#SMHarishGowda#Doddaballapura
ದೊಡ್ಡಬಳ್ಳಾಪುರ ತಾಲ್ಲೂಕಿನ ಕಸಬಾ ಹೋಬಳಿಯ ಕೊನಘಟ್ಟ ಗ್ರಾಮದಲ್ಲಿ ಇಂದು ಪಕ್ಷದ ಅಭ್ಯರ್ಥಿಗಳಾದ ಬಿ.ಮುನೆಗೌಡರ ಜೊತೆ ಮನೆ ಮನೆ ಪ್ರಚಾರದೊಂದಿಗೆ, ಕುಮಾರಣ್ಣನ ಮಹತ್ವಾಕಾಂಕ್ಷಿಯ ಪಂಚರತ್ನ ಯೋಜನೆಯ ಬಗ್ಗೆ ತಿಳಿಸಿ ಬೆಂಬಲ ಕೋರಿದೆವು.
#SMHarishGowda#Doddaballapura
ಆದಿಚುಂಚನಗಿರಿ ಮಠದ ಮೂಲಕ ಧಾರ್ಮಿಕ, ಸಾಮಾಜಿಕ, ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿ ಸಮಾಜಕ್ಕೆ ಕೊಡುಗೆ ನೀಡಿ, ಸಾವಿರಾರು ಬಡ ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಕಲ್ಪಿಸಿದ ಪೂಜ್ಯ ಶ್ರೀ ಶ್ರೀ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮದಿನವಾದ ಇಂದು ನನ್ನ ಗೌರವ ನಮನಗಳು.
#BalaGangadharanathaSwamiji#Adichunchanagiri