ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಅರಮನೆ ಮೈದಾನದಲ್ಲಿ ಇಂದು ನಡೆದ 'ನಮ್ಮಭಿಮಾನದ ಅಭಿನಂದನಾ ಸಮಾರಂಭ'ದಲ್ಲಿ ಮುಖ್ಯಮಂತ್ರಿ ಶ್ರೀ @DKShivakumar ಅವರು ಭಾಗವಹಿಸಿದರು.
ಈ ಸಂದರ್ಭದಲ್ಲಿ ಆದಿ ಚುಂಚನಗಿರಿ ಮಹಾಸಂಸ್ಥಾನದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್. ಷಡಾಕ್ಷರಿ, ಎಲ್. ಬೈರಪ್ಪ, ರಮೇಶ್ ಸಂಗಾ, ಅಮೃತ್ ರಾಜ್, ಬಸವರಾಜು ಮತ್ತಿತರರು ಉಪಸ್ಥಿತರಿದ್ದರು.
ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA) ಅಧ್ಯಕ್ಷರಾದ ಶ್ರೀ ವೆಂಕಟೇಶ್ ಪ್ರಸಾದ್ ಅವರ ನೇತೃತ್ವದ ನಿಯೋಗವು, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರನ್ನು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿ ಮಾಡಿತು. ಈ ಸಂದರ್ಭದಲ್ಲಿ ಸಂಸ್ಥೆಯ ಖಜಾಂಚಿ ಮಧುಕರ್, ವಿನಯ್ ಮೃತ್ಯುಂಜಯ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.
ಮಾಜಿ ಸಚಿವೆ ಹಾಗೂ ಬಂಜಾರ ಸಮುದಾಯದ ಮುಖಂಡರಾದ ಡಾ. ಬಿ. ಟಿ. ಲಲಿತಾ ನಾಯಕ್ ಅವರ ನೇತೃತ್ವದ ನಿಯೋಗವು ಇಂದು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಭೇಟಿ ಮಾಡಿತು.
ಕರ್ನಾಟಕ ಪ್ರದೇಶ ಬಂಜಾರ ಸೇವಾ ಸಂಘದ ಅಧ್ಯಕ್ಷರಾದ ಶ್ರೀ ಹೆಚ್.ಬಿ. ಸಿದ್ಯಾ ನಾಯಕ್, ಬೆಂಗಳೂರು ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯರಾದ ಶ್ರೀ ಎಂ. ಮಹಾದೇವ ನಾಯಕ್, ಅಧಿಕಾರಿಗಳು, ಬಂಜಾರ ಸಮಾಜದ ಮುಖಂಡರು, ಮತ್ತಿತರರು ಉಪಸ್ಥಿತರಿದ್ದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸಲು ಮತ್ತು ಅಪರಾಧ ತನಿಖಾ ಪ್ರಕ್ರಿಯೆಯನ್ನು ಇನ್ನಷ್ಟು ಚುರುಕುಗೊಳಿಸಲು ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ಮಹತ್ವದ ಹೆಜ್ಜೆ ಇಟ್ಟಿದೆ. ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ, ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @DKShivakumar ಅವರು ಜಿಲ್ಲಾ ಪೊಲೀಸ್ ಘಟಕಗಳಿಗೆ 32 ಅತ್ಯಾಧುನಿಕ ಮೊಬೈಲ್ ಫೋರೆನ್ಸಿಕ್ ವ್ಯಾನ್ಗಳು ಹಾಗೂ 75 ಹೊಸ ಬೊಲೆರೋ ವಾಹನಗಳನ್ನು ಹಸಿರು ನಿಶಾನೆ ತೋರಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಭಾರತೀಯ ಚಿತ್ರರಂಗದ ಅಪ್ರತಿಮ ಹಿನ್ನೆಲೆ ಗಾಯಕಿ, ಕನ್ನಡ ಚಿತ್ರರಂಗದ ಮೇರುಗಾಯಕಿ, ಗಾನಕೋಗಿಲೆ ಶ್ರೀಮತಿ ಎಸ್. ಜಾನಕಿ ಅವರ ನಿಧನದ ಸುದ್ದಿ ತೀವ್ರ ಆಘಾತವನ್ನುಂಟು ಮಾಡಿದೆ. ತಮ್ಮ ಕಂಠಸಿರಿಯ ಮೂಲಕ ಕೋಟ್ಯಂತರ ಜನರ ಮನೆಮನಗಳಲ್ಲಿ ನೆಲೆಸಿದ್ದ ಬಹುಭಾಷಾ ಗಾಯಕಿ ಜಾನಕಮ್ಮನವರ ನಿಧನದಿಂದ ಸಂಗೀತ ಕ್ಷೇತ್ರದ ಮಹಾನ್ ಸ್ವರಮಾಧುರ್ಯ ಮೌನವಾದಂತಾಗಿದೆ.
ಅನೇಕ ಗಾಯಕರನ್ನು ಪ್ರೋತ್ಸಾಯಿಸಿ ಬೆಳೆಸಿದ, ಸರಳತೆಯ ಸಾಕಾರಮೂರ್ತಿ ಜಾನಕಮ್ಮನವರ ಅಪ್ರತಿಮ ಕಂಠಸಿರಿ ಕನ್ನಡ ನಾಡಿನ ಸಾಂಸ್ಕೃತಿಕ ಕ್ಷೇತ್ರದಲ್ಲಿ ಎಂದೆಂದಿಗೂ ಅಮರ. ಭಗವಂತನು ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಹಾಗೂ ಅವರ ಕುಟುಂಬವರ್ಗ ಮತ್ತು ಅಪಾರ ಅಭಿಮಾನಿಗಳಿಗೆ ಈ ದುಃಖ ಭರಿಸುವ ಶಕ್ತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ.
- ಮಾನ್ಯ ಮುಖ್ಯಮಂತ್ರಿ ಶ್ರೀ @DKShivakumar