ಮತ್ತೊಮ್ಮೆ ಜನಸೇವೆಗೆ ಅವಕಾಶ ನೀಡಿದ ಕಾಂಗ್ರೆಸ್ ಪಕ್ಷದ ನಾಯಕತ್ವಕ್ಕೆ ಹೃತ್ಪೂರ್ವಕ ಧನ್ಯವಾದಗಳು.
ಜನರ ವಿಶ್ವಾಸವೇ ನನ್ನ ಶಕ್ತಿ. ಹೆಬ್ಬಾಳ ಕ್ಷೇತ್ರ ಹಾಗೂ ಕರ್ನಾಟಕದ ಅಭಿವೃದ್ಧಿಗೆ ನಿರಂತರವಾಗಿ ಶ್ರಮಿಸುವೆ.
#Congress#Karnataka#Hebbal#Janaseve#ByrathiSuresh
ನಮ್ಮ ಆರ್ಸಿಬಿ ಮತ್ತೊಮ್ಮೆ ಐಪಿಎಲ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಪಂದ್ಯಾವಳಿಯುದ್ದಕ್ಕೂ ಆರ್ಸಿಬಿ ಹುಡುಗರು ತೋರಿದ ಕೆಚ್ಚೆದೆಯ ಆಟಕ್ಕೆ ಎದುರಾಳಿ ತಂಡಗಳ ಬಳಿ ಉತ್ತರವೇ ಇಲ್ಲವೇ���ೋ ಎಂಬಂತಿತ್ತು. ಸತತ ಎರಡನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡಿರುವ ನಮ್ಮ ಆರ್ಸಿಬಿಗೆ ಅಭಿನಂದನೆಗಳು.
ಇಂದಿನ ಫೈನಲ್ ಪಂದ್ಯದಲ್ಲಿ ರಸಿಕ್ ಧಾರ್, ಭುವನೇಶ್ವರ್ ಕುಮಾರ್, ವಿರಾಟ್ ಕೋಹ್ಲಿಯ ಆಟ ಬಹುಕಾಲ ನೆನಪಲ್ಲಿ ಉಳಿಯುವಂತದ್ದು. ಸಂಘಟಿತ ಹೋರಾಟಕ್ಕೆ ದೊರೆತ ಈ ಗೆಲುವು ಆರ್ಸಿಬಿ ಅಭಿಮಾನಿಗಳೆಲ್ಲರ ಮನೆಯಲ್ಲಿ ಹಬ್ಬದ ವಾತಾವರಣ ಸೃಷ್ಟಿಸಿದೆ.
ಆರ್ಸಿಬಿಯ ಗೆಲುವಿನ ಸಂಭ್ರಮಾಚರಣೆಗೆ ಸಂಬಂಧಿಸಿದಂತೆ ರಾಜ್ಯ ಪೊಲೀಸ್ ಇಲಾಖೆ ಕೆಲವು ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದು ನಿಮ್ಮ ಸುರಕ್ಷತೆ ಮತ್ತು ಕಾಳಜಿಗಾಗಿ, ತಪ್ಪದೇ ಅವುಗಳನ್ನು ಪಾಲಿಸಿ.
ಈ ಸಲವೂ ಕಪ್ ನಮ್ಮದೇ
#EeSalanuCupNamde @RCBTweets
ಇಂದು ಲೋಕಭವನಕ್ಕೆ ತೆರಳಿ ರಾಜ್ಯಪಾಲರ ಅನುಪಸ್ಥಿತಿಯಲ್ಲಿ ಅವರ ವಿಶೇಷ ಕಾರ್ಯದರ್ಶಿಗಳಿಗೆ ��ಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನನ್ನ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದೇನೆ.
ಹಳ್ಳಿಗಾಡಿನಲ್ಲಿ ಹುಟ್ಟಿಬೆಳೆದ ನಾನು ಮುಂದೊಂದು ದಿನ ಈ ರಾಜ್ಯದ ಶಾಸಕ, ಮಂತ್ರಿ, ವಿರೋಧ ಪಕ್ಷದ ನಾಯಕ, ಎರಡೆರಡು ಬಾರಿ ಮುಖ್ಯಮಂತ್ರಿಯಾಗುತ್ತೇನೆ ಎಂಬ ಕನಸನ್ನು ಸಹ ಕಂಡಿರಲಿಲ್ಲ. ಇಂತದ್ದೊಂದು ದುಬಾರಿಯಾದ ಕನಸು ನನಸಾಗಿರುವುದು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಸಂವಿಧಾನದಿಂದ.
ಬುದ್ಧ, ಬಸವ, ಬಾಬಾ ಸಾಹೇಬರು, ಮಹಾತ್ಮ ಗಾಂಧಿಯವರೇ ನನ್ನ ಆದರ್ಶ. ನನ್ನ ನಲವತ್ತೆಂಟು ವರ್ಷಗಳ ರಾಜಕೀಯ ಜೀವನದಲ್ಲಿ ನಾಡಿನ ಅವಕಾಶ ವಂಚಿತ, ಶೋಷಿತ, ಬಡ ಜನರ ಪರವಾಗಿ ಪ್ರಾಮಾಣಿಕವಾಗಿ ದುಡಿದ ಸಂತೃಪ್ತಿಯಿದೆ.
ನನ್ನನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಆರಿಸಿ, ಈ ವರೆಗೆ ಮುಖ್ಯಮಂತ್ರಿಯಾಗಿ ಜನಸೇವೆಗೆ ಅವಕಾಶ ಮಾಡಿಕೊಟ್ಟ ಪಕ್ಷದ ಶಾಸಕರಿಗೆ, ನನ್ನ ಹೆಗಲಿಗೆ ಹೆಗಲಾಗಿ ದುಡಿದ ಸಂಪುಟ ಸಹೋದ್ಯೋಗಿಗಳಿಗೆ, ಅವಕಾಶ ನೀಡಿದ ಪಕ್ಷದ ವರಿಷ್ಠರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಹಾಗೂ ನನ್ನ ರಾಜಕೀಯ ಬದುಕಿನುದ್ದಕ್ಕೂ ಪ್ರೀತಿ ತುಂಬಿದ, ಅಭಿಮಾನಿಸಿದ, ಇಲ್ಲಿಯ ತನಕ ಕೈಹಿಡಿದು ನಡೆಸಿದ ಹೃದಯವಂತ ಕನ್ನಡಿಗರಿಗೆ ನಾನು ಚಿರಋಣಿ.
ಸಂವಿಧಾನವೇ ನನಗೆ ಧರ್ಮ, ಜನರೇ ನನ್ನ ಪಾಲಿನ ದೇವರು. ನನ್ನ ರಾಜೀನಾಮೆ ಮುಖ್ಯಮಂತ್ರಿ ಹುದ್ದೆಗೆ ಮಾತ್ರವೇ ಸೀಮಿತ, ಸಕ್ರಿಯ ರಾಜಕಾರಣಕ್ಕಲ್ಲ.
ನನ್ನ ಜೀವದ ಕೊನೆಯುಸಿರು ಇರುವ ವರೆಗೂ ಸಾಮಾಜಿಕ ನ್ಯಾಯಕ್ಕಾಗಿ ಮತ್ತು ಸಂವಿಧಾನ ವಿರೋಧಿ ಕೋಮುವಾದಿ ಶಕ್ತಿಗಳ ವಿರುದ್ಧ ಹೋರಾಟ ಮಾಡುತ್ತೇನೆ.
ಧನ್ಯವಾದ ❤
@Jdakalaburagi ಯವರೇ ಬೆಳೆ ಹಾನಿ ಪರಿಹಾರ ಸರ್ಕಾರ ಹೊರಡಿಸಿದ ನಿಯಮದ ಪ್ರಕಾರ ನಮಗೆ ಪರಿಹಾರ ಸಿಕ್ಕಿಲ್ಲ ಹೆಕ್ಟರ್ ನೀರಾವರಿ ಭೂಮಿಗೆ ರೂ 3400/- ಮೊದಲನೇ ಕಂತು ಎರಡನೇ ಕಂತಿನಲ್ಲಿ 3400 ರೂ ಹಾಕಿದ್ದೀರಿ ನಮ್ಮ ತಾಯಿಗೆ 2000 ರೂ ಮೊದಲನೇ ಕಂತು ಎರಡನೇ ಕಂತು 2000ರೂ ಯಾವ ಆಧಾರದ ಮೇಲೆ ಪರಿಹಾರ ವಿತರಣೆ ಮಾಡಿದ್ದೀರಿ ನೋಡಿ!
ಈ ದಿನ ಉತ್ತರ ವಿಭಾಗದ ಮಲ್ಲೇಶ್ವರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದ ಸಮಯದಲ್ಲಿ ಚಲನಚಿತ್ರ ನಟಿಯಾದ ಭಾವನಾ ರಾವ್ ರವರು ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿರುತ್ತಾರೆ.
ಮಾನ್ಯ ಮುಖ್ಯಮಂತ್ರಿ��ಳಿಗೆ (@siddaramaiah) ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ವರುಣನ ರೌದ್ರಾವತಾರ ಹಾಗೂ ಭೀಮಾ ನದಿಯಿಂದ ಆಗಿರುವ ಪ್ರವಾಹದ ವಾಸ್ತವ ಸ್ಥಿತಿಗತಿ ಮನವರಿಕೆ ಮಾಡಿಕೊಟ್ಟು ರೈತಾಪಿ ಜನರ ಸಂಕಷ್ಟಕ್ಕೆ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಿಸಲು ಶ್ರಮಿಸಿ ಸರ್..🙏
ಇಂದು ಬೆಳಿಗ್ಗೆ ಕಲಬುರ��ಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿ ಮತ್ತು ಸುತ್ತ ಮುತ್ತಲಿನ ಪ್ರದೇಶದಲ್ಲಿ ಅತಿಯಾದ ಮಳೆ ಮತ್ತು ತೀವ್ರ ಪ್ರವಾಹದಿಂದಾಗಿ ಹಾನಿಗೊಳಗಾದ ಸ್ಥಳಗಳನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ ವೀಕ್ಷಣೆ ಮಾಡಲಾಯಿತು.
ಮಳೆ ಮತ್ತು ಪ್ರವಾಹದಿಂದ ಹಾನಿಗೊಳಗಾದ ನಾಗರೀಕರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಲು ಮತ್ತು ಹಾನಿಗೊಳಗಾದ ಬೆಳೆಗಳ ಬಗ್ಗೆ ಮಾಹಿತಿ ನೀಡಲು ಹಾಗೂ ಪರಿಹಾರದ ಬಗ್ಗೆ ಕ್ರಮವಹಿಸಿಲು ಗಮನ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಈ ಸಂದ��್ಭದಲ್ಲಿ ಕಾಂಗ್ರೆಸ್ ಪಕ್ಷದ ��ಿರಿಯ ಮುಖಂಡರು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಸ್ತ ಗ್ರಾಮಸ್ಥರು ಉಪಸ್ಥಿತರಿದ್ದರು.
ಉತ್ತರ ಕರ್ನಾಟಕದಲ್ಲಿ ಮೂಲ ಸೌಕರ್ಯಗಳು ಅನ್ನೋದೇ ಮರೀಚಿಕೆಯ ಮಾತು,ಅದರಂತ��� ಈ ವರ್ಷ ಅತಿವೃಷ್ಟಿ ಹಾಗೂ ಕಳಪೆ ಬಿತ್ತನೆ ಬೀಜದ ಪರಿಣಾಮ ತೊಗರಿ ಬೆಳೆ ನೇಟೆ ರೋಗದಿಂದ ರೈತರು ತತ್ತರಿಸಿ ಹೋಗಿದ್ದಾರೆ, ಕಲಬುರಗಿ ಭಾಗದ ಸಚಿವರುಗಳು, ಶಾಸಕರುಗಳು ಇದರ ಬಗ್ಗೆ ಸದನದಲ್ಲಿ ಗಮನ ಸೆಳೆಯಬೇಕು
@PriyankKharge @Dr_Ajay_Singh @mlayvpatil ರವರೇ 🙏