ಗಾಂಧೀ &ಬಾಬಾಸಾಹೇಬ ಭಾರತಮಾತೆಯ ಎರಡು ಕಣ್ಣುಗಳು❤💙
ಯುವಸಾಹಿತಿ,
ಜಾತಿ ರಹಿತ ಜಾಗ ಎನಗೆ ಸಕ್ಕರೆಯ ಸ್ವರ್ಗ,
ಸಾಮಾಜಿಕ ಕಳಕಳಿಯಿಲ್ಲದ ವ್ಯಕ್ತಿಯ ಹಣ,ಅಧಿಕಾರ ಮತ್ತು ಅಂತಸ್ತು ಶೂನ್ಯಕ್ಕೆ ಸಮಾನ
ತಾಯಿ ಸ್ವರೂಪದ ಶ್ರೀಮತಿ.ಚನ್ನಮ್ಮ ದೇವೇಗೌಡ ರವರ ಆತ್ಮಕ್ಕೆ ಭಗವಂತ ಶಾಂತಿ ನೀಡಲಿ ಎಂದು ಪ್ರಾರ್ಥನೆ
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಪ್ರಾರ್ಥನೆ ಅವರ ಅಗಲಿಕೆಯ ನೋವನ್ನು ಬರಿಸುವ ಶಕ್ತಿಯನ್ನು ಅವರ ಕುಟುಂಬಕ್ಕೆ ಹಾಗೂ ಜನತೆಗೆ ನೀಡಲಿ ಎಂದು ಪ್ರಾರ್ಥನೆ.
@INCKarnataka@DKShivakumar@H_D_Devegowda@hd_kumaraswamy
"ಬದಲಾವಣೆ ಜಗದ ನಿಯಮ" ಎನ್ನುವ ಮಾತು ಇಂದು ಭಾರತದ ರಾಜಕೀಯ ದಿಕ್ಸೂಚಿಯಲ್ಲಿ ಸ್ಪಷ್ಟವಾಗಿ ಗೋಚರಿಸುತ್ತಿದೆ. ಒಂದು ಕಾಲದಲ್ಲಿ ಧರ್ಮ, ಮಂದಿರ-ಮಸೀದಿ ಮತ್ತು 'ವಿಶ್ವಗುರು' ಎಂಬ ಆಕರ್ಷಕ ಘೋಷಣೆಗಳ ಭ್ರಮಾಲೋಕದಲ್ಲಿ ಮುಳುಗಿದ್ದ ಜನಸಾಮಾನ್ಯರಿಗೆ ಇಂದು ವಾಸ್ತವದ ಕಟು ಸತ್ಯ ದರ್ಶನವಾಗುತ್ತಿದೆ.
ಅಭಿವೃದ್ಧಿಯ ಹೆಸರಿನಲ್ಲಿ ದೇಶವನ್ನು ಆಳುತ್ತಿರುವ ನಾಯಕರು ಸೃಷ್ಟಿಸಿದ ಬಣ್ಣದ ಮಾತುಗಳ ಕೋಟೆ ಈಗ ಕರಗಿ ಹೋಗುತ್ತಿದೆ. ಧಾರ್ಮಿಕ ಭಾವನೆಗಳ ಗದ್ದಲದಲ್ಲಿ ಅಸಲಿ ವಿಷಯಗಳಾದ ಉದ್ಯೋಗ, ಶಿಕ್ಷಣ, ಮೂಲಸೌಕರ್ಯ ಹಾಗೂ ಕೃಷಿ ಬಿಕ್ಕಟ್ಟುಗಳು ಮೂಲೆಗುಂಪಾಗಿದ್ದವು.
ಆದರೆ, ಇಂದು ಅದೇ ಭ್ರಮೆಯಲ್ಲಿದ್ದ ಯುವ ಸಮೂಹ ಎಚ್ಚೆತ್ತುಕೊಳ್ಳುತ್ತಿದೆ. "ನಾವೂ ಒಂದು ಕಾಲದಲ್ಲಿ ಮೋದಿ ಮೋದಿ ಅಂದಿದ್ದೆವು, ಆದರೆ ಇಂದು ಆ ದಿನಗಳನ್ನು ನೆನೆದರೆ ನಾಚಿಕೆಯಾಗುತ್ತಿದೆ" ಎಂದು ಸಾರ್ವಜನಿಕವಾಗಿ ಯುವಕರು ಆಕ್ರೋಶ ಹೊರಹಾಕುತ್ತಿರುವುದು ಕೇವಲ ಒಬ್ಬ ವ್ಯಕ್ತಿಯ ಧ್ವನಿಯಲ್ಲ, ಇದು ದೇಶಾದ್ಯಂತ ಮೊಳಗುತ್ತಿರುವ ಅಸಮಾಧಾನದ ಪ್ರತಿಧ್ವನಿ.
ಇತಿಹಾಸದಲ್ಲಿ ಬ್ರಿಟಿಷರು ಭಾರತವನ್ನು ಆಳಲು ಬಳಸಿದ "ಒಡೆದು ಆಳುವ ನೀತಿ" (Divide and Rule) ಇಂದು ಮತ್ತೊಂದು ರೂಪದಲ್ಲಿ ದೇಶವನ್ನು ಕಾಡುತ್ತಿದೆ ಎಂಬ ಗಂಭೀರ ಆರೋಪ ಕೇಳಿಬರುತ್ತಿದೆ. ಜನರನ್ನು ಜಾತಿ, ಧರ್ಮಗಳ ಹೆಸರಿನಲ್ಲಿ ವಿಭಜಿಸಿ, ಅಧಿಕಾರದ ಅಮಲಿನಲ್ಲಿ ತೇಲುತ್ತಿರುವ ಆಡಳಿತ ವ್ಯವಸ್ಥೆ ದೇಶವನ್ನು ಪ್ರಪಾತದ ಅಂಚಿಗೆ ತಳ್ಳುತ್ತಿದೆ. ಪ್ರಜಾಪ್ರಭುತ್ವದ ಮೂಲ ಆಶಯಗಳಾದ ಉತ್ತರದಾಯಿತ್ವ ಮತ್ತು ಪಾರದರ್ಶಕತೆ ಸಂಪೂರ್ಣವಾಗಿ ಮರೆಯಾಗುತ್ತಿವೆ.
ಅಧಿಕಾರದ ಅಹಂಕಾರ ಮತ್ತು ಜನವಿರೋಧಿ ಧೋರಣೆಗಳು ಹೆಚ್ಚಾದಾಗ ಜನಾಕ್ರೋಶ ದಂಗೆಯ ರೂಪ ತಳೆಯುವುದು ಸಹಜ. ಬಣ್ಣ ಬಣ್ಣದ ಭಾಷಣಗಳಿಂದ ವಾಸ್ತವದ ಹಸಿವನ್ನು ನೀಗಿಸಲು ಸಾಧ್ಯವಿಲ್ಲ ಎಂಬುದನ್ನು ಭಾರತದ ಜನತೆ ಇಂದು ಅರಿತುಕೊಳ್ಳುತ್ತಿದ್ದಾರೆ. ಬದಲಾವಣೆಯ ಗಾಳಿ ಬೀಸತೊಡಗಿದೆ, ಭ್ರಮಾಲೋಕದಿಂದ ಹೊರಬರುತ್ತಿರುವ ಭಾರತ ಇಂದು ತನ್ನ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿದೆ.
#ModiFailsIndia
ಇಂದು ಬೆಳಿಗ್ಗೆ ನನ್ನ ಕಚೇರಿಯಲ್ಲಿ ಆನೇಕಲ್ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೆಐಎಡಿಬಿ (KIADB) ಸಿಇಒ ಶ್ರೀ ಗೋವಿಂದ ರೆಡ್ಡಿ IAS ಹಾಗೂ ಪ್ರಮುಖರಾದ ಶ್ರೀ ರಾಮಸ್ವಾಮಿ ರೆಡ್ಡಿ, ಶ್ರೀ ಚಂದ್ರಪ್ಪ ರೆಡ್ಡಿ, ಶ್ರೀ ಜಯಪ್ರಕಾಶ್, ಶ್ರೀ ಬಿಬಿಐ ವೆಂಕಟಸ್ವಾಮಿ ರೆಡ್ಡಿ, ಸೇರಿದಂತೆ ಸ್ಥಳೀಯ ಮುಖಂಡರೊಂದಿಗೆ ಮಹತ್ವದ ಸಭೆ ನಡೆಸಲಾಯಿತು.
ಕೆಲವು ತಿಂಗಳುಗಳ ಹಿಂದಷ್ಟೇ ನನ್ನ ಹಾಗೂ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಎಂ. ಬಿ. ಪಾಟೀಲ್ ಅವರ ನೇತೃತ್ವದಲ್ಲಿಯೂ ಈ ಕುರಿತು ಸಭೆ ನಡೆಸಿ, ರೈತರ ಅಹವಾಲುಗಳನ್ನು ಸ್ವೀಕರಿಸಿ ಕೆಲವು ಸಕಾರಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ಅದರ ಮುಂದುವರಿದ ಭಾಗವಾಗಿ ಇಂದು ನಡೆದ ಸಭೆಯಲ್ಲಿ, ಈ ಭಾಗದ ಕೃಷಿ ಭೂಮಿ ಸ್ವಾಧೀನದಿಂದ ರೈತರ ಜೀವನೋಪಾಯ ಮತ್ತು ಸ್ಥಳೀಯ ಪರಿಸರದ ಮೇಲಾಗುವ ಪರಿಣಾಮಗಳ ಕುರಿತು ನಿಯೋಗವು ಮತ್ತೊಮ್ಮೆ ಗಮನ ಸೆಳೆಯಿತು.
ರೈತರ ವಾಸ್ತವ ಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿ, ಈ ವಿಷಯವನ್ನು ಕೈಗಾರಿಕಾ ಸಚಿವರ ಗಮನಕ್ಕೂ ತಂದು, ಸರ್ಕಾರದ ಉನ್ನತ ಮಟ್ಟದಲ್ಲಿ ಮತ್ತೊಮ್ಮೆ ಸಮಗ್ರವಾಗಿ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುವಂತೆ ಕೆಐಎಡಿಬಿ ಸಿಇಒ ಅವರಿಗೆ ಸೂಚನೆ ನೀಡಿದ್ದೇನೆ.
ಅನ್ನದಾತರ ಹಿತರಕ್ಷಣೆ ನಮ್ಮ ಮೊದಲ ಆದ್ಯತೆ.
#KIADB #RamalingaReddy #SwiftCity #Anekal #Bengaluru #Sarjapur
ನವದೆಹಲಿಯಲ್ಲಿ ಇಂದು ಕೇಂದ್ರ ಜಲಶಕ್ತಿ ಸಚಿವರಾದ ಶ್ರೀ @CRPaatil ಅವರನ್ನು ಭೇಟಿಯಾಗಿ, ನಮ್ಮ ರಾಜ್ಯದ ಹಲವು ಪ್ರಮುಖ ನೀರಾವರಿ ಮತ್ತು ಬಾಕಿ ಇರುವ ಜಲಸಂಪನ್ಮೂಲ ಯೋಜನೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿ, ಸವಿಸ್ತಾರವಾದ ಮನವಿಯನ್ನು ಸಲ್ಲಿಸಲಾಯಿತು.
ರಾಜ್ಯದ ಕೋಟ್ಯಂತರ ರೈತರ ಕಲ್ಯಾಣ, ಕುಡಿಯುವ ನೀರಿನ ಭದ್ರತೆ ಹಾಗೂ ಬರ ಪರಿಹಾರದ ದೃಷ್ಟಿಯಿಂದ ಅತ್ಯಂತ ನಿರ್ಣಾಯಕವಾಗಿರುವ ಮೇಕೆದಾಟು ಯೋಜನೆ, ಕೃಷ್ಣಾ ಜಲವಿವಾದ ನ್ಯಾಯಾಧೀಕರಣ-2ರ (KWDT II) ತೀರ್ಪಿನ ಗೆಜೆಟ್ ಅಧಿಸೂಚನೆ, ಕಳಸಾ-ಬಂಡೂರಿ ಯೋಜನೆಗೆ ಅಗತ್ಯ ಅನುಮೋದನೆಗಳು ಹಾಗೂ ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರದಿಂದ ಘೋಷಣೆಯಾಗಿದ್ದ ಬಾಕಿ ಅನುದಾನವನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಕೇಂದ್ರ ಸರ್ಕಾರಕ್ಕೆ ಒತ್ತಾಯ ಮಾಡಲಾಯಿತು.
ನಮ್ಮ ರಾಜ್ಯದ ರೈತರ ಹಿತರಕ್ಷಣೆ ಮತ್ತು ಕರ್ನಾಟಕದ ದೀರ್ಘಕಾಲೀನ ಅಭಿವೃದ್ಧಿಗೆ ಪೂರಕವಾಗಿರುವ ಈ ಎಲ್ಲಾ ಪ್ರಮುಖ ಪ್ರಸ್ತಾವನೆಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿ, ಸಕಾಲದಲ್ಲಿ ಅಗತ್ಯ ಅನುಮತಿ ಹಾಗೂ ಬೆಂಬಲವನ್ನು ನೀಡಲಿದೆ ಎಂದು ಆಶಿಸುತ್ತೇನೆ.
ನಮ್ಮ ನೆಲ, ಜಲ ಮತ್ತು ರೈತರ ಹಿತ ಕಾಯಲು ನಮ್ಮ ಸರ್ಕಾರ ಬದ್ಧವಾಗಿದೆ.
ಮುಖ್ಯಮಂತ್ರಿಗಳಾದ ಶ್ರೀ ಡಿಕೆ ಶಿವಕುಮಾರ್, ಮಾಜಿ ಸಚಿವರಾದ ಶ್ರೀ ಟಿಬಿ ಜಯಚಂದ್ರ ಹಾಗೂ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.
#KarnatakaWaterInterests #Mekedatu #UpperBhadra #KalasaBanduri #RamalingaReddy #DKShivakumar
@DKShivakumar@JayachandraTB
ಕೆಪಿಸಿಸಿ (KPCC) ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿರುವ ಹಿರಿಯ ನಾಯಕರು ಹಾಗೂ ಆತ್ಮೀಯರಾದ ಶ್ರೀ ಬಿ. ಕೆ. ಹರಿಪ್ರಸಾದ್ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ, ಅವರಿಗೆ ಪುಷ್ಪಗುಚ್ಛ ನೀಡಿ ಹೃತ್ಪೂರ್ವಕ ಅಭಿನಂದನೆಗಳನ್ನು ಸಲ್ಲಿಸಿದೆ.
ಇವರ ಸುದೀರ್ಘ ಸಾಂಸ್ಥಿಕ ಅನುಭವ ಮತ್ತು ಸಮರ್ಥ ನಾಯಕತ್ವದಲ್ಲಿ ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಮತ್ತಷ್ಟು ಬಲಿಷ್ಠವಾಗಿ ಬೆಳೆಯಲಿದೆ ಎಂಬ ವಿಶ್ವಾಸ ನನಗಿದೆ.
ಅವರ ಮುಂದಿನ ಎಲ್ಲಾ ಜನಪರ ಕಾರ್ಯಗಳಿಗೆ ನನ್ನ ಸಂಪೂರ್ಣ ಸಹಕಾರವಿರಲಿದೆ.
#RamalingaReddy #BKHariprasad #KPCCPresident #KarnatakaCongress #INC
@HariprasadBK2
@DKShivakumar@narendramodi ರಾಮಲಿಂಗಾರೆಡ್ಡಿ ಅವರಿಗೆ ಕೊಟ್ಟ ಮಾತನ್ನು ನೀವು ಉಳಿಸಿಕೊಂಡಿಲ್ಲಾ....
ಜನಸಾಮಾನ್ಯರ ಪರ ವಕಾಲತ್ತು ವಹಿಸುವ ರಾಮಲಿಂಗಾರೆಡ್ಡಿ ಅವ್ರಿಗೆ ನಿಮ್ನಿಂದನೇ ಮೋಸ ಆಗಿದೆ.
ಆನೇಕಲ್ ವಿಧಾನಸಭಾ ಕ್ಷೇತ್ರದ ಚಂದಾಪುರದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ (RTO) ಕಚೇರಿ ಮತ್ತು ಜಪ್ತಿ ಮಾಡಿದ ವಾಹನಗಳ ನಿಲುಗಡೆ ಸ್ಥಳದ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು, ಸಾರ್ವಜನಿಕ ಸೇವೆಗೆ ಸಮರ್ಪಿಸಲಾಯಿತು.
ಈ ಭಾಗದ ನಾಗರಿಕರಿಗೆ ಸಾರಿಗೆ ಇಲಾಖೆಯ ಸೇವೆಗಳು ಇನ್ನು ಮುಂದೆ ಸುಲಭವಾಗಿ ಮತ್ತು ತ್ವರಿತವಾಗಿ ಲಭ್ಯವಾಗಲಿವೆ.
ಆನೇಕಲ್ ಶಾಸಕರಾದ ಶ್ರೀ ಬಿ. ಶಿವಣ್ಣ ಅವರು ಸೇರಿದಂತೆ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ನಮ್ಮ ಸರ್ಕಾರವು ಆಡಳಿತದಲ್ಲಿ ಪಾರದರ್ಶಕತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗೆ ಸದಾ ಬದ್ಧವಾಗಿದೆ.
#RamalingaReddy #Anekal #Chandapura #RTO #Development #Karnataka
ಶ್ರೀ @RAshokaBJP ರವರೇ, ತಮಗೆ ತಮ್ಮ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳು ಉತ್ತುಂಗದ ಅಭಿವೃದ್ಧಿಯಲ್ಲಿದ್ದವು ಎಂಬ ಭ್ರಮೆಯಿಂದ ಹೊರಬನ್ನಿ.
🔺ತಾವು ಸಾರಿಗೆ ಮಂತ್ರಿಗಳಾಗಿದ್ದಾಗಲೇ ಮೊದಲ ಬಾರಿಗೆ ವೇತನ ಪರಿಷ್ಕರಣೆಗಾಗಿ ಮುಷ್ಕರ ಹೂಡುವ ಪದ್ಧತಿಗೆ ಅಡಿಪಾಯ ಹಾಕಿದ್ದು ತಾವು ಎಂಬುದು ತಿಳಿದಿದೆಯೇ? (ಮುಷ್ಕರದ ದಿನಾಂಕ: 13-09-2012 ಮತ್ತು 14-09-2012 )
🔺 ತಮ್ಮದೇ ಬಿ.ಜೆ.ಪಿ ಪಕ್ಷದ ಆಡಳಿತ ಅವಧಿಯಲ್ಲಿ ಸಾರಿಗೆ ಸಂಸ್ಥೆಗಳ ಇತಿಹಾಸದಲ್ಲಿಯೇ ಮೊದಲ ಬಾರಿಗೆ 15 ದಿವಸಗಳ ಕಾಲ ಮುಷ್ಕರ ಮಾಡಿಸಿರುವ ಕೀರ್ತಿ ನಿಮಗೆ ಸಲ್ಲಬೇಕು. ನಿಮ್ಮ ಅವಧಿಯಲ್ಲಿ ಎರಡೆರಡು ಬಾರಿ ಮುಷ್ಕರ ನಡೆದದ್ದು ಮರೆತುಬಿಟ್ಟೀರಾ? (ಮುಷ್ಕರದ ದಿನಾಂಕ: 11-12-2020 ರಿಂದ 14-12-2020 ( ನಾಲ್ಕು ದಿವಸ) ಮತ್ತು 07-04-2021 ರಿಂದ 21-04-2021 ( ಹದಿನೈದು ದಿವಸ). ಮುಷ್ಕರದ ಹೆಸರಿನಲ್ಲಿ ಸರಿಸುಮಾರು 3500 ನೌಕರರನ್ನು ಕೆಲಸದಿಂದ ವಜಾ, ಅಮಾನತು ಮಾಡಿ FIR ಹಾಕಿಸಿ, ಇಂದಿಗೂ ಅವರು ಕೋರ್ಟ್ ಕಛೇರಿ ಅಲೆಯುತ್ತಿದ್ದಾರೆ. ಈಗ ಸಾರಿಗೆ ನೌಕರರ ಬಗ್ಗೆ ಅನುಕಂಪದ ಮಾತನ್ನು ಆಡಲು ಯಾವ ನೈತಿಕತೆ ಇದೆ.
🔺 ತಮ್ಮದೇ ಬಿ.ಜೆ.ಪಿ ಸರ್ಕಾರವಿದ್ದಾಗ ಮಾರ್ಚಿ-2023 ರಲ್ಲಿ ಸಾರಿಗೆ ಸಂಸ್ಥೆಗಳ ನೌಕರರ ವೇತನ ಪರಿಷ್ಕರಣೆ ಮಾಡಿ, 38 ತಿಂಗಳ ಹಿಂಬಾಕಿ ವೇತನ ಪಾವತಿ ಬಾಕಿಯಿಟ್ಟು, ಈ ಸಂಬಂಧ ಬಜೆಟ್ನಲ್ಲಿ ಯಾವುದೇ ಅನುದಾನವನ್ನು ಮೀಸಲಿಡದೆ ತಪ್ಪಾದ ಸರ್ಕಾರಿ ಆದೇಶ ಹೊರಡಿಸಿರುವುದೇ ಈ ಎಲ್ಲಾ ತೊಡಕುಗಳಿಗೆ ಮೂಲ ಕಾರಣವಾಗಿದೆ.
🔺 ತಮ್ಮ ಬಿ.ಜೆ.ಪಿ ಆಡಳಿತ ಅವಧಿಯಲ್ಲಿ ನೀಡಬೇಕಾಗಿದ್ದ ನಿವೃತ್ತ ನೌಕರರ ವೇತನ ಪರಿಷ್ಕರಣೆ ಉಪಧನ ಬಾಕಿ ಮೊತ್ತ ರೂ.224 ಕೋಟಿ ಗಳಿಗೂ ಸಹ ಯಾವುದೇ ಅನುದಾನವನ್ನು ಮೀಸಲಿಡದೆ ಇದ್ದಾಗ್ಯೂ ಸಹ ನಮ್ಮ ಸರ್ಕಾರವು 2025 ರಲ್ಲಿ ಹಣ ಬಿಡುಗಡೆಗೊಳಿಸಿದೆ.
🔺 ನಾಲ್ಕು ಸಾರಿಗೆ ಸಂಸ್ಥೆಗಳ ಬಾಕಿ ಹೊಣೆಗಾರಿಕೆ 31.03.2026 ರಂತೆ ರೂ. 7130.80 ಕೋಟಿ (ಇದರಲ್ಲಿ ರೂ. 2298.20 ಕೋಟಿ ನೌಕರರ ಭವಿಷ್ಯ ನಿಧಿ ಬಾಕಿ ಮತ್ತು ರೂ.822.26 ಕೋಟಿ ಇಂಧನ ಪಾವತಿ ಬಾಕಿ)
🔺ತಮ್ಮ ಬಿ.ಜಿ.ಪಿ ಆಡಳಿತ ಅವಧಿಯ ನೌಕರರ ಭವಿಷ್ಯ ನಿಧಿ ಮತ್ತು ಡೀಸೆಲ್ ಬಾಕಿ ಹಣ ಪಾವತಿಗಾಗಿ, 2025ರಲ್ಲಿ ನಮ್ಮ ಸರ್ಕಾರವು ಬ್ಯಾಂಕ್ನಿಂದ ರೂ.2000 ಕೋಟಿ ಸಾಲವನ್ನು ಪಡೆಯಲು ಸಾರಿಗೆ ಸಂಸ್ಥೆಗಳಿಗೆ ಅನುಮತಿಸಿದ್ದು, ಈ ಸಾಲದ ಅಸಲು ಮತ್ತು ಬಡ್ಡಿಯನ್ನು ನಮ್ಮ ಸರ್ಕಾರವು ಪಾವತಿಸುತ್ತಿದೆ.
🔺ಪ್ರತಿ ವರ್ಷ ನಾಲ್ಕು ಸಾರಿಗೆ ಸಂಸ್ಥೆಗಳು ಗಳಿಸುವ ಒಟ್ಟು ಆದಾಯದಲ್ಲಿ 49.15 % ಸಿಬ್ಬಂದಿ ವೆಚ್ಚ (ಅಂದರೆ ರೂ.6759.68 ಕೋಟಿ) ಮತ್ತು 34.49% ಡೀಸೆಲ್ ವೆಚ್ಚ ( ಅಂದರೆ ರೂ.4744.41 ಕೋಟಿ) ವೆಚ್ಚವಾಗುತ್ತಿದೆ.
🔺ಕಾರ್ಮಿಕ ಸಂಘಟನೆಗಳ ಬೇಡಿಕೆಗೆ ಸ್ಪಂದಿಸುವ ನಿಟ್ಟಿನಲ್ಲಿ ನಾವು ಅವರೊಡನೆ ಹಲವಾರು ಸಭೆಗಳನ್ನು ನಡೆಸಿದ್ದೇವೆ. ಅವರ ಬೇಡಿಕೆಯಂತೆ 25% ವೇತನ ಪರಿಷ್ಕರಣೆ ಮಾಡಿದಲ್ಲಿ, ಪ್ರತಿ ತಿಂಗಳು ನಾಲ್ಕು ಸಾರಿಗೆ ಸಂಸ್ಥೆಗಳಿಗೆ ರೂ.131.52 ಕೋಟಿ, ವಾರ್ಷಿಕ ರೂ.1578.18 ಕೋಟಿ ಹಾಗೂ ನಾಲ್ಕು ವರ್ಷಗಳಿಗೆ ರೂ.6312.23 ಕೋಟಿ ಹೆಚ್ಚುವರಿ ಹಣ ಭರಿಸಬೇಕಾಗುತ್ತದೆ.
🔺ತಾವು ರಾಜ್ಯದ ಉಪಮುಖ್ಯಮಂತ್ರಿಗಳಾಗಿ, ಸಾರಿಗೆ ಸಚಿವರಾಗಿ ಕೆಲಸ ಮಾಡಿರುವವರು, ಇಷ್ಟಾದರೂ ತಮಗೆ ತಿಳಿಯಬಾರದೇ? ಸಾರಿಗೆ ಸಂಸ್ಥೆಗಳ ಆರ್ಥಿಕ ಪರಿಸ್ಥಿತಿ ತೀವ್ರ ಕಿಷ್ಲಕರವಾಗಿದ್ದು, ಏಪ್ರಿಲ್ 1 ,2025 ರಿಂದಲೇ ಅನ್ವವಾಗುವಂತೆ 25% ವೇತನ ಹೆಚ್ಚಳ ಮಾಡಿದ್ದಲ್ಲಿ, ವಾರ್ಷಿಕ ರೂ.1578.18 ಕೋಟಿ ಹಾಗೂ ನಾಲ್ಕು ವರ್ಷಗಳಿಗೆ ರೂ.6312.23 ಕೋಟಿ ಹೆಚ್ಚುವರಿ ಹಣ ಭರಿಸಬೇಕಾಗುತ್ತದೆ. ಇಷ್ಟೊಂದು ಮೊತ್ತದ ಹಣವನ್ನು ಮಾನ್ಯ ಮುಖ್ಯಮಂತ್ರಿಗಳ ಗಮನಕ್ಕೆ ಬಾರದೇ, ಅವರೊಡನೆ ಚರ್ಚಿಸದೆ, ಅನುಮತಿ ಪಡೆಯದೇ, ಏಕಾಏಕಿ ನಾನು ಘೋಷಿಸಲು ಸಾಧ್ಯವೇ?
🔺 ಇದೇ ವಿಷಯವನ್ನೇ ನನ್ನ ಅಧ್ಯಕ್ಷತೆಯಲ್ಲಿ ಕಾರ್ಮಿಕ ಮುಖಂಡರುಗಳೊಡನೆ ನಡೆದ ನೆನ್ನೆಯ ಸಭೆಯಲ್ಲಿ ತಿಳಿಸಿದ್ದೇನೆ. ಇನ್ನೆರಡು ಮೂರು ದಿನಗಳಲ್ಲಿ ಎಷ್ಟು ಶೇಕಡವಾರು ವೇತನ ಹೆಚ್ಚಳ ನೀಡುತ್ತೇವೆ ಎಂಬುದನ್ನು ಮಾನ್ಯ ಮುಖ್ಯಮಂತ್ರಿಗಳೊಡನೆ ಚರ್ಚಿಸಿ, ತೀರ್ಮಾನಿಸಿ ಕೂಡಲೇ ತಿಳಿಸಲಾಗುವುದು ಎಂದು ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದಾಗ್ಯೂ ಸಹ, ಅವರು ಮುಷ್ಕರ ಮಾಡುತ್ತೇವೆ ಅಂದರೆ ಅದಕ್ಕೆ ಅವರೇ ಹೊಣೆ.
#RamalingaReddy #RAshoka #KSRTC #BMTC #KKRTC #NWKRTC #Karnataka #Congress #BJP
@INCKarnataka