ರಾಜ್ಯಸಭಾ ಸದಸ್ಯರಾದ ವೀರೇಂದ್ರ ಹೆಗ್ಗಡೆ ತಮ್ಮ ಆ ಸ್ಥಾನಕ್ಕೆ ಗೌರವ ತರುವಂತಹ ಕೆಲಸವನ್ನು ಸೌಜನ್ಯ ಪ್ರಕರಣದಲ್ಲಿ ನಿಭಾಯಿಸಿಲ್ಲ. ಹಾಗಾಗಿ ಅವರು ಈ ಕೂಡಲೇ ಆ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು.
ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕೆಎಎಸ್ ಪೂರ್ವಬಾವಿ ಪರೀಕ್ಷೆಯಲ್ಲಿನ ಮರು ಪರೀಕ್ಷೆಯ 2 ಪತ್ರಿಕೆಗಳಲ್ಲಿ 79 ದೋಷಗಳಿದ್ದರೂ ಕೆಪಿಎಸ್ ಸಿ ಕೇವಲ 5 ಪ್ರಶ್ನೆಗಳಿಗೆ ಮಾತ್ರ ಕೃಪಾಂಕ ನೀಡುವ ಮೂಲಕ ಕನ್ನಡ ಮಾಧ್ಯಮದ ಪರೀಕ್ಷಾರ್ಥಿಗಳಿಗೆ ಅನ್ಯಾಯಮಾಡಿದೆ, ಕೆಪಿಎಸ್ ಸಿಯ ನಿರಂತರ ಯಡವಟ್ಟುಗಳನ್ನು ಸಹಿಸದೇ ಪರೀಕ್ಷಾರ್ಥಿಗಳು ನ್ಯಾಯಾಲಯದ ಮೊರೆ ಹೋಗಿದ್ದರು.
ಈ ಹಿಂದೆ ಮುಖ್ಯಮಂತ್ರಿಗಳು ಸದನದಲ್ಲಿ ಹೇಳಿದ್ದಂತೆ ನ್ಯಾಯಾಲಯದ ತೀರ್ಪು ಬಂದಕೂಡಲೇ ಪರೀಕ್ಷಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸುವುದಾಗಿ ತಿಳಿಸಿದ್ದರು.
ಸದ್ಯ ಘನ ನ್ಯಾಯಾಲಯ 32 ಅಭ್ಯರ್ಥಿಗಳಿಗೆ ಮರು ಪರೀಕ್ಷೆಗೆ ಹಾಜರಾಗಲು ಅವಕಾಶ ಕಲ್ಪಿಸಿದೆ. ಆದರೆ ಉಳಿದ ಅಭ್ಯರ್ಥಿಗಳ ಭವಿಷ್ಯದ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತಿಸಿ ಎಲ್ಲಾ ಅಭ್ಯರ್ಥಿಗಳಿಗೂ ಮರು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸುವುದು ನ್ಯಾಯೋಜಿತ ಕ್ರಮವಾಗಿರುತ್ತದೆ, ಈ ಕುರಿತು ಮುಖ್ಯಮಂತ್ರಿಗಳು ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪತ್ರ ಬರೆಯಲಾಗಿದೆ.
ತಾಲೂಕ್ ಆಸ್ಪತ್ರೆ ಹಳಿಯಾಳ ಉತ್ತರ ಕನ್ನಡ ಜಿಲ್ಲೆ.
ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ನಿರ್ಲಕ್ಷತನದಿಂದ ಆಸ್ಪತ್ರೆ ಮುಂದೆ ರೋಗಿಯ ಪರದಾಟ, ಮಾನವೀಯತೆ ಮರೆತ ಆಸ್ಪತ್ರೆ ಸಿಬ್ಬಂದಿಗಳು.@siddaramaiah
ಈ ಕೂಡಲೇ ಸಂಬಂಧಪಟ್ಟ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕೆಂದು.@dineshgrao@tv9kannada@AsianetNewsSN@NewsFirstKan@publictvnews
ನಮ್ಮ AKSSA @AKSSAofficial ಸಂಘಟನೆಯ ಪ್ರದಾನ ಕಾರ್ಯದರ್ಶಿಯಾದ ಸಂಜಯ್ ಕುಮಾರ್ ಅವರ ಸಮಯಪ್ರಜ್ಞೆಯಿಂದ ಒಂದು ಜೀವ ಉಳಿಯಿತು.
ಕನ್ನಡ, ಕರವೇ ಹಾಗೂ ನಾರಾಯಣಗೌಡರ ವಿಚಾರದಲ್ಲಿ ನಾನು ಯುದ್ಧ ಬುಲ್ಡೋಜರ್ ಅಡ್ಡ ಬರಬೇಡಿ ಅಪ್ಪಚ್ಚಿ ಆಗಿ ಬಿಡುತ್ತೀರಾ ಹುಷಾರ್, ನಾರಾಯಣಗೌಡರ ಒಂದು ಆದೇಶಕ್ಕೆ ಅದೆಂತಹದ್ದೆ ಆಗ್ಲೀ ನಾನು ಸಿದ್ಧ ಅದು ಪೊಲೀಸೋ, ಕೇಸೋ, ಜೈಲೋ ಅಥವ ಗಲ್ಲೋ ನಾನು ಹೆದರುವ ಮಗ ಅಲ್ಲ ಏಕೆಂದರೆ ನನ್ನ ಮೈಯಲ್ಲಿ ಹರಿಯುತ್ತಿರುವುದು ರಾಯಣ್ಣನ ರಕ್ತ, ನಾರಾಯಣಗೌಡರ ಆದರ್ಶ.
ಕೆಪಿಎಸ್ ಸಿಗೆ ಸಾವಿರಾರು ಕರವೇ ಕಾರ್ಯಕರ್ತರಿಂದ ಮುತ್ತಿಗೆಗೆ ತೀರ್ಮಾನ
ಇಂದು ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಮುಖಂಡರು, ಬೆಂಗಳೂರು ನಗರ ಪದಾಧಿಕಾರಿಗಳ ತುರ್ತು ಸಭೆ ಇಂದು ನಡೆಯಿತು. ಬಹಳ ಮುಖ್ಯವಾಗಿ
ಕೆಪಿಎಸ್ ಸಿ ನಡೆಸಿದ ಕೆಎಎಸ್ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಆಗಿರುವ ಅನ್ಯಾಯದ ಹಿನ್ನೆಲೆಯಲ್ಲಿ ಕರವೇ ಸಂಘಟಿಸಿರುವ ಚಳವಳಿಯನ್ನು ತೀವ್ರಗೊಳಿಸುವ ಕುರಿತು ಚರ್ಚೆ ನಡೆಯಿತು.
ಫೆ.18ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಹೋರಾಟ ನಡೆಸಿದ್ದೆವು. ಚಳವಳಿಯ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿ @siddaramaiah ಸಿದ್ಧರಾಮಯ್ಯನವರನ್ನು ಕರವೇ ನಿಯೋಗ ಭೇಟಿ ನೀಡಿ ಆಗಿರುವ ಅನ್ಯಾಯವನ್ನು ಬಿಡಿಸಿ ಹೇಳಿತ್ತು. ಈ ಸಂದರ್ಭದಲ್ಲಿ ನಮ್ಮ ಚಳವಳಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಎರಡು ದಿನಗಳಲ್ಲಿ ಕೆಪಿಎಸ್ ಸಿ ಅಧ್ಯಕ್ಷರ ಮತ್ತು ಅಧಿಕಾರಿಗಳನ್ನು ಕರೆಯಿಸಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದರು.
ಆದರೆ ನಾಲ್ಕು ದಿನಗಳು ಕಳೆದರೂ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ನ್ಯಾಯ ಕೊಡುವ ಕುರಿತು ಸ್ವತಃ ಮುಖ್ಯಮಂತ್ರಿಗಳಾಗಲೀ, ಕೆಪಿಎಸ್ ಸಿಯಾಗಲೇ ಒಂದೇ ಒಂದು ಮಾತು ಹೇಳಿಲ್ಲ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯಕ್ಕೆ ಯಾರೂ ಸ್ಪಂದಿಸುವ ಹಾಗೆ ಕಾಣುತ್ತಿಲ್ಲ.
ನಮ್ಮ ಶಾಂತಿಯುತ ಹೋರಾಟಕ್ಕೆ ಸರ್ಕಾರ, ಕೆಪಿಎಸ್ ಸಿ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಅನಿವಾರ್ಯವಾಗಿ ತೀವ್ರ ಸ್ವರೂಪದ ಹೋರಾಟಕ್ಕೆ ಕೈ ಹಾಕಬೇಕಾಗಿದೆ. ಚಳವಳಿಯ ಸ್ವರೂಪದ ಕುರಿತು ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಚರ್ಚೆಯ ನಂತರ ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳ ಕರವೇ ಕಾರ್ಯಕರ್ತರು ಮತ್ತು ಸಾವಿರಾರು ವಿದ್ಯಾರ್ಥಿಗಳು ಕೆ.ಪಿ.ಎಸ್.ಸಿ. ಕಚೇರಿಗೆ ಮುತ್ತಿಗೆ ಹಾಕುವ ನಿರ್ಧಾರ ಕೈಗೊಳ್ಳಲಾಯಿತು. ಸರ್ಕಾರ ಮತ್ತು ಕೆಪಿಎಸ್ ಸಿ ನಮ್ಮ ಮುಂದಿನ ಹೋರಾಟಗಳ ಆಗುಹೋಗುಗಳಿಗೆ ಜವಾಬ್ದಾರಿ ಹೊರಬೇಕು. ನಾವು ವಿದ್ಯಾರ್ಥಿಗಳಿಗೆ ನ್ಯಾಯ ಸಿಗುವವರೆಗೂ ಕೈಕಟ್ಟಿ ಕೂರುವ ಪ್ರಶ್ನೆಯೇ ಇಲ್ಲ.
-ಟಿ.ಎ.ನಾರಾಯಣಗೌಡ
ರಾಜ್ಯಾಧ್ಯಕ್ಷರು
ಕರ್ನಾಟಕ ರಕ್ಷಣಾ ವೇದಿಕೆ
ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆದ ಅನ್ಯಾಯದ ವಿರುದ್ಧ ಕರವೇ ಸಂಘಟಿಸಿದ್ದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದ ಚಿತ್ರಗಳು.
@siddaramaiah#kpscdroha#kpscmosa#ಕರವೇ#KRV
ಕೆಪಿಎಸ್ ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸಂಘಟಿಸಿದ್ದ ಬೃಹತ್ ಪ್ರತಿಭಟನೆ ಸಂದರ್ಭದಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಟಿ.ಎ.ನಾರಾಯಣಗೌಡರು ಮುಖ್ಯಮಂತ್ರಿ ಸಿದ್ಧರಾಮಯ್ಯ ನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಸಂದರ್ಭದ ಚಿತ್ರಗಳು
#kpscdroha#kpscmosa#ಕರವೇ#KRV