ನಾಡಿನ ಸಮಸ್ತ ಜನತೆಗೆ ಗಣೇಶ ಚತುರ್ಥಿಯ ಹಾರ್ದಿಕ ಶುಭಾಶಯಗಳು. ವಿಘ್ನವಿನಾಶಕ ಶ್ರೀ ಗಣೇಶನು ಎಲ್ಲರಿಗೂ ಸಮೃದ್ಧಿ, ಆರೋಗ್ಯ ಭಾಗ್ಯವನ್ನು ನೀಡಲಿ ಎಂದು ಪ್ರಾರ್ಥಿಸೋಣ.
#GaneshaChaturthi#Ganeshotsav#ಗಣೇಶಹಬ್ಬ
ವಿದ್ಯಾರ್ಥಿಗಳ ಆದರ್ಶ ಗುರು, ಶ್ರೇಷ್ಠ ಶಿಕ್ಷಣ ತಜ್ಞ, ಮಾಜಿ ರಾಷ್ಟ್ರಪತಿ, ಭಾರತ ರತ್ನ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ಸ್ಮರಣೆಗಳು. ಎಲ್ಲಾ ಶಿಕ್ಷಕ-ಶಿಕ್ಷಕಿಯರಿಗೂ ಶಿಕ್ಷಕರ ದಿನಾಚರಣೆಯ ಶುಭಾಶಯಗಳು.
#TeachersDay
ರಾಜ್ಯದ ಹಿರಿಯ ನಾಯಕರು ಹಾಗೂ ಸಂಸದರಾದ ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರು ಇನ್ನಿಲ್ಲ ಎಂಬ ಸುದ್ದಿ ತಿಳಿದು ಮನಸ್ಸಿಗೆ ತೀವ್ರ ದುಃಖಿತವಾಗಿದೆ. ಇವರು ರಾಜಕಾರಣದಲ್ಲಿ ಪ್ರಭಾವಿ ದಲಿತ ನಾಯಕರಾಗಿ ವಿಶಿಷ್ಟ ಛಾಪು ಮೂಡಿಸಿದ್ದರು.
ಕುಟುಂಬವರ್ಗ, ಅಭಿಮಾನಿಗಳಲ್ಲಿ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
ಈ ಸಲ ಕಪ್ ನಮ್ದೇ!
ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಫೈನಲ್ ಪಂದ್ಯದಲ್ಲಿ ಎಂಟು ವಿಕೆಟ್ಗಳ ಅಂತರದಿಂದ ಜಯಗಳಿಸಿ, ವುಮೆನ್ಸ್ ಪ್ರೀಮಿಯರ್ ಲೀಗ್ (WPL) ಕಪ್ ಮುಡಿಗೇರಿಸಿಕೊಂಡ ಮಹಿಳಾ ಆರ್ಸಿಬಿ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು.
#PlayBold#ನಮ್ಮRCB#WPL2024#WPLFinal#RCB
ಓಂ ನಮಃ ಶಿವಾಯ 🙏
ಭಕ್ತರ ವಿನಮ್ರ ಭಕ್ತಿಗೆ ಪ್ರಸನ್ನನಾಗಿ ಶಿವನು ಭಕ್ತರಲ್ಲಿ ಜ್ಞಾನದ ದೀಪವನ್ನು ಬೆಳಗುವ ದಿನವೇ ಶಿವರಾತ್ರಿ.
ನಾಡಿನ ಸಮಸ್ತ ಜನರಿಗೆ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು.
#Mahashivaratri
ಕನ್ನಡದಲ್ಲಿ ಪ್ರಪ್ರಥಮ ಬಾರಿಗೆ ಐಎಎಸ್ ಪರೀಕ್ಷೆ ಬರೆದು ಭಾರತೀಯ ಆಡಳಿತ ಸೇವೆಯಲ್ಲಿ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಶ್ರೀ ಕೆ.ಶಿವರಾಮ್ ಅವರು ಇಂದು ನಿಧನರಾದ ಸುದ್ದಿ ತಿಳಿದು ದುಃಖವಾಯಿತು. ಶ್ರೀಯುತರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವನ್ನು ಉಂಟು ಮಾಡಿದೆ. ಅವರಿಗೆ ಭಾವಪೂರ್ಣ ಶೃದ್ಧಾಂಜಲಿ ಅರ್ಪಿಸುತ್ತೇನೆ.
ಭಾರತೀಯರು ಎಂದೂ ಮರೆಯಲಾರದ ಕರಾಳ ದಿನ 'ಪುಲ್ವಾಮಾ ದಾಳಿ ಹುತಾತ್ಮರ ಸಂಸ್ಮರಣಾ' ದಿನವಾದ ಇಂದು ದೇಶ ರಕ್ಷಣೆಯಲ್ಲಿ ನಿರತರಾಗಿದ್ದ ಸಂದರ್ಭದಲ್ಲಿ ಪುಲ್ವಾಮಾ ದಾಳಿಯಲ್ಲಿ ವೀರಮರಣವನ್ನಪ್ಪಿದ ನಮ್ಮೆಲ್ಲ ಯೋಧರಿಗೆ ಗೌರವಪೂರ್ವಕ ನಮನಗಳು.
ನಮ್ಮ ವೀರ ಯೋಧರ ತ್ಯಾಗ ಹಾಗೂ ಬಲಿದಾನಗಳನ್ನು ಸ್ಮರಿಸೋಣ.
#PulwamaAttack
ಕರ್ನಾಟಕ ವಿಧಾನ ಸಭೆಯಿಂದ ರಾಜ್ಯಸಭೆಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾಗಿರುವ ಬಾಗಲಕೋಟೆ ಜಿಲ್ಲೆಯ ಹಿರಿಯ ಕಾರ್ಯಕರ್ತರು ಹಾಗೂ ಆತ್ಮೀಯ ಸ್ನೇಹಿತರಾದ ಶ್ರೀ ನಾರಾಯಣಸಾ ಕೆ. ಭಾಂಡಗೆ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು.