In fact, the Kingdom of Mysore's choice of 25 Hz is the reason why following countries (shown in blue) have 50 Hz as the utility frequency.
When electricity was used first in Bangalore for lighting streetlights and homes, they observed a flicker and then standard frequency for lighting and domestic usage was doubled to 50 Hz (integer multiple of 25Hz).
Then grids got built around this and now you can see how many countries use "Mysore standards!"
ಬೂಕರ್ ಬಹುಮಾನ ಗೆದ್ದ ಬಾನು ಮುಷ್ತಾಕ್ ಹಾಗೂ ದೀಪಾ ಭಾಸ್ತಿ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು!
ಜಯಂತ ಕಾಯ್ಕಿಣಿ ಅವರ ಸಂಪಾದಕತ್ವದ ಕನ್ನಡದ ಅತ್ಯುತ್ತಮ ಸಾಹಿತ್ಯಕ ಮ್ಯಾಗಜೀನ್ಗಳಲ್ಲಿ ಒಂದಾದ ಭಾವನ ಪತ್ರಿಕೆಯ, (ಏಪ್ರಿಲ್ 2000) ಸಂಚಿಕೆಯಲ್ಲಿ ಬಾನು ಮುಷ್ತಾಕ್ ಅವರ ಜನಪ್ರಿಯ ಕಥೆ "ಎದೆಯ ಹಣತೆ" ಪ್ರಕಟವಾಗಿತ್ತು. ಈ ಕಥೆ 2004ರಲ್ಲಿ ಪ್ರಕಟವಾದ ಅವರ ಕಥಾಸಂಕಲನಕ್ಕೂ ಶೀರ್ಷಿಕೆಯಾಗಿತ್ತು.
ಭಾವನ ಸಂಚಿಕೆಗಳನ್ನು ಸಂಚಿಯ ಸಹಭಾಗಿತ್ವದಲ್ಲಿ #ServantsOfKnowledge ಅಡಿ ಡಿಜಿಟಲೀಕರಿಸಲಾಗಿದೆ.
ಈ ಮೂಲ ಕಥೆಯನ್ನು ಈಗ ನೀವು ಇಲ್ಲಿ ಓದಬಹುದು — https://t.co/BlbhyWWpVR
#BanuMushtaq #DeepaBhasthi #BookerPrize #KannadaLiterature #BhavanaMagazine #JayanthKaikini #EdeyaHanate #Heartslamp #ShortStories #ServantsOfKnowledge #LiteratureMatters #TranslationMatters #IndianWriting #Kannada #KannadaLiterature
A 1,334-year-old Kannada inscription from the 7th-century reign of Badami Chalukya emperor Vikramaditya I (son of Immadi Pulikeshi) was accidentally discovered in Madapura village, Davangere district, during lake desilting. Previously unknown, the Old Kannada inscription records the waiving of taxes and a grant of six "mattaru" of land to village elders (Ojas) as recognition for their charitable construction of the lake. It also mentions an officer, Singhavenna, administering the ‘Ballavi 70’ region.
@YESBANK dear bank I am trying to reach customer care for an enquiry.. but the number is repeatedly asking to enter phone number and pin received on it.. and looping the same..It is not going anywhere.. please see.. and call me back..
ನಾರಾಯಣಗೌಡ್ರೇ ಬೆಳಗಾವಿಗೆ ಬನ್ನಿ, ಬಾಳೆಕುಂದ್ರಿಗೆ ಬನ್ನಿ, ಮರಾಠಿ ಬಾರದ ಕಾರಣಕ್ಕೆ, ಮರಾಠಿಯಲ್ಲಿ ಮಾತನಾಡದ ಕಾರಣಕ್ಕೆ ಅನ್ಯಾಯವಾಗಿ ಮರಾಠಿ ಪುಂಡರಿಂದ ಹಲ್ಲೆಗೊಳಗಾದ ಬಸ್ ನಿರ್ವಾಹಕ ಮಹದೇವಪ್ಪ ಹುಕ್ಕೇರಿಯವರಿಗೆ ನ್ಯಾಯ ಕೊಡಿಸಿ ಎಂದು ನೂರಾರು ಮಂದಿ ಹೇಳುತ್ತಿದ್ದೀರಿ. ಫೋನುಗಳು, ಸಂದೇಶಗಳು, ಸಾಮಾಜಿಕ ಜಾಲತಾಣಗಳಲ್ಲಿ ಅನೇಕ ಪೋಸ್ಟ್ ಗಳ ಮೂಲಕ ನೀವು ನನ್ನನ್ನು ಕರೆಯುತ್ತಿದ್ದೀರಿ. ದೌರ್ಜನ್ಯಕ್ಕೆ ಒಳಗಾದ ಮಹದೇವಪ್ಪ ಅವರ ಮೇಲೇ ರಾತ್ರೋರಾತ್ರಿ ಒಂದು ಪ್ರಕರಣ ದಾಖಲಿಸಲಾಗಿದೆ. ಅದೂ ಕೂಡ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದರು ಎಂದು ಆರೋಪಿಸಲಾದ ಸುಳ್ಳು ಪ್ರಕರಣ.
ನಾನು ಬೆಳಗಾವಿಗೆ ಬಂದೇ ಬರುತ್ತೇನೆ. ಬಾಳೇಕುಂದ್ರಿಗೂ ಬಂದೇ ಬರುತ್ತೇನೆ. ಬಾಳೇಕುಂದ್ರಿ ಕರ್ನಾಟಕದ ಹೆಮ್ಮೆಯ ಇಂಜಿನಿಯರ್, ನೀರಾವರಿ ತಜ್ಞ ಶಿವಪ್ಪ ಗುರುಬಸಪ್ಪ ಬಾಳೇಕುಂದ್ರಿಯವರ ಊರು. ಕೃಷ್ಣಾ, ಮಲಪ್ರಭ, ಘಟಪ್ರಭ ವ್ಯಾಪ್ತಿಯ ನೀರಾವರಿ ಯೋಜನೆಗಳ ರೂವಾರಿಯವರು. ಇಂಥ ಶ್ರೇಷ್ಠ ವ್ಯಕ್ತಿಗೆ ಜನ್ಮ ನೀಡಿದ ಅಪ್ಪಟ ಕನ್ನಡದ ಊರು ಬಾಳೇಕುಂದ್ರಿಗೆ ಬರಲು ನನಗೆ ಯಾವ ಹಿಂಜರಿಕೆ ಇರಲು ಸಾಧ್ಯ? ಕರ್ನಾಟಕದ ಮೂಲೆಮೂಲೆಯ ಯಾವ ಹಳ್ಳಿಗಾದರೂ ನಾನು ಹೋಗುತ್ತೇನೆ. ಅದು ನನ್ನ ಹಕ್ಕು, ಹೋಗಬೇಕಾದಾಗ ಹೋಗೇ ಹೋಗುತ್ತೇನೆ.
ಪ್ರಶ್ನೆ ಅದಲ್ಲ, ಗೌಡ್ರೇ ಬೆಳಗಾವಿಗೆ, ಬಾಳೇಕುಂದ್ರಿಗೆ ಬನ್ನಿ ಎಂದು ಕರೆಯುತ್ತಿರುವವರಿಗೆ ನನ್ನ ಒಂದಷ್ಟು ಪ್ರಶ್ನೆಗಳಿವೆ. ಎಲ್ಲಿದ್ದಾರೆ ನಿಮ್ಮ ಜನಪ್ರತಿನಿಧಿಗಳು? ನೀವೇ ಓಟು ಹಾಕಿ ಗೆಲ್ಲಿಸಿದ ಶಾಸಕರೆಲ್ಲ ಹೋದರು? ನಿಮ್ಮ ಜಿಲ್ಲೆಯನ್ನು ಪ್ರತಿನಿಧಿಸುವ ಮಂತ್ರಿಗಳು ಬಾಯಿ ಹೊಲೆದುಕೊಂಡು ಕುಳಿತಿರುವುದು ಯಾಕೆ? ಎಲ್ಲಿದೆ ಆಡಳಿತ ಪಕ್ಷ? ಎಲ್ಲಿದೆ ವಿರೋಧ ಪಕ್ಷ? ಕನ್ನಡಿಗರ ಪಾಲಿಗೆ ಇವೆಲ್ಲ ಸತ್ತೇ ಹೋಗಿವೆಯೇ? ಒಬ್ಬ ಅಮಾಯಕ ಕನ್ನಡಿಗನ ಮೇಲೆ ಸುಳ್ಳು ಕೇಸು ಹಾಕಿದ್ದಾರಲ್ಲ? ಯಾರ ಚಿತಾವಣೆಯಿಂದ ಇದು ನಡೆದಿದೆ? ಸುಳ್ಳು ದೂರು ದಾಖಲಿಸಿಕೊಳ್ಳಿ ಎಂದು ಪೊಲೀಸರಿಗೆ ತಾಕೀತು ಮಾಡಿದ ಶಕ್ತಿಗಳು ಯಾವುವು? ಮರೆಯಲ್ಲಿ ನಿಂತು ಬಾಣ ಬಿಡುವ ಇವರ ಬಗ್ಗೆ ನಿಮಗೇನಾದರೂ ಗೊತ್ತಿದೆಯೇ?
ಇವತ್ತು ಕನ್ನಡಿಗರ ಮೇಲೆ ಹಲ್ಲೆ ನಡೆಸುತ್ತಿರುವ ಶಕ್ತಿಗಳ ಬಗ್ಗೆ ನನಗೆ ತುಂಬಾ ಚೆನ್ನಾಗಿ ಗೊತ್ತಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ನಿರ್ಣಯ ಮಹಾನಗರಪಾಲಿಕೆಯಲ್ಲಿ ನಿರ್ಣಯ ಅಂಗೀಕರಿಸಿದಾಗ ಇವರ ಅಪ್ಪಂದಿರ ಮೂತಿಗೆ ಮಸಿ ಬಳಿದಿದವರು ನಾವು. ಇವರ ರಾಜಕಾರಣವನ್ನು ಹಂತಹಂತವಾಗಿ ತಿಪ್ಪೆಗೆಸೆದು ವಿಧಾನಸೌಧದ ಬಾಗಿಲು ಮುಚ್ಚಿದವರು ನಾವು. ಈಗ ಅವರು ಹತಾಶರಾಗಿದ್ದಾರೆ, ಅದಕ್ಕಾಗಿ ಈ ಅಮಾಯಕರ ಮೇಲೆ ಹಲ್ಲೆ ನಡೆಸುವ ಹೇಡಿತನ ತೋರುತ್ತಿದ್ದಾರೆ.
ನಾವೀಗ ಯಾರ ವಿರುದ್ಧ ಬಡಿದಾಡಬೇಕು ಹೇಳಿ. ನೆರೆಯ ರಾಜ್ಯದ ಚಿತಾವಣೆಯಿಂದ ಕನ್ನಡಿಗರ ಮೇಲೆ ದೌರ್ಜನ್ಯಕ್ಕೆ ಇಳಿಯುವ ದುಷ್ಟ ಶಕ್ತಿಗಳ ವಿರುದ್ಧವೇ? ಅಥವಾ ಇದೆಲ್ಲ ನೋಡಿಕೊಂಡು ಮರಾಠಿ ಓಟ್ ಬ್ಯಾಂಕ್ ಕೈತಪ್ಪುತ್ತದೆಯೆಂಬ ಕಾರಣಕ್ಕೆ ಸ್ವಾಭಿಮಾನ ಮರೆತು ಅಡಗಿ ಕುಳಿತಿರುವ ನಮ್ಮ ಹೇಡಿ ರಾಜಕಾರಣಿಗಳ ವಿರುದ್ಧವೇ? ಇವರು ಬಾಯಿಬಿಟ್ಟು ಮಾತಾಡುವಂತೆ ಮಾಡುವುದು ಕೂಡ ನಮ್ಮ ಕರ್ತವ್ಯವಲ್ಲವೇ?
ನಾನೀಗ ಕೆಪಿಎಸ್ ಸಿ ಯಲ್ಲಿ ಲಕ್ಷಾಂತರ ಕನ್ನಡದ ಮಕ್ಕಳಿಗೆ ಆಗಿರುವ ಅನ್ಯಾಯದ ವಿರುದ್ಧ ಬಡಿದಾಡುತ್ತಿದ್ದೇನೆ. ಆ ಮಕ್ಕಳಿಗೆ ನ್ಯಾಯ ಕೊಡಿಸುವುದಕ್ಕಾಗಿ ನಿರ್ಣಾಯಕ ಹೋರಾಟಕ್ಕೆ ಸಜ್ಜಾಗುತ್ತಿದ್ದೇನೆ.
ಈ ಸಂಘರ್ಷದ ನಡುವೆಯೂ ನನ್ನ ಹೃದಯ ಏಟು ತಿಂದು, ಕೇಸು ಹಾಕಿಸಿಕೊಂಡ ಆ ಅಮಾಯಕ ಜೀವಕ್ಕಾಗಿ ಮಿಡಿಯುತ್ತಿದೆ. ನಾಡಿದ್ದು ಮಂಗಳವಾರವೇ ನಾನು ಬೆಳಗಾವಿಗೆ ಬರುತ್ತಿದ್ದೇನೆ. ಬೆಳಗಾವಿ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಕರವೇ ಕಾರ್ಯಕರ್ತರು, ಅಕ್ಕ ಪಕ್ಕದ ಜಿಲ್ಲೆಗಳ ಮುಖಂಡರೂ ಅಂದು ಬೆಳಗಾವಿಗೆ ಬರುತ್ತಿದ್ದೇವೆ. ನಾನು ಬರುವಾಗ ಸುಮ್ಮನೇ ಬಂದು ಹೋಗುವುದಿಲ್ಲ. ಇಷ್ಟು ಸೂಕ್ಷ್ಮ ನಮ್ಮ ಪೊಲೀಸ್ ಇಲಾಖೆಗೆ ಗೊತ್ತೇ ಇದೆ ಎಂದು ಭಾವಿಸುತ್ತೇನೆ.
ಮಾನ್ಯ ಗೃಹ ಸಚಿವರು ಕೂಡಲೇ ಮಧ್ಯೆ ಪ್ರವೇಶಿಸಿ ಮಹದೇವಪ್ಪ ವಿರುದ್ಧದ ಪ್ರಕರಣ ಹಿಂದಕ್ಕೆ ಪಡೆಯಲಿ. ಇದು ನನ್ನ ಆಗ್ರಹ. ಈ ಸಂಘರ್ಷ ಹೀಗೇ ಮುಂದುವರೆಯಲಿ ಎಂಬುದು ಅವರ ಆಸೆಯಾದರೆ ನಾವೇನೂ ಮಾಡಲು ಸಾಧ್ಯವಿಲ್ಲ. ಕರ್ನಾಟಕದ ಶಾಂತಿ ಕದಡಿದರೆ ಅದಕ್ಕೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ.
- ಟಿ.ಎ.ನಾರಾಯಣಗೌಡ.
ರಾಜ್ಯಾಧ್ಯಕ್ಷರು
ಕರ್ನಾಟಕ ರಕ್ಷಣಾ ವೇದಿಕೆ
ಒಂದು ದಿನದ ಅತಿಥಿಯಾಗಿ
ಕನ್ನಡ ನಾಡಿಗೆ ಬಂದ ಆಂಧ್ರದ
ಉಪ ಮುಖ್ಯಮಂತ್ರಿ @PawanKalyan ಅವರು #ಕುವೆಂಪು ಅವರ ಸಾಲುಗಳನ್ನು ಓದೋ ಮೂಲಕ ಕನ್ನಡ ಕಲಿತಿನಿ ಎನ್ನುತ್ತಾರೆ.
ಅದೇ ಆಂಧ್ರದ ಕೆಲವು ವಲಸಿಗರು ಬದುಕಲು ಇಲ್ಲಿಗೆ ಬಂದು ಹಲವು ವರ್ಷಗಳೇ ಕಳೆದಿದ್ದರೂ ಕನ್ನಡ ಕಲಿಯಲು ನಿರಾಸಕ್ತಿ ತೋರಿಸುತ್ತಿರೋದು ದುರಂತ.!
ಕನ್ನಡ ಕಲಿತು ನಮ್ಮವರಾಗಿ.🙏