@KEA_karnataka ನಮ್ಮ ಮನವಿಗೆ ಸ್ಪಂದಿಸಿ ವಾಣಿಜ್ಯ ಶಾಸ್ತ್ರ ದ ಪ್ರಶ್ನೆ ಪತ್ರಿಕೆ ಯನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಮಾದ್ಯಮ ದಲ್ಲಿ ನೀಡಿದಕ್ಕಾಗಿ ಧನ್ಯವಾದಗಳು ಸರ್ ಇದೆ ರೀತಿ ಮುಂದುವರಿಯಲಿ ನಿಮ್ಮ ಕನ್ನಡ ಅಭಿಮಾನ ಕ್ಕೆ ನಮಸ್ಕಾರಗಳು
@KEA_karnataka@appu_jirnal ವಾಣಿಜ್ಯ ಶಾಸ್ತ್ರ ದ ಪ್ರಶ್ನೆ ಪತ್ರಿಕೆ ಯನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ನೀಡಬೇಕು. ಗ್ರಾಮೀಣ ಪ್ರದೇಶದ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಆಗುವ ಮೋಸವನ್ನು ನಿಲ್ಲಿಸಬೇಕು. ಇಲ್ಲ ವಾದರೆ ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ಮಾಧ್ಯಮ ದ ಅಭ್ಯರ್ಥಿಗಳಿಂದ ಹೋರಾಟ ನಡೆಸಲಾಗುವುದು
ಇವರಿಗೆ,
ಮಾನ್ಯ ಶ್ರೀ ಪ್ರಸನ್ನ H
ವ್ಯವಸ್ಥಾಪಕ ನಿರ್ದೇಶಕರು,
ಕರ್ನಾಟಕ ಪರೀಕ್ಷಾ ಪ್ರಾಧಿಕಾರ @KEA_karnataka
ಬೆಂಗಳೂರು.560012.
ವಿಷಯ: KSET ವಾಣಿಜ್ಯ ವಿಭಾಗದ ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್ನಲ್ಲಿ ಕೆ-2 ರಲ್ಲಿ ಪ್��ಶ್ನೆ ಪತ್ರಿಕೆಯನ್ನು ಸಿದ್ಧಪಡಿಸುವ ಬಗ್ಗೆ.
ಮಾನ್ಯರೇ,
ಮೇಲಿನ ವಿಷಯಕ್ಕೆ ಸಂಬಂಧಿಸಿದಂತೆ, K.SET ಪರೀಕ್ಷೆಯ ಆರಂಭದಿಂದ 2023 ರವರೆಗೆ K.SET ವಾಣಿಜ್ಯ ವಿಭಾಗದ ಪ್ರಶ್ನೆ ಪತ್ರಿಕೆಯನ್ನು ವಾಣಿಜ್ಯ ವಿದ್ಯಾರ್ಥಿಗಳಿಗೆ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ಸಿದ್ಧಪಡಿಸಲಾಗಿತ್ತು. ಈ ಪ್ರಶ್ನೆ ಪತ್ರಿಕೆಯನ್ನು 2024 ರಿಂದ ಇಂಗ್ಲಿಷ್ ಆವೃತ್ತಿಯಲ್ಲಿ ಮಾತ್ರ ತಯಾರಿಸಲಾಗಿರುವುದರಿಂದ, ಕನ್ನಡ ಮಾಧ್ಯಮದ ಗ್ರಾಮೀಣ ಪ್ರದೇಶಗಳ ಅನೇಕ ವಿದ್ಯಾರ್ಥಿಗಳು K.SET ಪರೀಕ್ಷೆಯ (ಅರ್ಹತೆ) ಮೆರಿಟ್ ಪಟ್ಟಿಯಲ್ಲಿ ಹಿಂದುಳಿದಿದ್ದಾರೆ.
ಇದಲ್ಲದೆ, ಇತ್ತೀಚಿನ ದಿನಗಳಲ್ಲಿ, ಕೇಂದ್ರ ಸರ್ಕಾರ ನಡೆಸುವ ಹೆಚ್ಚಿನ ಪರೀಕ್ಷೆಗಳನ್ನು ಕನ್ನಡ ಮಾಧ್ಯಮದಲ್ಲಿ ಅನುಮತಿಸಲಾಗಿದೆ ಮತ್ತು ಕೆ.ಎಸ್.ಇ.ಟಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆಯನ್ನು ��ಂಗ್ಲಿಷ್ ಮತ್ತು ಕನ್ನಡ ಎಂಬ ಎರಡು ಆವೃತ್ತಿಗಳಲ್ಲಿ ತಯಾರಿಸಲಾಗಿದೆ. ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ ಎರಡು (ಭಾಷಾ) ಆವೃತ್ತಿಗಳಲ್ಲಿ ಪ್ರಶ್ನೆ ಪತ್ರಿಕೆಯನ್ನು ಸಿದ್ಧಪಡಿಸಿ ಬರೆಯುವಂತೆ ಗೌರವಾನ್ವಿತ ವಿದ್ಯಾರ್ಥಿಗಳಲ್ಲಿ ವಿನಂತಿಸಲಾಗಿದೆ. @AKSSAofficial
@KEA_karnataka ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ, ಹಾಗೂ ಕನ್ನಡ ಭಾಷೆ ಮಾಡಿರುವ ಅಪಮಾನ ವನ್ನು ಸಧ್ಯದಲ್ಲೇ KEA ಏದುರಿಸಬೇಕಾಗುತ್ತದೆ. ಇದನ್ನು ಬೇಗ ಸರಿಪಡಿಸಿಕೊಳ್ಳಬೇಕು ಎಂದು ವಿನಂತಿಸಿಕೊಳ್ಳುತ್ತೇವೆ..
@KEA_karnataka Kset ಪರೀಕ್ಷೆ ಪ್ರಾರಂಭ ವಾಗಿನಿಂದ 2023 ರ ವರೆಗೆ ವಾಣಿಜ್ಯ ಶಾಸ್ತ್ರ ದ ಪ್ರಶ್ನೆ ಪತ್ರಿಕೆ ಯನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಮಾದ್ಯಮ ದಲ್ಲಿ ಇರುತ್ತಿತ್ತು ಆದರೆ 2024 ರ ನಂತರ ಇಂಗ್ಲಿಷ್ ಮಾಧ್ಯಮ ದಲ್ಲಿ ಕಾರಣವೇನು?
@KEA_karnataka 2023 ರವಗಿನ ಎಲ್ಲ notification ನಲ್ಲಿ ವಾಣಿಜ್ಯ ಶಾಸ್ತ್ರ ಪ್ರಶ್ನೆ ಪತ್ರಿಕೆ ಕನ್ನಡ ಮತ್ತು ಇಂಗ್ಲಿಷ್ ಎರಡೂ ಮಾದ್ಯಮ ದಲ್ಲಿ ಇರುತ್ತಿತ್ತು ಆದರೆ 2024 ರ notification ನಿಂದ ಇಂಗ್ಲಿಷ್ ನಲ್ಲಿ ಮಾತ್ರ ಪ್ರಶ್ನೆ ಪತ್ರಿಕೆ ಬರುವ ಕಾರಣ ಏನು? ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ತುಂಬ ನಷ್ಟ ವಾಗುತ್ತಿದೆ.
@KEA_karnataka ಕೇಂದ್ರ ಲೋಕಸೇವಾ ಆಯೋಗ & ಕೇಂದ್ರ ದ ವಿವಿಧ ಪರೀಕ್ಷೆಗಳನ್ನು ಕನ್ನಡ ದಲ್ಲಿ ನೆಡೆಸುತ್ತಿದ್ದಾರೆ ಆದರೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ದ ಕನ್ನಡ ವಿರೋಧಿ ನಿಲುವು ಒಳ್ಳೆಯ ಬೆಳವಣಿಗೆ ಅಲ್ಲ ಇದನ್ನು ಅದನ್ನು ಆದಷ್ಟು ಬೇಗ ಸರಿಪಡಿಸಿಕೊಳ್ಳಬೇಕು
@KEA_karnataka ವಾಣಿಜ್ಯ ಶಾಸ್ತ್ರ ದ ಪ್ರಶ್ನೆ ಪತ್ರಿಕೆ ಯನ್ನು ಕನ್ನಡ ಮತ್ತು ಇಂಗ್ಲಿಷ್ ಎರಡೂ ಮಾದ್ಯಮ ದಲ್ಲಿ ಕೊಡಬೇಕೆಂದು ಕಳೆದ ವರ್ಷ ಸಾವಿರಾರು ಅಭ್ಯರ್ಥಿಗಳು ಮನವಿ ಪತ್ರ ಸಲ್ಲಿಸಿದರು ಮತ್ತೊಂದು ಸಾರಿ ಮಾತೃ ಭಾಷೆ ಯನ್ನು ಕಡೆಗಣಿಸಿರುವ KEA ವಿರುದ್ಧ ರಾಜ್ಯದಾದ್ಯಂತ ಪ್ರತಿಭಟನೆ ಹಾಗೂ ಹೋರಾಟ ನಡೆಸಲಾಗುವುದು
@KEA_karnataka@CMofKarnataka@drmcsudhakar ಇದನ್ನು ಸರಿಪಡಿಸಿಕೊಂಡು ಕನ್ನಡ ಮಾಧ್ಯಮ ಅಭ್ಯರ್ಥಿ��ಳಿಗೆ ��್ಯಾಯ ಸಿಗುವಂತೆ ಮಾಡಬೇಕು ಕೇಂದ್ರ ಸರ್ಕಾರ ನೇಮಕಾತಿ ಪರೀಕ್ಷೆ ಗಳಲ್ಲಿ ಕನ್ನಡ ಬಳಕೆ ಮಾಡುತ್ತಿರುವಾಗ ನಮ್ಮ ಕರ್ನಾಟಕದಲ್ಲಿ ಕನ್ನಡ ಭಾಷೆ ಗೆ ಅಪಮಾನ ಸರಿ ಅಲ್ಲ
@KEA_karnataka@CMofKarnataka@drmcsudhakar ವಾಣಿಜ್ಯ ಶಾಸ್ತ್ರ ಅಭ್ಯರ್ಥಿಗಳಿಗೆ ಇಂಗ್ಲಿಷ್ ಭಾಷೆ ಮಾತ್ರ ಪ್ರಶ್ನೆ ಪತ್ರಿಕೆ ��ಯಾರಿಸಿ ಕನ್ನಡ ಮಾಧ್ಯಮ ಅಭ್ಯರ್ಥಿಗಳಿಗೆ ಅನ್ಯಾಯ ಮಾಡಲಾಗಿದೆ. ಇದೆ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಕನ್ನಡ ರಕ್ಷಣಾ ವೇದಿಕೆ,ಕನ್ನಡ ಭಾಷೆ ಸಾಹಿತ್ಯಿಗಳು ಕನ್ನಡ ಮಾಧ್ಯಮ ಅಭ್ಯರ್ಥಿಗಳು ಬೃಹತ್ ಪ್ರತಿಭಟನೆ ಮಾಡಬೇಕಾಗುತ್ತದೆ
ಕೆಪಿಎಸ್ ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿ ಮತ್ತೆ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಫೆ.18ರಂದು ಬೆಂಗಳೂರಿನಲ್ಲಿ ದೊಡ್ಡ ಹೋರಾಟವನ್ನು ಹಮ್ಮಿಕೊಂಡಿದೆ. ಅನ್ಯಾಯಕ್ಕೆ ಒಳಗಾದ ಸಾವಿರಾರು ವಿದ್ಯಾರ್ಥಿಗಳು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ. ಹಿಂದೆ ಪ್ರಶ್ನೆ ಪತ್ರಿಕೆಯಲ್ಲಿ ಕನ್ನಡಾನುವಾದದ ಸಮಸ್ಯೆ ಕಂಡುಬಂದಿದ್ದರಿಂದ ಆದ ಅನ್ಯಾಯದ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಚಳವಳಿ ಹಮ್ಮಿಕೊಂಡಿತ್ತು. ನಮ್ಮ ಚಳವಳಿಗೆ ಸ್ಪಂದಿ��ಿ ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮರುಪರೀಕ್ಷೆಗೆ ಆದೇಶಿಸಿದ್ದರು. ಮುಖ್ಯಮಂತ್ರಿಗಳ ತೀರ್ಮಾನವನ್ನು ನಾವೆಲ್ಲ ಒಕ್ಕೊರಲಿನಿಂದ ಅಭಿನಂದಿಸಿದ್ದೆವು.
ಆದರೆ ಮರುಪರೀಕ್ಷೆಯಲ್ಲೂ ಕನ್ನಡಾನುವಾದದ ಸಮಸ್ಯೆ ಉಂಟಾಗಿದೆ. ಹೋರಾಟದ ಸಂದರ್ಭದಲ್ಲಿ ನಾವು ಕನ್ನಡದಲ್ಲೇ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿ ನಂತರ ಅದನ್ನು ಇಂಗ್ಲಿಷ್ ಗೆ ಅನುವಾದಿಸುವಂತೆ ಆಗ್ರಹಿಸಿದ್ದೆವು. ಕರ್ನಾಟಕದ ಆಡಳಿತ ಭಾಷೆ ಕನ್ನಡವಾದ್ದರಿಂದ ಇದೇ ಸಹಜವಾಗಿ ನಡೆಯಬೇಕಿತ್ತು. ಆದರೆ ದುರಂಹಕಾರಿ ಅಧಿಕಾರಿಗಳಿಂದಾಗಿ ಮತ್ತೆ ಇಂಗ್ಲಿಷ್ ನಲ್ಲಿ ಪ್ರಶ್ನೆ ಪತ್ರಿಕೆ ತಯಾರಿಸಿ, ಕನ್ನಡಕ್ಕೆ ತಪ್ಪುತಪ್ಪಾಗಿ ಅನುವಾದಿಸಲಾಗಿದೆ. ಇದರಿಂದಾಗಿ ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ವಂಚನೆ ಎಸಗಲಾಗಿದೆ.
ಈಗ ಫಲಿತಾಂಶದಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ತೀರಾ ಕನಿಷ್ಟ ಪ್ರಮಾಣದಲ್ಲಿ ಉತ್ತೀರ್ಣರಾಗಿದ್ದಾರೆ ಎಂಬ ಮಾಹಿತಿ ಇದೆ. ಇದಕ್ಕೆ ಕೆಟ್ಟದಾಗಿ ಸಿದ್ಧಪಡಿಸಿದ ಕನ್ನಡಾನುವಾದದ ಪ್ರಶ್ನೆ ಪತ್ರಿಕೆಗಳೇ ಕಾರಣ ಎಂದು ಕನ್ನಡ ವಿದ್ಯಾರ್ಥಿಗಳು ಹೇಳುತ್ತಿದ��ದಾರೆ. ಇವರೆಲ್ಲ ಗ್ರಾಮೀಣ ಭಾಗದ ವಿದ್ಯಾರ್ಥಿಗಳು, ಸಾಮಾಜಿಕವಾಗಿ ಹಿಂದುಳಿದ ಜನವರ್ಗಗಳಿಂದ ಬಂದವರು. ಇಂಥವರಿಗೆ ಅನ್ಯಾಯವಾಗುತ್ತಿದ್ದರೂ ಸರ್ಕಾರ ಮೌನವಾಗಿ ಕುಳಿತುಕೊಳ್ಳಲು ಹೇಗೆ ಸಾಧ್ಯ?
ಹಲವಾರು ವಿದ್ಯಾರ್ಥಿಗಳು ಪ್ರತಿನಿತ್ಯ ನನ್ನೊಂದಿಗೆ ಮಾತನಾಡುತ್ತಿದ್ದಾರೆ. ಅವರ ಸಂಕಟಗಳನ್ನು ಹೇಳುತ್ತಿದ್ದಾರೆ. ಅವರ ಭವಿಷ್ಯದ ಬದುಕು ಬೀದಿಗೆ ಬಿದ್ದಂತಾಗಿದೆ. ಎಷ್ಟೋ ವರ್ಷಗಳಿಂದ ಅವರು ಈ ಪರೀಕ್ಷೆಗಾಗಿ ಸಿದ್ಧತೆ ನಡೆಸಿದ್ದರು. ಇದಕ್ಕಾಗಿ ಅವರ ಪೋಷಕರೂ ತ್ಯಾಗ ಮಾಡಿದ್ದಾರೆ. ಈ ಪರೀಕ್ಷೆಯಲ್ಲಿ ಅವರು ಅನುತ್ತೀರ್ಣಗೊಂಡರೆ ಬಹುತೇಕರು ವಯೋಮಿತಿಯ ಕಾರಣಕ್ಕೆ ಮುಂದೆ ಇನ್ನೊಂದು ಪರೀಕ್ಷೆ ಬರೆಯಲು ಸಾಧ್ಯವಿಲ್ಲ. ಯಾರೋ ದುಷ್ಟ ಅಧಿಕಾರಿಗಳು ಮಾಡಿದ ದ್ರೋಹಕ್ಕೆ ಅವರ ಬದುಕು ನರಕವಾಗಿದೆ.
ಪರೀಕ್ಷೆ ಬರೆದವರಿಗೆಲ್ಲ ಕೆಎಎಸ್ ಹುದ್ದೆಯೇನು ಲಭಿಸುವುದಿಲ್ಲ. ಆದರೆ ಕನ್ನಡ ಮಾಧ್ಯಮದಲ್ಲಿ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳನ್ನು ಬೇಕೆಂದೇ ತಪ್ಪುತಪ್ಪಾದ ಪ್ರಶ್ನೆ ಪತ್ರಿಕೆ ಕೊಟ್ಟು ಅಂಕಗಳಿಸಿದಂತೆ ತಡೆಯಲಾಯಿತು ಎಂಬ ಅನ್ಯಾಯ ಪ್ರಜ್ಞೆ ಅವರನ್ನು ಕೊನೆಯವರೆಗೂ ಬಾಧಿಸಲಿದೆ. ಅಧಿಕಾರಿಗಳಾಗುವ ನಮ್ಮ ಆಸೆಗೆ ರಾಜ್ಯ ಸರ್ಕಾರವೇ ತಣ್ಣೀರೆರಚಿತು, ನಮಗೆ ಮೋಸ ಮಾಡಿತು ಎಂದು ಅವರು ಭಾವಿಸುತ್ತಾರೆ. ಇದು ಬೇಕಾಗಿರಲಿಲ್ಲ. ಇದಕ್ಕೆ ನೇರವಾಗಿ ಕೆಪಿಎಸ್ ಸಿ ಮತ್ತು ರಾಜ್ಯ ಸರ್ಕಾರವೇ ಹೊಣೆ. ಇದನ್ನು ಸರಿಪಡಿಸುವ ಜವಾಬ್ದಾರಿಯನ್ನೂ ಸರ್ಕಾರವೇ ಹೊರಬೇಕಿದೆ.
ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಹಿಂದೆ ಮಾಡಿದಂತೆ ಕೂಡಲೇ ಮಧ್ಯೆ ಪ್ರವೇಶಿಸ��� ಕೂಡಲೇ ಫಲಿತಾಂಶವನ್ನು ತಡೆಹಿಡಿಯಬೇಕು, ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಸರಿಪಡಿಸಲು ಪರಿಹಾರ ಸೂತ್ರವನ್ನು ರೂಪಿಸಬೇಕು. ತಪ್ಪಿತಸ್ಥ ಅಧಿಕಾರಿಗಳ ಮೇಲೆ ಮೊಕದ್ದಮೆ ಹೂಡಿ ಜೈಲಿಗಟ್ಟಬೇಕು. ಫೆ. 18ರಂದು ನಡೆಯುವ ಸಾಂಕೇತಿಕ ಪ್ರತಿಭಟನೆಯಲ್ಲೇ ಹತ್ತಾರು ಸಾವಿರ ಮಂದಿ ನೆರೆಯುತ್ತಿದ್ದಾರೆ. ಅನ್ಯಾಯ ಸರಿಪಡಿಸದೇ ಹೋದಲ್ಲಿ ಅದರ ಪರಿಣಾಮ ಗಂಭೀರವಾಗಿರುತ್ತದೆ.
ಪದವಿ ನೆಪ ಮಾಡಿ ಸರಕಾರ ವಾಣಿಜ್ಯ ಪದವೀಧರರ ಶಿಕ್ಷಕ ವೃತ್ತಿಯ ಕನಸು ಕಸಿದುಕೊಳ್ಳುತ್ತಿರುವದು ವಿಷಾದನೀಯ ಶಿಕ್ಷಕ ವೃತ್ತಿಗೆ ಜ್ಞಾನ ಮುಖ್ಯ ಪದವಿ ಮುಖ್ಯವಲ್ಲ ಎಂಬುದನ್ನು ಅರಿತು ಸರಕಾರ ಉಚ್ಛ ನ್ಯಾಯಾಲಯದ ಆದೇಶದಂತೆ ಮುಂದಿನ ದಿನಗಳಲ್ಲಾದರೂ ನಮಗೆ ಅವಕಾಶ ಕೊಡುವದರ ಮೂಲಕ ನ್ಯಾಯಾಲಯದ ಆದೇಶವನ್ನು ಗೌರವಿಸಲಿ
B Edಮಾಡಲು-2015&TETಬರೆಯಲು -2020ರಲ್ಲಿ ಅವಕಾಶ ನೀಡಿದ ರಾಜ್ಯ ಸರ್ಕಾರ ಇಂದು ಈ ಪ್ರಕ್ರಿಯೆಯ ಮುಖ್ಯಘಟ್ಟವಾದ ಶಿಕ್ಷಕರ ನೇಮಕಾತಿಯ CETಗೆ ಬಿಕಾಂ ಪದವೀಧರರನ್ನ ವಂಚಿತರಾಗಿಸಿದ್ದು ಇದಕ್ಕೆ 2022-ಧಾರವಾಡ ಹೈಕೋರ್ಟ್ ಪೀಠವು ಅವಕಾಶ ನೀಡಲು ಆದೇಶಿಸಿದರೂ ಅದನ್ನ ಕಡೆಗಣಿಸಿದ ಸರ್ಕಾರದ ವಿರುದ್ಧ ಮತ್ತೊಮ್ಮೆ ಕೋರ್ಟ್ ಮೊರೆಹೋಗಲು ಸಿದ್ಧರಿದ್ದೇವೆ