ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ನಿರಂತರ ಕೊಲೆ, ಸುಲಿಗೆ, ದರೋಡೆ, ಅತ್ಯಾಚಾರ ಪ್ರಕರಣಗಳು ನಿರಂತರ ಘಟಿಸುತ್ತಿವೆ. ಜನಸಾಮಾನ್ಯರಿಗೆ ಸುರಕ್ಷತೆ ಒದಗಿಸಲಾಗದ ಸ್ಥಿತಿ ನಿರ್ಮಾಣವಾಗಿದ್ದು ಕಾನೂನು ಸುವ್ಯವಸ್ಥೆ ಸಂಪೂರ್ಣ ನೆಲಕಚ್ಚಿದೆ, ಇದರ ನಡುವೆ ಕೆಲವು ಕೆಳಹಂತದ ಪೊಲೀಸ್ ಅಧಿಕಾರಿಗಳು ಸಾಮಾನ್ಯರು ಹಾಗೂ ಜವಾಬ್ದಾರಿಯುತ ನಾಗರಿಕರ ಮೇಲೆ ಪೊಲೀಸ್ ದಬ್ಬಾಳಿಕೆ ನಡೆಸಿ ದೈಹಿಕ ಹಲ್ಲೆಗೂ ಮುಂದಾಗುತ್ತಿದ್ದಾರೆ.
ಚಿತ್ರದುರ್ಗದಲ್ಲಿ ನಮ್ಮ ಪಕ್ಷದ ಮಧುಗಿರಿ (ಸಂಘಟನಾತ್ಮಕ ಜಿಲ್ಲೆ) ಜಿಲ್ಲಾಧ್ಯಕ್ಷರಾದ ಹನುಮಂತೇಗೌಡ ಅವರ ಮೇಲೆ ಪಿಎಸ್ಐ ಗಾದಿಲಿಂಗಪ್ಪ ಹಲ್ಲೆ ನಡೆಸಿ ಗೂಂಡಾಗಿರಿ ಪ್ರದರ್ಶಿಸಿದ್ದು ಇದನ್ನು @BJP4Karnataka ಅತ್ಯುಗ್ರವಾಗಿ ಖಂಡಿಸುತ್ತದೆ.
ನಾಗರಿಕ ಸಮಾಜದಲ್ಲಿ ಶಾಂತಿ ಸಂರಕ್ಷಿಸಲಾಗದ ಅಧಿಕಾರಿಗಳು ಮಧ್ಯರಾತ್ರಿಯಲ್ಲಿ ತಮ್ಮ ಪೊಲೀಸ್ ರೌದ್ರಾವತಾರ ಪ್ರದರ್ಶಿಸಲು ಹೊರಟಿದ್ದಾರೆ. ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸುವ ಮುನ್ನ ಅವರ ಸಾಮಾಜಿಕ ಸ್ಥಾನಮಾನವನ್ನೂ ಲೆಕ್ಕಿಸದೆ ಗೂಂಡಾಗಿರಿ ಪ್ರದರ್ಶಿಸುವುದು ಪೋಲಿಸ್ ಇಲಾಖೆಯ ದಕ್ಷತೆಯ ಘನತೆಯನ್ನು ಕಳೆದಂತೆ.
ಕಾಂಗ್ರೆಸ್ ಪ್ರಭಾವಿಗಳಿಂದ ಆಯಾ ಕಟ್ಟಿನ ಸ್ಥಾನದಲ್ಲಿ ಕುಳಿತುಕೊಂಡಿರುವ ಕೆಲವು ಪೊಲೀಸ್ ಅಧಿಕಾರಿಗಳು ತಮಗೆ ಯಾರೂ ಏನೂ ಮಾಡಲಾಗದು ಎಂಬ ಮನಸ್ಥಿತಿಯನ್ನು ಮೈಗೂಡಿಸಿಕೊಂಡಿದ್ದು ಎಲ್ಲೆಂದರಲ್ಲಿ ತಮ್ಮ ದರ್ಪ ಪ್ರದರ್ಶಿಸುತ್ತಿದ್ದಾರೆ. ಚಿತ್ರದುರ್ಗದ ಘಟನೆಯ ಹಿಂದೆ ರಾಜಕಾರಣದ ಪ್ರಚೋದನೆ ಇರುವ ಸಾಧ್ಯತೆಯನ್ನು ಅಲ್ಲಗಳೆಯಲಾಗದು, ಅಧಿಕಾರಸ್ತ ರಾಜಕಾರಣಿಗಳ ಕೈಗೊಂಬೆಯಂತೆ ವರ್ತಿಸುತ್ತಿರುವ ಪೊಲೀಸರು ಇಲಾಖೆಯ ಗೌರವ ಕಳೆಯುತ್ತಿದ್ದಾರೆ.
ಚಿತ್ರದುರ್ಗದ ಪಿಎಸ್ಐ ಗಾದಿಲಿಂಗಪ್ಪ ಅವರನ್ನು ಈ ಕೂಡಲೇ ಪೊಲೀಸ್ ಮಹಾನಿರ್ದೇಶಕರು ಅಮಾನತ್ತಿನಲ್ಲಿಡದಿದ್ದರೆ ಬಿಜೆಪಿಯು ನಾಗರಿಕರೊಡಗೂಡಿ ಹೋರಾಟ ನಡೆಸುವುದು ಅನಿವಾರ್ಯವಾದೀತು ಎಂದು ಎಚ್ಚರಿಸುತ್ತೇನೆ.
#CongressFailsKarnataka
“ಸಂತ ನಡೆಯ ಅಜಾತ ಶತ್ರು” ಶ್ರೇಷ್ಠ ಸಂಸದೀಯ ಪಟು, ಧೀಮಂತ ಆಡಳಿತಗಾರ ಮಾಜಿ ಪ್ರಧಾನಮಂತ್ರಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಜಯಂತಿಯಂದು ಸಮಸ್ತ ಜನತೆಗೆ 'ಸುಶಾಸನ ದಿನ'ದ ಶುಭಕಾಮನೆಗಳು. ಸಶಕ್ತ ರಾಷ್ಟ್ರನಿರ್ಮಾಣದಲ್ಲಿ ಮತ್ತು ಅಭಿವೃದ್ಧಿಯ ಹಾದಿಯಲ್ಲಿ ಅಟಲ್ ಜೀ ಅವರ ಸಾಧನೆಗಳನ್ನು ಭಾರತ ಸದಾ ಸ್ಮರಿಸುತ್ತದೆ.
#AtalJanmShatabdi
#GoodGovernanceDay
ಮುಖ್ಯಮಂತ್ರಿ @siddaramaiah ನವರು ಈ ಹಿಂದಿನಿಂದಲೂ ತಮ್ಮ ಮೇಲಿನ ಆರೋಪಗಳು ಸಾಬೀತಾಗಬಹುದು ಎನ್ನುವ ಖಾತ್ರಿಯಿಂದ ತಮ್ಮ ವಿರುದ್ಧ ತನಿಖೆ ನಡೆಯಬಾರದು ಎಂದು ನಿರಂತರ ಪ್ರಯತ್ನಿಸುತ್ತಿರುವುದರ ಹಿನ್ನೆಲೆಯಲ್ಲಿ ತಮ್ಮ ಅಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳುತ್ತಲೇ ಬಂದಿದ್ದಾರೆ.
ಸ್ವತಃ ಮುಖ್ಯಮಂತ್ರಿಗಳು ಲೋಕಾಯುಕ್ತದ ಮೇಲೆ ಪ್ರಭಾವ ಬೀರಿರುವುದು ತನಿಖೆಯ ಹಾದಿಯನ್ನು ಗಮನಿಸಿದವರಿಗೆ ಸ್ಪಷ್ಟವಾಗುತ್ತದೆ. ಈ ಹಿನ್ನೆಲೆಯಲ್ಲಿ ಉಚ್ಛ ನ್ಯಾಯಾಲಯದಲ್ಲಿ ಸಿಬಿಐ ತನಿಖೆಗೆ ಕೋರಿದ್ದ ಅರ್ಜಿಯ ವಿಚಾರಣೆ ಅಂತಿಮ ಘಟ್ಟ ತಲುಪಿರುವುದರ ಹಿನ್ನೆಲೆಯಲ್ಲಿ ಸಂಪೂರ್ಣ ವಿಚಲಿತಲಾಗಿರುವ ಮುಖ್ಯಮಂತ್ರಿಗಳು ಪೊಲೀಸ್ ಅಧಿಕಾರಿಗಳನ್ನು ಬಿಟ್ಟು ದೂರುದಾರ ಸ್ನೇಹಮಯಿ ಕೃಷ್ಣ ಅವರ ಬಾಯಿ ಮುಚ್ಚಿಸಲು ಅಧಿಕಾರಿಗಳ ಮೂಲಕ ಪೊಲೀಸ್ ಅಧಿಕಾರ ದುರ್ಬಳಕೆ ಮಾಡಿಕೊಂಡು ಸುಳ್ಳು ದೂರು ದಾಖಲಿಸಿಕೊಂಡು ಸ್ನೇಹಮಯಿ ಕೃಷ್ಣ ಅವರನ್ನು ಬಂಧಿಸುವ ಪಿತೂರಿಗೆ ಉಚ್ಛ ನ್ಯಾಯಾಲಯ ತಡೆಯಾಜ್ಞೆ ನೀಡಿರುವುದು ಸ್ವಾಗತಾರ್ಹ ಬೆಳವಣಿಗೆಯಾಗಿದೆ.
ಅರ್ಜಿದಾರ ಸ್ನೇಹಮಯಿ ಕೃಷ್ಣ ಅವರು ಹೇಳಿಕೊಂಡಿರುವಂತೆ ತಮ್ಮ ಮೇಲೆ ಆಮಿಷ, ಒತ್ತಡ ಹೇರಲು ವಿಫಲರಾಗಿರುವ @INCKarnataka ಸರ್ಕಾರ ಪೊಲೀಸ್ ದಂಡದಿಂದ ಬಾಯಿ ಮುಚ್ಚಿಸುವ ಅಡ್ಡದಾರಿ ಹಿಡಿದಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಈ ಕೂಡಲೇ ಮುಖ್ಯಮಂತ್ರಿಗಳ ತಾಳಕ್ಕೆ ತಕ್ಕಂತೆ ಕುಣಿಯುತ್ತಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ಗೌರವಾನ್ವಿತ ರಾಜ್ಯಪಾಲರನ್ನು @BJP4Karnataka ಒತ್ತಾಯಿಸುತ್ತದೆ.
#CongressFailsKarnataka