Social Worker, Actor,Youth & Peta Awardee,Loves Music,World Peace .working for Youth & Women empowerment.ExMLA, Ex Corporator exPresident,OBC Morcha,Ka.Grahaka
ರಾಜ್ಯದಲ್ಲಿ ಮತಪಟ್ಟಿಯಿಂದ 50 ಲಕ್ಷ ಮತದಾರರನ್ನು ಡಿಲೀಟ್ ಮಾಡಿಸಲು ಷಡ್ಯಂತ್ರ ನಡೆಸಲಾಗುತ್ತಿದ್ದು, ಷಡ್ಯಂತ್ರಕಾರರ ವಿರುದ್ಧ ಚುನಾವಣಾ ಆಯೋಗ ಪ್ರಕರಣ ದಾಖಲಿಸಬೇಕು.
SIR ಅಕ್ರಮ, ಮತದಾರರ ಹೆಸರು ಕೈಬಿಟ್ಟಿರುವುದು ಹಾಗೂ ಮತಗಳ್ಳತನ ಕುರಿತ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪ್ರಮುಖಾಂಶಗಳು.
#SIR | #VoteChori
ಇಂದು ವಿಶ್ವವಿಖ್ಯಾತ ಮೈಸೂರು ದಸರಾಗೆ ಆಗಮಿಸುವಂತೆ ಸಚಿವರಾದ ಶ್ರೀ @Dr_Yathindra_S ಅವರ ನೇತೃತ್ವದಲ್ಲಿ ಜಿಲ್ಲಾಡಳಿತದ ವತಿಯಿಂದ ಅಧಿಕೃತ ಆಹ್ವಾನ ಪತ್ರಿಕೆ ನೀಡಿ ಆತ್ಮೀಯವಾಗಿ ನನ್ನನ್ನು ಸ್ವಾಗತಿಸಿದರು.
ನಾಡಹಬ್ಬ ಮೈಸೂರು ದಸರಾ ನಮ್ಮ ನಾಡಿನ ಶ್ರೀಮಂತ ಸಂಸ್ಕೃತಿ, ಪರಂಪರೆ, ಕಲೆ, ಸಾಹಿತ್ಯ ಹಾಗೂ ಜನಪದ ವೈಭವವನ್ನು ಇಡೀ ಜಗತ್ತಿಗೆ ಪರಿಚಯಿಸುವ ಹೆಮ್ಮೆಯ ಸಾಂಸ್ಕೃತಿಕ ಸಂಭ್ರಮವಾಗಿದೆ. ಈ ಬಾರಿಯೂ ನಮ್ಮ ದಸರಾವನ್ನು ಎಲ್ಲರೂ ಸೇರಿ ಯಶಸ್ವಿಗೊಳಿಸೋಣ.
ಈ ವೇಳೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ನಗರ ಪೊಲೀಸ್ ಕಮಿಷನರ್ ಶ್ರೀಮತಿ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಎಒ ಶ್ರೀ ಎಸ್. ಯುಕೇಶ್ ಕುಮಾರ್ ಹಾಗೂ ಅಪರ ಜಿಲ್ಲಾಧಿಕಾರಿಗಳಾದ ಶ್ರೀಮತಿ ಆರ್. ಐಶ್ವರ್ಯ ಅವರು ಉಪಸ್ಥಿತರಿದ್ದರು.
ಇಂದು ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ, ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಿದೆ. ಇದೇ ಸಂದರ್ಭದಲ್ಲಿ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿದೆ.
“ಎಲ್ಲರೂ ಸಿಂಹಾಸನವನ್ನೇರಿ ಮಹಾರಾಜರಾದರೆ ಇವರು ಸಿಂಹಾಸನದಿಂದ ಇಳಿದು ಮಹಾರಾಜ ಎನಿಸಿಕೊಂಡಿದ್ದಾರೆ” ರಾಷ್ಟ್ರಕವಿ ಕುವೆಂಪು ಅವರ ಈ ಮಾತಿಗೆ ಅನ್ವರ್ಥರಾಗಿದ್ದವರು ಮೈಸೂರು ಸಂಸ್ಥಾನದ ಕೊನೆಯ ಅರಸರಾದ ರಾಜಯೋಗಿ ಶ್ರೀ ಜಯಚಾಮರಾಜೇಂದ್ರ ಒಡೆಯರ್ ಅವರು. ತಮ್ಮ ಸಮಾಜಮುಖಿ ಚಿಂತನೆ ಹಾಗೂ ಜನಪರ ಕಾರ್ಯಗಳ ಮೂಲಕವೇ ಜನರ ಹೃದಯದಲ್ಲಿ ಶಾಶ್ವತ ಸ್ಥಾನ ಪಡೆದ ಅವರು, ಪ್ರಜಾಪ್ರಭುತ್ವದ ಆಶಯಗಳಿಗೆ ಗೌರವಿಸಿದ ಆದರ್ಶ ವ್ಯಕ್ತಿ. ಶಿಕ್ಷಣ, ಕ್ರೀಡೆ, ಸಾಹಿತ್ಯ ಮತ್ತು ಕಲಾ ಕ್ಷೇತ್ರಗಳು ಸೇರಿದಂತೆ ನಾಡಿನ ಸರ್ವತೋಮುಖ ಅಭಿವೃದ್ಧಿಗೆ ಅವರು ನೀಡಿದ ಅನನ್ಯ ಕೊಡುಗೆಗಳನ್ನು ಅವರ ಪುಣ್ಯಸ್ಮರಣೆಯ ಈ ಸಂದರ್ಭದಲ್ಲಿ ಗೌರವಪೂರ್ವಕವಾಗಿ ಸ್ಮರಿಸೋಣ.
ಕನ್ನಡ ಚಲನಚಿತ್ರ ರಂಗದ ಮೇರು ನಟ, ಅಭಿಮಾನಿಗಳ ಸಾಹಸ ಸಿಂಹ, ಅಭಿನಯ ಭಾರ್ಗವ ಡಾ. ವಿಷ್ಣುವರ್ಧನ್ ಅವರ ಜನ್ಮದಿನದಂದು ಗೌರವಪೂರ್ವಕ ನಮನಗಳು.
ವಿಶಿಷ್ಟ ಪಾತ್ರಗಳ ಮೂಲಕ ದಶಕಗಳ ಕಾಲ ಜನರನ್ನು ರಂಜಿಸಿದ ಅವರು, ತಮ್ಮ ವೃತ್ತಿಯ ಮೇಲಿಟ್ಟಿದ್ದ ಶ್ರದ್ಧೆ, ಸಮಯಪ್ರಜ್ಞೆ ಹಾಗೂ ಶಿಸ್ತಿನ ಬದುಕು ಇಂದಿಗೂ ಎಲ್ಲರಿಗೂ ಸ್ಫೂರ್ತಿದಾಯಕವಾಗಿದೆ.
ನಾಡಿನ ಸಮಸ್ತ ಜನತೆಗೆ ಗೌರಿ - ಗಣೇಶ ಹಬ್ಬದ ಹಾರ್ದಿಕ ಶುಭಾಶಯಗಳು.
ವಿಘ್ನನಿವಾರಕ ಗಣಪತಿಯು ನಿಮ್ಮೆಲ್ಲರ ಬಾಳಿನ ಕಷ್ಟ ಕಾರ್ಪಣ್ಯಗಳನ್ನು ದೂರಮಾಡಿ, ಸುಖ - ಶಾಂತಿ - ನೆಮ್ಮದಿಯು ನೆಲೆಸುವಂತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸುತ್ತೇನೆ.
ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸುವ ಜೊತೆಗೆ ಪರಿಸರ ಕಾಳಜಿಯನ್ನು ಮರೆಯದಿರೋಣ. ಮತ್ತೊಮ್ಮೆ ತಮ್ಮೆಲ್ಲರಿಗೂ ಗೌರಿ ಗಣೇಶ ಹಬ್ಬದ ಶುಭಾಶಯಗಳು.
ಅಗಜಾನನ ಪದ್ಮಾರ್ಕಂ ಗಜಾನನ ಮಹಾರ್ನಿಶಂ
ಅನೇಕದಂತಂ ಭಕ್ತಾನಾಂ ಏಕದಂತಂ ಉಪಾಸ್ಮಹೆಯ್
ಕನಕಪುರ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ಪ್ರತಿಷ್ಠಾಪಿಸಿದ್ದ ಶ್ರೀ ಗಣೇಶನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ ನಾಡಿನ ಒಳಿತಿಗಾಗಿ ಪ್ರಾರ್ಥಿಸಿದೆ.
ನಾಡಿನ ಜನರ ಬದುಕಿನಲ್ಲಿರುವ ಎಲ್ಲಾ ವಿಘ್ನಗಳನ್ನು ದೂರವಾಗಲಿ, ಪ್ರತಿಯೊಂದು ಕುಟುಂಬಕ್ಕೂ ಸುಖ, ಶಾಂತಿ, ಸಂತಸ ಹಾಗೂ ಸಮೃದ್ಧಿಯನ್ನು ಕರುಣಿಸಲಿ. ನಮ್ಮ ನಾಡು ಇನ್ನಷ್ಟು ಸಮೃದ್ಧಿ ಪಥದಲ್ಲಿ ಮುನ್ನಡೆಯಲಿ. ಪ್ರಥಮ ಪೂಜಿತ ಗಣಪತಿಯ ಕೃಪೆಯು ಪ್ರತಿಯೊಬ್ಬರ ಮೇಲಿರಲಿ ಎಂದು ಅಪೇಕ್ಷಿಸುತ್ತೇನೆ.
ಜಿಬಿಎ ಕೌನ್ಸಿಲ್ ಸಭಾಂಗಣದಲ್ಲಿ ಇಂದು ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ 2ನೇ ಸಭೆಯಲ್ಲಿ ಸಚಿವರಾದ ಶ್ರೀ ಕೃಷ್ಣ ಬೈರೇಗೌಡ ಅವರೊಂದಿಗೆ ಭಾಗವಹಿಸಿದೆನು.
ಸಭೆಯಲ್ಲಿ ಸಚಿವರಾದ ಶ್ರೀ ಕೆ. ಜೆ. ಜಾರ್ಜ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಜಿಬಿಎ ಆಯುಕ್ತರಾದ ಶ್ರೀ ಎಂ. ಮಹೇಶ್ವರ್ ರಾವ್ ಅವರು ಸೇರಿದಂತೆ ಶಾಸಕರು ಹಾಗೂ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಅನ್ನದಾತರ ಕಣ್ಣೀರೊರೆಸಲು ಬದ್ಧ.
ಬಾಗಲಕೋಟೆ ಜಿಲ್ಲೆಯಲ್ಲಿ ಬರ ಪರಿಸ್ಥಿತಿಯ ವಾಸ್ತವ ಸ್ಥಿತಿಯನ್ನು ಪರಿಶೀಲಿಸಿದ ದೃಶ್ಯಗಳು.
ನಿಮ್ಮ ಕಷ್ಟಕ್ಕೆ ನಮ್ಮ ಸರ್ಕಾರ ಸದಾ ಸ್ಪಂದಿಸಲಿದೆ, ನಿಮ್ಮ ಬೆನ್ನಿಗೆ ನಿಲ್ಲಲಿದೆ.
ವಿದೇಶಿ ಶಿಕ್ಷಣದ ಕನಸು ನನಸಾಗಿಸಲು ಸರ್ಕಾರದ ಹೆಜ್ಜೆ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಮತ್ತು ಕರ್ನಾಟಕ ವೃತ್ತಿ ತರಬೇತಿ ಹಾಗೂ ಕೌಶಲ್ಯಾಭಿವೃದ್ಧಿ ನಿಗಮದ ವತಿಯಿಂದ ಹಮ್ಮಿಕೊಂಡಿದ್ದ ‘ವಿದೇಶದಲ್ಲಿ ಅಧ್ಯಯನ - 2026’ ಕಾರ್ಯಕ್ರಮವನ್ನು ಉದ್ಘಾಟಿಸಿ, ಭಾಗವಹಿಸಿದೆ.
ರಾಜ್ಯದಲ್ಲಿ ವ್ಯಾಸಂಗ ಮಾಡುತ್ತಿರುವ ಹಾಗೂ ವ್ಯಾಸಂಗ ಪೂರ್ಣಗೊಳಿಸಿರುವ ವಿದ್ಯಾರ್ಥಿಗಳಿಗೆ ವಿದೇಶಗಳ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ಪಡೆಯುವ ಅವಕಾಶಗಳ ಕುರಿತು ಮಾರ್ಗದರ್ಶನ ಹಾಗೂ ಅಗತ್ಯ ಮಾಹಿತಿಯನ್ನು ಒದಗಿಸುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ. ಈ ಸಂದರ್ಭದಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದ್ದ ವಿದ್ಯಾರ್ಥಿಗಳು, ಪೋಷಕರು ಹಾಗೂ ವಿವಿಧ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಿದೆ.
ಈ ಕಾರ್ಯಕ್ರಮದಲ್ಲಿ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್, ಆಸ್ಟ್ರೇಲಿಯಾದ ಕಾನ್ಸಲೇಟ್ ಜನರಲ್ ಸ್ಟೀವೆನ್ ಕನೋಲಿ, ಕ್ವೀನ್ಸ್ಲ್ಯಾಂಡ್ ವಿಶ್ವವಿದ್ಯಾಲಯದ ನಿರ್ದೇಶಕರಾದ ಜೋಗ್ವಾನ್ ಕ್ಲೈನ್, ಕರ್ನಾಟಕ ವೃತ್ತಿ ತರಬೇತಿ ಮತ್ತು ಕೌಶಲ್ಯಾಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಿವಕಾಂತಮ್ಮ (ಕಾಂತಾ) ನಾಯಕ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
Taking Karnataka’s Dreams to the World
For a young person, the dream of studying at a world-class university is a dream of a better future. Our responsibility is to make that dream a real opportunity.
At the ‘Study Abroad – 2026’ programme in Bengaluru, I interacted with students, parents and representatives of leading universities and discussed the opportunities available for higher education abroad.
Through initiatives like these, our Government is working to ensure that our students have the right guidance, the right information and the right opportunities to compete and succeed on the global stage.
Karnataka’s youth have the talent to compete with the best in the world. Our Government will continue to create pathways for them to do so.
Dr. Sharan Prakash Patil, Minister for Medical Education and Skill Development, Entrepreneurship & Livelihood; Steven Connolly, Australian Consul General; Jogvan Klein, Director, Queensland University; and Kantha Naik, Chairperson, Karnataka Vocational Training & Skill Development Corporation were present.
ಸಮಾಜದ ಭವಿಷ್ಯವನ್ನು ರೂಪಿಸುವ ರೂವಾರಿಗಳಾದ ನಾಡಿನ ಸಮಸ್ತ ಶಿಕ್ಷಕ ವೃಂದಕ್ಕೆ ಶಿಕ್ಷಕರ ದಿನಾಚರಣೆಯ ಹಾರ್ದಿಕ ಶುಭಾಶಯಗಳು.
ಅಜ್ಞಾನದ ಅಂಧಕಾರವನ್ನು ಕಳೆದು ಜ್ಞಾನದ ಜ್ಯೋತಿಯನ್ನು ಬೆಳಗುವ ನಿಮ್ಮ ನಿಸ್ವಾರ್ಥ ಸೇವೆಗೆ ಹಾಗೂ ಶಿಕ್ಷಣವೇ ರಾಷ್ಟ್ರದ ಪ್ರಗತಿಗೆ ಬುನಾದಿ ಎಂದು ನಂಬಿದ್ದ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಆದರ್ಶಗಳಿಗೆ ನನ್ನ ಅನಂತ ನಮನಗಳು. ಸುಭದ್ರ ಹಾಗೂ ಸುಶಿಕ್ಷಿತ ಸಮಾಜ ನಿರ್ಮಾಣಕ್ಕಾಗಿ ದುಡಿಯುತ್ತಿರುವ ಪ್ರತಿಯೊಬ್ಬ ಗುರುವಿಗೂ ನಾವೆಲ್ಲರೂ ಸದಾ ಗೌರವ ಸಲ್ಲಿಸೋಣ.