ಇಂದು ವನಮಾರಪಳ್ಳಿಯಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ 56 ಲಕ್ಷ ರೂ. ವೆಚ್ಚದಲ್ಲಿ ಸಿ.ಸಿ.ರಸ್ತೆಯ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ವೇಳೆ ವಿದ್ಯಾರ್ಥಿಗಳೊಂದಿಗೆ ಶೈಕ್ಷಣಿಕವಾಗಿ ಸಂವಾದ ನಡೆಸಲಾಯಿತು.
ಇಂದು ಔರಾದ್ ತಾಲ್ಲೂಕಿನ ಅನೇಕ ಗ್ರಾಮಗಳಲ್ಲಿ ಹಲವು ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಾಯಿತು.ಎಲ್ಲಾ ಕಾಮಗಾರಿಗಳನ್ನು ಶೀಘ್ರ ಪ್ರಾರಂಭ ಮಾಡಬೇಕು ಮತ್ತು ಗುಣಮಟ್ಟ ರೀತಿಯಲ್ಲಿ ಕೆಲಸ ಮಾಡಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಯಿತು.
ಇಂದು ಔರಾದ್ ತಾಲ್ಲೂಕಿನ ವಡಗಾಂವ ಕ್ಷೇತ್ರದ ಬೇಲೂರು ಗ್ರಾಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆಗೆ ಸುಮಾರು 9 ಲಕ್ಷ ರೂ. ವೆಚ್ಚದಲ್ಲಿ ಪೈಪ್ ಲೈನ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಸಾರ್ವಜನಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
ಉದ್ಭವಲಿಂಗ ಶ್ರೀ ಅಮರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಆಶೀರ್ವಾದ ಪಡೆಯಲಾಯಿತು. ಈ ಸಂದರ್ಭದಲ್ಲಿ ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.
ನಮ್ಮ ಔರಾದ್ ತಾಲ್ಲೂಕಿನ ಠಾಣಾ ಖುಶನೂರ ಕ್ಷೇತ್ರದ ತೊರಣಾ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ 15 ಲಕ್ಷ ರೂ. ಮೌಲ್ಯದ ಅನುದಾನ ಬಿಡುಗಡೆ ಮಾಡಿದ್ದು ಕಾಮಗಾರಿಯ ಪೂಜೆ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.
ಔರಾದ್ ತಾಲ್ಲೂಕಿನ ಸಂತಪೂರ ಗ್ರಾಮದ ಸರ್ಕಾರಿ ಆಸ್ಪತ್ರೆಯ ಕಟ್ಟಡ ನಿರ್ಮಾಣಕ್ಕೆ ಸುಮಾರು 40 ಲಕ್ಷ ರೂ ವೆಚ್ಚದ ಕಾಮಗಾರಿಗೆ ಚಾಲನೆ ನೀಡಿದೆ. ಅತಿ ಶೀಘ್ರದಲ್ಲಿ ಪ್ರಾರಂಭ ಮಾಡಿ, ಉತ್ತಮ ಗುಣಮಟ್ಟ ಕಾಯ್ದುಕೊಳ್ಳಲು ಸೂಚಿಸಿದೆ.
ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಪಶುಗಳ ಚಿಕಿತ್ಸೆ ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಿ, ಸ್ಥಳದಲ್ಲಿದ್ದ ಪಶುಗಳ ಹೈನುಗಾರಿಕೆ ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ನೆರವು ನೀಡಲು ಸಿದ್ಧ ಎಂದು ಭರವಸೆ ನೀಡಯಾಯಿತು.
ಇಂದು ಔರಾದ್ ತಾಲ್ಲೂಕಿನ ಹೆಡಗಾಪುರ ಗ್ರಾಮದ ಪಶು ಚಿಕಿತ್ಸಾ ಕೇಂದ್ರಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಲಾಯಿತು. ಇದೆ ಸಂದರ್ಭದಲ್ಲಿ ಅಲ್ಲಿನ ಪಶುಗಳ ಆರೋಗ್ಯದ ದೃಷ್ಟಿಯಿಂದ ಬೇಕಾಗುವ ಮೂಲ ಸೌಲಭ್ಯಗಳನ್ನು ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆಯಲಾಯಿತು.
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ ಎಸ್ ಯಡಿಯೂರಪ್ಪನವರ ಅಧ್ಯಕ್ಷತೆಯಲ್ಲಿ ಇಂದು ಪಶುಸಂಗೋಪನೆ ಹಜ್ ಮತ್ತು ವಕ್ಫ್ ಇಲಾಖೆಗಳ ಬಜೆಟ್ ಪೂರ್ವಭಾವಿ ಸಭೆ ನಡೆಸಲಾಯಿತು. ನಮ್ಮ ಇಲಾಖೆಗಳ ಬಜೆಟ್ ಕುರಿತು ಸಮಗ್ರವಾಗಿ ಚರ್ಚೆ ನಡೆಸಲಾಯಿತು.
ಇಂದು ವಿಧಾನಸೌಧದಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್ ಯಡಿಯೂರಪ್ಪ ಅವರೊಂದಿಗೆ ರೈತ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ರೈತ ಮುಖಂಡರುಗಳೊಂದಿಗೆ 2020-21ನೇ ಸಾಲಿನ ಆಯವ್ಯಯ ಕುರಿತಾದ ಪೂರ್ವಭಾವಿ ಚರ್ಚೆ ನಡೆಸಲಾಯಿತು. ಈ ಸಂದರ್ಭದಲ್ಲಿ ಸಚಿವರು, ಅಧಿಕಾರಿಗಳು ಹಾಗೂ ವಿವಿಧ ಸಂಘಸಂಸ್ಥೆಗಳ ಪ್ರಮುಖರು ಉಪಸ್ಥಿತರಿದ್ದರು.
ಇಂದು ಘಮಸುಬಾಯಿ ತಾಂಡಾದಲ್ಲಿ ಜಾತ್ರಾ ವಿಶೇಷವಾಗಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿಯನ್ನು ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಲೋಕಸಭಾ ಸದಸ್ಯರಾದ ಭಗವಂತ ಖೂಬಾ ರವರು ಹಾಗೂ ಇತರ ಮುಖಂಡರು ಉಪಸ್ಥಿತರಿದ್ದರು.
ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ ಭಜನಾ ಮಂಡಳಿಯಿಂದ ಹಮ್ಮಿಕೊಂಡ ಭವ್ಯ ಮೆರವಣಿಗೆಯಲ್ಲಿ ಭಾಗವಹಿಸಿ ನಂತರ ದೇವಿಯ ಆಶಿರ್ವಾದ ಪಡೆದು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದೆ.ಈ ಸಂದರ್ಭದಲ್ಲಿ ಸಾವಿರಾರು ಜನ ಮಾತೆಯರು ಕಳಸ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದು ಬಹಳ ವಿಶೇಷವಾಗಿತ್ತು. 2/2
ಔರಾದ್(ಬಾ) ತಾಲೂಕಿನ ಘಮಸುಬಾಯಿ ತಾಂಡಾದಲ್ಲಿ ಶ್ರೀ ಪ್ರಭು ಎಂಟರ್ಪ್ರೈಸಸ್ ಆಶ್ರಯದಲ್ಲಿ ಶ್ರೀ ಸಂತ ಸೇವಾಲಾಲ್ ಮಹಾರಾಜರ ದಿವ್ಯ ಸಾನ್ನಿಧ್ಯದಲ್ಲಿ ಇಚ್ಛಾಪೂರತಿ ಶ್ರೀ ಮಾತಾ ಜಗದಂಬಾರವರ 10ನೇ ಜಾತ್ರಾ ಮಹೋತ್ಸವ ಹಾಗೂ ನಮ್ಮೂರ ಜಾನಪದ ಜಾತ್ರೆ ಮತ್ತು ಭಜನಾ ಮೇಳದ ಕಾರ್ಯಕ್ರಮಕ್ಕೆ ಚಾಲನೆ ನೀಡಿ 1/2