ಜಿಲ್ಲಾ ಸಶಸ್ತ್ರ ಪಡೆ ಕೇಂದ್ರ ಸ್ಥಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ಹಾಗೂ ಕೆಎಸ್ಆರ್ಪಿ 11ನೇ ಬೆಟಾಲಿಯನ್ ಸಹಯೋಗದೊಂದಿಗೆ ಪೊಲೀಸ್ ಸಿಬ್ಬಂದಿಯ ಮಕ್ಕಳಿಗಾಗಿ ಆಯೋಜಿಸಲಾಗಿದ್ದ ಒಂದು ತಿಂಗಳು ಅವಧಿಯ ಬೇಸಿಗೆ ಶಿಬಿರದಲ್ಲಿ ಮಕ್ಕಳಿಗೆ ವಿವಿಧ ಚಟುವಟಿಕೆಗಳನ್ನು ಆಯೋಜಿಸಿ, ವಿಜೇತರಿಗೆ ಪ್ರಶಸ್ತಿಗಳನ್ನು ನೀಡಿ, ಮುಕ್ತಾಯಗೊಳಿಸಲಾಯಿತು.