ರಾಜ್ಯದ ಹಾಗೂ ಹರಿಹರ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿ ಕೊಠಡಿ ಸಮಸ್ಯೆಗಳಿಂದ ಮಕ್ಕಳಿಗೆ ಸಾಕಷ್ಟು ತೊಂದರೆಯಾಗಿದ್ದು, ಹೆಚ್ಚಿನ ಕೊಠಡಿಗಳನ್ನು ನಿರ್ಮಿಸಿ ಮಕ್ಕಳಿಗೆ ಅನುಕೂಲ ಮಾಡಿಕೊಡುವಂತೆ ಇಂದಿನ ಸದನದಲ್ಲಿ ಮಾನ್ಯ ಶಿಕ್ಷಣ ಸಚಿವರನ್ನು ಹಾಗೂ ಸರ್ಕಾರವನ್ನು ಅಗ್ರಹಿಸಲಾಯಿತು.
@siddaramaiah@INCKarnataka@KPCCPresident
ಶ್ರೇಷ್ಠ ಶಿಕ್ಷಣ ತಜ್ಞರು, ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್ಯ ಗೃಹಮಂತ್ರಿಗಳಾದ @DrParameshwara ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಭಗವಂತನು ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯವನ್ನು ಕರುಣಿಸಲಿ, ಅವರ ಸೇವೆ ರಾಜ್ಯಕ್ಕೆ ಮತ್ತು ಪಕ್ಷಕ್ಕೆ ಮತ್ತಷ್ಟು ದೊರಕಲಿ ಎಂದು ಪ್ರಾರ್ಥಿಸುತ್ತೇನೆ.
- ಎಸ್.ರಾಮಪ್ಪ
ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅಧ್ಯಕ್ಷರು, ರಾಜ್ಯ ಸಭೆಯ ವಿಪಕ್ಷ ನಾಯಕರಾದ ಡಾ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರು ಅವರಿಗೆ ಉತ್ತಮ ಆರೋಗ್ಯ, ಸುಖ - ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ.
@kharge
ನಮ್ಮ ಸರ್ಕಾರವನ್ನು ಒಂದು ವರ್ಷಗಳ ಕಾಲ ಯಶಸ್ವಿಯಾಗಿ ಮುನ್ನಡೆಸಿದ ರಾಜ್ಯದ ಏಳು ಕೋಟಿ ಕನ್ನಡಿಗರಿಗೆ ತುಂಬು ಹೃದಯದ ಧನ್ಯವಾದಗಳು. ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟು ಅಭದ್ರತೆಯ ಆತಂಕ ಇರಲೇಬಾರದೆಂದು ಸ್ಪಷ್ಟವಾದ ಬಹುಮತವ��್ನು ಕೊಟ್ಟು ಸರ್ಕಾರ ರಚನೆಗೆ ಅವಕಾಶ ಕೊಟ್ಟಿದ್ದು ರಾಜ್ಯದ ಮತದಾರರ ಪ್ರಜ್ಞಾವಂತಿಕೆ.
ಭ್ರಷ್ಟಾಚಾರ, ದುರಾಡಳಿತ ಮತ್ತು ಕೋಮುವಾದಗಳಿಂದಾಗಿ ನಲುಗಿ��ೋಗಿದ್ದ ರಾಜ್ಯದ ಆಡಳಿತವನ್ನು ಮತ್ತೆ ಸರಿದಾರಿಗೆ ತರುವ ದೊಡ್ಡ ಜವಾಬ್ದಾರಿಗೆ ಹೆಗಲು ಕೊಟ್ಟಾಗ ಅದರ ಭಾರದ ಅರಿವು ನಮಗಿತ್ತು. ಜನತೆಗೆ ನೀಡಿದ ಭರವಸೆಯನ್ನು ಈಡೇರಿಸಲು ನಾವು ಹೋರಾಟವನ್ನೇ ಮಾಡಬೇಕಾಯಿತು. ನಮ್ಮ ಕೈಗಳ ಬಲಕುಂದಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನು ಕೇಂದ್ರ ಸರ್ಕಾರದ ಜೊತೆಗೂಡಿ ರಾಜ್ಯ ಬಿಜೆಪಿ ನಡೆಸಿದೆ.
ಇಂತಹ ಸವಾಲುಗಳ ನಡುವೆಯೂ ನಮ್ಮ ಐದು ಗ್ಯಾರಂಟಿಗಳನ್ನು ಅನುಷ್ಠಾನಕ್ಕೆ ತಂದು ನಮ್ಮ ಮಾತು ಉಳಿಸಿಕೊಂಡಿದ್ದೇವೆ. ನಮ್ಮ ಸಂಕಲ್ಪ ಕೇವಲ ಗ್ಯಾ���ಂಟಿ ಯೋಜನೆಗಳಲ್ಲ, ಅಭಿವೃದ್ದಿಯ ರಥವನ್ನು ಗ್ಯಾರಂಟಿಗಳ ಆಚೆಗೆ ಕೊಂಡೊಯ್ದು ರಾಜ್ಯವನ್ನು ಸುಖಿ ಮತ್ತು ಸ್ವಾವಲಂಬಿಯನ್ನಾಗಿ ಮಾಡುವುದು.
ಸಾಧನೆಯ ಬಲದಲ್ಲಿ ನಮ್ಮನ್ನು ಎದುರಿಸಲಾಗದ ನಮ್ಮ ವಿರೋಧಪಕ್ಷಗಳು ಜಾತಿ -ಧರ್ಮಗಳನ್ನು ರಾಜಕೀಯದ ಅಸ್ತ್ರಗಳನ್ನಾಗಿ ಬಳಸಿಕೊಂಡು ನಮ್ಮ ಮೇಲೆ ಎರಗುತ್ತಿದ್ದಾರೆ. ರಾಜ್ಯದ ಪ್ರಜ್ಞಾವಂತ ಜನತೆ ಈ ವಿಭಜನಕಾರಿ ಮತ್ತು ವಿನಾಶಕಾರಿ ಅಜೆಂಡಾಗೆ ಬಲಿಯಾಗ��ೆ ರಾಜ್ಯವನ್ನು ಸರ್ವಜನಾಂಗದ ಶಾಂತಿಯ ತೋಟವನ್ನಾಗಿಯೇ ಉಳಿಸಿಕೊಳ್ಳಲು ಸಹಕರಿಸಬೇಕೆಂದಷ್ಟೇ ನನ್ನ ಕೋರಿಕೆ.
ಉಳಿದಂತೆ ರಾಜ್ಯದ ಸರ್ವತೋಮುಖ ಅಭಿವೃದ್ದಿಯ ಕಾಯಕವನ್ನು ನಮಗೆ ಬಿಟ್ಟು ಬಿಡಿ. ನುಡಿದಂತೆ ನಡೆದಿದ್ದೆವು, ನುಡಿದಂತೆ ನಡೆಯುತ್ತಿರುವೆವು, ಮುಂದೆಯೂ ನುಡಿದಂತೆಯೇ ನಡೆಯುವೆವು.
#ವರ್ಷಒಂದು_ಹರ್ಷಎಂದೆಂದು
ದಾವಣಗೆರೆ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಾ.ಪ್ರಭಾ ಮಲ್ಲಿಕಾರ್ಜುನ @DrPrabhaSSM ರವರ ನಾಮಪತ್ರ ಸಲ್ಲಿಸುವ ಕಾರ್ಯಕ್ರಮ ಕ್ಕೆ ಹರಿಹರ ತಾಲ್ಲೂಕಿನಿಂದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ತೆರಳುವ ಬಗ್ಗೆ ಇಂದು ಹರಿಹರ ನಗರದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಸಲಹೆ ಸೂಚನೆಗಳನ್ನು ನೀಡಲಾಯಿತು. @dvgmallikarjun
ಚಿತ್ರದುರ್ಗದಲ್ಲಿ ನಡೆಯುತ್ತಿರುವ ಕರ್ನಾಟಕ ರಾಜ್ಯದ ಶೋಷಿತ ಸಮುದಾಯಗಳ ಸಮಾವೇಶಕ್ಕೆ ಹರಿಹರ ವಿಧಾನಸಭಾ ಕ್ಷೇತ್ರದಿಂದ ಹರಿಹರದ ಮಾಜಿ ಶಾಸಕ ಎಸ್.ರಾಮಪ್ಪ ರವರ ನೇತೃತ್ವದಲ್ಲಿ 57 ಕ್ಕೂ ಹೆಚ್ಚಿನ ಬಸ್ ��ಳಲ್ಲಿ ಸಾವಿರಾರು ಬಾಂಧವರು ಸಮಾವೇಶಕ್ಕೆ ತೆರಳಿದರು. @INCKarnataka @siddaramaiah @Dr_Yathindra_S @DrParameshwara
ಮುಖ್ಯಮಂತ್ರಿ @siddaramaiah ಅವರು ಇಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು.
ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.
ಲೀಲಾವತಿಯವರು ಆ��ೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು, ರಾಜ್��� ಸರ್ಕಾರದ ವಸತಿ ಸಚಿವರಾದ ಶ್ರೀ ಜಮೀರ್ ಅಹಮದ್ ಖಾನ್ @BZZameerAhmedK ಅವರ ಮೇಲೆ ಅವಹೇಳನಕಾರಿಯಾಗಿ ಹಾಗೂ ಪ್ರಚೋದನಕಾರಿಯಾಗಿ ಹೇಳಿಕೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷರ ಹೇಳಿಕೆಯನ್ನು ಖಂಡಿಸಿ ಇಂದು ದಾವಣಗೆರೆಯಲ್ಲಿ ಪತ್ರಿಕಾಗೋಷ್ಠಿ ನಡೆಸಲಾಯಿತು.
@INCKarnataka @siddaramaiah
ವಿಶ್ವಕಪ್ ಕ್ರಿಕೆಟ್ ಪಂದ್ಯಾಕೂಟದ ಫೈನಲ್ ಪಂದ್ಯದಲ್ಲಿ ಭಾರತೀಯರ ಗೆಲುವನ್ನು ಸಂಭ್ರಮಿಸಲು ನಾನು ಎಲ್ಲರಂತೆ ಕಾತುರನಾಗಿದ್ದೇನೆ.
ಬೌಲಿಂಗ್, ಬ್ಯಾಟಿಂಗ್, ಫೀಲ್ಡಿಂಗ್ ಎಲ್ಲಾ ವಿಭಾಗಗಳಲ್ಲೂ ನಮ್ಮದು ಒಂದು ಪರಿಪೂರ್ಣ ತಂಡವಾಗಿರುವುದರಿಂದ ಈ ಬಾರಿಯ ವಿಶ್ವಕಪ್ ಭಾರತದ ಮಡಿಲು ಸೇರುವುದು ನಿಶ್ಚಿತ.
Best wishes to team INDIA..
@hd_kumaraswamy ಅವರೇ ವಿರೋಧ ಪಕ್ಷವಾಗಿ ತಮಗೆ ಮಾತನಾಡಲು ಯಾವುದೇ ವಿಷಯ ಇಲ್ಲ, ನಮ್ಮ ಸರ್ಕಾರದ ಜನಪ್ರಿಯತೆ ಬಗ್ಗೆ ನಿಮಗಿರುವ ಹೊಟ್ಟೆಕಿಚ್ಚು ಈ ರೀತಿ ಮಾಡುತ್ತಿದೆ, @Dr_Yathindra_S ಅವರು ಎಂದಿಗೂ ಸಹ ಮುಖ್ಯಮಂತ್ರಿಗಳ ಆಡಳಿತದಲ್ಲಿ ತಲೆದೂರಿಲ್ಲ, ಇಲ್ಲಸಲ್ಲದ ಆರೋಪಗಳು ಮಾಜಿ ಮುಖ್ಯಮಂತ್ರಿಗಳಿಗೆ ಶೋಭೆ ತರುವುದಿಲ್ಲ.
ಪ್ರಜಾಪ್ರಭುತ್ವದ ನಾಲ್ಕನೇ ಆಧಾರಸ್ತಂಭವಾಗಿರುವ ಪತ್ರಿಕೆಗಳ ಜವಾಬ್ದಾರಿ ದೊಡ್ಡದು. ಅದರಲ್ಲಿ ಕೆಲಸ ಮಾಡುವ ಪತ್ರಕರ್ತರಿಗೂ ಹೊಣೆಗಾರಿಕೆ ಹೆಚ್ಚು. ಇಂತಹ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿರುವ ಎಲ್ಲ ಪತ್ರಿಕಾ ಮಿತ್ರರಿಗೆ ಶುಭವಾಗಲಿ.
ಸಮಾಜ ಮತ್ತು ಸರ್ಕಾರವನ್ನು ಸದಾ ಜಾಗೃತಗೊಳಿಸುವ ಪ���್ರಿಕೆಗಳಿಗೆ ಒಳಿತಾಗಲಿ.
#NationalPressDay
ನಾಡಿನ ಸಮಸ್ತ ಜನತೆಗೆ 'ದೀಪಾವಳಿ' ಹಬ್ಬದ ಹಾರ್ದಿಕ ಶುಭಾಶಯಗಳು.
ಬೆಳಕಿನ ಹಬ್ಬ ದೀಪಾವಳಿಯು ಎಲ್ಲರ ಬದುಕಿನಲ್ಲಿ ಹೊಸ ಬೆಳಕು, ಜೀವನದಲ್ಲಿ ನೆಮ್ಮದಿ, ಆರೋಗ್ಯ ಹಾಗೂ ಐಶ್ವರ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.
#HappyDeepavali
- ಎಸ್.ರಾಮಪ್ಪ
@DKShivakumar@siddaramaiah@INCKarnataka
ಸ್ವಾತಂತ್ರ್ಯ ಚಳುವಳಿಯ ಮುಂಚೂಣಿ ನಾಯಕರಾದ, ನವ ಭಾರತ ನಿರ್ಮಾತೃ, ಭಾರತದ ಮೊದಲ ಪ್ರಧಾನಿ 'ಭಾರತ ರತ್ನ' ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮ ದಿನದಂದು ಮಕ್ಕಳ ಬಗೆಗಿನ ಅವರ ಅತೀವ ಪ್ರೀತಿಯ ಸಂಕೇತವಾಗಿ ಆಚರಿಸಲಾಗುವ 'ಮಕ್ಕಳ ದಿನಾಚರಣೆ'ಯ ಶುಭಾಶಯಗಳು.
ಭದ್ರಾ ನಾಲೆಯಲ್ಲಿ ನೀರು ಬಂದ್ ಮಾಡದೇ ಇನ್ನು 15-20 ದಿನಗಳು ನೀರನ್ನು ಮುಂದುವರೆಸಿದರೆ ಹರಿಹರ ತಾಲೂಕಿನ ರೈತರ ಬೆಳೆಗಳ��ಗೆ ಸಾಕಷ್ಟು ಅನುಕೂಲವಾಗಲಿದ್ದು ಈ ನಿಟ್ಟಿನಲ್ಲಿ ಕ್ರಮಕೈಗೊಳ್ಳುವಂತೆ @siddaramaiah @DKShivakumar @dvgmallikarjun @Madhu_Bangarapp ಅವರಲ್ಲಿ ಮನವಿ ಮಾಡುತ್ತೇನೆ.
-ಎಸ್.ರಾಮಪ್ಪ
ಜಾತಿಗಣತಿಯ ಪ್ರಾಮುಖ್ಯತೆ, ಆ ಕುರಿತು ಕೇಂದ್ರ ಸರ್ಕಾರದ ಪ್ರಜ್ಞಾ ಪೂರ್ವಕ ನಿರ್ಲಕ್ಷ್ಯದ ಕುರಿತಂತೆ ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ @RahulGandhi ಹಾಗು ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲ್ಲಿಕ್ ಅವರ ಸಂಭಾಷಣೆ.
ರಾಮಾಯಣ ಎಂಬ ಮಹಾಕಾವ್ಯವನ್ನು ಮಾನವ ಕುಲಕ್ಕೆ ಕೊಡುಗೆ ನೀಡಿದ ಆದಿಕವಿ ವಾಲ್ಮೀಕಿ ಮಹರ್ಷಿಗಳಿಗೆ ಭಕ್ತಿಪೂರ್ವಕ ನಮನಗಳನ್ನು ಸಲ್ಲಿಸಿ, ನಾಡಿನ ಸಮಸ್ತ ಜನತೆಗೆ #ವಾಲ್ಮೀಕಿಜಯಂತಿ ಯ ಶುಭಾಶಯಗಳನ್ನು ಕೋರುತ್ತೇನೆ. ರಾಮಾಯಣ ಜಗತ್ತಿನ ಮೊಟ್ಟಮೊದಲ ಮಹಾಕಾವ್ಯ, ಆದ��್ಶ ಮತ್ತು ನೀತಿಯ ಸಾಗರವಾಗಿದ್ದು, ನಮ್ಮೆಲ್ಲರ ಜೀವನಕ್ಕೆ ಮಾರ್ಗದರ್ಶಿ ಸೂತ್ರಗಳಾಗಿವೆ