ಯಾವುದೇ ಸಂಘಟನೆ ಆಗಲಿ, ಪೋಲಿಸ್ ಇಲಾಖೆಯಾಗಲಿ, ಸರ್ಕಾರವಾಗಲಿ ವಿದ್ಯಾರ್ಥಿಗಳ ಪರವಾಗಿ ನಡೆಯುವ ಹೋರಾಟವನ್ನು ಹತ್ತಿಕ್ಕುವ ಕೆಲಸವನ್ನು ಯಾವತ್ತು ಮಾಡಬಾರದು. ವಿದ್ಯಾರ್ಥಿಗಳ ಪರವಾಗಿ, ವಿದ್ಯಾರ್ಥಿಗಳ ಧ್ವನಿಯಾಗಿ, ಎಲ್ಲರೂ ಒಟ್ಟಾಗಿ ಹೋರಾಟ ಮಾಡೋಣ, ಸ್ಪರ್ಧಾತ್ಮಕ ವಿದ್ಯಾರ್ಥಿಗಳಿಗೆ ನ್ಯಾಯಯುತವಾದ ಬೇಡಿಕೆಗಳಿಗೆ ನ್ಯಾಯ ಒದಗಿಸೋಣ. @AKSSAofficial
@hd_kumaraswamy Justice for UGC qualified candidates, High court devision bench given order reqruite only ugc qualified candidates for GFGC guest faculty Karnataka government violating court order sir please protect 22000 elegible candidates,
@DKShivakumar Justice for UGC qualified candidates,, 2 time court passed orders to select only ugc qualified candidates still Higher education minister trying to put unqualified candidates
@ugc_india@PMOIndia@EduMinOfIndia@PIB_India the High Court of Karnataka has clearly directed the government to give preference or appointments to UGC-qualified candidates as guest lecturers in govt GFGC, but the implementation has been slow and again and again given continuation to unqualified..
@BasanagoudaBJP ಸರ್ಕಾರ ಬೇಗನೆ UGC ಅಭ್ಯರ್ಥಿಗಳನ್ನು ಆಯ್ಕೆಮಾಡಿಕೊಳ್ಳದಿದ್ದರೆ ಬಡ ಮಕ್ಕಳ ಉನ್ನತ ಶಿಕ್ಷಣದ ಕನಸು ನುಚ್ಚು ನೂರಾಗುತ್ತದ,, ರಾಜಕಾರಣಿಗಳಿಗೆ ಇರುವ ಭಯವೇನೆಂದರೆ ಒಂದು ವೇಳೆ ಬುದ್ಧಿವಂತ ಅರ್ಹ ಉಪನ್ಯಾಸಕರು ಸರ್ಕಾರಿ ಕಾಲೇಜು ಸೇರಿಕೊಂಡರೆ ತಮ್ಮ ತಮ್ಮ ಖಾಸಗಿ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಅಡ್ಮಿಷನ್ ಕಡಿಮೆ ಆಗುತ್ತೆ ಆದಾಯಕ್ಕೆ ಖೋತ ಅನ್ನೋ ಭಯ
ಅತಿಥಿ ಉಪನ್ಯಾಸಕರಿಗೆ ಆಗುತ್ತಿರುವ ಅನ್ಯಾಯವನ್ನು ಸರ್ಕಾರ ಕೂಡಲೇ ಸರಿಪಡಿಸಬೇಕು. ಉಚ್ಚ ನ್ಯಾಯಾಲಯದ ಆದೇಶವಿದ್ದರೂ ಸಹ ಅತಿಥಿ ಉಪನ್ಯಾಸಕರ ನೇಮಕಾತಿ ವಿಳಂಬ ಆಗುತ್ತಿರುವುದು ಅಭ್ಯರ್ಥಿಗಳಿಗೆ ಮಾಡುತ್ತಿರುವ ಅನ್ಯಾಯ. UGC ಅರ್ಹ ಅಭ್ಯರ್ಥಿಗಳಿಗೆ ಆದ್ಯತೆ ನೀಡಿ ಸರ್ಕಾರ ನೇಮಕಾತಿಯನ್ನು ಕೂಡಲೇ ಪ್ರಾರಂಭಿಸಲಿ.
*ವಿಷಯ: ಯುಜಿಸಿ ಅರ್ಹ ಅತಿಥಿ ಉಪನ್ಯಾಸಕರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ದಿನಾಂಕ 23-09-2025 ರಂದು ನಡೆಯುವ ಬೃಹತ್ ಪ್ರತಿಭಟನೆಯ ಕಾರ್ಯಾಚರಣೆಯನ್ನು ತಮ್ಮ ಪತ್ರಿಕೆ ಹಾಗೂ ಮಾಧ್ಯಮಗಳಲ್ಲಿ ಪ್ರಕಟಿಸುವ ಕುರಿತು :*
ಮಾನ್ಯರೇ, @drmcsudhakar@siddaramaiah@RahulGandhi@kharge
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕಳೆದ ಎರಡು ವರ್ಷಗಳಿಂದ ಯುಜಿಸಿ ಅರ್ಹ ಅತಿಥಿ ಉಪನ್ಯಾಸಕರಿಗೆ ಮತ್ತು ಯುಜಿಸಿ ಅರ್ಹ ಅಭ್ಯರ್ಥಿಗಳಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ದಿನಾಂಕ 23/09/2025 ಮಂಗಳವಾರದಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಮಟ್ಟದ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದೇವೆ. ಹಾಗೂ ಈ ಪ್ರತಿಭಟನೆಯು ಕೆಲವು ಬಹುಮುಖ್ಯ ಬೇಡಿಕೆಯ ಅಂಶಗಳನ್ನು ಒಳಗೊಂಡಿದ್ದು ಅವುಗಳನ್ನು ತಮ್ಮ ಮಾಧ್ಯಮಗಳಲ್ಲಿ ಹಾಗೂ ಪತ್ರಿಕೆಗಳಲ್ಲಿ ಸುದ್ದಿ ಮಾಡಬೇಕಾಗಿ ಕೇಳಿಕೊಳ್ಳುತ್ತೇವೆ. ಅವುಗಳೆಂದರೆ:
1. 2025-26 ನೇ ಶೈಕ್ಷಣಿಕ ಸಾಲಿನಿಂದಲೇ ಅತಿಥಿ ಉಪನ್ಯಾಸಕ ನೇಮಕಾತಿಯಲ್ಲಿ ಯುಜಿಸಿ ಅರ್ಹ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಬೇಕಾಗಿ ಮಾನ್ಯ ಉಚ್ಛ ನ್ಯಾಯಾಲಯ ಆದೇಶ ನೀಡಿದೆ. ಆದರೂ ಈವರೆಗೂ ಶಿಕ್ಷಣ ಇಲಾಖೆಯಿಂದ ಆಯ್ಕೆ ಪ್ರಕ್ರಿಯೆ ಆರಂಭಗೊಂಡಿರುವುದಿಲ್ಲ.
2. ಪ್ರಥಮ ದರ್ಜೆ ಕಾಲೇಜುಗಳಲ್ಲಿ ನಕಲಿ ಎಂ.ಫಿಲ್, ಪಿಎಚ್.ಡಿ ಸೇವಾ ಪ್ರಮಾಣಪತ್ರ ಪಡೆದು ಸೇವೆ ಸಲ್ಲಿಸುತ್ತಿರುವ ಅಭ್ಯರ್ಥಿಗಳು ಸಾಕಷ್ಟು ಪ್ರಮಾಣದಲ್ಲಿರುವುದು ಇಲಾಖೆಯ ಗಮನಕ್ಕೂ ಇದೆ. ಹಾಗಾಗಿ ಸೂಕ್ಷ್ಮವಾಗಿ ಗಮನಿಸಿ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವುದು.
3. ಮುಂದುವರೆದು, ನಕಲಿ ಪಿಎಚ್.ಡಿ ಪ್ರಮಾಣ ಪತ್ರಗಳನ್ನು ಪಡೆದು ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿರುವವರನ್ನು ಈ ಬಾರಿಯ ಆಯ್ಕೆ ಪ್ರಕ್ರಿಯೆಯ ಹಂತದಲ್ಲೇ ನಿರ್ಬಂಧಿಸುವುದು ಮತ್ತು ಕಾನೂನು ಕ್ರಮ ಕೈಗೊಳ್ಳಲು ಶಿಕ್ಷಣ ಇಲಾಖೆ ಮುಂದಾಗಬೇಕು.
4. ಎಂ.ಫಿಲ್ ಹಾಗೂ ಪೂರ್ಣಕಾಲಿಕ ಪಿಎಚ್.ಡಿ ವ್ಯಾಸಂಗ ಮಾಡುತ್ತಲೇ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿ. ಎರಡೂ ಕಡೆ ಸಂಭಾವನೆ ಪಡೆದವರ ಮೇಲೆ ಶಿಸ್ತುಕ್ರಮ ಜರುಗಿಸುವುದು.