ನಾಡಿನ ಪರಮ ಪವಿತ್ರ ಶಕ್ತಿಪೀಠ, ಶ್ರೀಕ್ಷೇತ್ರ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇಂದು ಭೇಟಿ ನೀಡಿ, ಜಗನ್ಮಾತೆಯ ದಿವ್ಯ ದರ್ಶನ ಪಡೆದು, ನಾಡಿನ ಸಮಸ್ತ ಜನರ ಸುಖ-ಶಾಂತಿ, ಸಮೃದ್ಧಿಗಾಗಿ, ತಾಯಿಯ ಕೃಪಾಕಟಾಕ್ಷ ನಾಡಿನ ಮೇಲೆ ಸದಾ ಇರಲಿ ಎಂದು ಭಕ್ತಿಪೂರ್ವಕವಾಗಿ ಪ್ರಾರ್ಥಿಸಲಾಯಿತು.
ವಿಕಸಿತ ಭಾರತದ ನಿರ್ಮಾಣಕ್ಕೆ ಶ್ರಮಿಸುತ್ತಿರುವ ನಮ್ಮ ಹೆಮ್ಮೆಯ ಪ್ರಧಾನಿ ಶ್ರೀ @narendramodi ಜೀ ಸರ್ಕಾರ ಸಾರ್ಥಕ ಸಾಧನೆಗಳ 12 ವರ್ಷಗಳನ್ನು ಪೂರೈಸಿರುವ ಸಂದರ್ಭದ ಅಂಗವಾಗಿ ಜಗನ್ಮಾತೆಗೆ ವಿಶೇಷ ಪೂಜೆ, ಪ್ರಾರ್ಥನೆಗಳನ್ನು ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ಶಾಸಕರುಗಳಾದ ಶ್ರೀ ಸುನೀಲ್ ಕುಮಾರ್, ಶ್ರೀ ಬೈರತಿ ಬಸವರಾಜ್, ಶ್ರೀ ಹರೀಶ್ ಪೂಂಜಾ, ಶ್ರೀ ಗುರುರಾಜ್ ಗಂಟಿಹೊಳೆ, ಮತ್ತಿತರ ಪ್ರಮುಖರು ಜೊತೆಗಿದ್ದರು.
ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರು ಇಂದು ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯಗಳ ಧಾರ್ಮಿಕ ಭಿಕ್ಷಾಟನೆಗೆ ಸಂಬಂಧಿಸಿದಂತೆ ಪ್ರಮುಖರೊಂದಿಗೆ ಸಮಾಲೋಚನಾ ಸಭೆ ನಡೆಸಿದರು.
ಈ ಸಂದರ್ಭದಲ್ಲಿ ರಾಜ್ಯ ಉಸ್ತುವಾರಿಗಳಾದ ಡಾ. ರಾಧಾ ಮೋಹನ್ ದಾಸ್ ಅಗರ್ವಾಲ್, ಮಾಜಿ ಉಪ ಮುಖ್ಯಮಂತ್ರಿಗಳಾದ ಶ್ರೀ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿಪಕ್ಷ ನಾಯಕರಾದ ಶ್ರೀ ಛಲವಾದಿ ನಾರಾಯಣಸ್ವಾಮಿ, ಎಸ್.ಸಿ.ಮೋರ್ಚಾ ರಾಜ್ಯಾಧ್ಯಕ್ಷರು ಹಾಗೂ ಶಾಸಕರಾದ ಶ್ರೀ ಸಿಮೆಂಟ್ ಮಂಜು, ಮಾಜಿ ಸಂಸದರಾದ ಶ್ರೀ ಮುನಿಸ್ವಾಮಿ, ಒಬಿಸಿ ಮೋರ್ಚಾ ರಾಜ್ಯಾಧ್ಯಕ್ಷರಾದ ಶ್ರೀ ರಘು ಕೌಟಿಲ್ಯ, ಅಲೆಮಾರಿ ಸಮುದಾಯದ ನಾಯಕರಾದ ಶ್ರೀ ಲೋಹಿತ್ ಮತ್ತು ಪ್ರಮುಖರು ಉಪಸ್ಥಿತರಿದ್ದರು.
ಹಿರಿಯ ನಾಯಕರು, ಮಾಜಿ ಸಚಿವರು, ಜನಪ್ರಿಯ ಶಾಸಕರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ರಾಷ್ಟ್ರೀಯ ಅಧ್ಯಕ್ಷರು, ಅತ್ಯಂತ ಆತ್ಮೀಯರೂ ಆಗಿದ್ದ ಶ್ರೀ ಶಾಮನೂರು ಶಿವಶಂಕರಪ್ಪನವರ ನಿಧನ ಸುದ್ದಿ ಕೇಳಿ ಅತೀವ ದುಃಖವಾಗಿದೆ. ಅವರ ನಿಧನದಿಂದ ನಾಡು ಒಬ್ಬ ಹಿರಿಯ ರಾಜಕಾರಣಿಯನ್ನು ಕಳೆದುಕೊಂಡಿದೆ. ವಿಶೇಷವಾಗಿ ವೀರಶೈವ ಲಿಂಗಾಯತ ಸಮಾಜದ ಹಿರಿಯ ನಾಯಕನ ಯುಗಾಂತ್ಯವಾಗಿದೆ.
ಶಿಕ್ಷಣ, ಅರೋಗ್ಯ ಮತ್ತು ಸಮಾಜ ಸೇವೆಯ ಮೂಲಕ ಲಕ್ಷಾಂತರ ಜನರ ಬದುಕನ್ನು ಬೆಳಗಿದ್ದ, ಶಾಮನೂರು ಶಿವಶಂಕರಪ್ಪನವರ ದಶಕಗಳ ಸುದೀರ್ಘ ಸೇವೆ, ಜನಪರ ಕಾಳಜಿ ಮತ್ತು ಸಾಧನೆಗಳು ಮಾದರಿಯಾಗಿದೆ. ಅವರ ಅಗಲಿಕೆಯಿಂದ ರಾಜ್ಯ ರಾಜಕಾರಣಕ್ಕೆ, ಅದರಲ್ಲೂ ವಿಶೇಷವಾಗಿ ದಾವಣಗೆರೆ ಜಿಲ್ಲೆಗೆ ಮತ್ತು ವೀರಶೈವ ಲಿಂಗಾಯತ ಮಹಾಸಭೆಗೆ ತುಂಬಲಾರದ ನಷ್ಟವಾಗಿದೆ.
ಅವರೊಂದಿಗಿನ ದಶಕಗಳ ಒಡನಾಟ, ಸಮಾಜದ ಒಗ್ಗಟ್ಟಿಗಾಗಿ ಅವರ ತುಡಿತ, ಅವರ ನಿರಂತರ ಪ್ರಯತ್ನಗಳನ್ನು ಹತ್ತಿರದಿಂದ ಕಂಡಿದ್ದೇನೆ. ವೈಯಕ್ತಿಕವಾಗಿ ಒಬ್ಬ ಆತ್ಮೀಯ ಹಿರಿಯಣ್ಣನನ್ನು ಕಳೆದುಕೊಂಡಿದ್ದೇನೆ. ಭಗವಂತನು ಅವರ ಆತ್ಮಕ್ಕೆ ಸದ್ಗತಿ ನೀಡಲಿ, ಅವರ ಕುಟುಂಬ ಸದಸ್ಯರಿಗೆ, ಅಪಾರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ. 🙏
ಇದೇನ್ರಿ @siddaramaiah ?
ಪಾಕಿಸ್ತಾನದ ಮೇಲಿನ ನಿಮ್ಮ ಪ್ರೇಮ, ಪಾಕಿಸ್ತಾನದ ಮಾಧ್ಯಮಗಳಲ್ಲಿಯೂ ಕೊಂಡಾಡುತ್ತಿದ್ದಾರೆ.
ಮನೆಗೆ ಮಾರಿ ಪರರಿಗೆ ಉಪಕಾರಿ ಎಂಬಂತೆ ಬಾಂಧವರ ಮೇಲೆ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣ ಈಗ ಉಗ್ರ ಪೋಷಕ ಪಾಕಿಸ್ತಾನ, ಭಾರತದ ವಿರುದ್ಧವೇ ಧ್ವನಿ ಎತ್ತುವಂತೆ ಮಾಡಿದೆ. ಸಿದ್ದರಾಮಯ್ಯ ಅವರೇ ಮುಂದೆ ನಿಮಗೆ ಪಾಕಿಸ್ತಾನ ಸರ್ಕಾರ ಗೋಲ್ಡನ್ ವಿಸಾ ಕೊಟ್ಟು, ಅಲ್ಲಿನ ಪೌರತ್ವ ನೀಡಿ ಸನ್ಮಾನಿಸಿದರೂ ಆಶ್ಚರ್ಯವಿಲ್ಲ.
ಕಾಶ್ಮೀರದಲ್ಲಿ ಹಿಂದೂಗಳ ನರಮೇಧ ನಡೆಸಿದ ಪಾಪಿ ಪಾಕಿಸ್ತಾನದ ಮತಾಂಧ ಉಗ್ರರಿಗೆ ಮಿಡಿಯುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರ ಹೃದಯಗಳು, ಭಾರತೀಯರಿಗೆ ಹೃದಯವನ್ನು ಘಾಸಿಗೊಳಿಸುತ್ತಿದೆ.
@INCKarnataka@INCIndia
#PahalgamTerrorAttack
महाराष्ट्र विधानपरिषदेची सदस्य म्हणून आज विधानभवन येथे उपसभापती मा. नीलमताई गोऱ्हे यांच्या उपस्थितीत शपथ घेतली. माझ्यासमवेत अन्य नवनिर्वाचित सदस्यांनी देखील शपथ घेतली. सर्वांचे अभिनंदन आणि मनःपूर्वक शुभेच्छा..!
@BJP4Maharashtra@BJP4Maharashtra@CMOMaharashtra@MahaDGIPR