ಈ ವರ್ಷ ನಿಮ್ಮ ಜೀವನಕ್ಕೆ ಹೊಸ ಸಂತೋಷ,
ಹೊಸ ಗುರಿಗಳು, ಹೊಸ ಸಾಧನೆಗಳು ಮತ್ತು ಅನೇಕ ಹೊಸ ಸ್ಫೂರ್ತಿಗಳನ್ನು ತರಲಿ. ನಿಮಗೆ ಈ ವರ್ಷ ಸಂತೋಷದಿಂದ ಕೂಡಿರಲೆಂದು ಹಾರೈಸುತ್ತೇನೆ.
ಹೊಸ ವರ್ಷದ ಶುಭಾಶಯಗಳು.
#ʜᴀᴘᴘʏɴᴇᴡʏᴇᴀʀ2024#NewYear
ಕನ್ನಡ ಸಾಹಿತ್ಯ ಲೋಕದ ಅಗಣಿತ ತಾರಾಗಣ��ಳ ನಡುವೆ ಉಜ್ವಲವಾಗಿ ಹೊಳೆಯುವ ಧ್ರುವ ತಾರೆ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ರಾಷ್ಟ್ರಕವಿ ಕುವೆಂಪು ಅವರ ಜನ್ಮದಿನದಂದು ಗೌರವ ನಮನಗಳು.
#kuvempu #rashrakavikuvempu
ಇದೇ ಡಿಸೆಂಬರ್ 26 ರಿಂದ 'ಯುವನಿಧಿ' ಯೋಜನೆ ನೋಂದಣಿಗೆ ಚಾಲನೆ ಸಿಗಲಿದೆ. ಸೇವಾಸಿಂಧು ಪೋರ್ಟಲ್, ಬೆಂಗಳೂರು ಒನ್, ಕರ್ನಾಟಕ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಈ ಯೋಜನೆಗೆ ಉಚಿತವಾಗಿ ನೋಂದಾಯಿಸಬಹುದು.
ಹೆಚ್ಚಿನ ಸಂಖ್ಯೆಯಲ್ಲಿ ನೋಂದಾಯಿಸುವ ಮೂಲಕ 'ಯುವನಿಧಿ' ಯೋಜನೆಯ ಪ್ರಯೋಜನ ಪಡೆಯಿರಿ.
ನಾಡಿನ ಸಮಸ್ತ ಜನತೆಗೆ ಪವಿತ್ರ ಕ್ರಿಸ್ಮಸ್ ಹಬ್ಬದ ಹಾರ್ದಿಕ ಶುಭಾಶಯಗಳು.
ಕ್ರಿಸ್ಮಸ್ ಹಬ್ಬವು ಭಕ್ತಿ ಭಾವಗಳ, ಸೌಹಾರ್ದತೆಯ, ಸಡಗರದ ಮತ್ತು ಸಾರ್ವಜನಿಕ ಬಾಂಧವ್ಯಗಳನ್ನು ಬೆಸೆಯುವ ಹಬ್ಬವಾಗಿ ಹೊರಹೊಮ್ಮಲಿ ಎಂದು ಹಾರೈಸುತ್ತೇನೆ.
#happycristmas
8 ವರ್ಷಗಳ ಕಾಲ ಅಂಬಾರಿ ಹೊರುವ ಮೂಲಕ ಮೈಸೂರು ದಸರಾದ ಜಂಬೂಸವಾರಿಯನ್ನು ಯಶಸ್��ಿಯಾಗಿ ನಡೆಸಿಕೊಟ್ಟಿದ್ದ ಅರ್ಜುನ ಆನೆಯು ಕಾರ್ಯಚರಣೆ ವೇಳೆ ಕಾಡಾನೆ ದಾಳಿಯಿಂದ ಮೃತಪಟ್ಟಿದ್ದು ತೀವ್ರ ದುಃಖದಾಯಕ ಸಂಗತಿ.
#arjunaelephantrip
ರಾಜ್ಯ ಸರ್ಕಾರವು ಸಂವಿಧಾನದ ಮೂಲ ಆಶಯಗಳಡಿ ನಡೆಸುವ ಚಟುವಟಿಕೆಗಳನ್ನು ನಿಲ್ಲಿಸುವ ಅಥವಾ ತಡೆಯುವ ಯಾವುದೇ ಕೆಲಸ ಮಾಡುವುದಿಲ್ಲ. ಕಥೆ, ಕಾವ್ಯ, ನಾಟಕ, ಸಂಗೀತ ಮುಂತಾದ ಸೃಜನಶೀಲ ಅಭಿವ್ಯಕ್ತಿಗಳಿಗೆ ನಮ್ಮ ಬೆಂಬಲವಿರಲಿದೆ. ಕೆಳಹಂತದ ಪೊಲೀಸ್ ಅಧಿಕಾರಿಗಳ ತಪ್ಪು ತಿಳುವಳಿಕೆಯ ಕಾರಣಕ್ಕಾಗಿ ಅನಾವಶ್ಯಕ ಗೊಂದಲ ನಿರ್ಮಾಣವಾಗಿರುವ ವಿಚಾರ ನನ್ನ ಗಮನಕ್ಕೆ ಬಂದಿದ್ದು, ಮುಂದೆ ಇಂತಹ ಗೊಂದಲಗಳಿಗೆ ಅವಕಾಶ ಮಾಡಿಕೊಡಬಾರದು ಎಂದು ಪೊಲೀಸ್ ಮಹಾನಿರ್ದೇಶಕರಿಗೆ ಸ್ಪಷ್ಟ ಸೂಚನೆ ನೀಡಿದ್ದೇನೆ.
ಸಂವಿಧಾನದ ಆಶಯಗಳನ್ನು ಎತ್ತಿಹಿಡಿಯುವ ಕೆಲಸಗಳ ಜೊತೆ ನಮ್ಮ ಸರ್ಕಾರ ನಿಲ್ಲಲಿದೆ.
ಇಂದು ಮುನ್ನೇಕೊಳ್ಳಾಲದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮೊದಲನೇ ಮಹಡಿಯ ನೂತನ ನಾಲ್ಕು ಕೊಠಡಿಗಳ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ, ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದೆ.
1/2
ಬೆಂಗಳೂರಿನ ಕೆಲವು ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಬಂದಿರುವ ಹಿನ್ನೆಲೆ��ಲ್ಲಿ ಸದಾಶಿವ ನಗರದ ನೀವ್ ಸ್ಕೂಲ್ ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ವೇಳೆ ಪೋಲಿಸ್ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದು ಸೂಕ್ತ ತನಿಖೆ ನಡೆಸಲು ಸೂಚಿಸಿದೆ.
ಬರ ಪರಿಹಾರ ಸಂಬಂಧ ಕೇಂದ್ರಕ್ಕೆ ಬರೆದ ಪತ್ರಗಳಿಗೆ ಈ ವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ರಾಜ್ಯದಿಂದ ಮೂವರು ಸಚಿವರು ದೆಹಲಿಗೆ ಹೋದರೂ ಸಕಾರಾತ್ಮಕ ಪ್ರತಿಕ್ರಿಯೆ ಸಿಕ್ಕಿಲ್ಲ.
ಕೇಂದ್ರ ಸರ್ಕಾರ ರಾಜ್ಯದ ರೈತರಿಗೆ ಪರಿಹಾರ ಕೊಡಲು ಇನ್ನೂ ಪ್ರಾಥಮಿಕ ಸಭೆಯನ್ನೇ ನಡೆಸದ ಹಿನ್ನೆಲೆಯಲ್ಲಿ ರಾಜ್ಯದಿಂದ ತುರ್ತು ಕ್ರಮ ಕೈಗೊಳ್ಳಲಾಗಿದ್ದು, ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ ರೂ.2,000 ವರೆಗೆ ಬೆಳೆ ಪರಿಹಾರ ಹಣ ಬಿಡುಗಡೆ ಮಾಡುತ್ತಿದ್ದೇವೆ.
ಉದ್ಯೋಗ ಖಾತರಿ ಯೋಜನೆಯಡಿ 150 ಮಾನವ ದಿನಗಳ ಉ��್ಯೋಗ ಕೊಡಲು ಕೇಂದ್ರಕ್ಕೆ ಅನುಮತಿ ಕೋರಲಾಗಿತ್ತು. ಆದರೆ ಇನ್ನೂ ಅನುಮತಿ ನೀಡಿಲ್ಲ.
ರಾಜ್ಯದ 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಮೂರು ಹಂತದಲ್ಲಿ ಘೋಷಿಸಿದ್ದೇವೆ. ರೂ.18,171 ಕೋಟಿ ಪರಿಹಾರದ ಆರ್ಥಿಕ ನೆರವು ನೀಡಲು ಕೇಂದ್ರಕ್ಕೆ ಪತ್ರ ಬರೆದಿದ್ದೇವೆ. ಕೇಂದ್ರ ನಮ್ಮ ತೆರಿಗೆ ಹಣದ ಪಾಲನ್ನು ನಮಗೆ ��ಾಪಾಸ್ ಕೊಟ್ಟರೂ ಸಾಕು ನಮ್ಮ ರೈತರ ಕಷ್ಟಕ್ಕೆ ಸಹಾಯವಾಗುತ್ತಿತ್ತು.
ಸೆಪ್ಟಂಬರ್ 21 ರಂದು ಬರಪರಿಹಾರಕ್ಕಾಗಿ ಕೇಂದ್ರಕ್ಕೆ ಮೊದಲ ಮನವಿ ಮಾಡಿದ್ದೆವು. ಕೇಂದ್ರದ ತಂಡ ಅಕ್ಟೋಬರ್ 4 ರಿಂದ 9ರ ವರೆಗೆ ರಾಜ್ಯ ಪ್ರವಾಸ ಮಾಡಿ ಬರ ಸಮೀಕ್ಷೆ ನಡೆಸಿ, ವರದಿ ನೀಡಿದೆ. ನಾವೆಲ್ಲಾ ಕೇಂದ್ರ ತಂಡವನ್ನು ಭೇಟಿ ಮಾಡಿ ಚರ್ಚಿಸಿ ಬರದ ಸ್ಥಿತಿ ವಿವರಿಸಿದ್ದೇವೆ. 48.19 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಷ್ಟ ಆಗಿದೆ. ರೂ.4,663 ಕೋಟಿ ಬೆಳೆ ನಷ್ಟ ಪರಿಹಾರ ಕೇಂದ್ರಕ್ಕೆ ಕೇಳಿದ್ದೆವು. ಕೇಂದ್ರ ಸಚಿ��ರಿಗೂ ಮನವಿ ಮಾಡಿದ್ದೇವೆ. ಕೇಂದ್ರ ಕೃಷಿ ಮತ್ತು ಗೃಹ ಸಚಿವರನ್ನು ಖುದ್ದು ಭೇಟಿ ಮಾಡಲು ಸಮಯ ಕೊಡಿ ಎಂದು ಪತ್ರ ಬರೆದಿದ್ದೆ. ಇವತ್ತಿನವರೆಗೂ ಸಮಯ ಕೊಟ್ಟಿಲ್ಲ.
ಇವತ್ತಿನವರೆಗೂ ಕೇಂದ್ರ ಸಭೆಯನ್ನೇ ನಡೆಸಿಲ್ಲ. ಸಮಯ ಕೇಳಿದರೂ ಭೇಟಿಗೆ ಅವಕಾಶ ಕೊಟ್ಟಿಲ್ಲ. ಅಧಿಕಾರಿಗಳನ್ನಾದರೂ ಭೇಟಿ ಮಾಡಿ ಎಂದು ಹೇಳಿ ನಾನು ಮೂವರು ಸಚಿವರನ್ನು ದೆಹಲಿಗೆ ತೆರಳಲು ಹೇಳಿದ್ದೆ. 3 ಜನ ದೆಹಲಿಗೆ ಹೋಗಿ ಅಧಿಕಾರಿಗಳಿಗೆ ವಿವರಿಸಿದ್ದಾರೆ.
ವಿತ್ತ ಸಚಿವರನ್ನು ನಮ್ಮ ಮಂತ್ರಿಗಳು ಭೇಟಿ ಮಾಡಿದ್ದ���ರೆ. ಆದರೂ ಕೇಂದ್ರ ಸರ್ಕಾರ ಇವತ್ತಿನವರೆಗೆ ಸಭೆ ನಡೆಸಿಲ್ಲ. ಪರಿಹಾರ ನೀಡುವ ಪ್ರಕ್ರಿಯೆಯನ್ನೇ ಶುರು ಮಾಡಿಲ್ಲ.
ಬಿತ್ತನೆ ವೈಫಲ್ಯ ಮತ್ತು ಮಧ್ಯಂತರ ವಿಮ��� ಪರಿಹಾರಕ್ಕೆ ರಾಜ್ಯ ಸರ್ಕಾರ ಈಗಾಗಲೇ 6.5 ಲಕ್ಷ ರೈತರಿಗೆ ರೂ.460 ಕೋಟಿ ನಮ್ಮ ಸರ್ಕಾರ ಬಿಡುಗಡೆ ಮಾಡಿದೆ. ಕುಡಿಯುವ ನೀರು, ಮೇವಿಗೆ ರೂ.327 ಕೋಟಿ ಬಿಡುಗಡೆ, ರೂ.780 ಕೋಟಿ DC ಗಳ PD ಖಾತೆಯಲ್ಲಿದೆ. ಅವರೂ ತಹಶೀಲ್ದಾರ್ ಗಳಿಗೆ ಬಿಡುಗಡೆ ಮಾಡಿದ್ದಾರೆ.
ಯಾವ ತಾಲ್ಲೂಕುಗಳಲ್ಲೂ ಕುಡಿಯುವ ನೀರಿಗೆ ಸಮಸ್ಯೆ ಇಲ್ಲದಂತೆ ನಿರ್ವಹಿಸಿದ್ದೇವೆ.
ವಿವಿಧ ತಾಲ್ಲೂಕುಗಳ 60 ಹಳ್ಳಿಗಳಲ್ಲಿ ಟ್ಯಾಂಕರ್ ನೀರಿನ ವ್ಯವಸ್ಥೆ ಮಾಡಿದ್ದೇವೆ.
ಹೊರ ರಾಜ್ಯಕ್ಕೆ ಮೇವು ಹೋಗದಂತೆ ತಡೆದಿದ್ದೇವೆ. ಮೇವಿನ ಬೀಜ ವ���ತರಣೆ ಮಾಡಿದ್ದೇವೆ.
#ಬರನಿರ್ವಹಣೆ #DroughtReliefFund
To the people of Namma Bangalore,
I extend a cordial invitation to all of you for the '@UnboxingBlr' event, taking place between the 1st to 11th of December 2023. This city-wide festival is a convergence of history, films, art, food, and culture, featuring 300 events across 40 locations with 40 esteemed partners. Let us all come together and contribute towards the vibrancy of this cultural celebration, making it a significant milestone in India's art and cultural calendar.
Looking forward to your participation.