ಬೆಂಗಳೂರು ಮೆಟ್ರೋ ಯೋಜನೆಯ ಸಮಗ್ರ ಅಭಿವೃದ್ಧಿಯಲ್ಲಿ ಕರ್ನಾಟಕ ಸರ್ಕಾರವೇ ಅತಿ ಹೆಚ್ಚಿನ ಆರ್ಥಿಕ ಕೊಡುಗೆ ನೀಡುತ್ತಿದೆ. ಮೆಟ್ರೋ ಮಾರ್ಗಗಳ ನಿರ್ಮಾಣಕ್ಕೆ ಹಣಕಾಸು ಒದಗಿಸುವುದರ ಜತೆಗೆ, ಭೂಸ್ವಾಧೀನ, ಪುನರ್ವಸತಿ, ರಾಜ್ಯ ತೆರಿಗೆ, ನಿರ್ಮಾಣದ ಅವಧಿಯ ಬಡ್ಡಿ, ಸಾಲ ಮರುಪಾವತಿ ಹಾಗೂ ಮೆಟ್ರೋ ರೈಲುಗಳ ನಿರ್ವಹಣೆಯ ಜವಾಬ್ದಾರಿಯನ್ನೂ ರಾಜ್ಯ ಸರ್ಕಾರ ನಿಭಾಯಿಸುತ್ತಿದೆ.
ಮೆಟ್ರೋ ಯೋಜನೆಯ ವಿವಿಧ ಹಂತಗಳಲ್ಲಿ ಕೇಂದ್ರ ಸರ್ಕಾರಕ್ಕಿಂತ ಹೆಚ್ಚಿನ ಹಣವನ್ನು ಕರ್ನಾಟಕ ಸರ್ಕಾರವೇ ಹೂಡಿಕೆ ಮಾಡಿದೆ. ಕಾಮಗಾರಿಗಳ ವಿಳಂಬದಿಂದ ಉಂಟಾಗುವ ಹೆಚ್ಚುವರಿ ವೆಚ್ಚದ ಹೊರೆಯಲ್ಲಿಯೂ ರಾಜ್ಯದ ಪಾಲು ಗಣನೀಯವಾಗಿದೆ. ಇದರೊಂದಿಗೆ, ಹೊಸ ಮೆಟ್ರೋ ಮಾರ್ಗಗಳ ನಿರ್ಮಾಣ ಮತ್ತು ಜಾಲದ ವಿಸ್ತರಣೆಗೆ ರಾಜ್ಯ ಸರ್ಕಾರ ನಿರಂತರವಾಗಿ ಅನುದಾನ ಹಾಗೂ ಅಗತ್ಯ ನೆರವು ಒದಗಿಸುತ್ತಿದೆ.
ಒಟ್ಟಾರೆ ಮೆಟ್ರೋ ಯೋಜನೆಯ ವೆಚ್ಚ, ನಿರ್ಮಾಣದ ನಂತರದ ನಿರ್ವಹಣೆ ಮತ್ತು ಭವಿಷ್ಯದ ವಿಸ್ತರಣೆ ಎಲ್ಲದರಲ್ಲೂ ಕರ್ನಾಟಕ ಸರ್ಕಾರದ ಪಾಲುದಾರಿಕೆ ಪ್ರಮುಖವಾಗಿದೆ. ಬೆಂಗಳೂರಿನ ಬೆಳವಣಿಗೆಗೆ ಪೂರಕವಾದ ಸಮಗ್ರ, ಸುಸ್ಥಿರ ಮತ್ತು ಸುಗಮ ಸಾರ್ವಜನಿಕ ಸಾರಿಗೆ ವ್ಯವಸ್ಥೆ ರೂಪಿಸುವುದು ರಾಜ್ಯ ಸರ್ಕಾರದ ಆದ್ಯತೆಯಾಗಿದೆ.
The Government of Karnataka is playing the leading role in financing the development and expansion of Namma Metro, contributing more than the Union Government across various phases of the project. Beyond funding construction, we are shouldering the costs of land acquisition, rehabilitation, state taxes, interest during construction, loan repayment and the operation and maintenance of metro services. We are also bearing a significant share of the additional costs arising from project delays while continuing to support new metro lines and network expansion. Strengthening Bengaluru’s public transport infrastructure through an integrated, sustainable and efficient metro network remains one of our key priorities.
#ಇದುನಮ್ಮಮೆಟ್ರೋ #IdhuNammaMetro