I have taken oath as a Cabinet Minister in the NDA Government led by Hon'ble PM Shri @narendramodi avaru.
I extend my respectful thanks to Hon'ble President Mrs. Draupadi Murmu for administering the oath.
I also thank the citizens of the Mandya Lok Sabha Constituency, the people of Karnataka, and the cadres of the JDS and BJP parties for giving me the opportunity to serve the country.
#NDA #JDS #BJP
ಬೆಂಗಳೂರು- ವಿಜಯಪುರ ರೈಲು ಪ್ರಯಾಣದ ಅವಧಿಯನ್ನು 14ರಿಂದ 10 ಗಂಟೆಗೆ ಇಳಿಸಲು ಕ್ರಮ
ವೆಚ್ಚ ಹಂಚಿಕೆಯ 9 ರೈಲ್ವೆ ಯೋಜನೆಗಳಿಗೆ ಕಟ್ಟುನಿಟ್ಟಿನ ಕಾಲಮಿತಿ ನಿಗದಿ
ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದೆ.
ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ.
ಈ ಕ್ರಮಗಳ ಜೊತೆಗೆ ಬೆಂಗಳೂರಿನಿಂದ ವಿಜಯಪುರ, ಬಾಗಲಕೋಟೆಗಳಿಗೆ ವಿಶೇಷ ರೈಲುಗಳನ್ನು ಓಡಿಸಬೇಕಾದ ಅಗತ್ಯವಿದೆ. ಮಿಗಿಲಾಗಿ, ವಿದ್ಯುದೀಕರಣ ಕಾಮಗಾರಿ ಮುಗಿದರೆ ವಿಜಯಪುರ, ಬಾಗಲಕೋಟೆಗಳಿಗೆ `ವಂದೇ ಭಾರತ್’ ಎಕ್ಸಪ್ರೆಸ್ ರೈಲು ಸೇವೆ ಆರಂಭಿಸುವಂತೆ ರೈಲ್ವೆ ಮಂಡಳಿಯನ್ನು ಕೋರಲಾಗುವುದು.
ವೆಚ್ಚ ಹಂಚಿಕೆ ಯೋಜನೆಗಳಿಗೆ ಗಡುವು
ರಾಜ್ಯದಲ್ಲಿ ರೈಲ್ವೆಯೊಂದಿಗೆ ವೆಚ್ಚ ಹಂಚಿಕೆ ಆಧಾರದ ಮೇಲೆ 9 ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ. ಆದರೆ, ಇವು ಕಾಲಮಿತಿಯಲ್ಲಿ ಪೂರ್ಣಗೊಳ್ಳದೆ ಇರುವುದರಿಂದ ವೆಚ್ಚ ಮಿತಿ ಮೀರುತ್ತಿದೆ. ಆದ್ದರಿಂದ ಇವುಗಳ ವೆಚ್ಚ ಹೆಚ್ಚಾಗದಂತೆ ನೋಡಿಕೊಂಡು, ತ್ವರಿತ ಗತಿಯಲ್ಲಿ ಮುಗಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆ.
ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್ ಮಂಜುಳಾ, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ MD ಶ್ರೀ ಸತೀಶ, ನೈರುತ್ಯ ರೈಲ್ವೆಯ ಮುಖ್ಯ ಆಡಳಿತಾಧಿಕಾರಿ, ಶ್ರೀ ರಾಮಗೋಪಾಲ್, ರೈಲ್ವೆಯ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಶ್ರೀ ಮೂರ್ತಿ ರಾಜು, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರರಾದ ಶ್ರೀ ಅರವಿಂದ ಗಲಗಲಿ ಮೊದಲಾದವರು ಸಭೆಯಲ್ಲಿ ಉಪಸ್ಥಿತರಿದ್ದರು.
#kride
ನನ್ನ ಕಿರಿಯ ಮಗ ಧ್ರುವ ಪಾಟೀಲನಿಗೆ ಬಾಲ್ಯದಿಂದಲೂ ಫೋಟೋಗ್ರಾಫಿ ಹಾಗೂ ವನ್ಯಜೀವಿಗಳ ಕುರಿತು ಅತೀವ ಆಸಕ್ತಿ.
ಬೆಂಗಳೂರಿನ ನಮ್ಮ ಮನೆಯ ಸಮೀಪದ ಸ್ಯಾಂಕಿ ಕೆರೆಯ ಸುಂದರ ದೃಶ್ಯಗಳನ್ನು, ವಿವಿಧ ಜಾತಿಯ ಪಕ್ಷಿ, ಪ್ರಾಣಿಗಳ ಚಿತ್ರ ತೆಗೆಯುತ್ತ ಫೋಟೋಗ್ರಾಫಿ ಹವ್ಯಾಸ ಬೆಳೆಸಿಕೊಂಡ.
ವಿಶ್ವದ ಪ್ರಮುಖ ಕಾಡುಗಳ, ವನ್ಯಜೀವಿಯ ಚಿತ್ರಣ ಮಾಡಿರುವ ಧ್ರುವ ಪಾಟೀಲನ ಕುರಿತ ಲೇಖನ ಪ್ರಖ್ಯಾತ ಫೋರ್ಬ್ಸ್ ಇಂಡಿಯಾ ಪತ್ರಿಕೆಯಲ್ಲಿ ಪ್ರಕಟವಾಗಿರುವುದು ತಂದೆಯಾಗಿ ನನಗೆ ಹೆಮ್ಮೆಯಾಗಿದ್ದು, ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇನೆ.
#WorldWildlifeDay #ForbesIndia
#WorldWildlifeDay: All the creatures, tender and powerful
Ahead of World Wildlife Day on Sunday, allow photographer and conservationist Dhruv Patil to take you on a virtual safari
https://t.co/IlBsCOTZzo
"ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟುಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ.ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ
ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ.
ಭಾರತದ ಇತಿಹಾಸದಲ್ಲಿ ಹನ್ನೆರಡನೆ ಶತಮಾನ ಅತ್ಯಂತ ಮಹತ್ವಪೂರ್ಣವಾದುದು. ಅಜ್ಞಾನ, ಜಾತೀಯತೆ,ಮತಾಂಧತೆ,ಶೋಷಣೆ, ಮೌಡ್ಯಗಳಿಂದ ಮುಳುಗಿಹೋಗಿದ್ದ ಸಮಾಜವನ್ನು ಮೇಲೆತ್ತಲು ಅರಸ ಬಿಜ್ಜಳನಿಗೆ ಹಣಕಾಸು ಸಚಿವರಾಗಿದ್ದ ಬಸವಣ್ಣನವರು, ರಾಜಿ ಇಲ್ಲದ ಬದ್ಧತೆ, ಪ್ರಶ್ನಾತೀತವಾದ ಜನಪರ ಕಾಳಜಿ ಮೂಲಕ ಮಾಡಿದ ಪ್ರಯತ್ನ-ಪ್ರಯೋಗಗಳು ಪ್ರಪಂಚದ ಎಲ್ಲ ಆಡಳಿತಗಾರರ ಆದರ್ಶವೆಂದು ನಾನು ನಂಬಿದ್ದೇನೆ.
ಕಾಯಕ ಮತ್ತು ದಾಸೋಹ ನನ್ನ ಇಷ್ಟದ ಬಸವಣ್ಣನನವರ ತತ್ವದ ಮೂಲಧಾತುಗಳು. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಸಂಪತ್ತಿನ ಉತ್ಪಾದನೆಯ ಶಕ್ತಿ ಎಲ್ಲರದ್ದಾಗಬೇಕು, ಅದರ ವಿತರಣೆ ಸಮನಾಗಿ ನಡೆಯಬೇಕು ಎಂದು ಬಸವಣ್ಣನವರ ಆಶಯವಾಗಿತ್ತು. ಸಾಮಾಜಿಕ ನ್ಯಾಯದ ಸಿದ್ಧಾಂತವನ್ನು ಇಷ್ಟೊಂದು ಸರಳವಾಗಿ ವಿಶ್ಲೇಷಿಸುವುದು ಸಾಧ್ಯ ಇಲ್ಲ.
ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ’ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು.
ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿಯೋಜನೆಯಲ್ಲಿಯೂ ಕಾಣಬಹುದು. ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ‘’ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ.
ಕನ್ನಡ ಭಾಷೆಯ ಬಗೆಗಿನ ನಮ್ಮ ಸರ್ಕಾರದ ಬದ್ಧತೆಗೂ ಬಸವಣ್ಣನೇ ಪ್ರೇರಕ ಶಕ್ತಿ. ಬಸವಣ್ಣನವರು ಕನ್ನಡವನ್ನು ಅಂದಿನ ಧರ್ಮದ ಭಾಷೆಯಾಗಿ, ವಿಚಾರದ ಭಾಷೆಯಾಗಿ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಬೆಲೆ ಕಟ್ಟಲಾರದ್ದು. ಹಾಗೆ ನೋಡಿದರೆ ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೇ ಹನ್ನೆರಡನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ.
ಅನ್ನದಾಸೋಹ ಮತ್ತು ಜ್ಞಾನದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕೂಡಾ ನಾನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ.. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ."
--ಸಿದ್ದರಾಮಯ್ಯ
ಮುಖ್ಯಮಂತ್ರಿಗಳು ಕರ್ನಾಟಕ ಸರ್ಕಾರ
ಸಾಮಾಜಿಕ ನ್ಯಾಯದ ಮೊದಲ ಹರಿಕಾರ ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ನಾಯಕ ಎಂದು ಘೋಷಿಸಲು ಇಂದು ನನ್ನ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ತೀರ್ಮಾನಿಸಿದೆ. ನಮ್ಮ ಸರ್ಕಾರದ ಈ ತೀರ್ಮಾನ ಮುಖ್ಯಮಂತ್ರಿಯಾದ ನನಗೆ ಅತೀವ ಹೆಮ್ಮೆ ಮತ್ತು ತೃಪ್ತಿಯನ್ನು ಉಂಟುಮಾಡಿದೆ. ಇದು ಕೇವಲ ಘೋಷಣೆ ಅಲ್ಲ, ಬಸವ ತತ್ವದ ಮೇಲಿರುವ ನಮ್ಮ ನಂಬಿಕೆ ಮತ್ತು ಬದ್ದತೆ.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಬೇಕೆಂದು ನಾಡಿನ ಲಿಂಗಾಯತ ಮಠಗಳ ಸ್ವಾಮಿಗಳು ನನ್ನ ಬಳಿ ಬಂದು ಮನವಿ ಮಾಡಿದ್ದರು. ಇದು ವೈಯಕ್ತಿಕವಾಗಿ ನನ್ನ ಅಪೇಕ್ಷೆಯೂ ಆಗಿತ್ತು. ಸ್ವಾಮಿಗಳ ಈ ಬೇಡಿಕೆಯನ್ನು ಈಡೇರಿಸಿದ ತೃಪ್ತಿ ನಮ್ಮ ಸರ್ಕಾರಕ್ಕೆ ಇದೆ.ಈ ಎಲ್ಲ ಸ್ವಾಮೀಜಿಗಳ ಆಶೀರ್ವಾದ ನಮ್ಮ ಸರ್ಕಾರದ ಮೇಲೆ ಇರಲಿ ಎಂದು ಇದೇ ಸಂದರ್ಭದಲ್ಲಿ ಅರಿಕೆ ಮಾಡಿಕೊಳ್ಳುತ್ತೇನೆ
ವೈಯಕ್ತಿಕವಾಗಿ ಮತ್ತು ರಾಜಕೀಯವಾಗಿ ಬಸವಣ್ಣ ನನ್ನವೈಚಾರಿಕ ಗುರು. ಬಸವ ಜಯಂತಿಯ ದಿನವೇ ನಾನು ಮೊದಲ ಬಾರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದೆ. ಆ ನಿರ್ಧಾರ ಕಾಕತಾಳೀಯವಲ್ಲ, ಉದ್ದೇಶಪೂರ್ವಕವಾದುದು. ಆ ದಿನ ಬಸವಣ್ಣನವರ ಚಿಂತನೆಗಳ ಹಾದಿಯಲ್ಲಿ ನಡೆಯುತ್ತೇನೆ ಎಂದು ನನ್ನ ಮನಸ್ಸಿನೊಳಗೆ ಪ್ರಮಾಣ ಮಾಡಿದ್ದೆ. ಅದರಂತೆ ಬಸವಣ್ಣನವರ ತತ್ವದ ದಾರಿಯಲ್ಲಿಯೇ ನಮ್ಮ ಸರ್ಕಾರ ಈಗಲೂ ಸಾಗುತ್ತಿದೆ. ಈ ಜಾಗೃತಿ ನಮ್ಮ ಸರ್ಕಾರದ ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ಇರಬೇಕೆಂಬ ಉದ್ದೇಶದಿಂದಲೇ ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರವನ್ನು ಕಡ್ಡಾಯವಾಗಿ ಹಾಕಬೇಕೆಂದು ಆದೇಶಿಸಿದ್ದೇನೆ.
ಭಾರತದ ಇತಿಹಾಸದಲ್ಲಿ ಹನ್ನೆರಡನೆ ಶತಮಾನ ಅತ್ಯಂತ ಮಹತ್ವಪೂರ್ಣವಾದುದು. ಅಜ್ಞಾನ, ಜಾತೀಯತೆ,ಮತಾಂಧತೆ,ಶೋಷಣೆ, ಮೌಡ್ಯಗಳಿಂದ ಮುಳುಗಿಹೋಗಿದ್ದ ಸಮಾಜವನ್ನು ಮೇಲೆತ್ತಲು ಅರಸ ಬಿಜ್ಜಳನಿಗೆ ಹಣಕಾಸು ಸಚಿವರಾಗಿದ್ದ ಬಸವಣ್ಣನವರು, ರಾಜಿ ಇಲ್ಲದ ಬದ್ಧತೆ, ಪ್ರಶ್ನಾತೀತವಾದ ಜನಪರ ಕಾಳಜಿ ಮೂಲಕ ಮಾಡಿದ ಪ್ರಯತ್ನ-ಪ್ರಯೋಗಗಳು ಪ್ರಪಂಚದ ಎಲ್ಲ ಆಡಳಿತಗಾರರ ಆದರ್ಶವೆಂದು ನಾನು ನಂಬಿದ್ದೇನೆ.
ಕಾಯಕ ಮತ್ತು ದಾಸೋಹ ನನ್ನ ಇಷ್ಟದ ಬಸವಣ್ಣನನವರ ತತ್ವದ ಮೂಲಧಾತುಗಳು. ಕಾಯಕ ಎಂದರೆ ಉತ್ಪಾದನೆ, ದಾಸೋಹ ಎಂದರೆ ವಿತರಣೆ. ಸಂಪತ್ತಿನ ಉತ್ಪಾದನೆಯ ಶಕ್ತಿ ಎಲ್ಲರದ್ದಾಗಬೇಕು, ಅದರ ವಿತರಣೆ ಸಮನಾಗಿ ನಡೆಯಬೇಕು ಎಂದು ಬಸವಣ್ಣನವರ ಆಶಯವಾಗಿತ್ತು. ಸಾಮಾಜಿಕ ನ್ಯಾಯದ ಸಿದ್ಧಾಂತವನ್ನು ಇಷ್ಟೊಂದು ಸರಳವಾಗಿ ವಿಶ್ಲೇಷಿಸುವುದು ಸಾಧ್ಯ ಇಲ್ಲ.
ಅಣ್ಣನ ಅನ್ನದಾಸೋಹದ ಸಂದೇಶಕ್ಕೆ ಅನುಗುಣವಾಗಿ ಮುಖ್ಯಮಂತ್ರಿಯಾದ ಮರುಗಳಿಗೆಯಲ್ಲಿಯೇ ಅನ್ನಭಾಗ್ಯ’ಯೋಜನೆಯನ್ನು ಜಾರಿಗೊಳಿಸಿದೆ. ಈ ಮೂಲಕ ಹಸಿವು ಮುಕ್ತ ಕರ್ನಾಟಕ ನಿರ್ಮಾಣದ ಸಂಕಲ್ಪ ಕೈಗೊಂಡೆ. ವಿದ್ಯಾರ್ಥಿಗಳಿಗೆ ಬಿಸಿಯೂಟ, ಕ್ಷೀರಭಾಗ್ಯದ ಮೂಲಕ ಹಾಲು, ಇಂದಿರಾ ಕ್ಯಾಂಟೀನ್, ಗರ್ಭಿಣಿ ಮತ್ತು ಬಾಣಂತಿಯರಿಗಾಗಿ ಮಾತೃಪೂರ್ಣ ಯೋಜನೆಗಳು ಬಸವಣ್ಣನವರ ಅನ್ನದಾಸೋಹದ ಚಿಂತನೆಯಿಂದಲೇ ಪ್ರೇರಿತವಾದುದು.
ಸಮಾಜದ ಕಟ್ಟಕಡೆಯ ಮನುಷ್ಯನಿಗೂ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಅವಕಾಶಗಳು ಸಿಗಬೇಕು ಎಂದು ಬಸವಣ್ಣ ಬಯಸಿದ್ದರು. ನಮ್ಮ ಸರ್ಕಾರದ ಯೋಜನೆಗಳತ್ತ ಕಣ್ಣು ಹಾಯಿಸಿದರೆ ಬಸವಣ್ಣನ ಆಶಯಗಳ ಪ್ರಭಾವ ಪ್ರತಿಯೋಜನೆಯಲ್ಲಿಯೂ ಕಾಣಬಹುದು. ಬಡತನ ನಿವಾರಣೆ, ಕೃಷಿ, ನೀರಾವರಿ, ಗ್ರಾಮೀಣ ಅಭಿವೃದ್ಧಿ, ಮಹಿಳಾ ಸಬಲೀಕರಣ, ಉದ್ಯೋಗ ಸೃಷ್ಟಿಗೆ ನಮ್ಮ ಸರ್ಕಾರ ಆದ್ಯತೆ ನೀಡಿ ಅಭಿವೃದ್ಧಿಯ ಜೊತೆಯಲ್ಲಿ ಸಾಮಾಜಿಕ ನ್ಯಾಯವನ್ನು ಬೆಸೆಯುವ ನಮ್ಮ ‘’ಕರ್ನಾಟಕ ಅಭಿವೃದ್ಧಿ ಮಾದರಿಯನ್ನು ಇಡೀ ದೇಶ ಚರ್ಚಿಸುತ್ತಿದೆ. ಬಸವಣ್ಣ ಎಂಬ ಜ್ಞಾನಭಂಡಾರದ ಮಾರ್ಗದರ್ಶನ ಇಲ್ಲದೆ ಇದ್ದರೆ ಇದು ಸಾಧ್ಯವಾಗುತ್ತಿರಲಿಲ್ಲ.
ಕನ್ನಡ ಭಾಷೆಯ ಬಗೆಗಿನ ನಮ್ಮ ಸರ್ಕಾರದ ಬದ್ಧತೆಗೂ ಬಸವಣ್ಣನೇ ಪ್ರೇರಕ ಶಕ್ತಿ. ಬಸವಣ್ಣನವರು ಕನ್ನಡವನ್ನು ಅಂದಿನ ಧರ್ಮದ ಭಾಷೆಯಾಗಿ, ವಿಚಾರದ ಭಾಷೆಯಾಗಿ, ಸಂವಹನದ ಭಾಷೆಯಾಗಿ ಬಳಸಿಕೊಳ್ಳುವ ಮೂಲಕ ಕನ್ನಡ ಸಾಹಿತ್ಯಕ್ಕೆ ನೀಡಿರುವ ಕೊಡುಗೆ ಬೆಲೆ ಕಟ್ಟಲಾರದ್ದು. ಹಾಗೆ ನೋಡಿದರೆ ಕನ್ನಡ ಮಾಧ್ಯಮ ಪರಿಣಾಮಕಾರಿಯಾಗಿ ಜಾರಿಗೆ ಬಂದದ್ದೇ ಹನ್ನೆರಡನೇ ಶತಮಾನದಲ್ಲಿ ಎನ್ನುವುದು ಆಶ್ಚರ್ಯದ ಸಂಗತಿಯಾದರೂ ವಾಸ್ತವ.
ಅನ್ನದಾಸೋಹ ಮತ್ತು ಜ್ಞಾನದಾಸೋಹದ ಮೂಲಕ ರಾಜ್ಯದ ಲಿಂಗಾಯತ ಮಠಗಳು ನಾಡಿನ ಸರ್ವಾಂಗೀಣ ಏಳಿಗೆಗೆ ಶ್ರಮಿಸುತ್ತಿರುವುದನ್ನು ಕೂಡಾ ನಾನು ಕೃತಜ್ಞತಾ ಭಾವದಿಂದ ಸ್ಮರಿಸುತ್ತೇನೆ. ಬಡತನ ಮತ್ತು ಅಜ್ಞಾನದ ನಿವಾರಣೆಯಲ್ಲಿ ಈ ಮಠಗಳು ವಿಶೇಷ ಪಾತ್ರವಹಿಸಿವೆ. ಶಿಕ್ಷಣ ಪ್ರಸಾರಕ್ಕೆ ಧಾರ್ಮಿಕ ಮಠಮಾನ್ಯಗಳು ನೀಡಿರುವ ಕೊಡುಗೆ ಅಪಾರವಾದುದು.
ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆಯನ್ನಷ್ಟೇ ಮಾಡಿ ನಾವು ವಿರಮಿಸುವುದಿಲ್ಲ. ಬಸವ ತತ್ವವನ್ನು ಮನೆಮನೆಗೆ ತಲುಪಿಸುವ ಕಾರ್ಯಕ್ರಮಗಳನ್ನು ರೂಪಿಸಿ ಜಾರಿಗೆ ತರುತ್ತೇವೆ.. ಸಮಸಮಾಜ ನಿರ್ಮಾಣದ ಬಗ್ಗೆ ಬಸವಣ್ಣ ಕಂಡ ಕನಸನ್ನು ಸಾಕಾರಗೊಳಿಸಲು ಎಲ್ಲರ ಸಹಕಾರ ಇರಲಿ.
Belagavi-Delhi @IndiGo6E flight Pilot Akshay Patil makes an in-flight announcement in kannada
Both Pilots Akshay and Sagar were from Belagavi. Akshay thanked Mp @Irannakadadi_MP for the efforts and he gave details of the flight's duration, distance to be covered, and then adds that he hopes more flights are scheduled from Belagavi airport to various destinations, including international.
#IXGtoDEL
#BelagaviDelhiFlight
Our delegation engages in pivotal meetings in USA
✅ Applied Materials commits to a $400M R&D center
✅ Juniper Networks is eyeing expanded R&D and manufacturing.
✅ Western Digital is exploring business ease and AR/VR accelerators.
✅ Inspiring dialogue with Indiaspora: I addressed a gathering of 30+ global Indian-origin leaders.
@PriyankKharge@investkarnataka
ಕಾವೇರಿ ವಿಷಯದಲ್ಲಿ ನೂರು ವರ್ಷಗಳಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಬಂದಿದೆ. ಯಾರೇ ಅಧಿಕಾರದಲ್ಲಿ ಇರಲಿ, ದೆಹಲಿಯಲ್ಲಿ ತಮಿಳುನಾಡಿಗೆ ಇರುವ ರಾಜಕೀಯ ಬಲದ 10% ಕೂಡ ಕರ್ನಾಟಕಕ್ಕೆ ಇಲ್ಲ ಅನ್ನುವುದೇ ಸತ್ಯ. ತಮಿಳರ ಕೇಂದ್ರಿತ ರಾಜಕಾರಣದ ಫಲ ತಮಿಳರಿಗೆ ಇನ್ನು ಹಲವು ಕಾಲ ದೊರೆಯಲಿದೆ. ಕರ್ನಾಟಕಕ್ಕೆ ಅಂತಹ ಅನುಕೂಲ ಸದ್ಯಕ್ಕಂತೂ ಇಲ್ಲ.