ಮತ್ತೋರ್ವ ಸೋದರನನ್���ು ನಾನು ಕಳೆದುಕೊಂಡಿದ್ದೇನೆ. ನನ್ನ ದಶಕಗಳ ಕಾಲದ ಆತ್ಮೀಯ ಒಡನಾಡಿ, ಹಿರಿಯ ನಾಯಕ ಹಾಗೂ ಮಾಜಿ ಸಚಿವ ಶ್ರೀ ರಾಮಚಂದ್ರ ಗೌಡರ ನಿಧನದ ಸುದ್ದಿ ಅತೀವ ದುಃಖವನ್ನು ತಂದಿದೆ. ಜನಸಂಘದ ದಿನಗಳಿಂದಲೂ ಹೆಗಲಿಗೆ ಹೆಗಲು ಕೊಟ್ಟು, ಹಗಲಿರುಳು ಶ್ರಮಿಸಿ, ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಜೊತೆಯಾಗಿ ಕಟ್ಟಿದ ಹೋರಾಟದ ದಿನಗಳು ಕಣ್ಣಮುಂದೆ ಸುಳಿಯುತ್ತಿವೆ. ನನ್ನ ಸಚಿವ ಸಂಪುಟದ ಸಹೋದ್ಯೋಗಿಯಾಗಿ ಅವರ ಆಡಳಿತಾತ್ಮಕ ದಕ್ಷತೆ ಹಾಗೂ ಬದ್ಧತೆಯನ್ನು ನಾನು ಅತ್ಯಂತ ಹತ್ತಿರದಿಂದ ಕಂಡಿದ್ದೇನೆ.
ಅವರ ಅಗಲಿಕೆ ಪಕ್ಷಕ್ಕೆ, ಸಾರ್ವಜನಿಕ ಕ್ಷೇತ್ರಕ್ಕೆ ಮಾತ್ರವಲ್ಲ, ವೈಯಕ್ತಿಕವಾಗಿ ನನ್ನಲ್ಲಿಯೂ ದೊಡ್ಡ ನಿರ್ವಾತವನ್ನು ಸೃಷ್ಟಿಸಿದೆ. ದೇವರು ಅವರ ಆತ್ಮಕ್ಕೆ ಸದ್ಗತಿಯನ್ನು ದಯಪಾಲಿಸಲಿ, ಅವರ ಕುಟುಂಬ ಸದಸ್ಯರಿಗೆ, ಅಭಿಮಾನಿಗಳಿಗೆ ಈ ದು���ಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ🙏
ನನ್ನ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ರೆ ನಾನು ಬರೆಯುವುನ್ನು ನಿಲ್ಲಿಸುತ್ತೇನೆ ಅಂದುಕೊಂಡಿದ್ದರೆ ಅದು ಕೆಲವರ ಭ್ರಮೆ.
ಮುಂದಿನ ದಿನಗಳಲ್ಲಿ ನನ್ನ ಬರಹಗಳು ಇನ್ನಷ್ಟು ಕಠೋರವಾಗಲಿವೆ..
ಮತ್ತಷ್ಟು ತೀಕ್ಷ್ಣವಾಗಲಿವೆ..
ಕಿಡಿಗೇಡಿಗಳ ಧಮಕಿಗಳಿಗೆ ಹೆದರೋಕೆ ನಾನು ಗುಲಾಮ ಸೋಂಬೇರಿಯಲ್ಲ.
ಕಟ್ಟರ್ ಹಿಂದೂತ್ವವಾದಿ..
ಜೈ ಶ್ರೀರಾಮ್..🚩