ಬಿಜೆಪಿ ಪಕ್ಷದ ನಾಯಕರು, ಮಾಜಿ ಸಚಿವರು, ಹಾಗೂ ವಿಧಾನ ಪರಿಷತ್ ಸದಸ್ಯರಾದ ಶ್ರೀ ಸಿ.ಟಿ.ರವಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು.
ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಯಶಸ್ಸು, ಉತ್ತಮ ಆಯುರಾರೋಗ್ಯ ಹಾಗೂ ಜನಸೇವೆಯ ಮೂಲಕ ರಾಜ್ಯದ ಅಭಿವೃದ್ಧಿಗೆ ಮತ್ತಷ್ಟು ಕೊಡುಗೆ ನೀಡುವ ಶಕ್ತಿ ಮತ್ತು ಅವಕಾಶಗಳು ಅವರಿಗೆ ಲಭಿಸಲಿ ಎಂದು ಹಾರೈಸುತ್ತೇನೆ. ಭಗವಂತನು ಅವರಿಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ.
Deeply saddened to learn of the passing of Smt. Chennamma, beloved wife of former Prime Minister Hon'ble Shri H. D. Deve Gowda Appaji.
She lived a meaningful and fulfilling life of 85 years and will be remembered for her simplicity, grace, and strong family values.
I pray to the Almighty to grant eternal peace to her soul and give strength and courage to Hon'ble Shri H. D. Deve Gowda Appaji and the entire family to bear this profound loss.
Om Shanti. 🙏
ಕೊಪ್ಪವನ್ನು ಜಿಲ್ಲಾ ಕೇಂದ್ರವನ್ನಾಗಿಸಿದಾಗ ಮಾತ್ರವೇ ಮಲೆನಾಡಿನ ಸಮಗ್ರ ಅಭಿವೃದ್ಧಿ ಸಾಧ್ಯವಾಗಲಿದೆ. ಮಲೆನಾಡಿಗೆ ಸಮರ್ಪಕ ರಸ್ತೆ ಸಂಪರ್ಕದ ಜೊತೆಗೆ ರೈಲ್ವೆ ಸಂಪರ್ಕವನ್ನು ಕಲ್ಪಿಸಬೇಕು. ಬಾಳೆಹೊನ್ನೂರು ರಂಭಾಪುರಿ ಪೀಠ, ಹರಿಹರಪುರ, ಶೃಂಗೇರಿ ಶ್ರೀ ಶಾರದಾಂಬ ಸನ್ನಿಧಿಗೆ ಪ್ರತಿ ದಿನ ಸಾವಿರಾರು ಭಕ್ತರು ಆಗಮಿಸುತ್ತಾರೆ. ಹೀಗಿರುವಾಗ ರೈಲ್ವೆ ಸಂಪರ್ಕ ಕಲ್ಪಿಸಿದರೆ ಭಕ್ತರಿಗೆ ಅನುಕೂಲವಾಗುವ ಜೊತೆಗೆ ಮಲೆನಾಡಿನ ಉದ್ಯಮದ ಅಭಿವೃದ್ಧಿಗೂ ಅನುಕೂಲವಾಗಲಿದೆ.
ಶಿವಮೊಗ್ಗ ಶೃಂಗೇರಿ ರೈಲು ಮಾರ್ಗ: ಜೆಡಿಎಸ್ ಮನವಿ
ಶಿವಮೊಗ್ಗ ಶೃಂಗೇರಿ ರೈಲು ಯೋಜನೆಯ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ವೇಳೆ ಶಿವಮೊಗ್ಗ- ಭದ್ರಾವತಿ -ಮುತ್ತಿನ ಕೊಪ್ಪ- ನರಸಿಂಹರಾಜಪುರ ಬಾಳೆಹೊನ್ನೂರು -ಜಯಪುರ ಕೊಪ್ಪ- ಹರಿಹರಪುರ- ಶೃಂಗೇರಿ ಮಾರ್ಗವನ್ನು ಸಮಗ್ರವಾಗಿ ಪರಿಗಣಿಸಬೇಕು.
ಈ ವಿಷಯವಾಗಿ ಮೈಸೂರು ವಿಭಾಗದ ವಿಭಾಗಿಯ ರೈಲ್ವೆ ವ್ಯವಸ್ಥೆ ಶ್ರೀಮುತಿಲ್ ಅವರಿಗೆ ಸಲ್ಲಿಸಿರುವ ಮನವಿಯ ಪ್ರತಿಯನ್ನು ಶಿವಮೊಗ್ಗ ಲೋಕಸಭಾ ಸದಸ್ಯರಾದ ಶ್ರೀ ಬಿ ವೈ ರಾಘವೇಂದ್ರ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯರಾದ ಶ್ರೀ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಕಳುಹಿಸಲಾಗಿದೆ.
ಇತ್ತೀಚೆಗೆ ಡಿ ಆರ್ ಎಂ ಅವರೊಂದಿಗೆ ನಡೆದ ಸಭೆಯಲ್ಲಿ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಹಂತದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರಿಂದ ಲಿಖಿತ ಅಭಿಪ್ರಾಯಗಳನ್ನು ಆಹ್ವಾನಿಸಲಾಗಿತ್ತು. ಅದರಂತೆ ಈ ಮಾರ್ಗವನ್ನು ಪರಿಗಣಿಸುವಂತೆ ಮನವಿ ಪತ್ರದಲ್ಲಿ ಸೂಚಿಸಲಾಗಿದೆ.
ಈ ಮಾರ್ಗವು ಶಿವಮೊಗ್ಗ, ಭದ್ರಾವತಿ, ಮುತ್ತಿನ ಕೊಪ್ಪ, ನರಸಿಂಹರಾಜಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಹಾಗೂ ಶೃಂಗೇರಿ ಸೇರಿದಂತೆ ಮಲೆನಾಡಿನ ಪ್ರಮುಖ ಪಟ್ಟಣಗಳು ಮತ್ತು ಧಾರ್ಮಿಕ ಕ್ಷೇತ್ರಗಳನ್ನು ಸಂಪರ್ಕಿಸುತ್ತದೆ. ಶಿವಮೊಗ್ಗ ಹಾಗೂ ಭದ್ರಾವತಿ ಪ್ರಮುಖ ವಾಣಿಜ್ಯ ಮತ್ತು ಕೈಗಾರಿಕಾ ನಗರಗಳಾಗಿದ್ದು ನರಸಿಂಹರಾಜಪುರ, ಬಾಳೆಹೊನ್ನೂರು ಮತ್ತು ಹರಿಹರಪುರ, ಧಾರ್ಮಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿವೆ. ಶೃಂಗೇರಿ ವಿಶ್ವವಿಖ್ಯಾತ ಶ್ರೀ ಶಾರದಾ ಪೀಠದ ಮೂಲಕ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಆಧ್ಯಾತ್ಮಿಕ ಕ್ಷೇತ್ರವಾಗಿದೆ.
ಅಡಿಕೆ, ಕಾಫಿ, ಕಾಳುಮೆಣಸು, ಅರಿಶಿಣ, ಭತ್ತ ಸೇರಿದಂತೆ ಮಲೆನಾಡಿನ ಕೃಷಿ ಉತ್ಪನ್ನಗಳನ್ನು ದೇಶದ ವಿವಿಧ ಮಾರುಕಟ್ಟೆಗಳಿಗೆ ವೇಗವಾಗಿ ಸಾಗಿಸಲು ರೈಲು ಮಾರ್ಗ ನೆರವಾಗಲಿದ್ದು ಆಹಾರ ಸಂಸ್ಕರಣಾ ಕೈಗಾರಿಕೆಗಳು ಗೋದಾವುಗಳು ಲಾಜಿಸ್ಟಿಕ್ಸ್ ಪಾರ್ಕ್ ಗಳು ಹಾಗೂ ಕೃಷಿ ಆಧಾರಿತ ಕೈಗಾರಿಕೆಗಳ ಸ್ಥಾಪನೆಗೆ ಉತ್ತೇಜನ ದೊರೆಯಲಿದೆ.
ಅಲ್ಲದೆ ಮಾಹಿತಿ ತಂತ್ರಜ್ಞಾನ ಸೇವಾ ವಲಯ ಹಾಗೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಹೂಡಿಕೆಗೂ ಈ ರೈಲು ಯೋಜನೆ ಪೂರಕವಾಗಲಿದ್ದು, ಸಾವಿರಾರು ಯುವಕರಿಗೆ ಉದ್ಯೋಗಾವಕಾಶಗಳು ಸೃಷ್ಟಿಯಾಗಿ ಮಲೆನಾಡಿನ ಸಮಗ್ರ ಆರ್ಥಿಕ ಅಭಿವೃದ್ಧಿಗೆ ಹೊಸ ದಿಕ್ಕು ದೊರೆಯಲಿದೆ.

ನನ್ನ ಜನ್ಮದಿನದ ಅಂಗವಾಗಿ ಆತ್ಮೀಯ ಶುಭಾಶಯಗಳನ್ನು ತಿಳಿಸಿ ಆಶೀರ್ವದಿಸಿದ ಜೆಡಿಎಸ್ ಪಕ್ಷದ ರಾಷ್ಟ್ರಾಧ್ಯಕ್ಷರಾದ ಪೂಜ್ಯ ಸನ್ಮಾನ್ಯ ಶ್ರೀ ಹೆಚ್. ಡಿ. ದೇವೇಗೌಡ ಅಪ್ಪಾಜಿ ಅವರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳು. ನಿಮ್ಮ ಅಪಾರ ಪ್ರೀತಿ, ವಿಶ್ವಾಸ ಮತ್ತು ಆಶೀರ್ವಾದಗಳು ನನಗೆ ಅಮೂಲ್ಯವಾದ ಪ್ರೇರಣೆಯಾಗಿದ್ದು, ಜನಸೇವೆಯ ಹಾದಿಯಲ್ಲಿ ಇನ್ನಷ್ಟು ಸಮರ್ಪಣಾಭಾವದಿಂದ ಕಾರ್ಯನಿರ್ವಹಿಸಲು ಹೊಸ ಉತ್ಸಾಹವನ್ನು ತುಂಬಿವೆ.
ನಿಮ್ಮ ಮಾರ್ಗದರ್ಶನ, ಆಶೀರ್ವಾದ ಮತ್ತು ವಿಶ್ವಾಸವನ್ನು ಸದಾ ಗೌರವದಿಂದ ಕಾಪಾಡಿಕೊಂಡು, ಪಕ್ಷದ ತತ್ವ-ಸಿದ್ಧಾಂತಗಳಿಗೆ ಬದ್ಧನಾಗಿ ಜನರ ಸೇವೆಗೆ ನಿರಂತರವಾಗಿ ಶ್ರಮಿಸುವ ಸಂಕಲ್ಪವನ್ನು ಮತ್ತಷ್ಟು ಬಲಪಡಿಸಿಕೊಳ್ಳುತ್ತೇನೆ. ಮತ್ತೊಮ್ಮೆ ತಮ್ಮ ಅಮೂಲ್ಯ ಶುಭಾಶಯಗಳು ಮತ್ತು ಆಶೀರ್ವಾದಗಳಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಅರ್ಪಿಸುತ್ತೇನೆ.

ಶೃಂಗೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಜೆಡಿಎಸ್ ಪಕ್ಷದ ರಾಷ್ಟ್ರೀಯ ವಕ್ತಾರರಾದ ಶ್ರೀ ಸುಧಾಕರ ಶೆಟ್ಟಿ ಅವರಿಗೆ ಜನ್ಮದಿನದ ಶುಭಾಶಯಗಳು.
ಶಾರದಾಂಬ ತಾಯಿಯು ಅವರಿಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಕರುಣಿಸಿ, ಜನಸೇವೆ ಮುಂದುವರಿಸಲು ಹೆಚ್ಚಿನ ಶಕ್ತಿ ಹಾಗೂ ಅವಕಾಶಗಳನ್ನು ಕಲ್ಪಿಸಲಿ ಎಂದು ಹಾರೈಸುತ್ತೇನೆ.
ಶ್ರೀ ಸ್ವಾಮಿ ವಿವೇಕಾನಂದರವರು ತಮ್ಮ ಚಿಂತನೆ, ಆದರ್ಶ ಮತ್ತು ದೇಶಪ್ರೇಮದ ಸಂದೇಶಗಳ ಮೂಲಕ ಯುವಜನತೆಯಲ್ಲಿ ಆತ್ಮವಿಶ್ವಾಸ, ಶಿಸ್ತು, ಸೇವಾ ಮನೋಭಾವ ಹಾಗೂ ರಾಷ್ಟ್ರಭಕ್ತಿಯನ್ನು ಜಾಗೃತಗೊಳಿಸಿದ ಮಹಾನ್ ಸಂತರಾಗಿದ್ದರು. ಅವರು ತೋರಿದ ಸತ್ಯ, ಸೇವೆ ಮತ್ತು ಸ್ವಾಭಿಮಾನದ ಮಾರ್ಗವು ಪ್ರತಿಯೊಬ್ಬರ ಜೀವನಕ್ಕೂ ಶಾಶ್ವತ ಪ್ರೇರಣೆಯಾಗಿದೆ. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಸದೃಢ, ಸುಸಂಸ್ಕೃತ ಹಾಗೂ ಸ್ವಾವಲಂಬಿ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವ ಸಂಕಲ್ಪ ಮಾಡೋಣ. ಶ್ರೀ ಸ್ವಾಮಿ ವಿವೇಕಾನಂದರವರ ಪವಿತ್ರ ಸ್ಮೃತಿಗೆ ಭಾವಪೂರ್ಣ ನಮನಗಳು.
ಪತ್ರಕರ್ತರ ಸಮಸ್ಯೆಗಳು, ವರದಿಗಾರರ ಸವಾಲುಗಳು ಹಾಗೂ ಒಂದು ಪತ್ರಿಕೆಯನ್ನು ಯಶಸ್ವಿಯಾಗಿ ನಡೆಸುವ ಜವಾಬ್ದಾರಿ ಎಷ್ಟು ದೊಡ್ಡದು ಎಂಬುದು ನನಗೆ ಚೆನ್ನಾಗಿ ತಿಳಿದಿದೆ. ಪ್ರತಿದಿನ ಸಮಾಜದ ವಿವಿಧ ಆಯಾಮಗಳನ್ನು ಪ್ರತಿಬಿಂಬಿಸುವ ಸುದ್ದಿಗಳನ್ನು ಸಂಗ್ರಹಿಸಿ, ಪರಿಶೀಲಿಸಿ, ಸಂಪಾದಿಸಿ ಓದುಗರ ಮುಂದೆ ತಲುಪಿಸುವುದು ಅತ್ಯಂತ ಜವಾಬ್ದಾರಿಯುತ ಮತ್ತು ಸವಾಲಿನ ಕೆಲಸ.
ನಾನು ಸುಮಾರು ಎಂಟು ವರ್ಷಗಳ ಕಾಲ ಮೈಸೂರಿನಿಂದ ಪ್ರಕಟವಾಗುತ್ತಿದ್ದ 'ಸಂಕ್ರಾಂತಿ' ಪತ್ರಿಕೆಯ ಸಂಪಾದಕನಾಗಿ ಕಾರ್ಯನಿರ್ವಹಿಸಿರುವುದು ನನ್ನ ಜೀವನಕ್ಕೆ ಮರೆಯಲಾರದ ಅವಿಸ್ಮರಣೀಯ ಅನುಭವವಾಗಿದೆ.
Warm birthday wishes to former Vice President of India, Shri M. Venkaiah Naidu avaru. His life reflects dedication to the nation, deep care for farmers & rural India, and commitment to public service.
Wishing him good health & happiness.
ರಾಜ್ಯ ಸರ್ಕಾರ ಪ್ರಸ್ತಾಪಿಸಿರುವ ಬಿಡದಿ ಟೌನ್ಶಿಪ್ ಯೋಜನೆಯು ರಾಜ್ಯದ ಅಭಿವೃದ್ಧಿಗಿಂತ ಕಾಂಗ್ರೆಸ್ ಪಕ್ಷದ ಆಂತರಿಕ ಭಿನ್ನಾಭಿಪ್ರಾಯಗಳನ್ನು ಮುಚ್ಚಿಹಾಕುವ ಪ್ರಯತ್ನವಾಗಿದೆ. ಪ್ರಸ್ತುತ ಕರ್ನಾಟಕದಲ್ಲಿ ಅತ್ಯಂತ ಚರ್ಚೆಯ ವಿಷಯವಾಗಿರುವ ಬಿಡದಿ ಟೌನ್ಶಿಪ್ ಯೋಜನೆಯ ಬಗ್ಗೆ ಮುಖ್ಯಮಂತ್ರಿ ಅವರು ಅತಿಯಾದ ಗಮನ ಹರಿಸುತ್ತಿದ್ದು, ವಿಧಾನಸೌಧವನ್ನು ಬಿಟ್ಟು ಬಿಡದಿ ವಿಚಾರದಲ್ಲೇ ಸಂಪೂರ್ಣವಾಗಿ ತೊಡಗಿಸಿಕೊಂಡಿರುವಂತಿದೆ.
ಕಾಂಗ್ರೆಸ್ ಪಕ್ಷದೊಳಗಿನ ಭಿನ್ನಾಭಿಪ್ರಾಯಗಳು ಹಾಗೂ ಮುಖ್ಯಮಂತ್ರಿ ವಿರೋಧಿ ಬಣದ ಒತ್ತಡದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯುವ ಉದ್ದೇಶದಿಂದ ಈ ಯೋಜನೆಯನ್ನು ಮುಂದಿಟ್ಟಿದ್ದಾರೆ.
ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಕೆ.ಹೆಚ್. ಮುನಿಯಪ್ಪ, ಕೃಷ್ಣ ಬೈರೇಗೌಡ ಹಾಗೂ ಕೆ.ಜೆ. ಜಾರ್ಜ್ ಸೇರಿದಂತೆ ಹಲವು ನಾಯಕರಿಗೆ ಸರ್ಕಾರದ ಕಾರ್ಯವೈಖರಿಯ ಬಗ್ಗೆ ಸಂಪೂರ್ಣ ಸಹಮತ ಇಲ್ಲದಿರುವುದು ಸಾರ್ವಜನಿಕವಾಗಿ ಗೋಚರಿಸುತ್ತಿದೆ. ಇದೇ ವೇಳೆ ಹಿರಿಯ ರಾಜಕಾರಣಿ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ಕುರಿತು ಬಹಿರಂಗವಾಗಿ ಮಾತನಾಡಿರುವುದು ಕಾಂಗ್ರೆಸ್ನ ಆಂತರಿಕ ಅಸಮಾಧಾನವನ್ನು ತೋರಿಸುತ್ತದೆ.
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ 136 ಶಾಸಕರಲ್ಲಿ ಬಹುತೇಕ ಎಲ್ಲರೂ ಸಚಿವ ಸ್ಥಾನಕ್ಕಾಗಿ ಒತ್ತಡ ಹೇರುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಸರ್ಕಾರದ ಮೇಲೆ ಭಾರೀ ಒತ್ತಡ ಉಂಟಾಗಿದ್ದು, ಗ್ಯಾರಂಟಿ ಯೋಜನೆಗಳ ಅನುಷ್ಠಾನ, ವಿವಿಧ ಸಮಿತಿಗಳ ಕಾರ್ಯಚಟುವಟಿಕೆಗಳು ಹಾಗೂ ಆಡಳಿತಾತ್ಮಕ ಸವಾಲುಗಳ ನಡುವೆ ಸರ್ಕಾರ ಸಿಲುಕಿಕೊಂಡಿದೆ.
ಈ ಎಲ್ಲ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ತಿರುಗಿಸಲು ಬಿಡದಿ ಟೌನ್ಶಿಪ್ ಯೋಜನೆಯನ್ನು ಮುಂದಿಟ್ಟಿದ್ದಾರೆ. ಸುಮಾರು 7,500 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಈ ಯೋಜನೆಯಿಂದ ರೇಷ್ಮೆ ಬೆಳೆಗಾರರು, ಮಾವು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಲಿದ್ದು, ಸಾವಿರಾರು ಮರಗಳ ನಾಶವಾಗುವ ಸಾಧ್ಯತೆ ಇದೆ. ಸುಮಾರು 3,000 ವಿವಿಧ ಜಾತಿಯ ಮರಗಳು ಹಾಗೂ 10,000ಕ್ಕೂ ಹೆಚ್ಚು ತೆಂಗಿನ ಮರಗಳು ಕಡಿದುಹಾಕುವ ಪರಿಸ್ಥಿತಿ ಎದುರಾಗಬಹುದು.
ರಾಜ್ಯದ ಜನತೆ ಅಭಿವೃದ್ಧಿಗಾಗಿ ಸರ್ಕಾರಕ್ಕೆ ಅಧಿಕಾರ ನೀಡಿದ್ದು, ಸಚಿವ ಸಂಪುಟ ಸಭೆಗಳನ್ನು ನಡೆಸಿ ರಾಜ್ಯದ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಬೇಕಾಗಿದೆ. ಆದರೆ ಕಾಂಗ್ರೆಸ್ ಸರ್ಕಾರದ ಒಳಜಗಳ, ನಾಯಕತ್ವದ ಗೊಂದಲ ಹಾಗೂ ಮುಸುಕಿನ ಗುದ್ದಾಟಗಳಿಂದ ರಾಜ್ಯದ ಅಭಿವೃದ್ಧಿ ಹಿನ್ನಡೆಯಾಗಿದೆ.
ಪ್ರಸ್ತುತ ರಾಜ್ಯದಲ್ಲಿ ಇದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರವೋ ಅಥವಾ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸರ್ಕಾರವೋ ಎಂಬ ಗೊಂದಲ ಜನರಲ್ಲಿ ಮೂಡಿದ್ದು, ಈ ನಾಯಕತ್ವದ ಸಂಘರ್ಷದ ನಡುವೆ ಜನರ ಅಭಿವೃದ್ಧಿ ಸಂಪೂರ್ಣವಾಗಿ ಕಡೆಗಣಿಸಲಾಗಿದೆ.
ಬಿಡದಿ ಟೌನ್ಶಿಪ್ ಯೋಜನೆಯ ಮೂಲಕ ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಯತ್ನಿಸುತ್ತಿದೆ. ಆದರೆ ಸ್ಥಳೀಯ ರೈತರನ್ನು ಒಕ್ಕಲೆಬ್ಬಿಸುವ ಯಾವುದೇ ಕ್ರಮ ಸರ್ಕಾರಕ್ಕೆ ರಾಜಕೀಯವಾಗಿ ಮಾರಕವಾಗುವ ಸಾಧ್ಯತೆ ಇದೆ.
ಆದ್ದರಿಂದ ಸರ್ಕಾರ ಬಿಡದಿ ಟೌನ್ಶಿಪ್ ಯೋಜನೆಯನ್ನು ಮರುಪರಿಶೀಲಿಸಿ, ಪಕ್ಷದೊಳಗಿನ ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳುವತ್ತ ಗಮನ ಹರಿಸಬೇಕು. ಇಲ್ಲವಾದರೆ ಈ ಯೋಜನೆಯು ಮುಂದಿನ ದಿನಗಳಲ್ಲಿ ಸರ್ಕಾರದ ರಾಜಕೀಯ ಅವನತಿಗೆ ಕಾರಣವಾಗಬಹುದು.
ದೇಶದ ಅತ್ಯುನ್ನತ ಹುದ್ದೆಯಾದ ರಾಷ್ಟ್ರಪತಿ ಸ್ಥಾನವನ್ನು ಅಲಂಕರಿಸಿರುವ ಶ್ರೀಮತಿ ದ್ರೌಪದಿ ಮುರ್ಮು ಅವರು ತಮ್ಮ ಸರಳತೆ, ಪ್ರಾಮಾಣಿಕತೆ ಹಾಗೂ ಜನಪರ ಕಾಳಜಿಯಿಂದ ದೇಶದ ಜನಮನ ಗೆದ್ದಿರುವ ಅಪರೂಪದ ನಾಯಕಿ.
ಆದಿವಾಸಿ ಸಮುದಾಯದಿಂದ ರಾಷ್ಟ್ರಪತಿ ಹುದ್ದೆಯವರೆಗೆ ಏರಿದ ಅವರ ಜೀವನ ಪಯಣವು ಕೋಟ್ಯಂತರ ಭಾರತೀಯರಿಗೆ ಸ್ಪೂರ್ತಿದಾಯಕವಾಗಿದೆ. ಶಿಕ್ಷಣ, ಸಾಮಾಜಿಕ ಸೇವೆ ಹಾಗೂ ಸಾರ್ವಜನಿಕ ಬದುಕಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಅವರು ಸಮಾನತೆ, ಸಂವಿಧಾನದ ಮೌಲ್ಯಗಳು ಮತ್ತು ರಾಷ್ಟ್ರದ ಅಭಿವೃದ್ಧಿಗೆ ಸದಾ ಬದ್ಧರಾಗಿದ್ದಾರೆ.
ದೇಶದ ಗೌರವವನ್ನು ವಿಶ್ವ ಮಟ್ಟದಲ್ಲಿ ಮತ್ತಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿರುವ ಗೌರವಾನ್ವಿತ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ಅವರು ಉತ್ತಮ ಆರೋಗ್ಯ, ದೀರ್ಘಾಯುಷ್ಯ ಮತ್ತು ಇನ್ನಷ್ಟು ಯಶಸ್ಸುಗಳನ್ನು ಹೊಂದಿ ರಾಷ್ಟ್ರಸೇವೆಯಲ್ಲಿ ಮುಂದುವರಿಯಲಿ ಎಂದು ಹಾರೈಸುತ್ತೇವೆ.
ಕರ್ನಾಟಕ ಸರ್ಕಾರದಲ್ಲಿ ನಡೆಯಲಿರುವ ಸಚಿವ ಸಂಪುಟ ವಿಸ್ತರಣೆಯಲ್ಲಿ ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗಿ ಅಧಿಕಾರ ವಹಿಸಿಕೊಳ್ಳುವ ಸಾಧ್ಯತೆ ಇರುವ ಹಿನ್ನೆಲೆ, ರಾಜ್ಯದ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಬೇಕು.
ರಾಜ್ಯದ ಗೃಹ ಇಲಾಖೆಯ ವ್ಯಾಪ್ತಿ ಅತ್ಯಂತ ದೊಡ್ಡದಾಗಿದ್ದು, ಸುಮಾರು 906 ಪೊಲೀಸ್ ಠಾಣೆಗಳು, 230ಕ್ಕೂ ಹೆಚ್ಚು ವೃತ್ತ (ಸರ್ಕಲ್) ಕಚೇರಿಗಳು, 31 ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿಗಳು ಹಾಗೂ 15ಕ್ಕೂ ಹೆಚ್ಚು ಐಜಿಪಿ ಹುದ್ದೆಗಳು ಕಾರ್ಯನಿರ್ವಹಿಸುತ್ತಿವೆ. ರಾಜ್ಯದಲ್ಲಿ ಸುಮಾರು 1.13 ಲಕ್ಷ ಪೊಲೀಸ್ ಸಿಬ್ಬಂದಿ ಇದ್ದರೂ, ಸುಮಾರು 18 ಸಾವಿರ ಸಿಬ್ಬಂದಿಗಳ ಕೊರತೆ ಇದೆ
ಇಂತಹ ದೊಡ್ಡ ಇಲಾಖೆಯ ಹೊಣೆಗಾರಿಕೆಯನ್ನು ವಹಿಸಿಕೊಳ್ಳಲಿರುವ ಗೃಹ ಸಚಿವರು ರಾಜ್ಯದ ಜನರ ಜೀವ ಮತ್ತು ಆಸ್ತಿಯ ರಕ್ಷಣೆಗೆ ಆದ್ಯತೆ ನೀಡಬೇಕು. ರಾಜ್ಯದಲ್ಲಿ ಪ್ರತಿವರ್ಷ ಸುಮಾರು ಎರಡು ಲಕ್ಷಕ್ಕೂ ಅಧಿಕ ಅಪರಾಧ ಪ್ರಕರಣಗಳು ದಾಖಲಾಗುತ್ತಿದ್ದು, ಕಳ್ಳತನ, ದರೋಡೆ, ಅತ್ಯಾಚಾರ ಹಾಗೂ ಇತರೆ ಗಂಭೀರ ಅಪರಾಧಗಳು ಹೆಚ್ಚುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ.
ರಾಜ್ಯದಲ್ಲಿ ಸುಮಾರು 15 ಸಾವಿರದಿಂದ 25 ಸಾವಿರದವರೆಗೆ ರೌಡಿಶೀಟರ್ಗಳು ಇದ್ದಾರೆ ಎನ್ನುವ ಅಂಕಿಅಂಶಗಳಿವೆ. ಇತ್ತೀಚೆಗೆ ಅನೇಕ ರೌಡಿಶೀಟರ್ಗಳನ್ನು ಪಟ್ಟಿಯಿಂದ ಹೊರಗಿಡುವ ಪ್ರಕ್ರಿಯೆಗಳು ನಡೆದಿರುವುದನ್ನು ಗಮನಿಸಿದ್ದೇನೆ. ಈ ರೀತಿಯ ವಿಷಯಗಳ ಬಗ್ಗೆ ಗೃಹ ಇಲಾಖೆ ಗಂಭೀರವಾಗಿ ಚಿಂತನೆ ನಡೆಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ.
ಪ್ರಿಯಾಂಕ್ ಖರ್ಗೆ ಅವರು ಗೃಹ ಸಚಿವರಾಗುವ ಸಂದರ್ಭದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಜನರಲ್ಲಿ ಧೈರ್ಯ ಮತ್ತು ವಿಶ್ವಾಸ ತುಂಬುವ ಕೆಲಸ ಮಾಡಬೇಕು. ರಾಜ್ಯದ ಯಾವುದೇ ಭಾಗದಲ್ಲಿ ದರೋಡೆ, ರೌಡಿಸಂ, ಕಾನೂನು ಉಲ್ಲಂಘನೆಗಳಿಗೆ ಅವಕಾಶ ನೀಡುವುದಿಲ್ಲ ಎಂಬ ಸ್ಪಷ್ಟ ಸಂದೇಶವನ್ನು ಜನತೆಗೆ ನೀಡಬೇಕು.
ಕಳೆದ ಕೆಲವು ದಿನಗಳಿಂದ ಪ್ರಿಯಾಂಕ್ ಖರ್ಗೆ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್ಎಸ್ಎಸ್) ಕುರಿತ ವಿಷಯಗಳ ಬಗ್ಗೆ ಮಾತ್ರ ಹೆಚ್ಚು ಮಾತನಾಡುತ್ತಿರುವುದನ್ನು ಗಮನಿಸಿದ್ದೇನೆ. ಆದರೆ ಗೃಹ ಇಲಾಖೆಯ ವ್ಯಾಪ್ತಿಯಲ್ಲಿರುವ ರಾಜ್ಯದ ಭದ್ರತೆ, ಅಪರಾಧ ನಿಯಂತ್ರಣ, ಪೊಲೀಸ್ ಸಿಬ್ಬಂದಿ ಕೊರತೆ ಹಾಗೂ ಸಾರ್ವಜನಿಕ ಸುರಕ್ಷತೆ ಮೊದಲಾದ ಮಹತ್ವದ ವಿಷಯಗಳ ಕುರಿತು ಹೆಚ್ಚಿನ ಗಮನ ಹರಿಸುವುದು ಅಗತ್ಯವಾಗಿದೆ.
ಯಾವುದೇ ಸಂಸ್ಥೆಯಾದರೂ ಕಾನೂನಿನ ಪ್ರಕಾರ ಲೆಕ್ಕಪತ್ರಗಳನ್ನು ನಿರ್ವಹಿಸಲೇಬೇಕು. ಆರ್ಎಸ್ಎಸ್ ಸೇರಿದಂತೆ ಯಾವುದೇ ಸಂಘಟನೆಯ ಹಣಕಾಸು ವ್ಯವಹಾರಗಳ ಕುರಿತು ಮಾಹಿತಿ ಬೇಕಾದರೆ ಸಂಬಂಧಪಟ್ಟ ಇಲಾಖೆಗಳಾದ ಆದಾಯ ತೆರಿಗೆ ಇಲಾಖೆ, ನೋಂದಣಿ ಪ್ರಾಧಿಕಾರ ಅಥವಾ ಆಡಿಟ್ ವ್ಯವಸ್ಥೆಗಳ ಮೂಲಕ ಪಡೆಯಬಹುದಾಗಿದೆ. ಈ ವಿಚಾರಗಳನ್ನು ರಾಜಕೀಯ ಪ್ರಚಾರದ ದೃಷ್ಟಿಯಿಂದ ನೋಡುವ ಬದಲು, ರಾಜ್ಯದ ಅಭಿವೃದ್ಧಿ ಮತ್ತು ಜನರ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುವುದು ಮುಖ್ಯ.
ನಾನು ಜೆಡಿಎಸ್ ಪಕ್ಷದವನಾಗಿದ್ದರೂ, ರಾಜ್ಯದ ಹಿತದೃಷ್ಟಿಯಿಂದಲೇ ಈ ಸಲಹೆಗಳನ್ನು ನೀಡುತ್ತಿದ್ದೇನೆ. ಕರ್ನಾಟಕದಲ್ಲಿ ಪೊಲೀಸ್ ಇಲಾಖೆಯ ಬಲವರ್ಧನೆ, ಖಾಲಿ ಇರುವ ಸುಮಾರು 18 ಸಾವಿರ ಕಾನ್ಸ್ಟೇಬಲ್ ಹುದ್ದೆಗಳ ಭರ್ತಿ, ಅಪರಾಧ ನಿಯಂತ್ರಣ ಮತ್ತು ಕಾನೂನು ಸುವ್ಯವಸ್ಥೆ ಸುಧಾರಣೆಗೆ ಗೃಹ ಇಲಾಖೆ ವಿಶೇಷ ಗಮನ ಹರಿಸಬೇಕು. ರಾಜ್ಯದ ಅಭಿವೃದ್ಧಿಗೆ ಪೂರಕವಾಗುವ ರೀತಿಯಲ್ಲಿ ವ್ಯವಸ್ಥಿತ ಮತ್ತು ಶಿಸ್ತುಬದ್ಧ ಆಡಳಿತ ನೀಡಿದರೆ ಜನರಲ್ಲಿ ವಿಶ್ವಾಸ ಹೆಚ್ಚುತ್ತದೆ.
On #WorldDayAgainstChildLabour, we must remember that every child deserves a classroom, not a workplace. Ending child labour means protecting childhood, ensuring access to education, and giving every child the chance to build a better future. Let us all commit to creating opportunities where children can learn, grow, and dream safely. #NoChildLabour #EducationForAll #ProtectChildren
ದಿನಾಂಕ 10.6.2026 ರಂದು ಮಾಜಿ ಪ್ರಧಾನಿ ಪೂಜ್ಯ ಹೆಚ್ ಡಿ ದೇವೇಗೌಡ ಅಪ್ಪಾಜಿಯವರು ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ತುರ್ತು ಸುದ್ದಿಗೋಷ್ಠಿಯಲ್ಲಿ *ರಾಜ್ಯಸಭೆ ಚುನಾವಣೆ ಟಿಕೆಟ್ ಹಂಚಿಕೆ ವಿಚಾರವಾಗಿ ಮೂಡಿರುವ ವಿವಾದಗಳಿಗೆ ಸ್ಪಷ್ಟನೆ* ನೀಡಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸನ್ಮಾನ್ಯ ಹೆಚ್ ಡಿ ದೇವೇಗೌಡ ಅಪ್ಪಾಜಿಯವರು, ತಮಗೆ ಅಥವಾ ತಮ್ಮ ಪಕ್ಷಕ್ಕೆ ರಾಜ್ಯಸಭಾ ಸ್ಥಾನ ಬೇಕು ಎಂದು ತಾವು ಎಲ್ಲಿಯೂ ಕೇಳಿಲ್ಲ ಮತ್ತು ಆ ಬಗ್ಗೆ ಚರ್ಚೆಯನ್ನು ಮಾಡಿಲ್ಲ ಎಂದು ಸ್ಪಷ್ಟಪಡಿಸಿದರು. ಅಲ್ಲದೆ ತನಗೆ ಸ್ಪರ್ಧಿಸುವ ಆಸಕ್ತಿ ಇದ್ದಿದ್ದರೆ ಮೇ 26ರಂದು ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕಾಗಿ ದೆಹಲಿಗೆ ಹೋದಾಗ ಪ್ರಧಾನಿ ಸನ್ಮಾನ್ಯ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಶ್ರೀ ಅಮಿತ್ ಶಾ ಅವರೊಂದಿಗೆ ಈ ವಿಷಯವನ್ನು ಚರ್ಚಿಸುತ್ತಿದೆ ಆದರೆ ನಾನು ಯಾರೊಂದಿಗೂ ಈ ಬಗ್ಗೆ ಮಾತುಕತೆ ನಡೆಸಲಿಲ್ಲ. ಕಾರ್ಯಕ್ರಮ ಮುಗಿದ ಬಳಿಕ ಬೆಂಗಳೂರಿಗೆ ಹಿಂತಿರುಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಹಾಗೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರೊಂದಿಗಿನ ತಮ್ಮ ಒಡನಾಟ ಕೇವಲ ಒಂದು ರಾಜ್ಯಸಭಾ ಸೀಟಿಗೆ ಸೀಮಿತವಾಗಿಲ್ಲ ಎಂದು ಕಾಂಗ್ರೆಸ್ ಟೀಕೆಗಳಿಗೆ ತಿರುಗೇಟು ನೀಡಿದರು. ತಮ್ಮ ಏಳು ದಶಕಗಳ ಸುಧೀರ್ಘ ರಾಜಕಾರಣದಲ್ಲಿ ತಮಗೆ ಅಧಿಕಾರದ ವ್ಯಾಮೋಹ ಎಂದಿಗೂ ಇರಲಿಲ್ಲ ಎಂದು ವಿರೋಧ ಪಕ್ಷಗಳಿಗೆ ಖಡಕ್ ಉತ್ತರ ಕೊಟ್ಟರು.