ಡಿ.ಕೆ. ಶಿವಕುಮಾರ್ ಸರ್, ನೀವು ಹೇಳಿದ್ದೀರಿ: ‘ನನ್ನ ಸರ್ಕಾರ ಬಂದ ಮೇಲೆ ನಿಮ್ಮನ್ನು NHM,CHO ಪರ್ಮನೆಂಟ್ ಮಾಡುತ್ತೇನೆ’ ಎಂದು. ಈಗ ನಿಮ್ಮ ಸರ್ಕಾರ ಬಂದಿದೆ, ದಯವಿಟ್ಟು ಆ ಭರವಸೆಯನ್ನು ಈಡೇರಿಸಿ ನಮ್ಮನ್ನು ಪರ್ಮನೆಂಟ್ ಮಾಡಿ.” @DKShivakumar@akschoab@utkhader
ಮುಖ್ಯಮಂತ್ರಿ ಶ್ರೀ @siddaramaiah ಅವರು ಇಂದು ಮಂಡಿಸಿದ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದ್ದು, ಅದರಲ್ಲೂ ಬಯಲುಸೀಮೆ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಜನತೆಗೆ ತೀವ್ರ ನಿರಾಸೆ ಮೂಡಿಸಿದೆ, ಈ ಭಾಗದ ಜನರ ಎಲ್ಲ ನಿರೀಕ್ಷೆಗಳೂ ಹುಸಿಯಾಗಿವೆ.
ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ವರದಿಯ ಪ್ರಕಾರ, ಬೆಂಗಳೂರಿನ ತಲಾ ಆದಾಯ 5.41 ಲಕ್ಷ ರೂ. ಅದೇ ಚಿಕ್ಕಬಳ್ಳಾಪುರದಲ್ಲಿ 1.32 ಲಕ್ಷ ರೂ. ಹಾಗೂ ಕೋಲಾರದಲ್ಲಿ 1.42 ಲಕ್ಷ ರೂ. ಇದೆ. ಸಮೀಪದಲ್ಲೇ ಇರುವ ಬೆಂಗಳೂರಿಗೆ ಹೋಲಿಸಿದರೆ ಇವೆರಡೂ ಜಿಲ್ಲೆಗಳ ತಲಾ ಆದಾಯ ತೀರಾ ಕಡಿಮೆ.
ಹಿಂದಿನ ಬಿಜೆಪಿ ಸರ್ಕಾರ ಬೆಂಗಳೂರಿಗೆ ಪರ್ಯಾಯವಾಗಿ ಸುತ್ತಮುತ್ತಲಿನ ನಗರಗಳನ್ನು ಬೆಳೆಸುವ ಹಾಗೂ ಬೆಂಗಳೂರು ಹೊರತಾಗಿ ಬೇರೆ ಜಿಲ್ಲೆಗಳಲ್ಲಿ ಹೊಸ ಕೈಗಾರಿಕೆ ಸ್ಥಾಪಿಸಲು 'Beyond Bengaluru' ಎಂಬ ಕಲ್ಪನೆಯೊಂದಿಗೆ ಈ ಜಿಲ್ಲೆಗಳಲ್ಲಿ ತಲಾ ಆದಾಯ ಹೆಚ್ಚಿಸಲು ಒತ್ತು ನೀಡಿತ್ತು. ಆದರೆ ಇಂದಿನ ಬಜೆಟ್ ನಲ್ಲಿ ಬಯಲುಸೀಮೆ ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿಗೆ, ಉದ್ಯೋಗ ಸೃಷ್ಟಿಗೆ ಯಾವುದೇ ಯೋಜನೆ ಇಲ್ಲ.
ಬಯಲುಸೀಮೆಯಲ್ಲಿ ಕೃಷಿಯೇ ಜನರ ಪ್ರಮುಖ ಆರ್ಥಿಕ ಆಧಾರ. ಮಳೆ ಆಧಾರಿತ ಒಣಬೇಸಾಯದ ಮೇಲೆ ಅವಲಂಬಿತರಾಗಿರುವ ಈ ಭಾಗದಲ್ಲಿ ಶಾಶ್ವತ ನೀರಾವರಿಗಾಗಿ ರೂಪಿಸಲಾಗಿರುವ ಎತ್ತಿನಹೊಳೆ ಯೋಜನೆಯನ್ನು ಎರಡೇ ವರ್ಷಗಳಲ್ಲಿ ಪೂರ್ಣಗೊಳ��ಸುವುದಾಗಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಭರವಸೆ ನೀಡಿದ್ದರೂ, ಬಜೆಟ್ ನಲ್ಲಿ ಅದರ ಬಗ್ಗೆ ಯಾವುದೇ ಖಾತರಿ ನೀಡಿಲ್ಲ.
ಎಚ್.ಎನ್.ವ್ಯಾಲಿ ಹಾಗೂ ಕೆ.ಸಿ.ವ್ಯಾಲಿ ಯೋಜನೆಯಡಿಯಲ್ಲಿ ತೃತೀಯ ಹಂತದ ಸಂಸ್ಕರಣಾ ತಂತ್ರಜ್ಞಾನವನ್ನು ಅನುಷ್ಠಾನಗೊಳಿಸುವ ನಿಟ್ಟಿನಲ್ಲಿ ಕೂಡ ಕೋಲಾರ, ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳ ಜನತೆಯ ನಿರೀಕ್ಷೆ ಹುಸಿಯಾಗಿದ್ದು ಈ ನಿಟ್ಟಿನಲ್ಲಿ ಯಾವುದೇ ಘೋಷಣೆ ಮಾಡಿಲ್ಲ.
ಮಾವು ಹಣ್ಣು ಮಾರಾಟ ಹಾಗೂ ರಫ್ತಿನಲ್ಲಿ ಕೋಲಾರ ಮುಂಚೂಣಿಯಲ್ಲಿದೆ. ಅದೇ ರೀತಿ ಈ ಭಾಗದಲ್ಲಿ ಟೊಮ್ಯಾಟೊ ಬೆಳೆ ಕೂಡ ಪ್ರಾಧಾನ್ಯತೆ ಹೊಂದಿದೆ. ಇವೆರಡಕ್ಕೂ ಸೂಕ್ತವಾದ ಸಂಸ್ಕರಣಾ ಘಟಕ ಹಾಗೂ ಶೀತಲ ಘಟಕವನ್ನು ನಿರ್ಮಿಸಲು ಯಾವುದೇ ಯೋಜನೆ ರೂಪಿಸಿಲ್ಲ.
ಈ ಭಾಗದಲ್ಲಿ ಹೂ ಬೆಳೆಗಾರರ ಪ್ರಗತಿಗಾಗಿ ಚಿಕ್ಕಬಳ್ಳಾಪುರದಲ್ಲಿ ಅಂತಾರಾಷ್ಟ್ರೀಯ ಹೂ ಮಾರುಕಟ್ಟೆ ನಿರ್ಮಿಸುವ ಯೋಜನೆಯನ್ನು ಬಿಜೆಪಿ ಸರ್ಕಾರ ನೀಡಿತ್ತು. ಇದನ್ನು ಸಾಕಾರಗೊಳಿಸುವುದು ಈಗಿನ ಸರ್ಕಾರದ ಆದ್ಯತೆಯಾಗಬೇಕಿತ್ತು. ಅದೇ ರೀತಿ, ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಆಶ್ವಾಸನೆ ನೀಡಿದ್ದಂತೆ ರೇಷ್ಮೆ ಸ್ಥಿರತೆ ನಿಧಿಗೆ 2 ಸಾವಿರ ಕೋಟಿ ರೂ., ರೀಲರ್ಗಳಿಗೆ 3 ಲಕ್ಷ ರೂ. ಬಡ್ಡಿರಹಿತ ಸಾಲದ ಕಾರ್ಯಕ್ರಮವನ್ನೂ ಜಾರಿ ಮಾಡಿಲ್ಲ.
ಕಾಂಗ್ರೆಸ್ ಪಕ್ಷದ ಪ್ರಣಾಳಿಕಯಲ್ಲಿ ನೀಡಿರುವ ಭರವಸೆಯಂತೆ ಪಶು ಭಾಗ್ಯ ಯೋಜನೆಯಡಿ ಉತ್ತಮ ತಳಿಯ ಹಸು/ಎಮ್ಮೆಗಳ ಖರೀದಿಗೆ 3 ಲಕ್ಷ ರೂ. ವರೆಗೆ ಶೂನ್ಯ ಬಡ್ಡಿದರದ ಸಾಲ, ಹಾಲಿನ ಸಬ್ಸಿಡಿ 5 ರಿಂದ 7 ರೂ. ಹೆಚ್ಚಳ, ಮಹಿಳೆಯರಿಗೆ ಹಸು/ಎಮ್ಮೆ ಖರೀದಿಗೆ ಬಡ್ಡಿರಹಿತ ಸಾಲ, ಜಾನುವಾರು ಸಾಕಾಣಿಕೆದಾರರಿಂದ ಕೆ.ಜಿ.ಗೆ 3 ರೂ.ನಂತೆ ಸೆಗಣಿ ಗೊಬ್ಬರ ಖರೀದಿ ಮೊದಲಾದ ಯೋಜನೆಗಳು ಈ ಬಜೆಟ್ ನಲ್ಲಿ ಘೋಷಣೆಯಾಗುವ ನಿರೀಕ್ಷೆ ಕೂಡ ಸುಳ್ಳಾಗಿದ್ದು, ಕಾಂಗ್ರೆಸ್ ಪಕ್ಷ ಕೊಟ್ಟ ಮಾತಿನಂತೆ ನಡೆದುಕೊಳ್ಳುವಲ್ಲಿ ವಿಫಲವಾಗಿದೆ.
ರಾಜ್ಯದ ಗಡಿಭಾಗಗಳ ಅಭಿವೃದ್ಧಿಗೆ, ಗಡಿ ಕೈಗಾರಿಕಾ ಅಭಿವೃದ್ಧಿ ನಿಗಮ ಆರಂಭಿಸಿ, 5 ಸಾವಿರ ಕೋಟಿ ರೂ. ನೀಡುವ ಬಗ್ಗೆ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಪ್ರಸ್ತಾಪವಿದ್ದರೂ, ಬಾಗೇಪಲ್ಲಿ, ಕೆಜಿಎಫ್ ಸೇರಿದಂತೆ ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಯಾವುದೇ ತಾಲ್ಲೂಕುಗಳಲ್ಲಿ ಅದನ್ನು ಅನುಷ್ಠಾನ ಮಾಡುವ ಬಗ್ಗೆ ಬಜೆಟ್ ನಲ್ಲಿ ಘೋಷಣೆ ಇಲ್ಲ.
ಮೈಸೂರು ಕರ್ನಾಟಕದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಹೂಡಿಕೆ ಮಾಡುವ ಬಗ್ಗೆ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಹೇಳಲಾಗಿತ್ತು. ಈ ಪೈಕಿ ಚಿಕ್ಕಬಳ್ಳಾಪುರ-ಕೋಲಾರ ಜಿಲ್ಲೆಗಳಿಗೆ 2 ಸಾವಿರ ಕೋಟಿ ರೂ. ಮೀಸಲಿಟ್ಟು, ಯೋಜನೆಗಳ ಸಮರ್ಪಕ ಜಾರಿಗೆ ಪ್ರತ್ಯೇಕ ನಿಗಮ ಸ್ಥಾಪಿಸುವ ನಿರೀಕ್ಷೆ ಇತ್ತು. ಈ ನಿಟ್ಟಿನಲ್ಲೂ ಕಾಂಗ್ರೆಸ್ ಸರ್ಕಾರ ಕೋಲಾರ-ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಮೋಸ ಮಾಡಿದೆ.
ಪ್ರಧಾನಿ ಶ್ರೀ @narendramodi ಆಶಯದಂತೆ, ಹಿಂದಿನ @BJP4Karnataka ಸರ್ಕಾರ ಪ್ರತಿ ಜಿಲ್ಲೆಯಲ್ಲಿ ಒಂದು ಮೆಡಿಕಲ್ ಕಾಲೇಜು ನಿರ್ಮಿಸಲು ಕ್ರಮ ವಹಿಸಿತ್ತು. ಆ ಬದ್ಧತೆಯಿಂದಾಗಿ ಚಿಕ್ಕಬಳ್ಳಾಪುರದಲ್ಲಿ ಅತಿ ಶೀಘ್ರದಲ್ಲಿ ಮೆಡಿಕಲ್ ಕಾಲೇಜು ಆರಂಭಿಸಲು ಸಾಧ್ಯವಾಗಿತ್ತು. ಆದರೆ ಕೋಲಾರ ಜಿಲ್ಲೆಯ ಜನತೆಯ ಬಹುದಿನಗಳ ಕನಸಾಗಿರುವ ಸರ್ಕಾರಿ ಮೆಡಿಕಲ್ ಕಾಲೇಜು ಇನ್ನೂ ಕನಸಾಗಿಯೇ ಉಳಿದಿರುವುದೇ ಕಾಂಗ್ರೆಸ್ ಗ್ಯಾರೆಂಟಿ.
2013ರಲ್ಲಿ ಅಧಿಕಾರಕ್ಕೆ ಬರುವ ಮುನ್ನ ಕಾಂಗ್ರೆಸ್ ಪಕ್ಷ 173 ಭರವಸೆಗಳನ್ನು ನೀಡಿತ್ತು ಆದರೆ ಆ ಪೈಕಿ ಕೇವಲ 67 ಮಾತ್ರ ಈ��ೇರಿಸಲಾಗಿತ್ತು. ಅಂದರೆ ಕೊಟ್ಟ ಭರವಸೆಗಳಲ್ಲಿ ಶೇ.38 ರಷ್ಟು ಮಾತ್ರ ಸಾಕಾರಗೊಂಡಿತ್ತು. ಈ ಬಾರಿ ಗ್ಯಾರಂಟಿಗಳ ಜೊತೆಗೆ ಹಲವಷ್ಟು ಭರವಸೆಗಳನ್ನು ನೀಡಿ ಕಾಂಗ್ರೆಸ್ ಆಡಳಿತದ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಪಕ್ಷ ಈಗ ಮತ್ತೊಮ್ಮೆ ನುಡಿದಂತೆ ನಡೆಯದೆ ಮಾತು ತಪ್ಪಿದೆ.
ಜನರಿಗೆ ಕೊಟ್ಟ ಮಾತಿನಂತೆ ಅದನ್ನು ಕಟ್ಟುನಿಟ್ಟಾಗಿ ಪಾಲಿಸುವ ಪ್ರಾಮಾಣಿಕತೆಯನ್ನು ಪ್ರದರ್ಶನ ಮಾಡುವ ಉದ್ದೇಶ @INCKarnataka ಸರ್ಕಾರಕ್ಕಿಲ್ಲ ಎಂಬುದನ್ನು ಇಂದಿನ ಬಜೆಟ್ ಸ್ಪಷ್ಟ ಪಡಿಸಿದೆ.
ಕಾಂಗ್ರೆಸ��� ಪಕ್ಷದ ಮೇಲೆ ವಿಶ್ವಾಸವಿಟ್ಟು, ಮತ ನೀಡಿ ಅಧಿಕಾರ ಕೊಟ್ಟ ಬಯಲುಸೀಮೆ ಜಿಲ್ಲೆಗಳ ಮತದಾರರ ನಂಬಿಕೆಗೆ ಇಂದಿನ ಬಜೆಟ್ ತೀವ್ರ ಘಾಸಿ ಉಂಟುಮಾಡಿದೆ ಎನ್ನುವುದು ಮಾತ್ರ ಸತ್ಯ.
ಮಾನ್ಯ ಶ್ರೀಯುತ ಆರೋಗ್ಯ್ ಸಚಿವರಲ್ಲಿ ಕೇಳಿಕೊಳ್ಳುದು ಏನೆಂದರೆ ದಯಮಾಡಿ ನಮ್ಮನು ಪರ್ಮನೆಂಟ್ ಮಾಡಿ #KarnatakaCHOsPROTEST
Breaking News
Karnataka Community Health Officer's plan Indefinite Protest From 19/02/2024 to fulfill
CHOs Rightful Demands .
@PMOIndia@mansukhmandviya@CMofKarnataka@dines