ಚಿತ್ತಾಪುರ ತಾಲೂಕಿನಲ್ಲಿ ಇತ್ತೀಚೆಗೆ ನಡೆದ ಕೆಕೆಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮದ ಪ್ರಕಾಶ್ ಹರಳಕಟ್ಟಿ ಮೃತಪಟ್ಟಿದ್ದರು, ಇಂದು ಮೃತರ ಮನೆಗೆ ಭೇಟಿ ನೀಡಿ ಸಾಂತ್ವನ ತಿಳಿಸಿ, ಅವರ ಕುಟುಂಬ ವರ್ಗಕ್ಕೆ ವಯಕ್ತಿಕ ಧನಸಹಾಯ ಮಾಡಿದೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ಪ್ರಕಾಶ್ ಹರಳಕಟ್ಟಿ ಅವರ ಪೋಷಕರ ಮಾಹಿತಿ ಪಡೆದು ಸರ್ಕಾರದಿಂದ ಪರಿಹಾರ ಒದಗಿಸುವ ಕುರಿತು ತಾಲೂಕಾಡಳಿತ ಅಧಿಕಾರಿಗಳಿಗೆ ಸೂಚಿಸಿದೆ.
ಸೇಡಂ ತಾಲೂಕಿನ ಬಿಜನಳ್ಳಿ ಗ್ರಾಮದಲ್ಲಿ ಆಯೋಜಿಸಿದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿದೆ.
12 ನೇ ಶತಮಾನದ ಶರಣ ಹರಳಯ್ಯ ದಂಪತಿಗಳ ಐತಿಹಾಸಿಕ ಹಿನ್ನೆಲೆಯುಳ್ಳ ಗ್ರಾಮವಾದ ಬಿಜನಳ್ಳಿಯ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ತೋರಿದ ಪ್ರೀತಿ ಅಭಿಮಾನಕ್ಕೆ ನಾನು ಸದಾ ಚಿರಋಣಿಯಾಗಿರುತ್ತೇನೆ.
ಈ ಸಮಾರಂಭದಲ್ಲಿ ಗ್ರಾಮಸ್ಥರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಸೇರಿದಂತೆ ಹಲವರು ಉಪಸ್ಥಿತರಿದ್ದರು.
#SharanPrakashPatil #Sedam