1/n @narendramodi@PMOIndia@nsitharamanoffc@NSEIndia kindly increase the corporate tax.. when the whole country was doing well you had decreased the corporate tax even less then individual taxes.. kindly increase them to 30% or more so that there are the following advantages.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಶಕ್ತಿ ಭವನದಲ್ಲಿ ಇಂದು ಇಂಧನ ಸಚಿವರಾದ ಶ್ರೀ ಕೆ.ಜೆ. ಜಾರ್ಜ್ ಅವರೊಂದಿಗೆ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡು, ಅಗತ್ಯ ಸೂಚನೆಗಳನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿಗಳಾದ ಶ್ರೀ ಗೌರವ್ ಗುಪ್ತಾ, ಶ್ರೀ ರಿತೇಶ್ ಕುಮಾರ್ ಸಿಂಗ್, ಆರ್ಥಿಕ ಸಲಹೆಗಾರರಾದ ಶ್ರೀ ಎಲ್.ಕೆ. ಅತೀಕ್, ಕೆಪಿಸಿಟಿಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಮ್ ಪ್ರಸಾತ್ ಮನೋಹರ್, ಕರ್ನಾಟಕ ವಿದ್ಯುತ್ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಂದ್ರ ಚೋಳನ್ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
"ರಾಜ್ಯದ ಯಾವುದೇ ವಿದ್ಯುತ್ ಕಂಪನಿಗಳನ್ನು ಯಾವುದೇ ಕಾರಣಕ್ಕೂ ಖಾಸಗೀಕರಣ ಮಾಡಲು ಈ ಸರ್ಕಾರ ಅವಕಾಶ ನೀಡುವುದಿಲ್ಲ" ಎಂದು ರಾಜ್ಯದ ಮುಖ್ಯಮಂತ್ರಿಗಳಾದ ಸನ್ಮಾನ್ಯ ಶ್ರೀ ಡಿ.ಕೆ. ಶಿವಕುಮಾರ್ ಅವರು ದೃಢವಾಗಿ ಘೋಷಿಸಿದ್ದಾರೆ.
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ (KPTCL) ಎಲ್ಲಾ ನೌಕರರು ಮತ್ತು ಅಧಿಕಾರಿಗಳ ಒಕ್ಕೂಟದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮುಖ್ಯಮಂತ್ರಿಗಳು ಈ ಭರವಸೆ ನೀಡಿದ್ದರು.
ಸರ್ಕಾರದ ಈ ಕಟ್ಟುನಿಟ್ಟಿನ ನಿಲುವಿನ ಬೆನ್ನಲ್ಲೇ, ಸಮಾನಾಂತರ ವಿದ್ಯುತ್ ವಿತರಣಾ ಪರವಾನಗಿ ಕೋರಿ ಟಾಟಾ ಪವರ್ ಕಂಪನಿಯು ಕೆಇಆರ್ಸಿ (KERC) ಗೆ ಸಲ್ಲಿಸಿದ್ದ ತನ್ನ ಅರ್ಜಿಯನ್ನು ಇಂದೇ ಹಿಂಪಡೆದುಕೊಂಡಿದೆ. ಸರ್ಕಾರದ ಈ ಐತಿಹಾಸಿಕ ನಿರ್ಧಾರ ಮತ್ತು ನೌಕರರ ಹಿತರಕ್ಷಣೆಯನ್ನು ಶ್ಲಾಘಿಸಿ, ಒಕ್ಕೂಟ ಹಾಗೂ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ವತಿಯಿಂದ ಮುಖ್ಯಮಂತ್ರಿಗಳನ್ನು ಗೌರವಪೂರ್ವಕವಾಗಿ ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಒಕ್ಕೂಟದ ಅಧ್ಯಕ್ಷರಾದ ಶ್ರೀ ಬಸವಣ್ಣ, ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಚಂದ್ರಶೇಖರ ದೇಸಾಯಿ, ಹಿರಿಯ ಉಪಾಧ್ಯಕ್ಷರಾದ ಶ್ರೀ ರಾಜೋಜಿ ರಾವ್ ಹಾಗೂ ಇತರೆ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಗೃಹ ಕಚೇರಿ ಕೃಷ್ಣಾದಲ್ಲಿಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗದ (KERC) ಅಧ್ಯಕ್ಷರಾದ ಶ್ರೀ ಪಿ. ರವಿ ಕುಮಾರ್ ಅವರ ನೇತೃತ್ವದ ನಿಯೋಗವು ಭೇಟಿ ಮಾಡಿ, ಹಲವು ಮಹತ್ವದ ವಿಷಯಗಳ ಕುರಿತು ಚರ್ಚಿಸಿದರು.
ಮುಖ್ಯಮಂತ್ರಿ ಶ್ರೀ @DKShivakumar ಅವರ ಮುಂದಾಳತ್ವದಲ್ಲಿ ಬೆಂಗಳೂರು ನಗರದ ಚಿತ್ರಣ ಬದಲಾಗುತ್ತಿದೆ.
ಸಂಚಾರ ದಟ್ಟಣೆ, ಟ್ರಾಫಿಕ್ ಸಿಗ್ನಲ್ ಗಳಿಂದ ಹೈರಾಣಾಗಿದ್ದ ವಾಹನ ಸವಾರರಿಗೆ ದಟ್ಟಣೆ ರಹಿತ, ಸಿಗ್ನಲ್ ಮುಕ್ತ ಸಂಚಾರಕ್ಕೆ ಹೊಸ ಮಾರ್ಗಗಳು ತೆರೆದುಕೊಳ್ಳುತ್ತಿವೆ. ನಗರದಲ್ಲಿ ಮಾಜಿ ಮುಖ್ಯಮಂತ್ರಿ ಶ್ರೀ ಎಸ್.ಎಂ.ಕೃಷ್ಣ ದಶಪಥ ರಸ್ತೆ ಲೋಕಾರ್ಪಣೆಗೊಂಡು ದಿನ ಕಳೆಯುವುದರೊಳಗೆ ಹೆಬ್ಬಾಳ ಫ್ಲೈ ಓವರ್ ನಿಂದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಸಿಬ್ಬಂದ ವಸತಿ ಗೃಹದ ವರೆಗೆ ಸಂಪರ್ಕ ಕಲ್ಪಿಸುವ ಮೂರು ಪಥಗಳ ಸುರಂಗ ಮಾರ್ಗಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.
ಬೆಳೆಯುತ್ತಿರುವ ಬೆಂಗಳೂರು ನಗರದ ವೇಗಕ್ಕೆ ಅನುಗುಣವಾಗಿ ಮೂಲಸೌಕರ್ಯವನ್ನು ಅಭಿವೃದ್ಧಿಪಡಿಸಿ, ನಗರದ ನಿವಾಸಿಗಳಿಗೆ ಸುಗಮ ಸಂಚಾರ ಸೌಲಭ್ಯ ಕಲ್ಪಿಸಲು ಟೊಂಕಕಟ್ಟಿ ನಿಂತಿರುವ ರಾಜ್ಯ ಸರ್ಕಾರದ ನಿರ್ಧಾರಗಳು ಬೆಂಗಳೂರಿಗರಲ್ಲಿ ನೆಮ್ಮದಿ ಮೂಡಿಸಿದೆ.