Respected Sir, KPSC's AC SAAD mains result evaluation is completed fortnight ago but there is delay in further processing. It's been more than 1.5 years. Thousands of aspirants are deeply concerned. Kindly help us.
@DKShivakumar
@Ashwini_samuel@DKShivakumar Honorable CM sir, KPSC's AC SAAD Mains evaluation already completed last month only,But 1:3 result was not announced. It has been more than 1.5 years, Thousands of aspirants waiting for result. Kindly requesting you please help us.
Honorable CM sir, KPSC's AC SAAD Mains evaluation already completed last month only,But 1:3 result was not announced. It has been more than 1.5 years, Thousands of aspirants waiting for result. Kindly requesting you please help us.
@DKShivakumar
ರೋಸ್ಟರ್ ಸಮಸ್ಯೆಯಿಂದ 3A, 3B ಸ್ಪರ್ಧಾತ್ಮಕ ಉದ್ಯೋಗಾಕಾಂಕ್ಷಿಗಳಿಗೆ ನ್ಯಾಯಯುತವಾಗಿ ಅವರಿಗೆ ಬೇಕಾದ ಮೀಸಲಾತಿ ಸಿಗದೇ ಪರಿತಪಿಸುವಂತಾಗಿದೆ. ಸರ್ಕಾರ ಒಂದು ಅಧಿಸೂಚನೆ ಒಂದೇ ರೋಸ್ಟರ್ ಅಡಿ ಸಮಾನವಾದ ಮೀಸಲಾ���ಿ ನೀಡಿದರೆ ಆರೋಗ್ಯಕರ ಪೈಪೋಟಿ ಹಾಗೂ ಎಲ್ಲಾ ಸಮುದಾಯಕ್ಕೂ ನ್ಯಾಯ ಒದಗಿಸಿದಂತೆ ಆಗುತ್ತದೆ. ಇಲ್ಲದಿದ್ದರೆ, ಕಾನೂನು ಸಂಘರ್ಷದಿಂದ ಮತ್ತೊಮ್ಮೆ ನೇಮಕಾತಿ ವಿಳಂಬವಾಗುತ್ತದೆ. ಇದರಿಂದ ಸರ್ಕಾರಕ್ಕೂ ಹಾಗೂ ಹಲವು ವರ್ಷಗಳಿಂದ ಅಧಿಸೂಚನೆಗೆ ಕಾಯುತ್ತಿರುವ ಪರೀಕ್ಷಾರ್ಥಿಗಳಿಗೆ ತೀವ್ರ ತೊಂದರೆಯಾಗಬಹುದು. ಈಗಾಗಲೇ ಅಧಿಸೂಚನೆಗಳ ವಿಳಂಬದಿಂದ ಮಾನಸಿಕವಾಗಿ ಜರ್ಜರಿತವಾಗಿರುವ ಸ್ಪರ್ಧಾತ್ಮಕ ಪರೀಕ್ಷಾರ್ಥಿಗಳಿಗೆ ಗಾಯದ ಮೇಲೆ ಬರೆಯಾಗುತ್ತದೆ. ಸರ್ಕಾರ ಕೂಡಲೇ ರೋಸ್ಟರ್ ತಿದ್ದುಪಡಿ ಗೆ ಮುಂದಾಗಬೇಕು.
@AKSSAofficial I @tv9kannada I @AsianetNewsSN I @KannadaPrabha I
ಕೆಪಿಎಸ್ಸಿ ವಿವಾದಗಳ ಕುರಿತಾದ ಮುಖ್ಯಮಂತ್ರಿಗಳ ನಿನ್ನೆಯ ಹೇಳಿಕೆ "ಹಾವೂ ಸಾಯಲಿಲ್ಲ, ಕೋಲೂ ಮುರಿಯಲಿಲ್ಲ" ಎಂಬಂತೆ ಕೇಳಿಸುತ್ತದೆ. ಮುಖ್ಯಮಂತ್ರಿಗಳು ತಮ್ಮ ಮೇಲಿನ ಭಾರವನ್ನು ನ್ಯಾಯಾಲಯಕ್ಕೆ ಹೊರಿಸುವ ಮೂಲಕ ತಮ್ಮ ಜವಾಬ್ದಾರಿಯಿಂದ ನುಣುಚಿಕೊಂಡಿದ್ದಾರೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಆಗಿರುವ ಅನ್ಯಾಯ ಅವರಿಗೆ ಚೆನ್ನಾಗಿ ಗೊತ್ತಿದೆ. ಆದರೆ ಅವರು ಮರು ಅಧಿಸೂಚನೆ ಹೊರಡಿಸಲು ಹಿಂಜರಿಯುತ್ತಿದ್ದಾರೆ. ಇದಕ್ಕೆ ಕಾರಣ ಅವರ ಸುತ್ತ ಇರುವ ಅಧಿಕಾ��ಶಾಹಿಯ ಲಾಬಿ.
ಕರ್ನಾಟಕ ಲೋಕಸೇವಾ ಆಯೋಗದ ಸುಧಾರಣೆಗೆ ಮುಖ್ಯಮಂತ್ರಿಗಳು ನಿನ್ನೆ ಹಲವು ಪ್ರಸ್ತಾಪಗಳನ್ನು ಮುಂದಿಟ್ಟಿದ್ದಾರೆ. ಅವೆಲ್ಲವೂ ಸ್ವಾಗತಾರ್ಹ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಮುಂದೆಂದೂ ತೊಂದರೆಯಾಗದಂತೆ ಪ್ರಶ್ನೆ ಪತ್ರಿಕೆಗಳನ್ನು ಕನ್ನಡದಲ್ಲಿಯೇ ತಯಾರಿಸಿ, ನಂತರ ಇಂಗ್ಲಿಷ್ ಗೆ ಅನುವಾದಿಸುವಂತೆ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ತಪ್ಪಿತಸ್ಥ ವಿಷಯ ತಜ್ಞರು, ಭಾಷಾಂತರಕಾರರ ಮೇಲೆ ಕ್ರಮ ಕೈಗೊಳ್ಳುವುದಾಗಿಯೂ ಹೇಳಿದ್ದಾರೆ. ಕಳೆದ ಆರೇಳು ತಿಂಗಳಿನಿಂದ ನಾವು ನಡೆಸುತ್ತಿರುವ ಹೋರಾಟಕ್ಕೆ ದೊರೆತ ಭಾಗಶಃ ಗೆಲುವು ಇದು. ನಾವು ಬೀದಿಯಲ್ಲಿ ನಿಂತು ಹೋರಾಡದಿದ್ದರೆ ಇದ್ಯಾವುದೂ ಆಗುತ್ತಿರಲಿಲ್ಲ.
ಆದರೆ ಈಗಾಗಲೇ ಆಗಿರುವ ಪ್ರಮಾದಕ್ಕೆ ಅವರ ಮಾತುಗಳಲ್ಲಿ ಯಾವ ಉತ್ತರವೂ ಇಲ್ಲ. ಕನ್ನಡ ಮಾಧ್ಯಮದ ವಿದ್ಯಾರ್ಥಿಗಳಿಗೆ ಆದ ಅನ್ಯಾಯವನ್ನು ನ್ಯಾಯಾಲಯವೇ ಸರಿಪಡಿಸಬೇಕೇ? ಅದು ಮುಖ್ಯಮಂತ್ರಿಗಳಿಂದ ಆಗದ ಕೆಲಸವೇ? ಕೆಪಿಎಸ್ಸಿ ಸ್ವಾಯತ್ತ ಸಂಸ್ಥೆ, ಸರ್ಕಾರ ಮಧ್ಯ ಪ್ರವೇಶಿಸಲು ಆಗದು ಎಂಬ ಇಂಗಿತ ���ವರದು. ಹಾಗೆಂದು ಅನ್ಯಾಯ ನೋಡಿಕೊಂಡು ಸುಮ್ಮನಿರುತ್ತೀರೇ? ನಾವು ಮರುಪರೀಕ್ಷೆ ಮಾಡಿ ಎಂದು ಕೇಳುತ್ತಿಲ್ಲ, ಮರು ಅಧಿಸೂಚನೆ ಹೊರಡಿಸಿ ಎಂದು ಕೇಳುತ್ತಿದ್ದೇವೆ. ಅದು ನಿಮ್ಮ ಕೈಯಲ್ಲೇ ಇದೆಯಲ್ಲವೇ? ಕೆಪಿಎಸ್ಸಿ ಅಧ್ಯಕ್ಷರು, ಸದಸ್ಯರು, ಅಲ್ಲಿನ ಅಧಿಕಾರಿಗಳು ನಿಮ್ಮ ಮಾತು ಕೇಳೋದಿಲ್ಲವೇ? ಯಾಕಾಗಿ ಈ ಅಸಹಾಯಕತೆಯ ಪ್ರದರ್ಶನ?
ಮುಖ್ಯಮಂತ್ರಿಗಳು ಉತ್ತರ ನೀಡುವಾಗ ಕೆಪಿಎಸ್ಸಿ ಕೊಟ್ಟ ಮಾಹಿತಿಯನ್ನು ಯಥಾವತ್ತಾಗಿ ಓದಿದರು. ಕೆಪಿಎಸ್ಸಿ ಪ್ರಕಾರ ಮರುಪರೀಕ್ಷೆಯ ಪ್ರಶ್ನೆ ಪತ��ರಿಕೆಗಳಲ್ಲಿ ಆದ ದೋಷಗಳ ತನಿಖೆಗೆ ತಜ್ಞರ ಸಮಿತಿಯೊಂದನ್ನು ನೇಮಿಸಿತ್ತು. �� ಸಮಿತಿ ಆರು ದೋಷಗಳನ್ನು ಗುರುತಿಸಿ 5 ಕೃಪಾಂಕ ನೀಡಲು ಶಿಫಾರಸು ಮಾಡಿದೆ! ಆರು ದೋಷಗಳಲ್ಲಿ ಮೂರು ದೋಷಗಳು ಇಂಗ್ಲಿಷ್ ಮತ್ತು ಕನ್ನಡ ಎರಡೂ ಪ್ರಶ್ನೆಪತ್ರಿಕೆಗಳಲ್ಲಿ ಆಗಿರುವ ಸಾಮಾನ್ಯ ದೋಷ, ಅನುವಾದದ ದೋಷವಲ್ಲ! ಎಂಥ ಮೋಸ? ಎಂಥ ದುರಹಂಕಾರದ ಸಮರ್ಥನೆ!
ಎಸ್ ಎಸ್ ಎಲ್ ಸಿ ಓದಿರುವ ನಮ್ಮ ಹಳ್ಳಿಗಾಡಿನ ಪ್ರತಿಭಾವಂತ ಹೆಣ್ಣುಮಗಳಿಗೆ ಪ್ರಶ್ನೆ ಪತ್ರಿಕೆಗಳನ್ನು ಕೊಟ್ಟರೆ ಆಕೆ ಸಮರ್ಥವಾಗಿ ಆಗಿರುವ ತಪ್ಪುಗಳನ್ನು ಗುರುತಿಸುತ್ತಾಳೆ. ಹೀಗಿರುವಾಗ ಎರಡೂ ಪ್ರಶ್ನೆಪತ್ರಿಕೆಗಳಲ���ಲಿ ಆಗಿರುವ 80 ದೋಷಗಳು ಈ ತಜ್ಞರ ಸಮಿತಿಗೆ ಕಾಣಲಿಲ್ಲವೇ? ಹೊಟ್ಟೆಗೆ ಇವರು ಏನು ತಿನ್ನುತ್ತಾರೆ? ಅಥವಾ ಈ ತಜ್ಞರ ಸಮಿತಿಯೆಂಬುದೇ ಕೆಪಿಎಸ್ಸಿ ಆಡಿದ ನಾಟಕವೇ? ಪ್ರತಿಯೊಂದು ತಪ್ಪುಗಳನ್ನೂ ನಾವು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದೆವು. ಹೀಗಿದ್ದಾಗ್ಯೂ ಅವರು ಕೆಪಿಎಸ್ಸಿ ಕೊಟ್ಟ ಸುಳ್ಳು ಉತ್ತರ, ಮೋಸದ ಸಮರ್ಥನೆಯನ್ನೇ ಹೇಳಬೇಕಿತ್ತೇ?
ಮುಖ್ಯಮಂತ್ರಿಗಳ ಒಟ್ಟು ಹೇಳಿಕೆ ಅಧಿಕಾರಶಾಹಿಯ ಪ್ರಭಾವಳಿಯಲ್ಲಿ ಓರ್ವ ಕನ್ನಡಪರ ಚಿಂತನೆಯ ರಾಜಕಾರಣಿ ಅಸಹಾಯಕತೆಯಲ್ಲಿ ಕೈ ಚೆಲ್��ಿ ಕುಳಿತಂತೆ ಕಾಣುತ್ತದೆ. ಸಿದ್ಧರಾಮಯ್ಯನವರಂಥ ಗಟ್ಟಿ ಗುಂಡಿಗೆಯ ನಾಯಕರು ಹೀಗೆ ಐಎಎಸ್ ಲಾಬಿಗೆ ಶರಣಾಗಬಾರದಿತ್ತು.
ಕರ್ನಾಟಕ ರಕ್ಷಣಾ ವೇದಿಕೆ ಈ ಹೋರಾಟವನ್ನು ಮುಂದುವರೆಸುತ್ತದೆ. ಇದಕ್ಕೊಂದು ತಾರ್ಕಿಕ ಅಂತ್ಯ ದೊರೆಯುವವರೆಗೆ ಮುಂದುವರೆಸುತ್ತದೆ. ಕನ್ನಡ ಮಾಧ್ಯಮ ವಿದ್ಯಾರ್ಥಿಗಳು ಅಧೀರರಾಗಬಾರದು. ನಮಗೆ ನ್ಯಾಯಾಲಯಗಳಾದರೂ ನ್ಯಾಯ ಕೊಡಬಹುದೆಂಬ ನಿರೀಕ್ಷೆ ಇಟ್ಟುಕೊಳ್ಳೋಣ. ಅಲ್ಲೂ ನಮಗೆ ನ್ಯಾಯ ಸಿಗದೇ ಇದ್ದರೆ ಮತ್ತೆ ಬೀದಿಯಲ್ಲಿ ನಿಲ್ಲೋಣ. ಈ ನಾಡಿನ ಭವಿಷ್ಯ ರೂಪಿಸಬೇಕಾದ ಯುವಕ/ಯುವತಿಯರನ್ನು ಈ ಸರ್ಕಾರ, ಈ ವ್ಯವಸ್ಥೆ ಏನು ಮಾಡುತ್ತದೆ, ನೋಡಿಯೇ ಬಿಡೋಣ. ನಿಮ್ಮೊಂದಿಗೆ ನಾನು ಸದಾ ಇರುತ್ತೇನೆ.
- ಟಿ.ಎ.ನಾರಾಯಣಗೌಡ
@siddaramaiah @DKShivakumar @CMofKarnataka @BJPKarnataka @KPCCKarnataka @KPCCPresident #KPSCMOSA #KpscDroha #KPSC
ಲೋಕಸೇವಾ ಆಯೋಗಕ್ಕೆ ಉತ್ತರದಾಯಿತ್ವ, ಜವಾಬ್ದಾರಿ, ವೃತ್ತಿಪರತೆ, ಪರೀಕ್ಷಾರ್ಥಿ ಸ್ನೇಹಿ ಸೇವೆಗಳನ್ನು ತರದಿದ್ದರೆ ಆಡಳಿತಾರೂಡಿ ಕಾಂಗ್ರೆಸ್ ಪಕ್ಷ ಮುಂದಿನ ಚುನಾವಣೆಯಲ್ಲಿ ಎರಡಂಕಿ ಕೂಡ ದಾಟೋದಿಲ್ಲ.
ಮುಖ್ಯ ಮಂತ್ರಿಗಳು ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸಿ ಆಯೋಗವನ್ನು ಶುದ್ದೀಕರಿಸಲಿ. ಆಯೋಗದಲ್ಲಿ ಕೆಲಸ ಮಾಡುವ ಕೆಲ ಹಂತದ ನೌಕರರಿಂದ ಹಿಡಿ��ು ಆಯಕಟ್ಟಿನ ಹುದ್ದೆಯಲ್ಲಿರುವ ಅಧಿಕಾರಿಯವರೆಗೂ ಉತ್ತರದಾಯಿತ್ವವನ್ನು ತರಬೇಕು. One Lunch, Two Punch ಸಂಸ್ಕೃತಿ ಬಿಟ್ಟು ಗಂಭೀರವಾಗಿ ಕೆಲಸ ಮಾಡುವಂತೆ ಸರ್ಕಾರ ಕೆಲಸ ಮಾಡಬೇಕು.
@AKSSAofficial