ರಾಜಕೀಯ ಅಧಿಕಾರ ಎನ್ನುವುದು ಜನರ ಸೇವೆ ಮಾಡಲು ಒದಗಿಬಂದ ಅವಕಾಶದ ಭಾಗ್ಯ ಎಂದು ನಾನು ತಿಳಿದುಕೊಂಡವನು.
ಮುಖ್ಯಮಂತ್ರಿಯ ಪದತ್ಯಾಗ ಮಾಡಿದ ದಿನದಿಂದ ಹೋದಲ್ಲಿ, ಬಂದಲ್ಲಿ ಜನತೆ ವ್ಯಕ್ತಪಡಿಸುತ್ತಿರುವ ಪ್ರೀತಿ, ಅಭಿಮಾನ, ವಿಶ್ವಾಸವನ್ನು ನೋಡಿದರೆ ಅಧಿಕಾರವನ್ನು ಬಳಸಿಕೊಂಡು ಜಗಮೆಚ್ಚುವ ರೀತಿಯಲ್ಲಿ ಜನಸೇವೆ ಮಾಡಿದ್ದೇನೆ ಎಂಬ ಸಾರ್ಥಕ್ಯದ ಭಾವನೆ ಮೂಡಿದೆ.
ಪದತ್ಯಾಗದ ನಂತರ ಇಂದು ಮೊದಲ ಬಾರಿಗೆ ಹುಟ್ಟೂರಿಗೆ ಆಗಮಿಸಿದಾಗ ಇದೇ ಅನುಭವವಾಯ��ತು. ಸೇರಿದ್ದ ಜನಸಾಗರ, ಅವರು ತೋರಿದ ಪ್ರೀತಿ-ಅಭಿಮಾನ ಕಂಡು ಮೂಕವಿಸ್ಮಿತನಾಗಿದ್ದೇನೆ.
ಅಧಿಕಾರ, ಸಂಪತ್ತು ಕಾಲ ಬದಲಾದಂತೆ ಕಳೆದು ಹೋಗಬಹುದು, ಜನರ ಪ್ರೀತಿ ನಿರಂತರ. ನನ್ನ ಸಾರ್ವಜನಿಕ ಬದುಕಿನಲ್ಲಿ ನನ್ನನ್ನು ಪ್ರೀತಿಸುವ ದೊಡ್ಡ ಜನಸಮೂಹವನ್ನೇ ಸಂಪಾದಿಸಿದ್ದೇನೆ ಎನ್ನುವ ಹೆಮ್ಮೆ ನನ್ನದು.
ಮುಖ್ಯಮಂತ್ರಿಯ ಸಿಂಹಾಸನ ನಶ್ವರ, ಜನತೆಯ ಹೃದಯಸಿಂಹಾಸನ ಶಾಶ್ವತ. ಅಲ್ಲಿಂದ ನನ್ನನ್ನು ಯಾರೂ ಕೆಳಗಿಳಿಸಲಾರರು. ಅದು ನನ್ನ ಮತ್ತು ನಾನು ನಂಬುವ ಜನತಾ ಜನಾರ್ಧನರ ನಡುವಿನ ��ಾಶ್ವತ ಒಪ್ಪಂದ.
ನಾಡಿನ ಉದ್ದಗಲಕ್ಕೂ ಯಾವ ನಿರೀಕ್ಷೆಯೂ ಇಲ್ಲದೆ ಪ್ರೀತಿ - ಅಕ್ಕರೆ ತೋರುತ್ತಿರುವ ಪ್ರೀತಿಯ ಬಂಧುಗಳ ಸೇವೆಗೆ ನಾನು ಸದಾ ಬದ್ಧ. ಮತ್ತೊಮ್ಮೆ ಎಲ್ಲರಿಗೂ ನನ್ನ ತುಂಬು ಹೃದಯದ ಕೃತಜ್ಞತೆಗಳು.
@Dr_Yathindra_S ನಮ್ಮ ಸಮಾಜದ ಹೆಮ್ಮೆಯ ನಾಯಕರು ಶ್ರೀ ಮಾನ್ಯ ಸಚಿವರು. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಜನಾಂಗದ ಹರಿಕಾರರಾಗಿ ರಾಜ್ಯದ ಶ್ರೇಷ್ಠ ನಾಯಕರಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇವೆ. ಭವಿಷ್ಯತ್ತಿನಲ್ಲಿ ತಂದೆಯಂತೆಯೇ ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತೀರಿ ಎಂದು ಆಶಾಭಾವವನ್ನು ವ್ಯಕ್ತಪಡಿಸುತ್ತೇವೆ.
@Dr_Yathindra_S ನಮ್ಮ ಸಮಾಜದ ಹೆಮ್ಮೆಯ ನಾಯಕರು ಶ್ರೀ ಮಾನ್ಯ ಸಚಿವರು. ಕರ್ನಾಟಕ ರಾಜ್ಯದ ಹಿಂದುಳಿದ ವರ್ಗದ ಜನಾಂಗದ ಹರಿಕಾರರಾಗಿ ರಾಜ್ಯದ ಶ್ರೇಷ್ಠ ನಾಯಕರಾಗಿ ಹೊರಹೊಮ್ಮಲಿ ಎಂದು ಆಶಿಸುತ್ತೇವೆ. ಭವಿಷ್ಯತ್ತಿನಲ್ಲಿ ತಂದೆಯಂತೆಯೇ ರಾಜ್ಯದ ಶ್ರೇಷ್ಠ ಮುಖ್ಯಮಂತ್ರಿಗಳಾಗಿ ಕಾರ್ಯ ನಿರ್ವಹಿಸುತ್ತೀರಿ ಎಂದು ಆಶಾಭಾವವನ್ನು ವ್ಯಕ್ತಪಡಿಸುತ್ತೇವೆ.
ಮೈಸೂರು ಸ್ಯಾಂಡಲ್ ಸೋಪಿಗೆ ಲಾಭದ ಘಮ!
ಕಾಂಗ್ರೆಸ್ ಸರ್ಕಾರದ ದಕ್ಷ ಆಡಳಿತ ಪರಿಣಾಮವಾಗಿ ಮೈಸೂರ್ ಸ್ಯಾಂಡಲ್ ಸೋಪ್ ಸಂಸ್ಥೆಯು ಕಳೆದ ಮೂರು ವರ್ಷಗಳಿಂದ ನಿರಂತರ ಲಾಭದ ಹಾದಿಯಲ್ಲಿ ಸಾಗುತ್ತಿದೆ. ನಾಲ್ಕು ವರ್ಷಗಳ ಹಿಂದಷ್ಟೇ ಮೊದಲ ಬಾರಿಗೆ ವಾರ್ಷಿಕ 1 ಸಾವಿರ ಕೋಟಿ ವಹಿವಾಟು ಮಾಡಿದ್ದ ಈ ಸಂಸ್ಥೆ ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಅದರ ದುಪ್ಪಟ್ಟು ಅಂದರೆ 2 ಸಾವಿರ ಕೋಟಿ ವಹಿವಾಟಿನ ಮೂಲಕ ಭರ್ಜರಿ ಯಶಸ್ಸು ಸಾಧಿಸಿದೆ.
ಕಾಂಗ್ರೆಸ್ ಸರ್ಕಾರದ ಪಾರದರ್ಶಕ ಆಡಳಿತದಿಂದ ಮೈಸೂರು ಸ್ಯಾಂಡಲ್ ಸೋಪ್ ಜಾಗತಿಕ ಮಟ್ಟದಲ್ಲಿ ತನ್ನ ಮಾರುಕಟ್ಟೆ ವಿಸ್ತರಿಸಿಕೊಂಡಿದೆ. ಆಮೂಲಕ 105 ವರ್ಷಗಳ ಇತಿಹಾಸದಲ್ಲಿ ಅತ್ಯಧಿಕ ��ಾಭ ಮಾಡಿದೆ.