ಮಳೆಯ ಕೊರತೆಯಿಂದ ಜಲಾಶಯಗಳೆಲ್ಲ ಖಾಲಿ ಆಗಿದ್ದರೂ ಕರ್ನಾಟಕಕ್ಕೆ ಬರೆಯ ಮೇಲೆ ಬರೆ ಎಳೆಯಲಾಗುತ್ತದೆ. ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮುಂದಿನ 15 ದಿನಗಳ ಕಾಲ ನಿತ್ಯ 3,000 ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಮತ್ತೆ ಆದೇಶ ನೀಡಿರುವುದು ರಾಜ್ಯಕ್ಕೆ ಇನ್ನೊಂದು ದೊಡ್ಡ ಆಘಾತ. ಇಂಥ ಜಲಾಘಾತಗಳನ್ನು ಕೊಡುವುದಕ್ಕೇ ಪ್ರಾಧಿಕಾರ ಮತ್ತು ನಿಯಂತ್ರಣ ಸಮಿತಿಗಳನ್ನು ರಚನೆ ಮಾಡಿಕೊಂಡಿದ್ದಾರೆಯೇ ಎನ್ನುವ ಅನುಮಾನ ನಮ್ಮದು.1/4
ಈ ಆದೇಶಗಳು ಸಂವಿಧಾನ ಹಾಗೂ ಒಕ್ಕೂಟದ ಆಶಯಗಳಿಗೆ ವಿರುದ್ಧವಾಗಿವೆ. ಮಾತ್ರವಲ್ಲ, ಕನ್ನಡಿಗರ ತಾಳ್ಮೆ, ಸಹನೆ ಪರೀಕ್ಷೆ ಮಾಡುವಂತಿವೆ. ಈ ಆದೇಶ ಕರ್ನಾಟಕದ ಹಿತಾಸಕ್ತಿಗೆ ಮರಣಶಾಸನ. ಬೆಂಗಳೂರು ಜನ ಕುಡಿಯುವ ನೀರಿನ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಕಾವೇರಿ ಕೊಳ್ಳದ ರೈತರ ಒಂದು ಬೆಳೆಗೂ ಸಮರ್��ಕವಾಗಿ ನೀರು ಹರಿದಿಲ್ಲ. ಹೀಗಿದ್ದರೂ ರಾಜ್ಯಕ್ಕೆ ಆದೇಶದ ಮೇಲೆ ಆದೇಶ ನೀಡಿ ಸಮಾನ ನ್ಯಾಯ ತತ್ವವನ್ನು ನಾಮಾವಶೇಷ ಮಾಡಲಾಗಿದೆ.2/4
ಕನ್ನಡಿಗರೂ ಮನುಷ್ಯರು, ಅವರಿಗೂ ಅನ್ನ ನೀರು ಬೇಕು. ಅವರೂ ಈ ಒಕ್ಕೂಟ ವ್ಯವಸ್ಥೆಯ ಭಾಗ ಎನ್ನುವುದನ್ನು ಸಮಿತಿ ಮರೆತಿರುವಂತಿದೆ. ಸರಕಾರದಿಂದ ಕಾವೇರಿ ಹಿತರಕ್ಷಣೆ ಸಾಧ್ಯವಿಲ್ಲ. ಈ ಆದೇಶವನ್ನು ದಿಕ್ಕರಿಸುವ ಎದೆಗಾರಿಕೆ ಸರಕಾರಕ್ಕೆ ಇಲ್ಲ. ಜನರು ಸಂಘಟಿತರಾಗಿ ತಮ್ಮ ಹಕ್ಕುಗಳನ್ನು ರಕ್ಷಿಸಿಕೊಳ್ಳಬೇಕು, ಜನರ ಜತೆ ನಾವಿದ್ದೇವೆ, ನಮ್ಮ ಪಕ್ಷವೂ ಇದೆ. 3/4
ಒಂದು ಕಡೆ ವಿದ್ಯುತ್ ಆಘಾತದಿಂದ ರೈತರು ಕಂಗೆಟ್ಟಿದ್ದಾರೆ. ಮತ್ತೊಂದೆಡೆ ಕಾವೇರಿ ಬವಣೆ ರಾಜ್ಯವನ್ನು ಹಿಂಡಿಹಿಪ್ಪೆ ಮಾಡುತ್ತಿದೆ. ಕನ್ನಡಿಗರ ಕಣ್ಣೀರು ಹರಿದರೂ ಚಿಂತೆ ಇಲ್ಲ, ತಮಿಳುನಾಡಿಗೆ ಕಾವೇರಿ ಹರಿಯಲಿ ಎನ್ನುವ ಮನಸ್ಥಿತಿಯಲ್ಲಿ ರಾಜ್ಯ @INCKarnataka
ಸರಕಾರ ಇದೆ. 4/4
#ಕಾವೇರಿ_ನಮ್ಮದು
ಪ್ರತಿಯೊಬ್ಬರಿಗೂ ಹತ್ತು ಕೆಜಿ ಅಕ್ಕಿ ಕೊಡ್ತೀವಿ ಅಂದ್ರು, ನಂತರ ಅಕ್ಕಿ ಆಗಲ್ಲ ಒಬ್ಬರಿಗೆ 170 ರೂ ಹಾಕುವುದಾಗಿ ಹೇಳಿದರು, ಈಗ ಅಕ್ಕಿಯೂ ಕೊಡದೆ, ದುಡ್ಡು ಕೊಡದೆ @INCKarnataka ಸರ್ಕಾರ ಕೈ ಎತ್ತಿದೆ.
ಚುನಾವಣೆ ಗೆಲ್ಲಲು ಜನರ ಕಣ್ಣಿಗೆ ಮಣ್ಣೆರಚುವ ಸಾಲು ಸಾಲು ಸುಳ್ಳು ಗ್ಯಾರಂಟಿಗಳನ್ನ ಕೊಟ್ಟಿದ್ದ ಕಾಂಗ್ರೆಸ್, ಈಗ ಒಂದನ್ನೂ ಸರಿಯಾಗಿ ಜಾರಿಗೆ ತರಲಾಗದೆ ಹೆಣಗಾಡುತ್ತಿದೆ.
ಇನ್ನೂ ಎಷ್ಟು ದಿನ ಅಂತ ಬ್ಯಾಂಕ್ ಪ್ರಾಬ್ಲಂ, ಸರ್ವರ್ ಇಶ್ಯೂ ಅಂತ ಜನರ ಕಿವಿಗೆ ಹೂ ಮುಡಿಸಲು ಸಾಧ್ಯ? ನಿಮ್ಮ ಗ್ಯಾರಂಟಿಗಳು ಹಳ್ಳ ಹಿಡಿದಿರುವುದು ಸ್ವತಃ ಮುಖ್ಯಮಂತ್ರಿ @siddaramaiah ನವರ ಮುಂದೆಯೇ ಬಟಾಬಯಲಾಗಿದೆ.
ಇಂದು ರಾತ್ರಿ 8.30 ಗಂಟೆಗೆ @AsianetNewsSN ದಲ್ಲಿ ಪ್ರಸಾರವಾಗಲಿರುವ, ವಾಹಿನಿಯ ಪ್ರಧಾನ ಸಂಪಾದಕರಾದ ಶ್ರೀ ಅಜಿತ್ ಹನುಮಕ್ಕನವರ್ ಅವರು ನಡೆಸಿಕೊಡುವ 'ನ್ಯೂಸ್ ಅವರ್ ' ಸುದ್ದಿ ಸಂವಾದದಲ್ಲಿ ಭಾಗಿಯಾಗಿದ್ದೇನೆ. ವೀಕ್ಷಿಸಿ..
#Newshour@JanataDal_S
A momentous achievement for India at the Asian Games!
The people of India are thrilled that we have reached a remarkable milestone of 100 medals.
I extend my heartfelt congratulations to our phenomenal athletes whose efforts have led to this historic milestone for India.
Every awe-inspiring performance has made history and filled our hearts with pride.
I look forward to hosting our Asian Games contingent on the 10th and interacting with our athletes.
A momentous achievement for India at the Asian Games!
The people of India are thrilled that we have reached a remarkable milestone of 100 medals.
I extend my heartfelt congratulations to our phenomenal athletes whose efforts have led to this historic milestone for India.
Every awe-inspiring performance has made history and filled our hearts with pride.
I look forward to hosting our Asian Games contingent on the 10th and interacting with our athletes.
ಜೈ ಜವಾನ್ ಜೈ ಕಿಸಾನ್ ಘೋಷವಾಕ್ಯದ ಮೂಲಕ ರೈತರು ಹಾಗೂ ಯೋಧರ ಮಹತ್ವವನ್ನು ಸಾರಿದ, ಭಾರತರತ್ನ, ಮಾಜಿ ಪ್ರಧಾನಮಂತ್ರಿ ಶ್ರೀ ಲಾಲ್ ಬಹದ್ದೂರ್ ಶಾಸ್ತ್ರೀ ಅವರ ಜನ್ಮದಿನದಂದು ನನ್ನ ಗೌರವ ನಮನಗಳು.
ಜಗತ್ತಿಗೆ ಅಹಿಂಸೆಯ ಮಹತ್ವವನ್ನು ಸಾರಿದ, ರಾಷ್ಟ್ರಪಿತ ���ಹಾತ್ಮಾ ಗಾಂಧಿ ಅವರ ಜಯಂತಿ ದಿನದಂದು ನನ್ನ ಭಾವಪೂರ್ಣ ನಮನಗಳು.
ಗಾಂಧಿ ಅವರ ಬದುಕು, ತ್ಯಾಗ, ಸೇವೆ, ಸತ್ಯ ಮಾರ್ಗ ಮತ್ತು ಆದರ್ಶಗಳು ಎಲ್ಲಾ ಪೀಳಿಗೆಗೂ ಮಾದರಿಯಾಗಲಿ.
Lal Bahadur Shastri ji Bharat ke Laal hain,
Unhone kiya bahut Kamaal hai .
Jai Jawan, Jai Kisan! Let us salute the soldiers and farmers who make our country remain strong.
#LalBahadurShastriJayanti
This is not the law of the land
This is the love of the land
This is the the way modiji showes his commitment to protect our environment and teach a lesson to the egoistic mind's
Today, as the nation focuses on Swachhata, Ankit Baiyanpuriya and I did the same! Beyond just cleanliness, we blended fitness and well-being also into the mix. It is all about that Swachh and Swasth Bharat vibe! @baiyanpuria
Today, as the nation focuses on Swachhata, Ankit Baiyanpuriya and I did the same! Beyond just cleanliness, we blended fitness and well-being also into the mix. It is all about that Swachh and Swasth Bharat vibe! @baiyanpuria
ಅವರ ಬೆನ್ನು ಅವರಿಗೆ ಕಾಣುವುದಿಲ್ಲ. ನಾಲಿಗೆಗೂ ಮೂಳೆ ಇರುವುದಿಲ್ಲ. ಸಿಎಂ ಸೀಟಿನಲ್ಲಿ ಕೂತರೂ 'ಸಿದ್ದಸುಳ್ಳು'ಗಳಿಗೆ ಕೊರತೆಯೇನೂ ಇಲ್ಲ.
' ಜಾತ್ಯತೀತ ' ಎನ್ನುವ ಟ್ಯಾಗ್ ಲೈನ್ ಇಟ್ಟುಕೊಂಡು ಜಾತಿ ಸಭೆಗಳನ್ನು ಮಾಡಿ ಕುಕ್ಕರ್, ಇಸ್ತ್ರೀ ���ೆಟ್ಟಿಗೆ ಹಂಚುವುದು ಜಾತ್ಯತೀತವೇ? ಅಹಿಂದ ಎಂದು ಹೇಳಿಕೊಂಡು ಧರ್ಮಕ್ಕೊಂದು ಸಮಾವೇಶ, ಜಾತಿಗೊಂದು ಸಭೆ ನಡೆಸುವುದು ಜಾತ್ಯತೀತವೇ? ಸ್ವಲ್ಪ ಹೇಳುವಿರಾ @siddaramaiah ನವರೇ?
ಕೋಮುವಾದಿ ಎಂದು ಬಿಜೆಪಿಯನ್ನು ಹೀಗಳೆಯುತ್ತಾ ಆ ಪದದಿಂದಲೇ ರಾಜಕೀಯ ಲಾಭ ಗಿಟ್ಟಿಸಿಕೊಳ್ಳುವ ಡೋಂಗಿ ಸಮಾಜವಾದಿ ನೀವು. ನಿಮ್ಮ ಅಡ್ಜಸ್ಟ್'ಮೆ��ಟ್ ರಾಜಕಾರಣ ಜಗತ್ಪ್ರಸಿದ್ಧಿ. I.N.D.I.A ಎಂಬ ಮೈತ್ರಿಕೂಟದಲ್ಲಿ ಅದೇ ಬಿಜೆಪಿಯ ಬಿ ಟೀಂಗಳನ್ನು ಇಟ್ಟುಕೊಂಡು, ಅವುಗಳ ಬಾಲಂಗೋಚಿ ಆಗಿರುವ @INCIndia ಪಕ್ಷ ಜಾತ್ಯತೀತವೇ? ಉತ್ತರಿಸಿ ಮುಖ್ಯಮಂತ್ರಿಗಳೇ?
ಸ್ಟಾಲಿನ್, ಮಮತಾ ಬ್ಯಾನರ್ಜಿ, ಫಾರೂಕ್ ಅಬ್ದುಲ್ಲಾ, ನಿತೀಶ್ ಕುಮಾರ್, ಹೇಮಂತ್ ಸೊರೇನ್, ವೈಕೋ, ಮೆಹಬೂಬಾ ಮುಫ್ತಿ, ಅಖೈರಿಗೆ ಶಿವಸೇನೆಯ ಉದ್ಧವ್ ಠಾಕ್ರೆ.. ಇವರೆಲ್ಲರೂ ಬಿಜೆಪಿ ಪಡಸಾಲೆಯಲ್ಲಿ ಪೊಗದಸ್ತಾಗಿ ಅಧಿಕಾರದ ಭೋಜನ ಉಂಡವರಲ್ಲವೇ? ಅವರ ಪಕ್ಕ ಕುರ್ಚಿ ಹಾಕಿಕೊಂಡು ಕೂರಲು ��ಿಮಗೆ ನಾಚಿಕೆ ಆಗುವುದಿಲ್ಲವೇ?
2006ರಲ್ಲಿ @BJP4Karnataka ಜತೆ ಸರಕಾರ ರಚಿಸಿದ ಏಕೈಕ ಕಾರಣಕ್ಕೆ ಬಿಜೆಪಿ ಬಿ ಟೀಂ ಎಂದು @JanataDal_S ಗೆ ಮುದ್ರೆ ಹಾಕಿದಿರಿ. 2018ರಲ್ಲಿ ಅದೇ ಬಿ ಟೀಂ ಜತೆ ಸರಕಾರ ರಚಿಸಲು ಮಾನ್ಯ ದೇವೇಗೌಡರ ಮನೆಗೆ ಬಂದು ಸಾಲಾಗಿ ಕೈಕಟ್ಟಿ ನಿಂತುಕೊಂಡಿರಿ!! ಮರೆತಿರಾ ಛದ್ಮವೇಷಧಾರಿ??
ಪಾಪ.. ನಿಮಗೆ ಕೋಮುವಾದ, ಜಾತ್ಯತೀತ ಸಿದ್ಧಾಂತದ ಕನಸು ಈಗ ಬಿದ್ದಿದೆ. ನಿಮ್ಮ ರಾಜಕೀಯ ಬದುಕಿಗಾಗಿ ಜಾತಿಜಾತಿಗಳನ್ನು ಒಡೆದು ಬೆಂಕಿ ಇಟ್ಟು ಆ ಕೆನ್ನಾಲಗೆಯಲ್ಲೇ ಚಳಿ ಕಾಯಿಸಿಕೊಳ್ಳುವುದಷ್ಟೇ ನಿಮಗೆ ಗೊತ್ತು.
ಜಾತ್ಯತೀತ ಎನ್ನುವುದು ನಾಲಿಗೆ ಮೇಲಿನ ಮಾತಲ್ಲ, ಹೃದಯದ ಆಳದಲ್ಲಿರುವ ನಿಷ್ಠೆ. ಸ್ವಾರ್ಥ ರಾಜಕಾರಣವನ್ನೇ ಹಾಸಿಹೊದ್ದು, ಅಧಿಕಾರ ದಾಹವೇ ಹಾಸುಹೊಕ್ಕಾಗಿರುವ ನಿಮಗೆ ಜಾತ್ಯತೀತತೆ ಕೇವಲ ಭಾಷಣದ ಸರಕಷ್ಟೇ. ಜಾತ್ಯತೀತತೆ ಕುರಿತು ನಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ @H_D_Devegowda ಅವರು ಹಾಗೂ ನಾನು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇವೆ, ಅದೂ ಜನರಿಗೆ? ನಮ್ಮ ಬದ್ಧತೆ, ಅಚಲತೆ, ಜಾತ್ಯತೀತತೆಯನ್ನು ಪ್ರಶ್ನಿಸುವ ಯೋಗ್ಯತೆ ನಿಮಗೆ ಖಂಡಿತಾ ಇಲ್ಲ. ಈ ಗುಣಗಳು ನಿಮಗೆ ಅನ್ವಯ ಆಗುವುದೂ ಇಲ್ಲ. ಏನಂತೀರಿ?
#ಛದ್ಮವೇಷಧಾರಿ
@CMofKarnataka
Yesterday bundh was successful
People of karnataka whole heartedly supported the bundh
I hope the Tamil Nadu government will understand the feelings of the people karnataka come to an umicable settlement
ಕಾವೇರಿ ಹೋರಾಟಕ್ಕೆ ಇಡೀ ಕರುನಾಡು ಮಿಡಿದಿದೆ. ಇಂದಿನ ಬಂದ್ ಗೆ ಎಲ್ಲೆಡೆಯಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ನಾಡು, ನುಡಿ, ನೆಲಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕನ್ನಡ ಕುಟುಂಬದಲ್ಲಿ ಹಾಸುಹೊಕ್ಕಾಗಿರುವ ಈ ಸಾಮರಸ್ಯ, ಐಕ್ಯತೆ ನೆರೆ ರಾಜ್ಯಗಳಿಗೆ ಎಚ್ಚರಿಕೆ ಗಂಟೆ ಆಗಬೇಕು. @INCKarnataka ಸರಕಾರವೂ ಕನ್ನಡ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದಿರುವ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು.
#ಕಾವೇರಿ_ನಮ್ಮದು
#ಕರ್ನಾಟಕ_ಬಂದ್