ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ "ವಿಪ್ರ ಸ್ವ ಉದ್ಯಮ ನೇರ ಸಾಲ ಯೋಜನೆ" 2026-27ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಸ್ವಯಂ ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವವರಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ.
ನಮ್ಮ ಸರ್ಕಾರವು 2025-26ನೇ ಸಾಲಿನಲ್ಲಿ ಈ ಯೋಜನೆಯನ್ನು ಆರಂಭಿಸಿದ್ದು, ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಗುಡಿ ಕೈಗಾರಿಕೆ, ಸಣ್ಣ ಕೈಗಾರಿಕೆ, ಹೋಟೆಲ್ ಉದ್ಯಮ, ಹೈನುಗಾರಿಕೆ ಸೇರಿದಂತೆ ವಿವಿಧ ಸ್ವಯಂ ಉದ್ಯೋಗ ಚಟುವಟಿಕೆಗಳನ್ನು ಕೈಗೊಳ್ಳಲು ನೆರವು ನೀಡುತ್ತಿದೆ. ಯೋಜನೆಯಡಿ ₹1 ಲಕ್ಷದಿಂದ ₹2 ಲಕ್ಷದವರೆಗೆ ಸಾಲ ಸಹಾಯಧನ ನೀಡಲಾಗುತ್ತಿದ್ದು, ಶೇ.20ರಷ್ಟು ಸಬ್ಸಿಡಿ ಹಾಗೂ ಉಳಿದ ಶೇ.80ರಷ್ಟು ಸಾಲವನ್ನು ಶೇ.4ರ ಬಡ್ಡಿದರದಲ್ಲಿ 34 ಕಂತುಗಳಲ್ಲಿ ಮರುಪಾವತಿ ಮಾಡಬಹುದಾಗಿದೆ.
ಈ ಯೋಜನೆಯ ಸದುಪಯೋಗ ಪಡೆದುಕೊಂಡು ಬ್ರಾಹ್ಮಣ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದಿರುವವರು ಸ್ವಾವಲಂಬಿ ಜೀವನ ರೂಪಿಸಿಕೊಳ್ಳಬೇಕು ಎಂಬುದು ನಮ್ಮ ಸರ್ಕಾರದ ಆಶಯವಾಗಿದೆ.
Our Government is committed to the economic empowerment of low-income members of the Brahmin community.
Applications have been invited for 2026–27 under the Karnataka State Brahmin Development Board’s Vipra Swa-Udyama Direct Loan Scheme, which supports those seeking to start self-employment ventures.
Under the scheme, eligible beneficiaries can receive loans ranging from ₹1 lakh to ₹2 lakh, with a 20% subsidy. The remaining 80% can be repaid in 34 instalments at 4% interest. The assistance may be used for cottage and small-scale industries, hotel businesses, dairy farming and other self-employment activities.
The government of Karnataka urges eligible members of the community to make use of this opportunity, build sustainable livelihoods and move towards a self-reliant future.
#SelfEmployment
ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ Golden Book of World Recordsನಲ್ಲಿ ದಾಖಲು- ಅತೀವ ಸಂತಸ ಮತ್ತು ಹೆಮ್ಮೆಯ ಕ್ಷಣ.
ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆ ಹಾಗೂ ಮಹಿಳಾ ಸಬಲೀಕರಣದ ದಿಟ್ಟ ಯೋಜನೆಯಾದ ಶಕ್ತಿ ಯೋಜನೆಯು Golden Book of World Records ನಲ್ಲಿ ಅತಿ ಹೆಚ್ಚು ಮಹಿಳಾ ಪ್ರಯಾಣಿಕರು ಪ್ರಯಾಣಿಸಿರುವ ( ಜೂನ್ 11, 2023 - ಜುಲೈ 25, 2025 ರ ಅವಧಿ) ಐದು ಬಿಲಿಯನ್ , ನಲತ್ತೊಂಬತ್ತು ಮಿಲಿಯನ್, ನಾಲ್ಕು ನೂರ ಎಪ್ಪತ್ತಾರು ಸಾವಿರ, ನಾಲ್ಕು ನೂರ ಹದಿನಾರು ಮಹಿಳೆಯರು ಅಂದರೆ 500 ಕೋಟಿ ಮಹಿಳಾ ಪ್ರಯಾಣಿಕರ ಟಿಕೇಟ್ ಪ್ರಯಾಣವು ವಿಶ್ವ ದಾಖಲೆಯಲ್ಲಿ ಸ್ಥಾನ ಪಡೆದಿದೆ.
ಶಕ್ತಿ ಯೋಜನೆಯು ಸಾಮಾಜಿಕವಾಗಿ, ಶೈಕ್ಷಣಿಕವಾಗಿ, ಆರ್ಥಿಕವಾಗಿ, ಔದ್ಯೋಗಿಕವಾಗಿ ಮಹಿಳೆಯರನ್ನು ಸಬಲರನ್ನಾಗಿಸುತ್ತದೆ ಎಂದು ಬಲವಾಗಿ ನಂಬಿದ್ದವರು ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು,
ಉಪ-ಮುಖ್ಯಮಂತ್ರಿ ಹಾಗೂ ಕೆ.ಪಿ.ಸಿ.ಸಿ ಅಧ್ಯಕ್ಷರಾದ ಶ್ರೀ ಡಿ ಕೆ ಶಿವಕುಮಾರ್ ರವರು.
ಈ ಚಾರಿತ್ರಿಕ ಸಾಧನೆಯು ಕೆ ಎಸ್ ಆರ್ ಟಿ ಸಿ, ಬಿ ಎಂ ಟಿ ಸಿ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ ಆಡಳಿತ ಮಂಡಳಿ, ಸಾರಿಗೆ ಸಂಸ್ಥೆಗಳ ಮಾನ್ಯ ಅಧ್ಯಕ್ಷರುಗಳು, ಮಾನ್ಯ ಉಪಾಧ್ಯಕ್ಷರುಗಳು, ಸಾರಿಗೆ ಇಲಾಖೆಯ ಕಾರ್ಯದರ್ಶಿ, ವ್ಯವಸ್ಥಾಪಕ ನಿರ್ದೇಶಕರುಗಳು
ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸಮರ್ಪಿಸಲಾಗಿದೆ.
ಸಮಸ್ತ ಸಿಬ್ಬಂದಿಗಳ ಪರಿಶ್ರಮ, ಕಾರ್ಯತತ್ಪರತೆ ಮತ್ತು ಪ್ರಾಮಾಣಿಕ ಸೇವೆ ಅನನ್ಯ, ಅಭಿನಂದನೀಯ. ಇದರೊಂದಿಗೆ ಕಾರ್ಮಿಕ ಮುಖಂಡರುಗಳ ಸಹಕಾರವನ್ನು ಮರೆಯುವಂತಿಲ್ಲ ಅವರಿಗೆ ನನ್ನ ಧನ್ಯವಾದಗಳು.
ಶಕ್ತಿ ಯೋಜನೆಯ ಪ್ರಾರಂಭದಿಂದಲೂ ಬೆಂಬಲ,ಪ್ರೋತ್ಸಾಹ ಹಾಗೂ ಸಕಾರಾತ್ಮಕ ಬದಲಾವಣೆಗಳಿಗೆ ಸಲಹೆ ನೀಡುತ್ತಾ ಬಂದಿರುವ ಮಾಧ್ಯಮದವರಿಗೆ ಧನ್ಯವಾದಗಳು.
ನಾನು ಸಾರಿಗೆ ಸಚಿವನಾಗಿ ಎರಡನೇ ಬಾರಿಗೆ ಅಧಿಕಾರ ವಹಿಸಿಕೊಂಡ ಕೂಡಲೇ ದೇಶದಲ್ಲೇ ಪ್ರಪ್ರಥಮ ಬಾರಿಗೆ ಜಾರಿಗೆ ತಂದ ಗ್ಯಾರೆಂಟಿ ಯೋಜನೆಯಾದ ಶಕ್ತಿ ಯೋಜನೆಯು ಅತ್ಯಂತ ಸವಾಲಿನಿಂದ ಕೂಡಿದ್ದಾಗಿತ್ತು. ಕಳೆದ ಐದಾರು ವರುಷಗಳಲ್ಲಿ ಸಾರಿಗೆ ಸಂಸ್ಥೆಗಳಲ್ಲಿ ಹೊಸ ಬಸ್ಸುಗಳ ಸೇರ್ಪಡೆಯಾಗಿಲ್ಲ, ಹೊಸ ನೇಮಕಾತಿ ಆಗಿಲ್ಲ, ಸಾರಿಗೆ ಸಂಸ್ಥೆಗಳು ಸಾಲದ ಸುಳಿಯಲ್ಲಿದ್ದವು. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಒಂದು ತಂಡವಾಗಿ ಕರ್ತವ್ಯ ನಿರ್ವಹಿಸಿ ಶಕ್ತಿ ಯೋಜನೆಯನ್ನು ಯಶಸ್ವಿಯಾಗಿ ಮುನ್ನಡೆಸಿರುವುದು ನನಗೆ ವೈಯಕ್ತಿಕವಾಗಿ ಸಂತೃಪ್ತಿ ತಂದಿದೆ.
ಈ ಎರಡು ವರುಷಗಳ ಶಕ್ತಿ ಯೋಜನೆಯ ಹಾದಿಯಲ್ಲಿ ಸಾರಿಗೆ ಸಂಸ್ಥೆಗಳಲ್ಲಿ 5800 ಹೊಸ ಬಸ್ಸುಗಳ ಸೇರ್ಪಡೆ,10000 ಹೊಸ ನೇಮಕಾತಿ, ಸಾಲ ಪಾವತಿಸಲು ಸರ್ಕಾರದಿಂದ 2000 ಕೋಟಿ ಸಹಾಯ, ಸಾರಿಗೆ ಸಂಸ್ಥೆಗಳ ಪ್ರಯಾಣಿಕರ ಸಂಖ್ಯೆಯಲ್ಲಿ ಹೆಚ್ಚಳ ಇತರೆ ಅಮೂಲಾಗ್ರ ಬದಲಾವಣೆಗೆ ಕಾರಣವಾಗಿದೆ. ಸಾರಿಗೆ ಸಂಸ್ಥೆಗಳಲ್ಲಿ ಹತ್ತು ಹಲವು ಸವಾಲುಗಳಿದ್ದು, ಎಲ್ಲವನ್ನು ನಾನು ಇತ್ಯರ್ಥ ಪಡಿಸಲು ಸಾಧ್ಯವಿಲ್ಲ ಆದರೆ ಪ್ರಾಮಾಣಿಕವಾಗಿ ಪ್ರಯತ್ನ ಮಾಡಿದ್ದೇನೆ ಮತ್ತು ಮಾಡುತ್ತಿದ್ದೇನೆ.
Beyond Free Rides- ಎಂಬ ಹೆಸರಿನಲ್ಲಿ Sustainable Mobility Network ರವರು ದೇಶದ 10 ನಗರಗಳಲ್ಲಿ ಮಹಿಳೆಯರಿಗೆ ನೀಡಲಾಗುತ್ತಿರುವ ಉಚಿತ ಬಸ್ ಪ್ರಯಾಣದ ಬಗ್ಗೆ ನಡೆಸಿರುವ ಅಧ್ಯಯನದ ವರದಿಯು ಬೆಂಗಳೂರಿನಲ್ಲಿ 23% ಮತ್ತು ಹುಬ್ಬಳ್ಳಿ - ಧಾರವಾಡದಲ್ಲಿ 21% ಮಹಿಳಾ ಉದ್ಯೋಗಿಗಳ ಸಂಖ್ಯೆಯು ಶಕ್ತಿ ಯೋಜನೆಯಿಂದ ಹೆಚ್ಚಳವಾಗಿದೆಯೆಂದು ತಿಳಿಸಿದೆ. ಇದರಿಂದ ರಾಜ್ಯದ ತಲಾ ಆದಾಯವು ಹೆಚ್ಚಳವಾಗಲು ಕಾರಣವಾಗಿದೆ.
ವಿಶ್ವ ದಾಖಲೆಗೆ ಸೇರ್ಪಡೆಯಾದ ಶಕ್ತಿ ಯೋಜನೆಯಲ್ಲಿ ತೊಡಗಿಸಿಕೊಂಡ ಪ್ರತಿಯೊಬ್ಬರಿಗೂ ಇಂದು ಹೆಮ್ಮೆ ಮತ್ತು ಗೌರವ.
ಶಕ್ತಿ ಯೋಜನೆಯನ್ನು ದೇಶದ ವಿವಿಧ ರಾಜ್ಯಗಳಲ್ಲಿ ಬೇರೆ ಬೇರೆ ಹೆಸರು, ಬದಲಾವಣೆಗಳೊಂದಿಗೆ ಜಾರಿಗೆ ತರಲಾಗುತ್ತಿರುವುದೇ ನಮ್ಮ ಸರ್ಕಾರದ ಶಕ್ತಿ ಯೋಜನೆಯ ಯಶಸ್ಸಿಗೆ ಹಿಡಿದ ಕೈಗನ್ನಡಿಯಾಗಿದೆ.
#RamalingaReddy #KSRTC #NWKRTC #KKRTC #BMTC #Karnataka
The target for Completing Dharwad CBT construction was on May now we are in July end still no signs of completion.
@PriyangaMadhan@Bharath_Selvan
Any update from your side .? What is the reason for delays .?? What's the new target date .?
@nagabhushanb Rajhamsa buses are pretty old and not clean however Pallaki buses are pretty good.i would prefer normal seater buses which are better than rajhamsa.
The #Karnataka government has given two options to Bidar boy Suchivrat Kulkarni, the #KCET student who missed the Mathematics paper after he refused to remove his sacred thread (#Janivara).
https://t.co/THLGlAoObM
Hi @nw_krtc@PriyangaMadhan : Rajahamsa buses running between Dharwad -Belgaum (non stop) are pretty old and not clean. Kindly replace them with new ones or introduce ashwamedha type. @nagabhushanb