“ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ?
ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ?
ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?”
ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ @siddaramaiah ನವರ ನೇತೃತ್ವದ @INCKarnataka ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ.
'ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ' ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು
ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ?
ಮುಖ್ಯಮಂತ್ರಿಗಳು ಈ ಕುರಿತು ತಮ್ಮ X ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ.
ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ 'ಕೈ' ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ?
ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ
ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.
ವಿಧೇಯಕದ ಕುರಿತು ಮಾಧ್ಯಮಗಳಲ್ಲಿ
ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ.
ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ
ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ
ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ.
We’re aware that some people are experiencing issues with WhatsApp at the moment. We’re working to get things back to normal and will send an update here as soon as possible.
Thanks for your patience!
I am privileged to be a loyal worker of BJP. It is my utmost honour to serve the party with highest standards of ethics & behaviour. I urge everyone to act in accordance with party ethics & not indulge in protests/indiscipline that is disrespectful & embarrassing for the party.
ಕರ್ನಾಟಕದ ನೂತನ ರಾಜ್ಯಪಾಲರಾಗಿ ಆಯ್ಕೆಯಾಗಿರುವ ಶ್ರೀ @TCGEHLOT ಅವರಿಗೆ ಅಭಿನಂದನೆಗಳು. ನಿಮ್ಮನ್ನು ರಾಜ್ಯಕ್ಕೆ ಸ್ವಾಗತಿಸುವ ಜತೆಗೆ ಹೊಸ ಜವಾಬ್ದಾರಿ ಹೊತ್ತ ನಿಮಗೆ ಶುಭವಾಗಲಿ ಎಂದು ಆಶಿಸುತ್ತೇನೆ.
Many congratulations to Shri @TCGEHLOT ji on being inducted as the new Governor of Karnataka. I heartily welcome you and wish you the best for your new responsibility.
ಹಿರಿಯ ಪತ್ರಕರ್ತರಾದ ಶ್ರೀ ಕೆ.ಸಿ. ಸದಾನಂದ ಅವರ ಅಗಲಿಕೆಯ ಸುದ್ದಿ ತಿಳಿದು ಮನಸ್ಸಿಗೆ ಅತೀವ ದುಃಖವಾಗಿದೆ. ಅವರ ಕುಟುಂಬಸ್ಥರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಓಂ ಶಾಂತಿ.
ಹಸಿರು ಕ್ರಾಂತಿಯ ಹರಿಕಾರರು, ಮಾಜಿ ಉಪಪ್ರಧಾನಿಗಳಾದ ಶ್ರೀ ಡಾ.ಬಾಬು ಜಗಜೀವನ್ ರಾಮ್ ಅವರ ಪುಣ್ಯಸ್ಮರಣೆಯಂದು ಅವರಿಗೆ ನಮನಗಳು. ಶೋಷಿತರ ಹಕ್ಕುಗಳಿಗಾಗಿ ಅವರು ಮಾಡಿದ ಹೋರಾಟ, ದೇಶಕ್ಕೆ ನೀಡಿದ ಕೊಡುಗೆ ಸ್ಮರಣೀಯ.
#BabuJagjivanRam
Paying my humble tribute to the crusader of Dalit rights, the man who successfully led the green revolution during his tenure, the former Deputy PM, Dr #BabuJagjivanRam ji on his death anniversary.
ಪಶು ಸಂಗೋಪನೆ ಇಲಾಖೆ ಸಚಿವರಾದ ಶ್ರೀ @PrabhuChavanBJP ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ನಿಮಗೆ ಇನ್ನೂ ಹೆಚ್ಚಿನ ಆರೋಗ್ಯ, ಆಯಸ್ಸು, ಯಶಸ್ಸು, ಶಾಂತಿ-ನೆಮ್ಮದಿ ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.
ಗ್ರಂಥ ಸಂಪಾದನೆ, ಜಾನಪದ, ಜೀವನ ಚರಿತ್ರೆ, ಆತ್ಮಕತೆ, ಅನುವಾದ, ಗದ್ಯಾನುವಾದ... ಹೀಗೆ ಕನ್ನಡ ಸಾಹಿತ್ಯಕ್ಕೆ ಹಲವು ರೀತಿಯ ಸಾಹಿತ್ಯ ಕೃಷಿ ಮೂಲಕ ಅಮೂಲ್ಯ ಕೊಡುಗೆ ನೀಡಿದ ಸಾಹಿತಿಗಳಾದ ಶ್ರೀ ದೇ.ಜವರೇಗೌಡ ಅವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ.
#DeJawaregowda#DeJaGau
ಬಿಜೆಪಿ ಮುಖಂಡರು, ಬಿಎಂಟಿಸಿ ಅಧ್ಯಕ್ಷರಾದ ಶ್ರೀ @NSNandiesha ಅವರಿಗೆ ಜನ್ಮದಿನದ ಶುಭಾಶಯಗಳು. ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕೊಟ್ಟು ಕಾಪಾಡಲಿ ಎಂದು ಭಗವಂತನಲ್ಲಿ ಬೇಡಿಕೊಳ್ಳುತ್ತೇನೆ.
ಬಿಜೆಪಿ ಸಂಸ್ಥಾಪಕರು, ಕಾಂಗ್ರೆಸ್ಸಿಗೆ ಸಿಂಹಸ್ವಪ್ನ ಆಗಿದ್ದವರು, ಒಂದು ದೇಶವು ಎರಡು ಸಂವಿಧಾನ ಹಾಗೂ ಎರಡು ಧ್ವಜ ಹೊಂದಿರಬಾರದು ಎಂದು ಪ್ರತಿಪಾದಿಸಿದವರಾದ ಶ್ರೀ ಶ್ಯಾಮ್ ಪ್ರಸಾದ್ ಮುಖರ್ಜಿಯವರ ಜನ್ಮದಿನದಂದು ಅವರಿಗೆ ಗೌರವ ನಮನ ಸಲ್ಲಿಸುತ್ತೇನೆ.
#SyamaPrasadMukherjee
Fondly remembering the founder of BJP, the man who professed that one nation cannot have two Constitutions and two flags, Shri #SyamaPrasadMukherjee on his birth anniversary.
ವಸುದೈವ ಕುಟುಂಬಕಂ ಎಂಬುದು ಭಾರತದ ತತ್ತ್ವವಾಗಿದ್ದು, ಹಲವು ರಾಷ್ಟ್ರಗಳ ಬೇಡಿಕೆ ಹಿನ್ನೆಲೆಯಲ್ಲಿ ಜಗತ್ತಿನ ಎಲ್ಲ ರಾಷ್ಟ್ರಗಳಿಗೆ ಕೋವಿನ್ ವೇದಿಕೆ ಹಂಚಿಕೆಗೆ ಪ್ರಧಾನಿ @narendramodi ಅವರು ತೀರ್ಮಾನಿಸಿದ್ದಾರೆ. ಆ ಮೂಲಕ ಕೊರೋನಾ ವಿರುದ್ಧ ಹೋರಾಡಲು ವಿಶ್ವಕ್ಕೇ ನೆರವಾಗುತ್ತಿದ್ದಾರೆ.