ಈ ದಿನ ಯಶವಂತಪುರ ಸಂಚಾರ ಪೊಲೀಸ್ ಠಾಣಾ ಸರಹದ್ದಿನ ಜಂಕ್ಷನ್ ಗಳಲ್ಲಿ ಮತ್ತು ಶಾಲಾ ವಿದ್ಯಾರ್ಥಿಗಳಿಗೆ ಸಂಚಾರ ಚಿಹ್ನೆಗಳ ಬಗ್ಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು ವಾಹನ ಚಾಲನೆ ಮಾಡದಂತೆ, ಹೆಲ್ಮೆಟ್ ಧರಿಸುವ ಬಗ್ಗೆ ಹಾಗೂ ಇತರೆ ರಸ್ತೆ ನಿಯಮಗಳ ಬಗ್ಗೆ ಮತ್ತು ಸಂಚಾರ ನಿಯಮಗಳ ಬಗ್ಗೆ ಅರಿವು ಮೂಡಿಸಲಾಯಿತು.
ಈ ದಿನ ಯಶವಂತಪುರ ಸಂಚಾರ ಪೊಲೀಸ್ ಠಾಣೆ ವತಿಯಿಂದ ಹಾಗೂ ಸಂಭವ ಪೌಂಡೇಶನ್ ರವರ ಸಹಯೋಗದೊಂದಿಗೆ ದೇವರಾಜ್ ಅರಸ್ ಟ್ರಕ್ ಟರ್ಮಿನಲ್ ಕಚೇರಿಯಲ್ಲಿ ಲಾರಿ ಮತ್ತು ಇತರೆ ವಾಹನ ಚಾಲಕರುಗಳಿಗೆ ಸಂಚಾರಿ ನಿಯಮಗಳ ಅರಿವು ಮತ್ತು ಪಾಲನೆ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ನಡೆಸಲಾಗಿರುತ್ತದೆ.
ಈ ದಿವಸ ಯಶವಂತಪುರ ಸಂಚಾರ ಪೊಲೀಸ್ ಠಾಣೆಯ ವ್ಯಾಪ್ತಿಯ ಸಿ ಎಂ ಟಿ ಐ ಜಂಕ್ಷನ್ ಬಳಿ ಟ್ರಾಫಿಕ್ ಸಿಗ್ನಲ್ ಗಳಲ್ಲಿ ನಿಂತುಕೊಂಡು ವ್ಯಾಪಾರ ಮಾಡುವ ವ್ಯಾಪಾರಿಗಳಿಗೆ ವಾಹನಗಳ ಸಂಚಾರಕ್ಕೆ ಯಾವುದೇ ತರಹದ ಸಮಸ್ಯೆ ಯಾಗದಂತೆ ಹಾಗೂ ವಾಹನ ಚಾಲಕರಿಗೆ ತೊಂದರೆಯನ್ನುಂಟು ಮಾಡದಂತೆ ಸೂಕ್ತ ತಿಳುವಳಿಕೆ ನೀಡಲಾಯಾತು.
ಇಂದು ನಮ್ಮ ಸಿಗ್ನಲ್ಗಳಲ್ಲೂ ಹಳದಿ-ಕೆಂಪು ಸಂಭ್ರಮ! 💛❤️
ಬೆಂಗಳೂರಿನ ಪ್ರತಿಯೊಂದು ಜಂಕ್ಷನ್ ಮತ್ತು ರಸ್ತೆಯಲ್ಲೂ ನಮ್ಮ ನಾಡು, ನುಡಿ ಹಾಗೂ ಸಂಸ್ಕೃತಿಯ ಹೆಮ್ಮೆ ಕಂಗೊಳಿಸುತ್ತಿದೆ.
ಬೆಂಗಳೂರು ಸಂಚಾರ ಪೊಲೀಸ್ ಕಡೆಯಿಂದ ಎಲ್ಲರಿಗೂ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು! 💛❤️
Today, our signals shine in Yellow and Red ! 💛❤️
As Karnataka's pride flies high at traffic signals across Namma Bengaluru, we celebrate the language, culture and spirit that unite us.
Every junction reflects our pride. Every road connects us to Karnataka.
Bengaluru Traffic Police wishes everyone a Happy Kannada Rajyotsava! 💛❤️
#KannadaRajyotsava #NammaKarnataka #NammaBengaluru #BengaluruTrafficPolice
@CPBlr @seemantsingh96@DgpKarnataka@KarnatakaCops@Jointcptraffic@CMofKarnataka@PriyankKharge
ಈ ದಿನ ರಾಷ್ಟ್ರೀಯ ಏಕತಾ ದಿನದ ಅಂಗವಾಗಿ ಇಂದು ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಸಾರ್ವಜನಿಕರನ್ನು ಆಹ್ವಾನಿಸಿ, ಅವರೊಂದಿಗೆ ರಾಷ್ಟ್ರೀಯ ಏಕತಾ ದಿವಸವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಏಕತೆಯ ಮಹತ್ವ ಹಾಗೂ ದೇಶದ ಐಕ್ಯತೆ ಮತ್ತು ಸಮಗ್ರತೆಯನ್ನು ಕಾಪಾಡುವ ಕುರಿತು ಜಾಗೃತಿ ಮೂಡಿಸಲಾಯಿತು.
@GireeshMS8@blrcitytraffic Noted. Necessary measures will be taken to reduce traffic congestion and ensure smooth traffic flow during peak hours and long weekends.
@murthybs@DCPTrNorthBCP@DCPTrWestBCP@ChristinMP_ Noted, Necessary action will be taken against vehicles violating noise pollution norms, and the concerned officers have been instructed to take appropriate measures to prevent such issues from recurring in the future.
@murthybs@ChristinMP_@DCPTrWestBCP ಎಪಿಎಂಸಿಗೆ ಹೊರ ಜಿಲ್ಲೆಗಳಿಂದ ಈರುಳ್ಳಿ ಹಾಗೂ ಇತರೆ ಸರಕುಗಳ ವಾಹನಗಳು ಆಗಮಿಸುತ್ತಿದ್ದು, ವಿರುದ್ಧ ದಿಕ್ಕಿನಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಕ್ರಮ ಕೈಗೊಳ್ಳಲು ಅಧಿಕಾರಿ ಹಾಗೂ ಸಿಬ್ಬಂದಿಯನ್ನು ನಿಯೋಜಿಸಿ, ಐಎಂವಿ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಸಂಚಾರ ಸಮಸ್ಯೆಗಳು ಉಂಟಾಗದಂತೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು
ಯಶವಂತಪುರ ಸಂಚಾರ ಪೊಲೀಸ್ ಠಾಣೆ ವತಿಯಿಂದ ಟ್ರಾಫಿಕ್ ಪಾರ್ಕ್ನಲ್ಲಿ ಶಾಲಾ ಮಕ್ಕಳಿಗೆ ಸಂಚಾರ ನಿಯಮಗಳು ಹಾಗೂ ರಸ್ತೆ ಸುರಕ್ಷತೆ ಕುರಿತು ಜಾಗೃತಿ ಮೂಡಿಸಲಾಯಿತು, ಟ್ರಾಫಿಕ್ ಮ್ಯಾನೇಜ್ಮೆಂಟ್ ಸೆಂಟರ್ನಲ್ಲಿ ಡಿಜಿಟಲ್ ಪೊಲೀಸ್ ವ್ಯವಸ್ಥೆಯ ಕುರಿತು ಮಕ್ಕಳಿಗೆ ಮಾಹಿತಿ ಮತ್ತು ತರಬೇತಿ ನೀಡಲಾಯಿತು.
#trafficawareness
ಈ ದಿನ ವಿಶ್ವ ಹೃದಯ ದಿನದ ಅಂಗವಾಗಿ, ಸ್ಪರ್ಶಾ ಆಸ್ಪತ್ರೆಯ ವತಿಯಿಂದ ಯಶವಂತಪುರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ “Don’t Honk” ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು,
ಅನಗತ್ಯವಾಗಿ ಹಾರ್ನ್ ಮಾಡುವುದನ್ನು ತಪ್ಪಿಸಿ ಶಬ್ದ ಮಾಲಿನ್ಯವನ್ನು ಕಡಿಮೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಯಿತು.
Don't Miss a Beat 2026
ಮಾನ್ಯ ಸಂಚಾರ ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತರವರ ಉಪಸ್ಥಿತಿಯಲ್ಲಿ, ಇಂದು ವಿಶ್ವ ಶ್ವಾಸಕೋಶ ದಿನದ ಅಂಗವಾಗಿ iCaltech Innovation ಸಂಸ್ಥೆ ವತಿಯಿಂದ ಯಶವಂತಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಉಚಿತ ಶ್ವಾಸಕೋಶ ತಪಾಸಣಾ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು.
“A Lifetime of Lung Health”-2026
ಈ ದಿನ ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಸರಕು ಸಾಗಣೆ ವಾಹನವು ಪಲ್ಟಿಯಾಗಿದು. ಕೂಡಲೇ ಸ್ಥಳಕ್ಕೆ ತೆರಳಿದ ಯಶವಂತಪುರ ಸಂಚಾರ ಪೊಲೀಸ್ ಠಾಣೆಯ ಅಧಿಕಾರಿ ಹಾಗೂ ಸಿಬ್ಬಂದಿ ಸ್ಥಳ ಪರಿಶೀಲನೆ ನಡೆಸಿ, ಅಗತ್ಯ ಕ್ರಮ ಕೈಗೊಂಡು ಅಪಘಾತಕ್ಕೊಳಗಾದ ವಾಹನವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು
ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುವವರ ವಿರುದ್ಧ ವಿಶೇಷ ತಪಾಸಣಾ ಕಾರ್ಯಾಚರಣೆ ನಡೆಸಲಾಯಿತು. ಮದ್ಯಪಾನ ಮಾಡಿ ವಾಹನ ಚಾಲನೆ ಮಾಡುತ್ತಿರುವುದು ಕಂಡುಬಂದ ಚಾಲಕರ ವಿರುದ್ಧ ನಿಯಮಾನುಸಾರ ಪ್ರಕರಣಗಳನ್ನು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಯಿತು.
ಮತ್ತಿಕೆರೆಯಿಂದ ಎಂ.ಎಸ್. ರಾಮಯ್ಯ ಕಾಲೇಜಿನ ಕಡೆಗೆ ರಸ್ತೆ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯಲ್ಲಿ ಅಸಮತಟ್ಟಾದ ಪರಿಸ್ಥಿತಿ ಉಂಟಾಗಿದೆ. ಸಾರ್ವಜನಿಕರು, ಪಾದಚಾರಿಗಳು ಹಾಗೂ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಮನವಿ.
ಯಶವಂತಪುರ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯ ಎಚ್ಎಂಟಿ ರಸ್ತೆಯಲ್ಲಿ BWSSB ವತಿಯಿಂದ ತುರ್ತು ಕಾಮಗಾರಿ ನಡೆಯುತ್ತಿರುವುದರಿಂದ ನಿಧಾನಗತಿಯ ಸಂಚಾರ ಇದ್ದು ಸಾರ್ವಜನಿಕರು ಸಹಕರಿಸಲು ಕೋರಿದೆ.